Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 12:44 - ಕನ್ನಡ ಸಮಕಾಲಿಕ ಅನುವಾದ

44 ಎಲ್ಲರೂ ತಮ್ಮ ಸಮೃದ್ಧಿಯಲ್ಲಿ ಹಾಕಿದರು. ಆದರೆ ಈಕೆಯು ತನ್ನ ಬಡತನದಲ್ಲಿಯೂ ತನಗಿದ್ದದ್ದನ್ನೆಲ್ಲಾ ಎಂದರೆ, ತನ್ನ ಜೀವನಕ್ಕೆ ಆಧಾರವಾಗಿದ್ದುದನ್ನು ಹಾಕಿದ್ದಾಳೆ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

44 ಹೇಗೆಂದರೆ, ಎಲ್ಲರೂ ತಮ್ಮ ಸಮೃದ್ಧಿಯಲ್ಲಿ ಹಾಕಿದರು. ಆದರೆ ಈ ವಿಧವೆಯೋ ತನ್ನ ಬಡತನದಲ್ಲಿಯೂ ತನಗಿದ್ದದ್ದನ್ನೆಲ್ಲಾ ಎಂದರೆ, ತನ್ನ ಜೀವನಕ್ಕೆ ಆಧಾರವಾಗಿದ್ದ ಎಲ್ಲವನ್ನೂ ಕಾಣಿಕೆಯಾಗಿ ಹಾಕಿದ್ದಾಳೆ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

44 ಇವರೆಲ್ಲರೂ ತಮ್ಮ ಅಪರಿಮಿತ ಐಶ್ವರ್ಯದಿಂದ ಕಾಣಿಕೆಯಿತ್ತರು. ಈಕೆಯಾದರೋ ತನ್ನ ಕಡುಬಡತನದಲ್ಲೂ ತನ್ನಲ್ಲಿ ಇದ್ದುದೆಲ್ಲವನ್ನು ಅರ್ಪಿಸಿದಳು; ತನ್ನ ಜೀವನಾಧಾರವನ್ನೇ ಕೊಟ್ಟುಬಿಟ್ಟಳು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

44 ಹೇಗೆಂದರೆ ಎಲ್ಲರು ತಮಗೆ ಸಾಕಾಗಿ ವಿುಕ್ಕದ್ದರಲ್ಲಿ ಹಾಕಿದರು; ಈಕೆಯೋ ತನ್ನ ಬಡತನದಲ್ಲಿಯೂ ತನಗಿದ್ದದ್ದನ್ನೆಲ್ಲಾ ಹಾಕಿದಳು, ತನ್ನ ಜೀವನವನ್ನೇ ಕೊಟ್ಟುಬಿಟ್ಟಳು ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

44 ಉಳಿದವರಾದರೊ ತಮಗೆ ಸಾಕಾಗಿ ಉಳಿದದ್ದರಲ್ಲಿ ಸ್ವಲ್ಪ ಹಾಕಿದರು. ಈಕೆಯಾದರೊ ತನ್ನ ಬಡತನದಲ್ಲಿಯೂ ತನಗಿದ್ದದ್ದನ್ನೆಲ್ಲ ಕೊಟ್ಟುಬಿಟ್ಟಳು. ಈಕೆಗೆ ಆ ಹಣದ ಅಗತ್ಯವಿತ್ತು” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

44 ಕಶ್ಯಾಕ್ ಮಟ್ಲ್ಯಾರ್ ಸಗ್ಳ್ಯಾನಿ ಅಪ್ನಾಚ್ಯಾ ಸಾವ್ಕಾರ್ಕಿತ್ ಫಿರೆಹೊವ್ನ್ ಹುರಲ್ಲೆ ಉಲ್ಲೆಸೆ ಘಾಟ್ಲ್ಯಾನಿ, ಖರೆ ಹ್ಯಾ ಗರಿಬ್ ಬಾಯ್ಕೊಮನ್ಸಿನ್ ಅಪ್ನಾಕ್ಡೆ ಅಪ್ನಾಚ್ಯಾ ಜಿವನಾ ಸಾಟ್ನಿ ಮನುನ್ ಹೊತ್ತೆ ದೊನುಚ್ ದೊನ್ ಪೈಸೆಬಿ ಅಪ್ನಾಕ್ ಥವ್ನ್ ಘೆಯ್ನಸ್ತಾನಾ ಘಾಟ್ಲಿನ್.” ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 12:44
16 ತಿಳಿವುಗಳ ಹೋಲಿಕೆ  

ಆದರೆ ಈ ಲೋಕದ ಸಂಪತ್ತುಳ್ಳ ಯಾವನಾದರೂ ಕೊರತೆಯಲ್ಲಿರುವ ತನ್ನ ಸಹೋದರ ಸಹೋದರಿಯರನ್ನು ನೋಡಿ, ಕರುಣೆ ತೋರಿಸದೆ ಬಿಟ್ಟರೆ ದೇವರ ಪ್ರೀತಿಯು ಅವನಲ್ಲಿ ನೆಲೆಗೊಂಡಿರುವುದು ಹೇಗೆ?


ಈಕೆಯು ತನ್ನಿಂದಾದಷ್ಟು ಮಾಡಿದ್ದಾಳೆ. ನನ್ನ ಶವಸಂಸ್ಕಾರಕ್ಕಾಗಿ ಮುಂಚಿತವಾಗಿ ನನ್ನ ದೇಹವನ್ನು ಅಭಿಷೇಕಿಸಿದ್ದಾಳೆ.


ಬೀಸುವ ಕಲ್ಲಿನಲ್ಲಿ ಅಡಿಗಲ್ಲನ್ನಾದರೂ, ಮೇಲಿನ ಕಲ್ಲನ್ನಾದರೂ ಒತ್ತೆಯಾಗಿ ತೆಗೆದುಕೊಳ್ಳಬಾರದು. ಹಾಗೆ ಮಾಡಿದರೆ, ಅದು ವ್ಯಕ್ತಿಯ ಜೀವನೋಪಾಯವನ್ನೇ ಒತ್ತೆಯಾಗಿ ತೆಗೆದುಕೊಂಡ ಹಾಗಿರುವುದು.


ಆದರೆ ನಿನ್ನ ಆಸ್ತಿಯನ್ನು ವೇಶ್ಯೆಯರೊಂದಿಗೆ ನುಂಗಿಬಿಟ್ಟ ಈ ನಿನ್ನ ಮಗನು ಬಂದಾಗ, ವಿಶೇಷ ಔತಣವನ್ನೇ ಮಾಡಿಸಿದ್ದೀಯಲ್ಲಾ!’ ಎಂದನು.


ಅವರಲ್ಲಿ ಕಿರಿಯವನು ತನ್ನ ತಂದೆಗೆ, ‘ಅಪ್ಪಾ, ಆಸ್ತಿಯಲ್ಲಿ ನನಗೆ ಬರತಕ್ಕ ಪಾಲನ್ನು ಕೊಡು,’ ಎಂದನು. ಆಗ ತಂದೆ ತನ್ನ ಆಸ್ತಿಯನ್ನು ಅವರಿಬ್ಬರಿಗೂ ಪಾಲು ಮಾಡಿಕೊಟ್ಟನು.


ಹನ್ನೆರಡು ವರ್ಷಗಳಿಂದಲೂ ರಕ್ತಸ್ರಾವ ರೋಗದಿಂದ ನರಳುತ್ತಿದ್ದ ಒಬ್ಬ ಸ್ತ್ರೀ ಆ ಗುಂಪಿನಲ್ಲಿದ್ದಳು. ಅವಳು ತನ್ನ ಆಸ್ತಿಯನ್ನೆಲ್ಲಾ ವೆಚ್ಚಮಾಡಿದ್ದರೂ ಆಕೆಯನ್ನು ಗುಣಪಡಿಸಲು ಯಾರಿಂದಲೂ ಸಾಧ್ಯವಾಗಲಿಲ್ಲ.


ಯೇಸು ತಮ್ಮ ಶಿಷ್ಯರನ್ನು ಹತ್ತಿರಕ್ಕೆ ಕರೆದು ಅವರಿಗೆ, “ಈ ಕಾಣಿಕೆ ಪೆಟ್ಟಿಗೆಯಲ್ಲಿ ಹಾಕಿದವರೆಲ್ಲರಿಗಿಂತ ಈ ಬಡ ವಿಧವೆಯು ಹೆಚ್ಚಾಗಿ ಹಾಕಿದ್ದಾಳೆ ಎಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು