Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 11:28 - ಕನ್ನಡ ಸಮಕಾಲಿಕ ಅನುವಾದ

28 ಯೇಸುವಿಗೆ, “ಯಾವ ಅಧಿಕಾರದಿಂದ ನೀನು ಇವುಗಳನ್ನು ಮಾಡುತ್ತೀ? ಇವುಗಳನ್ನು ಮಾಡುವುದಕ್ಕೆ ನಿನಗೆ ಅಧಿಕಾರ ಕೊಟ್ಟವರು ಯಾರು?” ಎಂದು ಕೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 “ನೀನು ಯಾವ ಅಧಿಕಾರದಿಂದ ಇದನ್ನೆಲ್ಲಾ ಮಾಡುತ್ತೀ? ಇದನ್ನು ಮಾಡುವುದಕ್ಕೆ ಈ ಅಧಿಕಾರವನ್ನು ನಿನಗೆ ಕೊಟ್ಟವರು ಯಾರು?” ಎಂದು ಆತನನ್ನು ಕೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

28 “ಇದನ್ನೆಲ್ಲಾ ನೀನು ಯಾವ ಅಧಿಕಾರದಿಂದ ಮಾಡುತ್ತಿರುವೆ? ನಿನಗೆ ಈ ಅಧಿಕಾರವನ್ನು ಕೊಟ್ಟವರು ಯಾರು?” ಎಂದು ಕೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

28 ನೀನು ಯಾವ ಅಧಿಕಾರದಿಂದ ಇದನ್ನೆಲ್ಲಾ ಮಾಡುತ್ತೀ? ಇದನ್ನು ಮಾಡುವದಕ್ಕೆ ಈ ಅಧಿಕಾರವನ್ನು ನಿನಗೆ ಯಾರು ಕೊಟ್ಟರು ಎಂದು ಆತನನ್ನು ಕೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

28 “ಇವುಗಳನ್ನೆಲ್ಲ ಮಾಡಲು ನಿನಗೆ ಯಾವ ಅಧಿಕಾರವಿದೆ? ಈ ಅಧಿಕಾರವನ್ನು ನಿನಗೆ ಯಾರು ಕೊಟ್ಟರು? ನಮಗೆ ತಿಳಿಸು!” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

28 “ಹೆ ಸಗ್ಳೆ ತಿಯಾ ಕಸ್ಲ್ಯಾ ಅದಿಕಾರಾನ್ ಕರುಕ್ ಲಾಗ್ಲೆ? ಹೆ ಸಗ್ಳೆ ಕರುಕ್ ತುಕಾ ಕೊನ್ ಅದಿಕಾರ್ ದಿಲಾ?” ಮನುನ್ ಸಾಂಗ್ ಅಮ್ಕಾ! ಮನುನ್ ಇಚಾರ್‍ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 11:28
8 ತಿಳಿವುಗಳ ಹೋಲಿಕೆ  

ಅದಕ್ಕವನು, “ಯಾರು ನಿನ್ನನ್ನು ನಮ್ಮ ಮೇಲೆ ಪ್ರಭುವನ್ನಾಗಿಯೂ ನ್ಯಾಯಾಧಿಪತಿಯನ್ನಾಗಿಯೂ ನೇಮಿಸಿದ್ದಾರೆ? ಆ ಈಜಿಪ್ಟಿನವನನ್ನು ಕೊಂದುಹಾಕಿದಂತೆ ನನ್ನನ್ನೂ ಕೊಂದು ಹಾಕಬೇಕೆಂದಿದ್ದೀಯೋ?” ಎಂದನು. ಆಗ ಮೋಶೆಯು ಭಯಪಟ್ಟು, “ನಿಶ್ಚಯವಾಗಿ ನಾನು ಮಾಡಿದ ಕಾರ್ಯವು ತಿಳಿದಿರಬೇಕು,” ಎಂದುಕೊಂಡನು.


“ಹಟಮಾರಿಗಳೇ! ಹೃದಯದಲ್ಲಿಯೂ ಕಿವಿಯಲ್ಲಿಯೂ ಸುನ್ನತಿ ಹೊಂದದವರೇ, ನೀವು ಸಹ ನಿಮ್ಮ ಪಿತೃಗಳಂತೆಯೇ ಯಾವಾಗಲೂ ಪವಿತ್ರಾತ್ಮ ದೇವರನ್ನು ಎದುರಿಸುತ್ತೀರಿ!


ನೀನು ಮರುಭೂಮಿಯಲ್ಲಿ ನಮ್ಮನ್ನು ಸಾಯಿಸುವುದಕ್ಕೆ ಹಾಲೂ ಜೇನೂ ಹರಿಯುವ ದೇಶದೊಳಗಿಂದ ನಮ್ಮನ್ನು ಹೊರಕ್ಕೆ ಕರೆದುಕೊಂಡು ಬಂದದ್ದು ನಿನಗೆ ಸಾಕಾಗಲಿಲ್ಲವೋ? ನೀನು ಅರಸನಾಗಿ ನಮ್ಮನ್ನು ಆಳಬೇಕೋ?


ಅವರು ಮೋಶೆಗೂ, ಆರೋನನಿಗೂ ವಿರೋಧವಾಗಿ ಕೂಡಿಕೊಂಡು, “ನೀವು ಹೆಚ್ಚು ಅಧಿಕಾರ ತೆಗೆದುಕೊಳ್ಳುತ್ತೀರಿ, ಏಕೆಂದರೆ ಈ ಸಮೂಹದಲ್ಲಿರುವ ಎಲ್ಲರೂ ಪರಿಶುದ್ಧರು. ಯೆಹೋವ ದೇವರು ಅವರ ಮಧ್ಯದಲ್ಲಿದ್ದಾರೆ. ಹೀಗಿರಲಾಗಿ ನಿಮ್ಮನ್ನು ನೀವೇ ಹೆಚ್ಚಿಸಿಕೊಳ್ಳುವುದು ಏಕೆ?” ಎಂದು ಅವರಿಗೆ ಕೇಳಿದರು.


ಯೇಸು ಮತ್ತು ಶಿಷ್ಯರು ಪುನಃ ಯೆರೂಸಲೇಮಿಗೆ ಬಂದರು. ಯೇಸು ದೇವಾಲಯದಲ್ಲಿ ತಿರುಗಾಡುತ್ತಿರುವಾಗ, ಮುಖ್ಯಯಾಜಕರೂ ನಿಯಮ ಬೋಧಕರೂ ಹಿರಿಯರೂ ಯೇಸುವಿನ ಬಳಿಗೆ ಬಂದು


ಅದಕ್ಕೆ ಯೇಸು ಅವರಿಗೆ, “ನಾನು ಸಹ ನಿಮಗೆ ಒಂದು ಪ್ರಶ್ನೆಯನ್ನು ಕೇಳುತ್ತೇನೆ. ನೀವು ನನಗೆ ಉತ್ತರ ಹೇಳಿದರೆ ನಾನು ಯಾವ ಅಧಿಕಾರದಿಂದ ಇವುಗಳನ್ನು ಮಾಡುತ್ತೇನೆಂದು ನಿಮಗೆ ಹೇಳುತ್ತೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು