Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 11:3 - ಕನ್ನಡ ಸಮಕಾಲಿಕ ಅನುವಾದ

3 ಯಾವನಾದರೂ ನಿಮಗೆ, ‘ಏಕೆ ಹೀಗೆ ಮಾಡುತ್ತೀರಿ?’ ಎಂದು ಕೇಳಿದರೆ, ‘ಇದು ಕರ್ತದೇವರಿಗೆ ಅವಶ್ಯವಾಗಿದೆ, ಆತನು ಕೂಡಲೇ ಇದನ್ನು ಹಿಂದಕ್ಕೆ ಕಳುಹಿಸುವನು,’ ” ಎಂದು ಹೇಳಿರಿ ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಯಾರಾದರೂ ನಿಮ್ಮನ್ನು, ‘ಅದನ್ನೇಕೆ ಬಿಚ್ಚುತ್ತೀರಿ?’ ಎಂದು ಕೇಳಿದರೆ, ‘ಇದು ಕರ್ತನಿಗೆ ಅಗತ್ಯವಾಗಿದೆ’ ಅನ್ನಿರಿ, ಅವರು ಬೇಗನೆ ಅದನ್ನು ಕಳುಹಿಸಿಕೊಡುವರು” ಎಂದು ಹೇಳಿ ಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಯಾರಾದರೂ ನಿಮ್ಮನ್ನು ‘ಅದನ್ನೇಕೆ ಬಿಚ್ಚುತ್ತೀರಿ?’ ಎಂದು ಕೇಳಿದರೆ, ‘ಪ್ರಭುವಿಗೆ ಇದು ಬೇಕಾಗಿದೆ. ಅವರು ಇದನ್ನು ಬೇಗನೆ ಹಿಂದಕ್ಕೆ ಕಳುಹಿಸಿಕೊಡುವರು,’ ಎಂದು ಹೇಳಿ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಯಾವನಾದರೂ ನಿಮ್ಮನ್ನು - ಏನು ಹೀಗೆ ಮಾಡುವದು ಎಂದು ಕೇಳಿದರೆ - ಇದು ಸ್ವಾವಿುಯವರಿಗೆ ಬೇಕಾಗಿದೆ, ಅವರು ತಡಮಾಡದೆ ತಿರಿಗಿ ಇಲ್ಲಿಗೆ ಕಳುಹಿಸಿಕೊಡುವರು ಅನ್ನಿರಿ ಎಂದು ಹೇಳಿ ಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಯಾವನಾದರೂ ‘ಆ ಕತ್ತೆಯನ್ನು ಏಕೆ ತೆಗೆದುಕೊಂಡು ಹೋಗುತ್ತಿದ್ದೀರಿ’ ಎಂದು ನಿಮ್ಮನ್ನು ಕೇಳಿದರೆ, ‘ಒಡೆಯನಿಗೆ ಈ ಕತ್ತೆ ಬೇಕಾಗಿದೆ. ಆತನು ಇದನ್ನು ಬೇಗನೆ ಕಳುಹಿಸಿಕೊಡುವನು’ ಎಂದು ಅವನಿಗೆ ಹೇಳಿರಿ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

3 ಕೊನ್ ತರ್ ಗಾಡ್ವಾಕ್ ಕಶ್ಯಾಕ್ ಘೆವ್ನ್ ಜಾವ್ಕ್ ಲ್ಯಾಸಿ ಮನುನ್ ಇಚಾರ್ಲ್ಯಾರ್ ಧನಿಯಾಕ್ ತೆಚಿ ಗರಜ್ ಹಾಯ್ ಅನಿ ಲಗ್ಗುನಾಚ್ ತೊ ತೆಕಾ ಫಾಟಿ ಧಾಡುನ್ ದಿತಾ ಮನುನ್ ಸಾಂಗಾ”.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 11:3
11 ತಿಳಿವುಗಳ ಹೋಲಿಕೆ  

ನಮಗೆ ಕರ್ತ ಆಗಿರುವ ಯೇಸುಕ್ರಿಸ್ತರ ಕೃಪೆಯನ್ನು ನೀವು ಬಲ್ಲವರಾಗಿದ್ದೀರಿ. ಅವರು ಐಶ್ವರ್ಯವಂತರಾಗಿದ್ದರೂ ತಮ್ಮ ಬಡತನದ ಮೂಲಕ ನೀವು ಐಶ್ವರ್ಯವಂತರಾಗುವಂತೆ ಅವರು ನಿಮಗೋಸ್ಕರ ಬಡವರಾದರು.


ದೇವರಿಗೆ ಏನಾದರೂ ಅವಶ್ಯಕತೆಯಿರುವಂತೆ ಮಾನವ ಹಸ್ತಗಳ ಸೇವೆಯು ಅಗತ್ಯವಿರುವುದಿಲ್ಲ. ದೇವರೇ ಎಲ್ಲರಿಗೂ ಜೀವವನ್ನೂ ಉಸಿರನ್ನೂ ಪ್ರತಿಯೊಂದನ್ನೂ ದಯಪಾಲಿಸಿರುವುದರಿಂದ,


ಸರ್ವಸೃಷ್ಟಿಗೆ ಕರ್ತ ಆಗಿರುವ ಯೇಸುಕ್ರಿಸ್ತರ ಮುಖಾಂತರ ಸಮಾಧಾನದ ಶುಭಸಮಾಚಾರ ಹೇಳುತ್ತಾ, ಇಸ್ರಾಯೇಲ್ ಜನರಿಗೆ ದೇವರು ಕಳುಹಿಸಿದ ವಾಕ್ಯವನ್ನು ನೀವು ತಿಳಿದಿದ್ದೀರಿ.


ಆಮೇಲೆ ಅವರು, “ಕರ್ತ ಯೇಸುವೇ, ಪ್ರತಿಯೊಬ್ಬರ ಹೃದಯವನ್ನು ನೀವು ತಿಳಿದವರು. ಈ ಸೇವೆಯಿಂದ ಯೂದನು ಭ್ರಷ್ಟನಾಗಿ ತನಗೆ ತಕ್ಕ ಸ್ಥಳಕ್ಕೆ ಹೋಗಿರುವುದರಿಂದ,


ಅವನು ಸಜ್ಜುಗೊಳಿಸಿ ಸಿದ್ಧಮಾಡಿದ ಮೇಲಂತಸ್ತಿನ ವಿಶಾಲವಾದ ಕೊಠಡಿಯನ್ನು ನಿಮಗೆ ತೋರಿಸುವನು. ಅಲ್ಲಿ ನಮಗೆ ಸಿದ್ಧಮಾಡಿರಿ,” ಎಂದರು.


ನೀವು ನಿಮ್ಮ ಸೈನ್ಯವನ್ನು ಒಟ್ಟುಗೂಡಿಸುವ ದಿನದಲ್ಲಿ ನಿಮ್ಮ ಪ್ರಜೆಗಳು ಸಂತೋಷದಿಂದ ತಾವಾಗಿಯೇ ಸೇರಿಕೊಳ್ಳುವರು. ಮುಂಜಾನೆಯ ಉದರದಿಂದ ಬರುವ ಇಬ್ಬನಿಯಂತೆ ನಿಮ್ಮ ಯೋಧರು ನಿಮ್ಮ ಕಡೆ ಇಳಿದು ಬರುವರು.


ಭೂಮಿಯೂ ಅದರಲ್ಲಿರುವ ಸಮಸ್ತವೂ ಯೆಹೋವ ದೇವರದ್ದೇ; ಲೋಕವೂ ಅದರ ನಿವಾಸಿಗಳೂ ಅವರಿಗೇ ಸೇರಿದ್ದು.


“ನಿಮ್ಮ ಎದುರಿಗಿರುವ ಹಳ್ಳಿಗೆ ಹೋಗಿರಿ. ನೀವು ಅದರೊಳಗೆ ಪ್ರವೇಶಿಸಿದ ಕೂಡಲೇ ಕಟ್ಟಿರುವ ಮತ್ತು ಯಾರೂ ಅದರ ಮೇಲೆ ಸವಾರಿ ಮಾಡದಿರುವ ಒಂದು ಕತ್ತೆಮರಿಯನ್ನು ಅಲ್ಲಿ ಕಾಣುವಿರಿ. ಅದನ್ನು ಬಿಚ್ಚಿ ಇಲ್ಲಿಗೆ ತೆಗೆದುಕೊಂಡು ಬನ್ನಿರಿ.


ಆಗ ಅವರು ಹೊರಟುಹೋಗಿ ಬೀದಿಯಲ್ಲಿದ್ದ ಒಂದು ಮನೆಯ ಬಾಗಿಲಿನ ಹತ್ತಿರ ಕಟ್ಟಿದ್ದ ಕತ್ತೆಮರಿಯನ್ನು ಕಂಡರು. ಅವರು ಅದನ್ನು ಬಿಚ್ಚುತ್ತಿರುವಾಗ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು