Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 12:5 - ಕನ್ನಡ ಸಮಕಾಲಿಕ ಅನುವಾದ

5 ಯಜಮಾನನು ಮತ್ತೊಬ್ಬ ಸೇವಕನನ್ನು ಕಳುಹಿಸಿದಾಗ ಅವರು ಅವನನ್ನು ಕೊಂದುಹಾಕಿದರು. ಯಜಮಾನನು ಬೇರೆ ಕೆಲವರನ್ನು ಕಳುಹಿಸಿದಾಗ ಅವರಲ್ಲಿ ಕೆಲವರನ್ನು ಹೊಡೆದರು, ಕೆಲವರನ್ನು ಕೊಂದುಹಾಕಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಆದರೂ ಇನ್ನೊಬ್ಬ ಸೇವಕನನ್ನು ಕಳುಹಿಸಿದನು. ಇವನನ್ನು ಅವರು ಕೊಂದು ಹಾಕಿದರು. ಇನ್ನೂ ಅನೇಕರಿಗೆ ಅವರು ಹಾಗೆಯೇ ಮಾಡಿ, ಅವರಲ್ಲಿ ಕೆಲವರನ್ನು ಹೊಡೆದರು ಮತ್ತು ಕೆಲವರನ್ನು ಕೊಂದು ಹಾಕಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಯಜಮಾನ ಆಮೇಲೆ ಮತ್ತೊಬ್ಬ ಸೇವಕನನ್ನು ಕಳುಹಿಸಿದ. ಇವನನ್ನು ಅವರು ಕೊಂದುಹಾಕಿದರು. ಇನ್ನೂ ಅನೇಕರನ್ನು ಕಳುಹಿಸಲು, ಅವರಲ್ಲಿ ಕೆಲವರನ್ನು ಹೊಡೆದರು, ಕೆಲವರನ್ನು ಕಡಿದುಹಾಕಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಆಮೇಲೆ ಇನ್ನೊಬ್ಬನನ್ನು ಕಳುಹಿಸಲು ಅವನನ್ನು ಕೊಂದುಹಾಕಿದರು. ಇನ್ನೂ ಅನೇಕರನ್ನು ಕಳುಹಿಸಿದನು. ಅವರಲ್ಲಿ ಕೆಲವರನ್ನು ಹೊಡೆದರು, ಕೆಲವರನ್ನು ಕಡಿದುಹಾಕಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಆದ್ದರಿಂದ ಯಜಮಾನನು ಮತ್ತೊಬ್ಬ ಸೇವಕನನ್ನು ಕಳುಹಿಸಿದನು. ರೈತರು ಈ ಸೇವಕನನ್ನು ಕೊಂದುಹಾಕಿದರು. ಆ ಯಜಮಾನನು ಇತರ ಅನೇಕ ಸೇವಕರನ್ನು ರೈತರ ಬಳಿಗೆ ಕಳುಹಿಸಿದನು. ರೈತರು ಕೆಲವು ಸೇವಕರನ್ನು ಹೊಡೆದರು, ಕೆಲವರನ್ನು ಕೊಂದುಹಾಕಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

5 ತಸೆ ಮನುನ್ ಸಾವ್ಕಾರಾನ್ ಅನಿ ಎಕ್ ಸೆವಕಾಕ್ ಧಾಡುನ್ ದಿಲ್ಯಾನ್ ತ್ಯಾ ಸೆವಕಾಕ್ ಧರುನ್ ಜಿವಾನಿಚ್ ಮಾರುನ್ ಟಾಕ್ಲ್ಯಾನಿ. ಅಸೆಚ್ ತೆನಿ ಥೊಡ್ಯಾಕ್ನಿ ಮಾರ್ ಘಾಟ್ಲ್ಯಾನಿ, ಅನಿ ಥೊಡ್ಯಾಕ್ನಿ ಜಿವಾನಿಚ್ ಮಾರ್‍ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 12:5
11 ತಿಳಿವುಗಳ ಹೋಲಿಕೆ  

ನಿಮ್ಮ ತಂದೆಯು ಕರುಣೆಯುಳ್ಳವರಾಗಿರುವ ಪ್ರಕಾರ, ನೀವೂ ಕರುಣೆಯುಳ್ಳವರಾಗಿರಿ.


ಆದರೆ, ಎಲೀಯನು ನಿಜವಾಗಿಯೂ ಬಂದನು. ಅವನ ವಿಷಯವಾಗಿ ಬರೆದಿರುವಂತೆ ಜನರು ತಮ್ಮ ಮನಸ್ಸಿಗೆ ಬಂದ ಹಾಗೆ ಅವನಿಗೆ ಮಾಡಿದರು ಎಂದು ನಾನು ನಿಮಗೆ ಹೇಳುತ್ತೇನೆ,” ಎಂದರು.


“ಯೆರೂಸಲೇಮೇ, ಯೆರೂಸಲೇಮೇ, ಪ್ರವಾದಿಗಳನ್ನು ಕೊಲ್ಲುವವಳೇ, ನಿನ್ನ ಬಳಿಗೆ ಕಳುಹಿಸಿದವರನ್ನು ಕಲ್ಲೆಸೆಯುವವಳೇ, ಕೋಳಿಯು ತನ್ನ ಮರಿಗಳನ್ನು ತನ್ನ ರೆಕ್ಕೆಗಳ ಕೆಳಗೆ ಕೂಡಿಸುವಂತೆ ನಾನು ನಿನ್ನ ಮಕ್ಕಳನ್ನು ಕೂಡಿಸುವುದಕ್ಕೆ ನನಗೆ ಎಷ್ಟೋ ಸಾರಿ ಮನಸ್ಸಿತ್ತು. ಆದರೆ ನಿನಗೆ ಮನಸ್ಸಿಲ್ಲದೆ ಹೋಯಿತು.


ಉಳಿದವರು ಅವನ ಸೇವಕರನ್ನು ಹಿಡಿದು ಅವಮಾನಪಡಿಸಿ, ಅವರನ್ನು ಕೊಂದುಹಾಕಿದರು.


ಸಂತೋಷಪಟ್ಟು ಆನಂದಿಸಿರಿ. ಏಕೆಂದರೆ ಪರಲೋಕದಲ್ಲಿ ನಿಮಗೆ ಮಹಾ ಪ್ರತಿಫಲ ಸಿಕ್ಕುವುದು. ಅವರು ನಿಮಗಿಂತ ಮುಂಚೆ ಇದ್ದ ಪ್ರವಾದಿಗಳನ್ನು ಸಹ ಇದೇ ರೀತಿಯಲ್ಲಿ ಹಿಂಸೆಪಡಿಸಿದರು.


ನೀವು ಅನೇಕ ವರ್ಷ ಅವರನ್ನು ತಾಳಿಕೊಂಡಿರಿ. ನಿಮ್ಮ ಪ್ರವಾದಿಗಳ ಮುಖಾಂತರ ನಿಮ್ಮ ಆತ್ಮನಿಂದ ಅವರನ್ನು ಎಚ್ಚರಿಸಿದಿರಿ. ಆದರೆ ಅವರು ಕಿವಿಗೊಡದೆ ಇದ್ದುದರಿಂದ ನೀವು ಅವರನ್ನು ಅನ್ಯದೇಶದವರ ಕೈಯಲ್ಲಿ ಒಪ್ಪಿಸಿದಿರಿ.


ಯಜಮಾನನು ಪುನಃ ಮತ್ತೊಬ್ಬ ಸೇವಕನನ್ನು ಅವರ ಬಳಿಗೆ ಕಳುಹಿಸಿದಾಗ ಅವರು ಅವನ ತಲೆಯನ್ನು ಗಾಯಗೊಳಿಸಿ ಅವಮಾನ ಮಾಡಿ ಕಳುಹಿಸಿಬಿಟ್ಟರು.


“ಕಡೆಯದಾಗಿ ತನಗೆ ಪ್ರಿಯನಾಗಿದ್ದ ಒಬ್ಬನೇ ಮಗನಿದ್ದನು. ‘ಅವರು ನನ್ನ ಮಗನಿಗಾದರೂ ಮರ್ಯಾದೆ ಕೊಡುವರು,’ ಎಂದು ಭಾವಿಸಿ, ಅವನನ್ನು ಅವರ ಬಳಿಗೆ ಕಳುಹಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು