Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 10:32 - ಕನ್ನಡ ಸಮಕಾಲಿಕ ಅನುವಾದ

32 ಅವರು ಯೆರೂಸಲೇಮಿಗೆ ಹೋಗುವ ದಾರಿಯಲ್ಲಿದ್ದರು. ಯೇಸು ಅವರ ಮುಂದಾಗಿ ಹೋದದ್ದರಿಂದ ಶಿಷ್ಯರು ಆಶ್ಚರ್ಯಪಟ್ಟರು. ಯೇಸುವಿನ ಹಿಂದೆ ಬರುತ್ತಿದ್ದವರು ಭಯಪಟ್ಟರು. ಯೇಸು ತಮ್ಮ ಹನ್ನೆರಡು ಮಂದಿಯನ್ನು ತಿರುಗಿ ಕರೆದು ತನಗೆ ಸಂಭವಿಸುವ ಸಂಗತಿಗಳನ್ನು ಅವರಿಗೆ ಹೇಳಲಾರಂಭಿಸಿದರು:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

32 ಅವರು ಯೆರೂಸಲೇಮಿಗೆ ಪ್ರಯಾಣ ಮಾಡುತ್ತಿರುವಾಗ ಯೇಸು ಅವರೆಲ್ಲರಿಗಿಂತ ಮುಂದಾಗಿ ನಡೆದುಹೋದದ್ದರಿಂದ ಶಿಷ್ಯರು ಆಶ್ಚರ್ಯಪಟ್ಟರು. ಆತನನ್ನು ಹಿಂಬಾಲಿಸುವವರು ಭಯಪಟ್ಟರು. ಆಗ ಆತನು ತನ್ನ ಹನ್ನೆರಡು ಮಂದಿ ಶಿಷ್ಯರನ್ನು ಪುನಃ ಕರೆದುಕೊಂಡು ಮುಂದೆ ತನಗೆ ಸಂಭವಿಸುವ ಸಂಗತಿಯನ್ನು ಹೇಳುವುದಕ್ಕೆ ಪ್ರಾರಂಭಿಸಿದನು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

32 ಜೆರುಸಲೇಮಿಗೆ ಪ್ರಯಾಣಮಾಡುತ್ತ ಇದ್ದಾಗ ಯೇಸುಸ್ವಾಮಿ ಎಲ್ಲರಿಗಿಂತ ಮುಂದೆ ನಡೆಯುತ್ತಿದ್ದರು. ಅದನ್ನು ನೋಡಿ ಶಿಷ್ಯರು ಆಶ್ಚರ್ಯಪಟ್ಟರು. ಅವರ ಹಿಂದೆ ಬರುತ್ತಿದ್ದವರು ದಿಗಿಲುಗೊಂಡರು. ಆಗ ಯೇಸು ಹನ್ನೆರಡುಮಂದಿ ಶಿಷ್ಯರನ್ನು ತಮ್ಮ ಬಳಿಗೆ ಕರೆದು, ತಮಗೆ ಸಂಭವಿಸಲಿರುವ ವಿಷಯಗಳನ್ನು ಮತ್ತೊಮ್ಮೆ ಅವರಿಗೆ ಹೇಳತೊಡಗಿದರು:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

32 ಅವರು ಯೆರೂಸಲೇವಿುನ ದಾರಿಯನ್ನು ಹಿಡಿದು ಹೋಗುತ್ತಿರುವಾಗ ಯೇಸು ಅವರ ಮುಂದೆ ಮುಂದೆ ಹೋಗುತ್ತಿದ್ದನು. ಅವರು [ನೋಡಿ] ಬೆರಗಾದರು; ಆತನ ಹಿಂದೆ ಬರುವವರು ಭಯಪಡುವವರಾದರು. ಆಗ ಆತನು ತನ್ನ ಹನ್ನೆರಡು ಮಂದಿ ಶಿಷ್ಯರನ್ನು ತಿರಿಗಿ ಕರೆದುಕೊಂಡು ಮುಂದೆ ತನಗಾಗುವದನ್ನು ಹೇಳುವದಕ್ಕೆ ತೊಡಗಿ ಅವರಿಗೆ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

32 ಯೇಸು ಮತ್ತು ಆತನ ಜೊತೆಯಲ್ಲಿದ್ದ ಜನರು ಜೆರುಸಲೇಮಿಗೆ ಹೋಗುತ್ತಿರಲು ಯೇಸು ಅವರೆಲ್ಲರಿಗಿಂತ ಮುಂದೆ ಹೋಗುತ್ತಿದ್ದನು. ಅದನ್ನು ನೋಡಿ ಯೇಸುವಿನ ಶಿಷ್ಯರು ಬೆರಗಾದರು. ಅವರನ್ನು ಹಿಂಬಾಲಿಸಿ ಬರುತ್ತಿದ್ದ ಜನರು ಭಯಗೊಂಡರು. ಯೇಸು ಹನ್ನೆರಡು ಜನ ಅಪೊಸ್ತಲರನ್ನು ತನ್ನ ಬಳಿಗೆ ಕರೆದು, ಜೆರುಸಲೇಮಿನಲ್ಲಿ ತನಗೆ ಸಂಭವಿಸಲಿರುವುದನ್ನು ಅವರಿಗೆ ಹೇಳುತ್ತಾ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

32 ಜೆಜು ಅನಿ ತೆಚ್ಯಾ ವಾಂಗ್ಡಾ ಹೊತ್ತಿ ಲೊಕಾ ಜೆರುಜಲೆಮಾಚ್ಯಾ ವಾಟೆನ್ ಜಾವ್ನಗೆತ್ ರಾತಾನಾ, ಜೆಜು ಶಿಸಾಂಚ್ಯಾ ಫಿಡೆ-ಫಿಡೆ ಜಾವ್ನಗೆತ್ ಹೊತ್ತೊ, ಶಿಸಾ ಭಿಂಯಾವಲ್ಲ್ಯಾ ಸರ್ಕಿ ಹೊಲ್ಲಿ, ಅನಿ ತೆಂಚ್ಯಾ ವಾಂಗ್ಡಾ ಹೊತ್ತಿ ಲೊಕಾ ಭಿಂಯಾವಲ್ಲಿ. ಅನಿ ಎಗ್ದಾ ಜೆಜು ಬಾರಾ ಜಾನಾ ಶಿಸಾಕ್ನಿ ಕಡೆಕ್ ಬಲ್ವುನ್ ಘೆವ್ನ್

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 10:32
12 ತಿಳಿವುಗಳ ಹೋಲಿಕೆ  

ಯೇಸು ತಾವು ಸ್ವರ್ಗಕ್ಕೆ ಏರಿಹೋಗುವ ಕಾಲ ಬಂದಾಗ, ಯೆರೂಸಲೇಮಿಗೆ ಹೋಗುವುದಕ್ಕಾಗಿ ತಮ್ಮ ಮನಸ್ಸನ್ನು ದೃಢಮಾಡಿಕೊಂಡು


ದಿದುಮನೆಂಬ ತೋಮನು ತನ್ನ ಜೊತೆ ಶಿಷ್ಯರಿಗೆ, “ನಾವು ಸಹ ಗುರುವಿನೊಂದಿಗೆ ಸಾಯುವುದಕ್ಕೆ ಹೋಗೋಣ,” ಎಂದನು.


ಯೇಸುವಿನ ಶಿಷ್ಯರು ಅವರಿಗೆ, “ಬೋಧಕರೇ, ಈಗ ಯೆಹೂದ್ಯರು ನಿಮ್ಮ ಮೇಲೆ ಕಲ್ಲೆಸೆಯಬೇಕೆಂದು ಹುಡುಕುತ್ತಿದ್ದಾರೆ. ತಿರುಗಿ ನೀವು ಅಲ್ಲಿಗೆ ಹೋಗಬೇಕೆಂದಿರುವಿರಾ?” ಎಂದರು.


ಯೇಸು ತಮ್ಮ ಶಿಷ್ಯರ ಕಡೆಗೆ ತಿರುಗಿಕೊಂಡು, “ನೀವು ಕಾಣುತ್ತಿರುವುದನ್ನೆಲ್ಲಾ ಕಾಣುವ ಕಣ್ಣುಗಳು ಭಾಗ್ಯವುಳ್ಳವು.


ಸಾಮ್ಯವಿಲ್ಲದೆ ಯೇಸು ಅವರಿಗೆ ಏನೂ ಹೇಳುತ್ತಿರಲಿಲ್ಲ. ಆದರೆ ಯೇಸು ತಮ್ಮ ಶಿಷ್ಯರೊಡನೆ ಏಕಾಂತವಾಗಿದ್ದಾಗ ಮಾತ್ರ ಅವರಿಗೆ ಎಲ್ಲವನ್ನು ವಿವರಿಸಿ ಹೇಳುತ್ತಿದ್ದರು.


ಯೇಸು ಅದಕ್ಕೆ ಉತ್ತರವಾಗಿ ಹೇಳಿದ್ದು: “ಪರಲೋಕ ರಾಜ್ಯದ ರಹಸ್ಯಗಳನ್ನು ತಿಳಿದುಕೊಳ್ಳುವ ಜ್ಞಾನವು ನಿಮಗೆ ಕೊಡಲಾಗಿದೆ, ಆದರೆ ಅವರಿಗಲ್ಲ.


“ಮಹಾಯಾಜಕನಾದ ಯೆಹೋಶುವನೇ, ನೀನೂ, ನಿನ್ನ ಮುಂದೆ ಕುಳಿತುಕೊಳ್ಳುವ ನಿನ್ನ ಸಂಗಡಿಗರೂ ಈಗ ಕೇಳಿರಿ. ಅವರು ಆಶ್ಚರ್ಯವನ್ನುಂಟುಮಾಡುವ ಮನುಷ್ಯರಾಗಿದ್ದಾರೆ. ನಾನು ‘ರೆಂಬೆ’ ಎಂಬ ನನ್ನ ಸೇವಕನನ್ನು ಬರಮಾಡುವೆನು ಎಂಬುದಕ್ಕೆ ಇವರೇ ಮುಂಗುರುತು.


ಆ ಸಮಯದಲ್ಲಿ ಯೇಸು, “ತಂದೆಯೇ, ಪರಲೋಕ ಭೂಲೋಕಗಳ ಒಡೆಯನೇ, ನೀವು ಈ ವಿಷಯಗಳನ್ನು ಜ್ಞಾನಿಗಳಿಂದಲೂ ಬುದ್ಧಿವಂತರಿಂದಲೂ ಮರೆಮಾಡಿ, ಶಿಶುಗಳಿಗೆ ಪ್ರಕಟ ಮಾಡಿರುವುದರಿಂದ ನಾನು ನಿಮ್ಮನ್ನು ಕೊಂಡಾಡುತ್ತೇನೆ.


ಜನರೆಲ್ಲರು ಇದನ್ನು ಕಂಡು ವಿಸ್ಮಯಗೊಂಡು, “ಇದೇನು? ಅಧಿಕಾರಸಹಿತವಾದ ಹೊಸ ಬೋಧನೆ! ಈತನು ಅಶುದ್ಧಾತ್ಮಗಳಿಗೆ ಆಜ್ಞಾಪಿಸುತ್ತಾನೆ, ಅವು ಈತನಿಗೆ ವಿಧೇಯವಾಗುತ್ತವೆ!” ಎಂದು ತಮ್ಮತಮ್ಮೊಳಗೆ ಮಾತನಾಡಿಕೊಂಡರು.


ಯೇಸು ಹೀಗೆ ಹೇಳಿದ ತರುವಾಯ, ಶಿಷ್ಯರಿಗೆ ಮುಂದಾಗಿ, ಯೆರೂಸಲೇಮಿಗೆ ಹೊರಟರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು