Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 12:33 - ಕನ್ನಡ ಸಮಕಾಲಿಕ ಅನುವಾದ

33 ಅವರನ್ನು ನಿನ್ನ ಪೂರ್ಣಹೃದಯದಿಂದಲೂ ನಿನ್ನ ಪೂರ್ಣಮನಸ್ಸಿನಿಂದಲೂ ನಿನ್ನ ಪೂರ್ಣಶಕ್ತಿಯಿಂದಲೂ ಪ್ರೀತಿಸಿ, ತನ್ನ ನೆರೆಯವನನ್ನು ತನ್ನಂತೆಯೇ ಪ್ರೀತಿಸುವುದು ಎಲ್ಲಾ ದಹನಬಲಿಗಳಿಗಿಂತಲೂ ಯಜ್ಞಗಳಿಗಿಂತಲೂ ಹೆಚ್ಚಿನದಾಗಿದೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

33 ಆತನನ್ನು ಪೂರ್ಣಹೃದಯದಿಂದಲೂ, ಪೂರ್ಣ ಬುದ್ಧಿಯಿಂದಲೂ, ಪೂರ್ಣ ಶಕ್ತಿಯಿಂದಲೂ ಪ್ರೀತಿಸತಕ್ಕದ್ದು. ಇದಲ್ಲದೆ ತನ್ನನ್ನು ಪ್ರೀತಿಸಿಕೊಳ್ಳುವಂತೆ ತನ್ನ ನೆರೆಯವನನ್ನು ಪ್ರೀತಿಸುವುದು ಇವೆರಡೂ ಎಲ್ಲಾ ಸರ್ವಾಂಗಹೋಮಗಳಿಗಿಂತಲೂ ಎಲ್ಲಾ ಯಜ್ಞಗಳಿಗಿಂತಲೂ ಮೇಲಾದುವು” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

33 ಅವರನ್ನು ನಾವು ಪೂರ್ಣ ಹೃದಯದಿಂದಲೂ ಪೂರ್ಣ ಜ್ಞಾನದಿಂದಲೂ ಪೂರ್ಣ ಶಕ್ತಿಯಿಂದಲೂ ಪ್ರೀತಿಸತಕ್ಕದ್ದು. ಇದಲ್ಲದೆ ನಮ್ಮನ್ನು ನಾವು ಪ್ರೀತಿಸಿಕೊಳ್ಳುವಂತೆಯೇ ನಮ್ಮ ನೆರೆಯವರನ್ನೂ ಪ್ರೀತಿಸತಕ್ಕದ್ದು. ಇವು ಎಲ್ಲಾ ದಹನಬಲಿಗಳಿಗಿಂತಲೂ ಯಜ್ಞಯಾಗಾದಿಗಳಿಗಿಂತಲೂ ಎಷ್ಟೋ ಮೇಲಾದುವು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

33 ಆತನನ್ನು ಪೂರ್ಣಮನಸ್ಸಿನಿಂದಲೂ ಪೂರ್ಣಬುದ್ಧಿಯಿಂದಲೂ ಪೂರ್ಣಶಕ್ತಿಯಿಂದಲೂ ಪ್ರೀತಿಸುವದು ಮತ್ತು ತನ್ನನ್ನು ಪ್ರೀತಿಸಿಕೊಳ್ಳುವಂತೆ ತನ್ನ ನೆರೆಯವನನ್ನು ಪ್ರೀತಿಸುವದು ಇವೆರಡೂ ಎಲ್ಲಾ ಸರ್ವಾಂಗಹೋಮಗಳಿಗಿಂತಲೂ ಎಲ್ಲಾ ಯಜ್ಞಗಳಿಗಿಂತಲೂ ಹೆಚ್ಚಿನವು ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

33 ಆತನಲ್ಲದೆ ಬೇರೆ ದೇವರಿಲ್ಲ. ದೇವರನ್ನು ಪೂರ್ಣಹೃದಯದಿಂದ, ಪೂರ್ಣಬುದ್ಧಿಯಿಂದ ಹಾಗೂ ಪೂರ್ಣಶಕ್ತಿಯಿಂದ ಪ್ರೀತಿಸಬೇಕು ಮತ್ತು ಒಬ್ಬ ವ್ಯಕ್ತಿಯು ತನ್ನನ್ನು ಪ್ರೀತಿಸುವಂತೆಯೇ ಇತರರನ್ನೂ ಪ್ರೀತಿಸಬೇಕು. ನಾವು ದೇವರಿಗೆ ಅರ್ಪಿಸುವ ಪಶುಯಜ್ಞಗಳಿಗಿಂತಲೂ ಈ ಆಜ್ಞೆಗಳು ಹೆಚ್ಚು ಮುಖ್ಯವಾಗಿವೆ” ಎಂದು ಉತ್ತರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

33 ಅನಿ ಮಾನ್ಸಾನ್ ಅಪ್ನಾಚ್ಯಾ ಪುರಾ ಕಾಳ್ಜಾನ್, ಪುರಾ ಮನಾನ್, ಪುರಾ ತಾಕ್ತಿನ್ ದೆವಾಚೊ ಪ್ರೆಮ್ ಕರುಚೊ ಅನಿ ಅಪ್ನಾಚೊ ಕರಲ್ಲ್ಯಾ ಬಾಸೆನ್ ದುಸ್ರ್ಯಾಂಚೊಬಿ ಪ್ರೆಮ್ ಕರುಚೊ, ಹಿ ದೊನ್ ಉಪಾದೆಸಾ ಲೈ ಮಹತ್ವಾಚಿ, ಹೆ ಅಮಿ ದೆವಾಕ್ ದಿತಲ್ಯಾ ಕೌಡ್ಯಾಕಿ ಜನಾವರಾಂಚ್ಯಾ ಬಲಿಯಾಂಚ್ಯಾನ್ಕಿ ಅನಿ ದುಸ್ರ್ಯಾ ಕಾನಿಕಾಂಚ್ಯಾನ್ಕಿ ಮೊಟೆ.” ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 12:33
15 ತಿಳಿವುಗಳ ಹೋಲಿಕೆ  

ಏಕೆಂದರೆ ನಾನು ಯಜ್ಞವನ್ನಲ್ಲ, ಕರುಣೆಯನ್ನೇ ಅಪೇಕ್ಷಿಸುತ್ತೇನೆ. ದಹನಬಲಿಗಳಿಗಿಂತ ದೇವರ ಅಂಗೀಕಾರವನ್ನೇ ಅಪೇಕ್ಷಿಸುತ್ತೇನೆ.


ಅದಕ್ಕೆ ಸಮುಯೇಲನು ಹೇಳಿದ್ದೇನೆಂದರೆ, “ಯೆಹೋವ ದೇವರ ವಾಕ್ಯಕ್ಕೆ ವಿಧೇಯನಾದರೆ, ಯೆಹೋವ ದೇವರಿಗೆ ಆಗುವ ಸಂತೋಷ ದಹನಬಲಿಗಳಲ್ಲಿಯೂ ಯಜ್ಞಗಳಲ್ಲಿಯೂ ಆಗುವುದೋ? ಇಗೋ, ಯಜ್ಞಕ್ಕಿಂತ ವಿಧೇಯತೆಯು, ಟಗರುಗಳ ಕೊಬ್ಬಿಗಿಂತ ಮಾತುಕೇಳುವುದೇ ಉತ್ತಮವಾಗಿರುವುದು.


ಆದರೆ, ‘ನಾನು ಯಜ್ಞವನ್ನಲ್ಲ, ಕರುಣೆಯನ್ನೇ ಅಪೇಕ್ಷಿಸುತ್ತೇನೆ’ ಎಂಬುದರ ಅರ್ಥವನ್ನು ನೀವು ತಿಳಿದಿದ್ದರೆ, ನಿರಪರಾಧಿಗಳನ್ನು ಖಂಡಿಸುತ್ತಿರಲಿಲ್ಲ.


ಆದರೆ ನೀವು ಹೋಗಿ, ‘ನಾನು ಯಜ್ಞವನ್ನಲ್ಲ, ಕರುಣೆಯನ್ನೇ ಅಪೇಕ್ಷಿಸುತ್ತೇನೆ,’ ಎಂಬುದರ ಅರ್ಥವನ್ನು ಕಲಿತುಕೊಳ್ಳಿರಿ. ಏಕೆಂದರೆ ನಾನು ನೀತಿವಂತರನ್ನಲ್ಲ, ಪಾಪಿಗಳನ್ನು ಕರೆಯಲು ಬಂದಿದ್ದೇನೆ,” ಎಂದು ಹೇಳಿದರು.


ಯಾರು ಧನ್ಯವಾದದ ಬಲಿಯನ್ನು ಅರ್ಪಿಸುವರೋ ಅವರೇ ನನ್ನನ್ನು ಘನಪಡಿಸುವರು. ತಮ್ಮ ನಡವಳಿಕೆಯನ್ನು ಕ್ರಮಪಡಿಸಿಕೊಳ್ಳುವವರಿಗೆ ನನ್ನ ರಕ್ಷಣೆಯನ್ನು ತೋರಿಸುವೆನು.”


ಮೋಶೆಯ ನಿಯಮದ ಪ್ರಕಾರವಾಗಿ ಅರ್ಪಿಸಲಾಗುತ್ತಿದ್ದಂತೆಯೇ, “ಯಜ್ಞವೂ ಅರ್ಪಣೆಯೂ ದಹನಬಲಿಗಳೂ ಪಾಪ ಪರಿಹಾರದ ಬಲಿಯೂ ನಿಮಗೆ ಇಷ್ಟವಾಗಿರಲಿಲ್ಲ. ಅವುಗಳಲ್ಲಿ ನಿಮಗೆ ಸಂತೋಷವಿರಲಿಲ್ಲ,” ಎಂದು ಮೊದಲು ಅವರು ಹೇಳಿ,


ಯಜ್ಞಕ್ಕಿಂತ ನೀತಿ ನ್ಯಾಯಗಳನ್ನು ನಡೆಸುವುದು ಯೆಹೋವ ದೇವರಿಗೆ ಎಷ್ಟೋ ಮೆಚ್ಚಿಗೆಯಾಗಿದೆ.


ನೀವು ನಿಮ್ಮ ದೇವರಾದ ಯೆಹೋವ ದೇವರನ್ನು ಪೂರ್ಣಹೃದಯದಿಂದಲೂ, ಪೂರ್ಣಪ್ರಾಣದಿಂದಲೂ, ಪೂರ್ಣಶಕ್ತಿಯಿಂದಲೂ ಪ್ರೀತಿಸಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು