ಮಾರ್ಕ 12:14 - ಕನ್ನಡ ಸಮಕಾಲಿಕ ಅನುವಾದ14 ಅವರು ಬಂದು ಯೇಸುವಿಗೆ, “ಬೋಧಕರೇ, ನೀವು ಸತ್ಯವಂತರು ಮತ್ತು ಯಾವ ಮನುಷ್ಯನನ್ನೂ ಲಕ್ಷಿಸದವರೂ ನೀವು ಮನುಷ್ಯರ ಮುಖದಾಕ್ಷಿಣ್ಯ ಮಾಡದೆ ದೇವರ ಮಾರ್ಗವನ್ನು ಸತ್ಯದಲ್ಲಿ ಬೋಧಿಸುತ್ತೀರಿ ಎಂದೂ ನಾವು ಬಲ್ಲೆವು. ಕೈಸರನಿಗೆ ತೆರಿಗೆ ಕೊಡುವುದು ಧರ್ಮಸಮ್ಮತವೋ ಇಲ್ಲವೋ? ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ಇವರು ಬಂದು, “ಬೋಧಕನೇ ನೀನು ಸತ್ಯವಂತನು, ಯಾವ ಮನುಷ್ಯನನ್ನು ಲಕ್ಷಿಸದವನೂ, ಮುಖದಾಕ್ಷಿಣ್ಯ ತೋರಿಸದವನೂ, ಸತ್ಯಕ್ಕನುಸಾರವಾಗಿ ದೈವಮಾರ್ಗವನ್ನು ಬೋಧಿಸುವವನೂ ಎಂದು ನಾವು ಬಲ್ಲೆವು. ಕೈಸರನಿಗೆ ಸುಂಕ ಕೊಡುವುದು ಧರ್ಮಸಮ್ಮತವೋ? ಅಲ್ಲವೋ? ನಾವದನ್ನು ಕೊಡಬೇಕೋ ಬೇಡವೋ?” ಎಂದು ಆತನನ್ನು ಕೇಳಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ಇವರು ಬಂದು, “ಬೋಧಕರೇ, ತಾವು ಸತ್ಯವಂತರು, ಸ್ಥಾನಮಾನಕ್ಕೆ ಮಣಿಯದವರು, ಮುಖದಾಕ್ಷಿಣ್ಯಕ್ಕೆ ಎಡೆಕೊಡದವರು, ಸತ್ಯಕ್ಕನುಸಾರ ದೈವಮಾರ್ಗವನ್ನು ಬೋಧಿಸುವವರು ಎಂದು ನಾವು ಬಲ್ಲೆವು. ಹೀಗಿರುವಲ್ಲಿ ರೋಮ್‍ಚಕ್ರಾಧಿಪತಿಗೆ ತೆರಿಗೆ ಕೊಡುವುದು ಧರ್ಮಸಮ್ಮತವೋ, ಅಲ್ಲವೋ? ನಾವದನ್ನು ಕೊಡಬೇಕೋ, ಬೇಡವೋ?” ಎಂದು ಕೇಳಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ಇವರು ಬಂದು - ಬೋಧಕನೇ, ನೀನು ಸತ್ಯವಂತನು, ಯಾರಿಗೂ ಹೆದರದವನು; ನೀನು ಜನರ ಮುಖದಿಚ್ಫೆಗೆ ಮಾತಾಡದೆ ದೇವರ ಮಾರ್ಗವನ್ನು ಸತ್ಯವಾಗಿ ಬೋಧಿಸುವವನಾಗಿದ್ದೀ ಎಂದು ಬಲ್ಲೆವು. ಕೈಸರನಿಗೆ ತೆರಿಗೆ ಕೊಡುವದು ಸರಿಯೋ ಸರಿಯಲ್ಲವೋ, ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್14 ಫರಿಸಾಯರು ಮತ್ತು ಹೆರೋದ್ಯರು ಯೇಸುವಿನ ಬಳಿಗೆ ಬಂದು, ಆತನಿಗೆ, “ಉಪದೇಶಕನೇ, ನೀನು ಯಥಾರ್ಥನೆಂಬುದು ನಮಗೆ ತಿಳಿದಿದೆ. ನಿನ್ನ ಬಗ್ಗೆ ಜನರು ಏನು ಯೋಚಿಸುತ್ತಾರೆಂಬುದರ ಬಗ್ಗೆ ನಿನಗೆ ಹೆದರಿಕೆಯಿಲ್ಲ. ಜನರೆಲ್ಲರೂ ನಿನಗೆ ಒಂದೇ. ಮತ್ತು ನೀನು ದೇವರ ಮಾರ್ಗವನ್ನು ಕುರಿತು ಸತ್ಯವನ್ನೇ ಉಪದೇಶಿಸುತ್ತಿರುವೆ ಎಂದು ನಮಗೆ ಗೊತ್ತಿದೆ. ಆದ್ದರಿಂದ ನಮಗೆ ಹೇಳು: ಸೀಸರನಿಗೆ ತೆರಿಗೆ ಕೊಡುವುದು ಸರಿಯೋ? ಅಥವಾ ತಪ್ಪೋ? ನಾವು ತೆರಿಗೆಗಳನ್ನು ಕೊಡಬೇಕೇ ಅಥವಾ ಕೊಡಬಾರದೇ?” ಎಂದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್14 ಅನಿ “ಗುರುಜಿ, ತಿಯಾ ಲೊಕಾ ಕಾಯ್ ಯೌವಜ್ತ್ಯಾತ್ ಮನುನ್ ಪರ್ವಾ ಕರಿನಸ್ತಾನಾ ಖರೆ ಅಸಲ್ಲೆ ಸಾಂಗ್ತೆ, ಅನಿ ಕೊನಾಚೆ ತೊಂಡ್ ಬಗಿನಸ್ತಾನಾ ಬೊಲ್ತೆ, ತಿಯಾ ಮಾನ್ಸಾ ಸಾಟ್ನಿ ದೆವಾಚಿ ಯವ್ಜನ್ ಕಾಯ್ ಮನುನ್ ಅಮ್ಕಾ ಸಾಂಗ್, ಅಮಿ ರೊಮಾಚ್ಯಾ ಚಕ್ರವರ್ತಿಕ್ ತೆರ್‍ಗಿ ದಿತಲೆ ಅಮ್ಚ್ಯಾ ಧರ್ಮಾಚ್ಯಾ ಖಾಯ್ದ್ಯಾ ಪರ್ಕಾರ್ ಸಮಾ ಹಾಯ್ ಕಾಯ್, ನಾ?” ಮನುನ್ ತೆಕಾ ಇಚಾರ್‍ಲ್ಯಾನಿ. ಅಧ್ಯಾಯವನ್ನು ನೋಡಿ |