ಮಾರ್ಕ 12:34 - ಕನ್ನಡ ಸಮಕಾಲಿಕ ಅನುವಾದ34 ಅವನು ವಿವೇಕದಿಂದ ಉತ್ತರ ಕೊಟ್ಟದ್ದನ್ನು ಯೇಸು ಕಂಡು ಅವನಿಗೆ, “ನೀನು ದೇವರ ರಾಜ್ಯಕ್ಕೆ ದೂರವಾದವನಲ್ಲ,” ಎಂದರು. ಅಂದಿನಿಂದ ಯೇಸುವನ್ನು ಪ್ರಶ್ನೆಮಾಡುವುದಕ್ಕೆ ಯಾರಿಗೂ ಧೈರ್ಯವಿರಲಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201934 ಅವನು ಬುದ್ಧಿಯಿಂದ ಉತ್ತರಕೊಟ್ಟದ್ದನ್ನು ಯೇಸು ಕಂಡು, “ನೀನು ದೇವರ ರಾಜ್ಯಕ್ಕೆ ದೂರವಾದವನಲ್ಲ” ಎಂದನು. ಅಂದಿನಿಂದ ಆತನನ್ನು ಪ್ರಶ್ನೆಮಾಡುವುದಕ್ಕೆ ಯಾರಿಗೂ ಧೈರ್ಯವಿರಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)34 ಅವನ ವಿವೇಕಪೂರ್ಣವಾದ ಉತ್ತರವನ್ನು ಮೆಚ್ಚಿ ಯೇಸು, “ನೀನು ದೇವರ ಸಾಮ್ರಾಜ್ಯದಿಂದ ದೂರವಿಲ್ಲ,” ಎಂದರು. ಇದಾದ ಬಳಿಕ ಯೇಸುವನ್ನು ಪ್ರಶ್ನಿಸುವುದಕ್ಕೆ ಯಾರೊಬ್ಬರೂ ಧೈರ್ಯಗೊಳ್ಳಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)34 ಅವನು ಬುದ್ಧಿಯಿಂದ ಉತ್ತರಕೊಟ್ಟದ್ದನ್ನು ಯೇಸು ಕಂಡು - ನೀನು ದೇವರ ರಾಜ್ಯಕ್ಕೆ ದೂರವಾದವನಲ್ಲ ಅಂದನು. ಅಂದಿನಿಂದ ಆತನನ್ನು ಪ್ರಶ್ನೆಮಾಡುವದಕ್ಕೆ ಯಾರಿಗೂ ಧೈರ್ಯವಿರಲಿಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್34 ಅವನ ಬುದ್ಧಿವಂತಿಕೆಯ ಉತ್ತರವನ್ನು ಕೇಳಿದ ಯೇಸು, “ನೀನು ದೇವರ ರಾಜ್ಯಕ್ಕೆ ಹತ್ತಿರವಾಗಿರುವೆ” ಎಂದನು. ಅಂದಿನಿಂದ, ಯೇಸುವಿಗೆ ಹೆಚ್ಚು ಪ್ರಶೆಗಳನ್ನು ಕೇಳಲು ಯಾರಿಗೂ ಸಾಕಷ್ಟು ಧೈರ್ಯ ಬರಲಿಲ್ಲ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್34 ತೆನಿ ಎವ್ಡ್ಯಾ ಬರ್‍ಯಾ ಬುದ್ವಂತ್ಕಿನ್ ಉತ್ತರ್ ದಿಲ್ಲೆ ಆಯ್ಕುನ್ ಜೆಜುನ್ ತೆಕಾ “ತಿಯಾ ದೆವಾಚ್ಯಾ ರಾಜಾಕ್ನಾ ಲೈ ಧುರ್ ನಾಸ್” ಮಟ್ಲ್ಯಾನ್. ಮಾನಾ ಕೊನಾಕ್ಬಿ ಜೆಜುಕ್ ಸವಾಲ್ ಕರುಕ್ ಧಯ್ರೊ ಹೊವ್ಕ್ ನಾ. ಅಧ್ಯಾಯವನ್ನು ನೋಡಿ |