Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 12:28 - ಕನ್ನಡ ಸಮಕಾಲಿಕ ಅನುವಾದ

28 ನಿಯಮ ಬೋಧಕರಲ್ಲಿ ಒಬ್ಬನು ಬಂದು ಅವರು ಕೂಡಿಕೊಂಡು ತರ್ಕಿಸುತ್ತಿರುವುದನ್ನು ಕೇಳಿ ಯೇಸು ಅವರಿಗೆ ಸರಿಯಾಗಿ ಉತ್ತರವನ್ನು ಕೊಟ್ಟನೆಂದು ತಿಳಿದು ಅವರಿಗೆ, “ಎಲ್ಲಾ ಆಜ್ಞೆಗಳಲ್ಲಿ ಮೊದಲನೆಯದು ಯಾವುದು?” ಎಂದು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ಶಾಸ್ತ್ರಿಗಳಲ್ಲಿ ಒಬ್ಬನು ಅವರ ವಾದವನ್ನು ಕೇಳಿ ಯೇಸು ಅವರಿಗೆ ಸರಿಯಾಗಿ ಉತ್ತರ ಕೊಟ್ಟನೆಂದು ತಿಳಿದು ಆತನ ಹತ್ತಿರಕ್ಕೆ ಬಂದು, “ಎಲ್ಲಾ ಆಜ್ಞೆಗಳಲ್ಲಿ ಮುಖ್ಯವಾದ್ದದು ಯಾವುದು?” ಎಂದು ಆತನನ್ನು ಕೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

28 ಈ ತರ್ಕವನ್ನು ಕೇಳುತ್ತಿದ್ದ ಧರ್ಮಶಾಸ್ತ್ರಿ ಒಬ್ಬನು, ಯೇಸುಸ್ವಾಮಿ ಸದ್ದುಕಾಯರಿಗೆ ಸಮರ್ಪಕವಾದ ಉತ್ತರವನ್ನು ಕೊಟ್ಟಿದ್ದನ್ನು ಮೆಚ್ಚಿ, ಅವರ ಬಳಿಗೆ ಬಂದು, “ಆಜ್ಞೆಗಳಲ್ಲೆಲ್ಲಾ ಪ್ರಪ್ರಥಮ ಆಜ್ಞೆ ಯಾವುದು?” ಎಂದು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

28 ಶಾಸ್ತ್ರಿಗಳಲ್ಲಿ ಒಬ್ಬನು ಅವರ ತರ್ಕವನ್ನು ಕೇಳಿ ಯೇಸು ಅವರಿಗೆ ಒಳ್ಳೆಯ ಉತ್ತರ ಕೊಟ್ಟನೆಂದು ತಿಳಿದು ಹತ್ತಿರಕ್ಕೆ ಬಂದು - ಎಲ್ಲಾ ಆಜ್ಞೆಗಳಲ್ಲಿ ಮೊದಲನೆಯದು ಯಾವದು ಎಂದು ಆತನನ್ನು ಕೇಳಿದ್ದಕ್ಕೆ ಯೇಸು -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

28 ಈ ವಾದವಿವಾದವನ್ನು ಕೇಳುತ್ತಿದ್ದ ಧರ್ಮೋಪದೇಶಕರಲ್ಲಿ ಒಬ್ಬನು ಯೇಸು ಸದ್ದುಕಾಯರಿಗೆ ಹಾಗೂ ಫರಿಸಾಯರಿಗೆ ಒಳ್ಳೆಯ ಉತ್ತರ ಕೊಟ್ಟದ್ದನ್ನು ಗಮನಿಸಿ, ಆತನ ಬಳಿಗೆ ಬಂದು, “ಆಜ್ಞೆಗಳಲ್ಲೆಲ್ಲಾ ಅತ್ಯಂತ ಮುಖ್ಯವಾದ ಆಜ್ಞೆ ಯಾವುದು?” ಎಂದು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

28 ಖಾಯ್ದೆ ಸಿಕ್ವುತಲ್ಯಾಂಚ್ಯಾ ಮದ್ಲ್ಯಾ ಎಕ್ ಮಾನ್ಸಾನ್ ಜೆಜು ಸಾದುಸೆವಾಕ್ನಿ ಸಮಾ ಜಬಾಬ್ ದಿತಲೆ ಅಯ್ಕ್ಲ್ಯಾನ್, ಅನಿ ಜೆಜುಕ್ಡೆ ಯೆವ್ನ್ “ಸಗ್ಳ್ಯಾ ಉಪಾದೆಸಾನ್ಕಿ ಮೊಟೊ ಉಪಾದೆಸ್ ಖಲೊ?” ಮನುನ್ ಇಚಾರ್‍ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 12:28
8 ತಿಳಿವುಗಳ ಹೋಲಿಕೆ  

ಆಗ ನಿಯಮ ಬೋಧಕರಲ್ಲಿ ಕೆಲವರು ಪ್ರತ್ಯುತ್ತರವಾಗಿ, “ಬೋಧಕರೇ, ನೀವು ಸರಿಯಾಗಿ ಹೇಳಿದಿರಿ,” ಎಂದರು.


ಅವನು ಯೇಸುವಿಗೆ, “ಅವು ಯಾವುವು?” ಎಂದು ಕೇಳಿದನು. ಅದಕ್ಕೆ ಯೇಸು, “ನರಹತ್ಯೆ ಮಾಡಬಾರದು, ವ್ಯಭಿಚಾರ ಮಾಡಬಾರದು, ಕದಿಯಬಾರದು, ಸುಳ್ಳುಸಾಕ್ಷಿ ಹೇಳಬಾರದು,


ಆದ್ದರಿಂದ ಈ ಆಜ್ಞೆಗಳಲ್ಲಿ ಅತ್ಯಂತ ಚಿಕ್ಕದಾದ ಒಂದನ್ನು ಮೀರಿ, ಹಾಗೆಯೇ ಮೀರಲು ಇತರರಿಗೆ ಬೋಧಿಸುವವನು ಪರಲೋಕ ರಾಜ್ಯದಲ್ಲಿ ಅತಿ ಚಿಕ್ಕವನೆಂದು ಎನಿಸಿಕೊಳ್ಳುವನು. ಆದರೆ ಈ ಆಜ್ಞೆಗಳನ್ನು ಪಾಲಿಸಿ ಇತರರಿಗೆ ಬೋಧಿಸುವವನು ಪರಲೋಕ ರಾಜ್ಯದಲ್ಲಿ ದೊಡ್ಡವನೆಂದು ಎನಿಸಿಕೊಳ್ಳುವನು.


“ಫರಿಸಾಯರೇ, ನಿಮಗೆ ಕಷ್ಟ, ಏಕೆಂದರೆ ನೀವು ಪುದೀನ, ಸದಾಪು ಮತ್ತು ಸಕಲ ವಿಧವಾದ ಸೊಪ್ಪುಗಳಲ್ಲಿ ದಶಮಭಾಗವನ್ನು ಕೊಟ್ಟು, ನ್ಯಾಯವನ್ನೂ ದೇವರ ಪ್ರೀತಿಯನ್ನೂ ಲಕ್ಷಿಸದೆ ಹೋಗುತ್ತೀರಿ. ಅವುಗಳನ್ನು ಮಾಡಿದ ನೀವು ಇವುಗಳನ್ನೂ ಅವಶ್ಯವಾಗಿ ಮಾಡಬೇಕಾಗಿತ್ತು.


“ಕಪಟಿಗಳಾದ ನಿಯಮ ಬೋಧಕರೇ, ಫರಿಸಾಯರೇ, ನಿಮಗೆ ಕಷ್ಟ! ಏಕೆಂದರೆ ನೀವು ಪುದೀನ, ಸದಾಪು, ಜೀರಿಗೆಗಳ ದಶಮಭಾಗವನ್ನು ಸಲ್ಲಿಸುತ್ತೀರಿ. ಆದರೆ ನಿಯಮದ ನ್ಯಾಯನೀತಿ, ಕರುಣೆ, ನಂಬಿಕೆ ಎಂಬ ಈ ಪ್ರಮುಖವಾದವುಗಳನ್ನು ಬಿಟ್ಟುಬಿಟ್ಟಿದ್ದೀರಿ. ಇವುಗಳೊಂದಿಗೆ ಆ ಬೇರೆಯವುಗಳನ್ನು ಬಿಟ್ಟುಬಿಡದೆ ಮಾಡಬೇಕಾಗಿತ್ತು.


ಯೇಸು ತಮ್ಮ ಶಿಷ್ಯರ ಬಳಿಗೆ ಬಂದಾಗ, ಅವರ ಸುತ್ತಲು ದೊಡ್ಡ ಸಮೂಹವನ್ನೂ ನಿಯಮ ಬೋಧಕರು ಅವರೊಂದಿಗೆ ತರ್ಕಿಸುತ್ತಿರುವುದನ್ನೂ ಕಂಡರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು