Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 12:37 - ಕನ್ನಡ ಸಮಕಾಲಿಕ ಅನುವಾದ

37 ಆದ್ದರಿಂದ ದಾವೀದನು ತಾನೇ ಅವರನ್ನು, ‘ನನ್ನ ಕರ್ತದೇವರೇ’ ಎಂದು ಕರೆಯುವಾಗ, ಆತನು ದಾವೀದನ ಪುತ್ರನಾಗುವುದು ಹೇಗೆ?” ಎಂದು ಕೇಳಿದರು. ಜನಸಮೂಹವು ಸಂತೋಷದಿಂದ ಯೇಸುವಿನ ಮಾತುಗಳನ್ನು ಆಲಿಸುತ್ತಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

37 ದಾವೀದನೇ ಆತನನ್ನು ‘ಕರ್ತನೆಂದು’ ಹೇಳಿರುವಲ್ಲಿ ಆತನು ಅವನಿಗೆ ಮಗನಾಗುವುದು ಹೇಗೆ?” ಎಂದು ಪ್ರಶ್ನಿಸಿದನು. ಜನರ ದೊಡ್ಡ ಸಮೂಹವು ಆತನ ಮಾತನ್ನು ಸಂತೋಷದಿಂದ ಕೇಳುತ್ತಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

37 ದಾವೀದನೇ, ಕ್ರಿಸ್ತನನ್ನು ‘ನನ್ನ ಪ್ರಭು’ ಎಂದು ಕರೆದಿರುವಲ್ಲಿ ಆತನು ದಾವೀದನ ಪುತ್ರನಾಗಿರುವುದು ಹೇಗೆ?” ಎಂದು ಪ್ರಶ್ನಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

37 ದಾವೀದನೇ ಆತನನ್ನು ಒಡೆಯನೆಂದು ಹೇಳಿರುವಲ್ಲಿ ಆತನು ಅವನಿಗೆ ಮಗನಾಗುವದು ಹೇಗೆ? ಎಂದು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

37 ದಾವೀದನೇ ಕ್ರಿಸ್ತನನ್ನು ‘ಪ್ರಭು’ ಎಂದು ಕರೆದಿರುವಾಗ ಕ್ರಿಸ್ತನು ದಾವೀದನ ಮಗನಾಗುವುದು ಹೇಗೆ ಸಾಧ್ಯ?” ಎಂದು ಪ್ರಶ್ನಿಸಿದನು. ಯೇಸುವಿನ ಮಾತನ್ನು ಕೇಳಿ, ಅನೇಕ ಜನರು ಬಹಳ ಸಂತೋಷಪಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

37 “ಅಶೆ ಸ್ವತಾ ದಾವಿದುಚ್ ಮೆಸ್ಸಿಯಾಕ್ ಧನಿ ಮನುನ್ ಬಲ್ವುತಾ ತರ್, ಮೆಸ್ಸಿಯಾ ದಾವಿದಾಚೊ ಲೆಕ್ ಕಸೊ ಹೊವ್ಕ್ ಹೊತಾ?” ಮಟ್ಲ್ಯಾನ್. ಥೈ ಲೈ ಲೊಕಾ ಹೊತ್ತಿ ತಿ ಲೊಕಾ ಜೆಜು ಸಾಂಗ್ತಲೆ ಕುಶಿನ್ ಅಯ್ಕುಲಾಗಲ್ಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 12:37
14 ತಿಳಿವುಗಳ ಹೋಲಿಕೆ  

“ಯೇಸುವೆಂಬ ನಾನು ನಮ್ಮ ಸಭೆಗಳಲ್ಲಿ ಈ ಸಂಗತಿಗಳ ವಿಷಯವಾಗಿ ನಿಮಗೆ ಸಾಕ್ಷಿ ನೀಡುವಂತೆ ನನ್ನ ದೂತನನ್ನು ಕಳುಹಿಸಿಕೊಟ್ಟೆನು. ನಾನು ದಾವೀದನ ವಂಶದ ಕುಡಿ, ಅವನ ಸಂತತಿಯೂ ಉದಯದ ಪ್ರಕಾಶಮಾನ ತಾರೆಯೂ ಆಗಿದ್ದೇನೆ!” ಎಂದರು.


ನನ್ನ ಪ್ರಿಯರೇ, ಕೇಳಿರಿ, ದೇವರು ಈ ಲೋಕದ ಬಡವರನ್ನು ನಂಬಿಕೆಯಲ್ಲಿ ಐಶ್ವರ್ಯವಂತರನ್ನಾಗಿಯೂ ತಮ್ಮನ್ನು ಪ್ರೀತಿಸುವವರಿಗೆ ತಾವು ವಾಗ್ದಾನಮಾಡಿದ ರಾಜ್ಯಕ್ಕೆ ಬಾಧ್ಯರನ್ನಾಗಿಯೂ ಇರಬೇಕೆಂದು ಆರಿಸಿಕೊಳ್ಳಲಿಲ್ಲವೇ?


ಎಲ್ಲಾ ಪ್ರಶ್ನೆಗಳಿಂದ ಹೆಚ್ಚಾಗಿ ದೈವ ಭಕ್ತಿಯ ರಹಸ್ಯವು ದೊಡ್ಡದಾದದ್ದು ಅದು ಯಾವುದೆಂದರೆ: “ದೇವರು ಮನುಷ್ಯ ರೂಪದಲ್ಲಿ ಪ್ರತ್ಯಕ್ಷರಾದರು. ಆತ್ಮದಲ್ಲಿ ರುಜುಪಡಿಸಲಾದರು. ದೂತರಿಗೆ ಕಾಣಿಸಿಕೊಂಡರು, ಯೆಹೂದ್ಯರಲ್ಲದವರಿಗೆ ಸಾರಲಾದರು, ಲೋಕದಲ್ಲಿ ನಂಬಲಾದರು, ಮಹಿಮೆಗೆ ಒಯ್ಯಲಾದರು!”


ನಮ್ಮ ಪಿತೃಗಳು ಅವರಿಗೆ ಸೇರಿದವರು. ಕ್ರಿಸ್ತ ಯೇಸುವು ಮನುಷ್ಯರಾಗಿ ಹುಟ್ಟಿದ್ದು ಅವರ ವಂಶದಲ್ಲಿಯೇ; ಈ ಕ್ರಿಸ್ತ ಯೇಸುವೇ ಎಲ್ಲರ ಮೇಲಿರುವ ದೇವರೂ ಎಂದೆಂದಿಗೂ ಸ್ತುತಿಹೊಂದತಕ್ಕವರೂ ಆಗಿದ್ದಾರೆ! ಆಮೆನ್.


ಯೇಸು ಅಲ್ಲಿರುವುದನ್ನು ಯೆಹೂದ್ಯರ ದೊಡ್ಡ ಗುಂಪು ತಿಳಿದು, ಅವರನ್ನು ಮಾತ್ರವಲ್ಲ, ಯೇಸು ಮರಣದಿಂದ ಎಬ್ಬಿಸಿದ ಲಾಜರನನ್ನೂ ಕಾಣಲು ಬಂದಿದ್ದರು.


ಜನರೆಲ್ಲರೂ ಬೆಳಗಿನ ಜಾವದಲ್ಲಿ ಎದ್ದು ಯೇಸುವಿನ ಉಪದೇಶವನ್ನು ಕೇಳುವುದಕ್ಕಾಗಿ ದೇವಾಲಯಕ್ಕೆ ಬರುತ್ತಿದ್ದರು.


ಜನರೆಲ್ಲರೂ ಯೇಸು ಹೇಳುವ ಒಂದೊಂದು ಮಾತಿಗೂ ಬಹಳ ಲಕ್ಷ್ಯಕೊಟ್ಟು ಯೇಸುವಿನ ಉಪದೇಶವನ್ನು ಕೇಳುತ್ತಿದ್ದುದರಿಂದ, ಅವರಿಗೆ ಏನು ಮಾಡಬೇಕೋ ತೋಚಲಿಲ್ಲ.


ಅವರು ಯೇಸುವನ್ನು ಹಿಡಿಯುವುದಕ್ಕೆ ಪ್ರಯತ್ನಿಸಿದರು. ಆದರೂ ಜನಸಮೂಹಕ್ಕೆ ಭಯಪಟ್ಟರು. ಏಕೆಂದರೆ ಜನರು ಯೇಸುವನ್ನು ಪ್ರವಾದಿಯೆಂದು ನಂಬಿದ್ದರು.


ಆ ಸಮಯದಲ್ಲಿ ಯೇಸು, “ತಂದೆಯೇ, ಪರಲೋಕ ಭೂಲೋಕಗಳ ಒಡೆಯನೇ, ನೀವು ಈ ವಿಷಯಗಳನ್ನು ಜ್ಞಾನಿಗಳಿಂದಲೂ ಬುದ್ಧಿವಂತರಿಂದಲೂ ಮರೆಮಾಡಿ, ಶಿಶುಗಳಿಗೆ ಪ್ರಕಟ ಮಾಡಿರುವುದರಿಂದ ನಾನು ನಿಮ್ಮನ್ನು ಕೊಂಡಾಡುತ್ತೇನೆ.


ಕುರುಡರು ನೋಡುತ್ತಾರೆ, ಕುಂಟರು ನಡೆಯುತ್ತಾರೆ, ಕುಷ್ಠರೋಗಿಗಳು ಶುದ್ಧರಾಗುತ್ತಾರೆ, ಕಿವುಡರು ಕೇಳುತ್ತಾರೆ, ಮರಣಹೊಂದಿದವರು ಜೀವ ಪಡೆಯುತ್ತಾರೆ ಮತ್ತು ಬಡವರಿಗೆ ಸುವಾರ್ತೆ ಸಾರಲಾಗುತ್ತದೆ.


“ಇಗೋ ಒಬ್ಬ ಕನ್ನಿಕೆಯು ಗರ್ಭಿಣಿಯಾಗಿ ಮಗನನ್ನು ಹೆರುವಳು, ಆ ಮಗುವಿಗೆ, ‘ಇಮ್ಮಾನುಯೇಲ್’ ಎಂದು ಹೆಸರಿಡುವರು.” ಈ ಹೆಸರಿನ ಅರ್ಥ, “ದೇವರು ನಮ್ಮ ಸಂಗಡ ಇದ್ದಾರೆ,” ಎಂಬುದು.


ಮುಖ್ಯಯಾಜಕರೂ ಫರಿಸಾಯರೂ ಯೇಸುವಿನ ಸಾಮ್ಯಗಳನ್ನು ಕೇಳಿದಾಗ, ತಮ್ಮ ವಿಷಯದಲ್ಲಿಯೇ ಅದನ್ನು ಹೇಳಿದರೆಂದು ಅರ್ಥಮಾಡಿಕೊಂಡರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು