Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 12:40 - ಕನ್ನಡ ಸಮಕಾಲಿಕ ಅನುವಾದ

40 ಇವರು ವಿಧವೆಯರ ಮನೆಗಳನ್ನು ದೋಚಿ ನಟನೆಗಾಗಿ ಉದ್ದವಾದ ಪ್ರಾರ್ಥನೆಗಳನ್ನು ಮಾಡುತ್ತಾರೆ, ಇಂಥವರು ಹೆಚ್ಚಾದ ದಂಡನೆಯನ್ನು ಹೊಂದುವರು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

40 ಇವರು ವಿಧವೆಯರ ಮನೆಗಳನ್ನು ದೋಚಿ ತೋರಿಕೆಗಾಗಿ ದೇವರಿಗೆ ಉದ್ದವಾದ ಪ್ರಾರ್ಥನೆಗಳನ್ನು ಮಾಡುತ್ತಾರೆ. ಇಂಥವರು ಹೆಚ್ಚಿನ ದಂಡನೆಯನ್ನು ಹೊಂದುವರು” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

40 ವಿಧವೆಯರ ಮನೆಮಾರುಗಳನ್ನು ದೋಚಿಕೊಳ್ಳುವ ಈ ಜನ ನಟನೆಗಾಗಿ ದೀರ್ಘವಾಗಿ ಜಪತಪಗಳನ್ನು ಮಾಡುತ್ತಾರೆ. ಇವರನ್ನು ದೇವರು ಬಹಳ ಕಠಿಣವಾದ ದಂಡನೆಗೆ ಗುರಿಪಡಿಸುವರು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

40 ವಿಧವೆಯರ ಮನೆಗಳನ್ನು ನುಂಗಿ ನಟನೆಗಾಗಿ ದೇವರಿಗೆ ಉದ್ದವಾದ ಪ್ರಾರ್ಥನೆಗಳನ್ನು ಮಾಡುವವರಾದ ಇವರು ಹೆಚ್ಚಾದ ದಂಡನೆಯನ್ನು ಹೊಂದುವರು ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

40 ಅವರು ವಿಧವೆಯರ ಆಸ್ತಿಯನ್ನು ಕಸಿದುಕೊಳ್ಳುತ್ತಾರೆ. ಉದ್ದುದ್ದ ಪ್ರಾರ್ಥನೆಗಳನ್ನು ಮಾಡುವುದರ ಮೂಲಕ ತಮ್ಮನ್ನು ತಾವೇ ಒಳ್ಳೆಯವರೆಂದು ತೋರಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ದೇವರು ಈ ಜನರನ್ನು ಕಠಿಣವಾಗಿ ಶಿಕ್ಷಿಸುತ್ತಾನೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

40 ಘೊವ್ ಮರಲ್ಲ್ಯಾ ಬಾಯ್ಕಾಮನ್ಸಾಂಚೊ ಫಾಯ್ದೊ ಕಾಡುನ್ ಘೆವ್ನ್ ತೆಂಚಿ ಘರಾ ಲುಟ್ತ್ಯಾತ್ ಅನಿ ಲಾಂಬ್-ಲಾಂಬ್ ಮಾಗ್ನಿಯಾ ಕರ್‍ತಾತ್, ಹೆಂಕಾ ಫಿಡೆ ಕಟೊರ್ ಶಿಕ್ಷಾ ರಾಕುನ್ ಹಾಯ್” ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 12:40
13 ತಿಳಿವುಗಳ ಹೋಲಿಕೆ  

ಇವರು ವಿಧವೆಯರ ಮನೆಗಳನ್ನು ದೋಚಿ ನಟನೆಗಾಗಿ ಉದ್ದವಾದ ಪ್ರಾರ್ಥನೆಗಳನ್ನು ಮಾಡುತ್ತಾರೆ. ಇಂಥವರು ಹೆಚ್ಚಾದ ದಂಡನೆಯನ್ನು ಹೊಂದುವರು,” ಎಂದರು.


“ಹಾವುಗಳೇ, ಸರ್ಪಸಂತತಿಯವರೇ, ನೀವು ನರಕದಂಡನೆಯಿಂದ ಹೇಗೆ ತಪ್ಪಿಸಿಕೊಂಡೀರಿ?


“ಆದರೆ ಕಪಟಿಗಳಾದ ನಿಯಮ ಬೋಧಕರೇ, ಫರಿಸಾಯರೇ, ನಿಮಗೆ ಕಷ್ಟ! ಏಕೆಂದರೆ ನೀವು ಮನುಷ್ಯರ ಮುಂದೆ ಪರಲೋಕ ರಾಜ್ಯವನ್ನು ಮುಚ್ಚುತ್ತೀರಿ. ನೀವೂ ಪ್ರವೇಶಿಸುವುದಿಲ್ಲ, ಪ್ರವೇಶಿಸುವವರನ್ನೂ ನೀವು ಒಳಗೆ ಬಿಡುವುದಿಲ್ಲ.


ಆದರೆ ನೀವು ಪ್ರಾರ್ಥನೆ ಮಾಡುವಾಗ ಯೆಹೂದ್ಯರಲ್ಲದವರಂತೆ ವ್ಯರ್ಥವಾಗಿ ಹೇಳಿದ್ದನ್ನೇ ಪದೇಪದೇ ಹೇಳಬೇಡಿರಿ. ತಮ್ಮ ಅನೇಕ ಮಾತುಗಳ ದೆಸೆಯಿಂದ ತಮ್ಮ ಪ್ರಾರ್ಥನೆಯನ್ನು ದೇವರು ಆಲಿಸುತ್ತಾರೆಂದು ಅವರು ಭಾವಿಸುತ್ತಾರೆ.


ಇಂಥವರು ಮನೆಗಳಲ್ಲಿ ನುಸುಳಿ ಪಾಪಗಳಿಂದ ತುಂಬಿದವರೂ ನಾನಾ ವಿಧವಾದ ಇಚ್ಛೆಗಳಿಂದ ಪ್ರೇರಣೆ ಹೊಂದಿ ಸುಲಭವಾಗಿ ಮೋಸಹೋಗುವ ಸ್ತ್ರೀಯರನ್ನು ವಶಮಾಡಿಕೊಳ್ಳುವರು.


ಬೇಟೆಯನ್ನು ಸುಲಿದುಕೊಳ್ಳುವ ಗರ್ಜಿಸುವ ಸಿಂಹದ ಹಾಗೆ ಅದರ ಮಧ್ಯದಲ್ಲಿ ಅವಳ ಪ್ರವಾದಿಗಳ ಒಳಸಂಚು ಉಂಟು; ಪ್ರಾಣಗಳನ್ನು ತಿಂದುಬಿಟ್ಟಿದ್ದಾರೆ, ಸಂಪತ್ತನ್ನೂ, ಅಮೂಲ್ಯವಾದ ವಸ್ತುವನ್ನೂ ದೋಚಿಕೊಂಡಿದ್ದಾರೆ, ಅವರು ಅದರ ಮಧ್ಯದಲ್ಲಿ ಬಹಳ ಜನರನ್ನು ವಿಧವೆಯರನ್ನಾಗಿ ಮಾಡಿದ್ದಾರೆ.


ಅವರು ಹೊಲಗಳನ್ನು ಆಶಿಸಿ ಬಲಾತ್ಕಾರದಿಂದ ತೆಗೆದುಕೊಳ್ಳುತ್ತಾರೆ. ಮನೆಗಳನ್ನೂ ಸಹ ತೆಗೆದುಕೊಳ್ಳುತ್ತಾರೆ. ಮನುಷ್ಯನಿಗೂ ಅವನ ಮನೆಗೂ ಇತರರಿಗೂ ಅವನ ಸ್ವಾಸ್ತ್ಯವನ್ನು ಕಸಿದುಕೊಳ್ಳುತ್ತಾರೆ.


“ಕಪಟಿಗಳಾದ ನಿಯಮ ಬೋಧಕರೇ, ಫರಿಸಾಯರೇ, ನಿಮಗೆ ಕಷ್ಟ, ಏಕೆಂದರೆ ನೀವು ವಿಧವೆಯರ ಮನೆಗಳನ್ನು ನುಂಗುತ್ತೀರಿ. ನಟನೆಗಾಗಿ ಉದ್ದವಾದ ಪ್ರಾರ್ಥನೆಯನ್ನು ಮಾಡುತ್ತೀರಿ. ಆದ್ದರಿಂದ ನೀವು ಹೆಚ್ಚಾದ ದಂಡನೆಯನ್ನು ಹೊಂದುವಿರಿ.


ಸಭಾಮಂದಿರಗಳಲ್ಲಿ ಅತ್ಯುನ್ನತ ಆಸನಗಳನ್ನೂ ಔತಣಗಳಲ್ಲಿ ಮುಖ್ಯಸ್ಥಾನಗಳನ್ನೂ ಇಷ್ಟಪಡುತ್ತಾರೆ.


ನಿಜವಾಗಿ ಹೇಳಬೇಕಾದರೆ, ಯಾರಾದರೂ ನಿಮ್ಮನ್ನು ಗುಲಾಮರನ್ನಾಗಿ ಮಾಡಿಕೊಂಡರೂ, ನಿಮ್ಮನ್ನು ಮರುಳುಗೊಳಿಸಿದರೂ, ತಮ್ಮ ಸ್ವಂತ ಪ್ರಯೋಜನಕ್ಕಾಗಿ ಬಳಸಿಕೊಂಡರೂ, ನಿಮ್ಮ ಕೆನ್ನೆಗೆ ಬಾರಿಸಿದರೂ, ನೀವು ಸಹಿಸಿಕೊಳ್ಳುತ್ತೀರಲ್ಲಾ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು