Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 11:24 - ಕನ್ನಡ ಸಮಕಾಲಿಕ ಅನುವಾದ

24 ಆದಕಾರಣ, ನೀವು ಪ್ರಾರ್ಥನೆಯಲ್ಲಿ ಏನೇನು ಬೇಡಿಕೊಳ್ಳುವಿರೋ ಎಲ್ಲವೂ ನಿಮಗೆ ಸಿಕ್ಕಿವೆಯೆಂದು ನಂಬಿರಿ. ಅವು ನಿಮಗೆ ಲಭಿಸುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ಆದಕಾರಣ ನೀವು ಪ್ರಾರ್ಥನೆಮಾಡಿ ಏನೇನು ಬೇಡಿಕೊಳ್ಳುತ್ತೀರೋ ಅದನ್ನೆಲ್ಲಾ ಹೊಂದಿದ್ದೇವೆಂದು ನಂಬಿರಿ; ಅದು ನಿಮಗೆ ಸಿಕ್ಕುವುದೆಂದು ನಿಮಗೆ ಹೇಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

24 ಆದುದರಿಂದ ನೀವು ಪ್ರಾರ್ಥನೆಯಲ್ಲಿ ಏನೆಂದು ಬೇಡಿಕೊಳ್ಳುತ್ತೀರೋ, ಅದನ್ನೆಲ್ಲಾ ಪಡೆದಾಯಿತೆಂದು ವಿಶ್ವಾಸಿಸಿರಿ; ಅದು ಲಭಿಸುವುದು ನಿಶ್ಚಯವೆಂದು ನಿಮಗೆ ಹೇಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ಆದಕಾರಣ ನೀವು ಪ್ರಾರ್ಥನೆಮಾಡಿ ಏನೇನು ಬೇಡಿಕೊಳ್ಳುತ್ತೀರೋ ಅದನ್ನೆಲ್ಲಾ ಹೊಂದಿದ್ದೇವೆಂದು ನಂಬಿರಿ; ಅದು ನಿಮಗೆ ಸಿಕ್ಕುವದೆಂದು ನಿಮಗೆ ಹೇಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 ಆದ್ದರಿಂದ ನೀವು ಪ್ರಾರ್ಥನೆಯಲ್ಲಿ ಬೇಡಿಕೊಂಡು, ಅದನ್ನೆಲ್ಲಾ ಹೊಂದಿಕೊಂಡಾಯಿತೆಂದು ನಂಬಿದರೆ, ಅದೆಲ್ಲಾ ನಿಮ್ಮದಾಗುತ್ತವೆ ಎಂದು ನಾನು ನಿಮಗೆ ಹೇಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

24 ತಸೆ ಮನುನ್ ಮಿಯಾ ತುಮ್ಕಾ ಸಾಂಗ್ತಾ, ತುಮಿ ಮಾಗ್ನಿ ಕರ್‍ತಾನಾ ಮಾಗಲ್ಲೆ ಗಾವ್ಲಾಚ್ ಮನುನ್ ವಿಶ್ವಾಸ್ ಕರ್ಲ್ಯಾರ್, ಮಾಗಲ್ಲೆ ಸಗ್ಳೆ ತುಮ್ಕಾ ಗಾವ್ತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 11:24
14 ತಿಳಿವುಗಳ ಹೋಲಿಕೆ  

ನೀವು ನಂಬಿಕೆಯಿಂದ ಪ್ರಾರ್ಥನೆಯಲ್ಲಿ ಏನೇನು ಬೇಡಿಕೊಳ್ಳುವಿರೋ ಅವುಗಳನ್ನೆಲ್ಲಾ ಪಡೆಯುವಿರಿ,” ಎಂದರು.


ಮತ್ತು ನಾವು ಏನೇನು ಬೇಡಿಕೊಳ್ಳುತ್ತೇವೋ ಅದನ್ನು ದೇವರಿಂದ ನಾವು ಹೊಂದಿಕೊಳ್ಳುತ್ತೇವೆ. ಏಕೆಂದರೆ ನಾವು ಅವರ ಆಜ್ಞೆಗಳನ್ನು ಕೈಗೊಂಡು ಅವರ ದೃಷ್ಟಿಯಲ್ಲಿ ಮೆಚ್ಚಿಗೆಯಾದವುಗಳನ್ನು ಮಾಡುವವರಾಗಿದ್ದೇವೆ.


“ಇನ್ನೂ ನಾನು ನಿಮಗೆ ನಿಜವಾಗಿ ಹೇಳುವುದೇನೆಂದರೆ: ನಿಮ್ಮಲ್ಲಿ ಇಬ್ಬರು ತಾವು ಬೇಡಿಕೊಳ್ಳುವ ಯಾವುದೇ ವಿಷಯಕ್ಕಾಗಿ ಭೂಮಿಯಲ್ಲಿ ಒಂದೇ ಮನಸ್ಸುಳ್ಳವರಾಗಿದ್ದರೆ, ಅದು ಪರಲೋಕದಲ್ಲಿರುವ ನನ್ನ ತಂದೆಯಿಂದ ಅವರಿಗೆ ಆಗುವುದು.


ನೀವು ನನ್ನಲ್ಲಿಯೂ ನನ್ನ ವಾಕ್ಯಗಳು ನಿಮ್ಮಲ್ಲಿಯೂ ನೆಲೆಗೊಂಡಿದ್ದರೆ ನೀವು ಬಯಸುವ ಯಾವುದನ್ನಾದರೂ ಬೇಡಿಕೊಳ್ಳಿರಿ. ಅದು ನಿಮ್ಮದಾಗುವುದು.


ನನ್ನ ಹೆಸರಿನಲ್ಲಿ ನೀವು ಏನೇನು ಕೇಳಿಕೊಳ್ಳುವಿರೋ ಅದನ್ನು ನಾನು ಮಾಡುವೆನು. ಹೀಗೆ ತಂದೆಗೆ ಪುತ್ರನಲ್ಲಿ ಮಹಿಮೆ ಉಂಟಾಗುವುದು.


ನೀವು ನಿಂತುಕೊಂಡು ಪ್ರಾರ್ಥಿಸುವಾಗ ಯಾರಿಗಾದರೂ ವಿರೋಧವಾದದ್ದು ನಿಮ್ಮಲ್ಲಿದ್ದರೆ ಕ್ಷಮಿಸಿರಿ. ಆಗ ಪರಲೋಕದಲ್ಲಿರುವ ನಿಮ್ಮ ತಂದೆಯೂ ಸಹ ನಿಮ್ಮ ಅಪರಾಧಗಳನ್ನು ಕ್ಷಮಿಸುವರು.


ಆದ್ದರಿಂದ, ಅನ್ಯಭಾಷೆಗಳನ್ನಾಡುವವನು ತಾನಾಡುವ ಮಾತಿನ ಅರ್ಥವನ್ನು ಹೇಳುವುದಕ್ಕೆ ದೇವರನ್ನು ಪ್ರಾರ್ಥಿಸಲಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು