ಮಾರ್ಕ 11:18 - ಕನ್ನಡ ಸಮಕಾಲಿಕ ಅನುವಾದ18 ಮುಖ್ಯಯಾಜಕರೂ ನಿಯಮ ಬೋಧಕರೂ ಅದನ್ನು ಕೇಳಿ ಯೇಸುವನ್ನು ಹೇಗೆ ಕೊಲ್ಲಬೇಕೆಂದು ಆಲೋಚಿಸಿದರು. ಆದರೆ ಜನರೆಲ್ಲರೂ ಯೇಸುವಿನ ಬೋಧನೆಗೆ ಅತ್ಯಾಶ್ಚರ್ಯಪಟ್ಟದ್ದರಿಂದ ಅವರು ಯೇಸುವಿಗೆ ಭಯಪಟ್ಟರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ಅದನ್ನು ಮುಖ್ಯಯಾಜಕರೂ, ಶಾಸ್ತ್ರಿಗಳೂ ಕೇಳಿ ಅವನನ್ನು ಯಾವ ಉಪಾಯದಿಂದ ಕೊಲ್ಲೋಣ ಎಂದು ಕಾದು ನೋಡುತ್ತಿದ್ದರು; ಏಕೆಂದರೆ ಜನರೆಲ್ಲರೂ ಆತನ ಉಪದೇಶವನ್ನು ಕೇಳಿ ಅತ್ಯಾಶ್ಚರ್ಯಪಟ್ಟಿದ್ದರಿಂದ ಅವರು ಆತನಿಗೆ ಹೆದರುತ್ತಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)18 ಮುಖ್ಯಯಾಜಕರೂ ಧರ್ಮಶಾಸ್ತ್ರಿಗಳೂ ನಡೆದ ಈ ಸಂಗತಿಯನ್ನು ಕೇಳಿ ಯೇಸುವನ್ನು ಕೊಲ್ಲಿಸುವ ಮಾರ್ಗವನ್ನು ಹುಡುಕತೊಡಗಿದರು. ಏಕೆಂದರೆ, ಯೇಸುವನ್ನು ಕಂಡರೆ ಅವರಿಗೆ ಭಯವಿತ್ತು. ಕಾರಣ - ಜನರೆಲ್ಲರೂ ಅವರ ಬೋಧನೆಗೆ ಮಾರುಹೋಗಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)18 ಅದನ್ನು ಮಹಾಯಾಜಕರೂ ಶಾಸ್ತ್ರಿಗಳೂ ಕೇಳಿ ಅವನನ್ನು ಯಾವ ಉಪಾಯದಿಂದ ಕೊಲ್ಲೋಣ ಎಂದು ಸಂದರ್ಭ ನೋಡುತ್ತಿದ್ದರು; ಯಾಕಂದರೆ ಜನರೆಲ್ಲಾ ಆತನ ಉಪದೇಶವನ್ನು ಕೇಳಿ ಅತ್ಯಾಶ್ಚರ್ಯಪಟ್ಟದ್ದರಿಂದ ಅವರು ಆತನಿಗೆ ಹೆದರುತ್ತಿದ್ದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್18 ಮಹಾಯಾಜಕರು ಹಾಗೂ ಧರ್ಮೋಪದೇಶಕರು ಈ ಸಂಗತಿಗಳನ್ನು ಕೇಳಿ ಯೇಸುವನ್ನು ಕೊಲ್ಲಿಸಲು ತಕ್ಕ ಮಾರ್ಗವನ್ನು ಕಂಡುಹಿಡಿಯಲು ಪ್ರಯತ್ನಿಸತೊಡಗಿದರು. ಜನರೆಲ್ಲರೂ ಯೇಸುವಿನ ಉಪದೇಶವನ್ನು ಕೇಳಿ ಅತ್ಯಾಶ್ಚರ್ಯಪಟ್ಟಿದ್ದರಿಂದ ಅವರು ಯೇಸುವಿಗೆ ಭಯಪಟ್ಟರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್18 ಯಾಜಕಾಂಚಿ ಮುಖಂಡಾ ಅನಿ ಖಾಯ್ದೆ ಶಿಕ್ವುತಲ್ಯಾನಿ ಜೆಜುಚ್ಯಾ ಗೊಸ್ಟಿಯಾ ಆಯ್ಕುನ್, ತೆಕಾ ಕಶೆ ಕರುನ್ ಜಿವಾನಿ ಮಾರುಚೆ ಮನುನ್ ವಾಟ್ ಹುಡ್ಕುಕ್ ಲಾಗಲ್ಲ್ಯಾನಿ. ಖರೆ ಲೊಕಾ, ಜೆಜು ಸಿಕ್ವುತಲೆ ಮಾನುನ್ ಘೆಯ್ತ್ ಅನಿ ಅಜಾಪ್ ಹೊಯ್ತ್. ತಸೆ ಮನುನ್ ತೆನಿ ತೆಕಾ ಭಿಂಯ್ತ್. ಅಧ್ಯಾಯವನ್ನು ನೋಡಿ |