ಮಾರ್ಕ 12:15 - ಕನ್ನಡ ಸಮಕಾಲಿಕ ಅನುವಾದ15 ನಾವು ಕೊಡಬೇಕೋ? ಕೊಡಬಾರದೋ?” ಎಂದು ಕೇಳಿದರು. ಆದರೆ ಯೇಸು ಅವರ ಕಪಟವನ್ನು ತಿಳಿದು ಅವರಿಗೆ, “ನೀವು ನನ್ನನ್ನೇಕೆ ಪರೀಕ್ಷಿಸುತ್ತೀರಿ? ಒಂದು ಬೆಳ್ಳಿ ನಾಣ್ಯವನ್ನು ತಂದು ನನಗೆ ತೋರಿಸಿರಿ,” ಎಂದು ಹೇಳಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ಆದರೆ ಯೇಸು ಅವರ ಕಪಟತನವನ್ನು ಗ್ರಹಿಸಿ, “ನೀವು ನನ್ನನ್ನು ಪರೀಕ್ಷಿಸುವುದೇಕೆ? ಒಂದು ನಾಣ್ಯವನ್ನು ತಂದು ನನಗೆ ತೋರಿಸಿರಿ ನಾನು ಅದನ್ನು ನೋಡುತ್ತೇನೆ” ಎಂದು ಹೇಳಲು ಅವರು ತಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ಅವರ ಕಪಟತನವನ್ನು ಯೇಸು ಗ್ರಹಿಸಿ, “ನೀವು ನನ್ನನ್ನು ಪರೀಕ್ಷಿಸುವುದೇಕೆ? ಒಂದು ನಾಣ್ಯವನ್ನು ತನ್ನಿ, ಅದನ್ನು ನೋಡೋಣ,” ಎಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ಕೊಡಬೇಕೋ ಬೇಡವೋ ಎಂದು ಆತನನ್ನು ಕೇಳಿದರು. ಆತನು ಅವರ ಕಪಟವನ್ನು ತಿಳಿದು - ನನ್ನನ್ನು ಯಾಕೆ ಪರೀಕ್ಷೆ ಮಾಡುತ್ತೀರಿ? ನನಗೆ ಒಂದು ಹಣವನ್ನು ತಂದು ತೋರಿಸಿರಿ ಅನ್ನಲು ಅವರು ತಂದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್15 ಈ ಜನರು ನಿಜವಾಗಿಯೂ ತನ್ನನ್ನು ವಂಚಿಸುವುದಕ್ಕೆ ಪ್ರಯತ್ನಿಸುತ್ತಿದ್ದಾರೆಂಬುದು ಯೇಸುವಿಗೆ ತಿಳಿದಿತ್ತು. ಆದ್ದರಿಂದ ಆತನು ಅವರಿಗೆ, “ನನ್ನ ಮಾತಿನಲ್ಲಿ ತಪ್ಪನ್ನು ಕಂಡುಹಿಡಿಯಲು ಏಕೆ ಪ್ರಯತ್ನಿಸುತ್ತೀರಿ? ನನಗೆ ಒಂದು ಬೆಳ್ಳಿನಾಣ್ಯವನ್ನು ಕೊಡಿರಿ, ನಾನು ಅದನ್ನು ನೋಡಬೇಕು” ಎಂದನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್15 ಜೆಜುನ್ ತೆಂಚೊ ಘಾತ್ ಕಳ್ವುನ್ ಘೆಟ್ಲ್ಯಾನ್ ಅನಿ “ತುಮಿ ಮಾಕಾಚ್ ಗೊಂದ್ಳುನ್ ಘಾಲುವಾ ಮನುನ್ ಕಶ್ಯಾಕ್ ಯವ್ಜುಕ್ ಲಾಗ್ಲ್ಯಾಸಿ? ಎಕ್ ಚಾಂದಿಚಿ ಪೈಸ್ಯಾಚಿ ಗಾಲಿ ಮಾಜ್ಯಾಕ್ಡೆ ದಿವಾ ಬಗುವಾ?” ಮಟ್ಲ್ಯಾನ್. ಅಧ್ಯಾಯವನ್ನು ನೋಡಿ |
ಯೇಸು ಮೂರನೆಯ ಸಾರಿ ಪೇತ್ರನಿಗೆ, “ಯೋಹಾನನ ಮಗನಾದ ಸೀಮೋನನೇ, ನೀನು ನನ್ನ ಮೇಲೆ ಮಮತೆ ಇಟ್ಟಿದ್ದೀಯೋ?” ಎಂದು ಕೇಳಿದರು. ಯೇಸು ಮೂರನೆಯ ಸಾರಿ, “ನೀನು ನನ್ನ ಮೇಲೆ ಮಮತೆ ಇಟ್ಟಿದ್ದೀಯೋ?” ಎಂದು ತನ್ನನ್ನು ಕೇಳಿದ್ದಕ್ಕೆ ಪೇತ್ರನು ದುಃಖಪಟ್ಟು, “ಕರ್ತನೇ, ನಿಮಗೆ ಎಲ್ಲವೂ ತಿಳಿದಿದೆ. ನಾನು ನಿಮ್ಮ ಮೇಲೆ ಎಷ್ಟು ಮಮತೆ ಇಟ್ಟಿದ್ದೇನೆಂದು ನಿಮಗೆ ತಿಳಿದಿದೆ,” ಎಂದನು. ಆಗ ಯೇಸು ಪೇತ್ರನಿಗೆ, “ನನ್ನ ಕುರಿಗಳನ್ನು ಮೇಯಿಸು,” ಎಂದರು.