Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 12:6 - ಕನ್ನಡ ಸಮಕಾಲಿಕ ಅನುವಾದ

6 “ಕಡೆಯದಾಗಿ ತನಗೆ ಪ್ರಿಯನಾಗಿದ್ದ ಒಬ್ಬನೇ ಮಗನಿದ್ದನು. ‘ಅವರು ನನ್ನ ಮಗನಿಗಾದರೂ ಮರ್ಯಾದೆ ಕೊಡುವರು,’ ಎಂದು ಭಾವಿಸಿ, ಅವನನ್ನು ಅವರ ಬಳಿಗೆ ಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಅವನಿಗೆ ಕಳುಹಿಸಲು ಇನ್ನು ಒಬ್ಬನಿದ್ದನು. ಯಾರೆಂದರೆ ತನಗೆ ಪ್ರಿಯನಾಗಿದ್ದ ಒಬ್ಬನೇ ಮಗನು. ತನ್ನ ಮಗನಿಗೆ ಅವರು ಮರ್ಯಾದೆ ಕೊಡಬಹುದೆಂದು ಯಜಮಾನನು ಕೊನೆಗೆ ಅವನನ್ನು ಅವರ ಬಳಿಗೆ ಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಯಜಮಾನನಿಗೆ ಇನ್ನು ಉಳಿದಿದ್ದವನೆಂದರೆ ಅವನ ಮುದ್ದುಮಗನೊಬ್ಬನೇ, “ನನ್ನ ಮಗನಿಗಾದರೂ ಅವರು ಮರ್ಯಾದೆಕೊಟ್ಟಾರು,” ಎಂದು ಭಾವಿಸಿ, ಕಟ್ಟಕಡೆಗೆ ಆ ಯಜಮಾನ ತನ್ನ ಮಗನನ್ನೇ ಅವರ ಬಳಿಗೆ ಕಳುಹಿಸಿದ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಅವನಿಗೆ ಇನ್ನೂ ಒಬ್ಬನಿದ್ದನು; ಯಾರಂದರೆ ಅವನ ಮುದ್ದು ಮಗನೇ. ನನ್ನ ಮಗನಿಗಾದರೂ ಮರ್ಯಾದೆ ತೋರಿಸಿಯಾರೆಂದು ಧಣಿಯು ಕಡೆಯಲ್ಲಿ ಅವನನ್ನು ಅವರ ಬಳಿಗೆ ಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 “ಆ ಯಜಮಾನನಿಗೆ ರೈತರ ಬಳಿಗೆ ಕಳುಹಿಸಲು ಪ್ರಿಯ ಮಗನೊಬ್ಬನೇ ಉಳಿದಿದ್ದನು. ಅವನು ಕಳುಹಿಸಬಹುದಾದ ಕೊನೆಯ ವ್ಯಕ್ತಿ ಅವನ ಸ್ವಂತ ಮಗನಾಗಿದ್ದನು. ‘ರೈತರು ನನ್ನ ಮಗನಿಗೆ ಗೌರವ ಕೊಡುತ್ತಾರೆ’ ಎಂದುಕೊಂಡು ಯಜಮಾನನು ಅವನನ್ನೇ ಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

6 ಅತ್ತಾ ತ್ಯಾ ರೈತಾಂಚಾಕ್ಡೆ ಧಾಡುಕ್ ತ್ಯಾ ಸಾವ್ಕಾರಾಚೊ ಅಪುರ್‍ಬಾಯೆಚೊ ಲೆಕ್ ಎಕ್ಲೊಚ್ ಹುರಲ್ಲೊ, ರೈತಾ ಅಪ್ನಾಚ್ಯಾ ಲೆಕಾಕ್ ತರ್ಬಿ ಮಾನ್ ದಿತಿಲ್ ಮನುನ್ ಅಪ್ನಾಚ್ಯಾ ಲೆಕಾಕ್ ತೆಂಚೆಕ್ಡೆ ಧಾಡುನ್ ದಿಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 12:6
32 ತಿಳಿವುಗಳ ಹೋಲಿಕೆ  

ಈಗ ನಾನು ಕಂಡು, ಇವರೇ ದೇವರ ಪುತ್ರರು ಎಂದು ಸಾಕ್ಷಿ ನೀಡುತ್ತಿದ್ದೇನೆ,” ಎಂದು ಹೇಳಿದನು.


ಸ್ವರ್ಗದೊಳಗಿಂದ, “ಈತನು ನನ್ನ ಪ್ರಿಯ ಮಗನು. ಈತನನ್ನು ನಾನು ಮೆಚ್ಚಿದ್ದೇನೆ,” ಎಂಬ ಧ್ವನಿ ಕೇಳಿಸಿತು.


ತಮ್ಮ ಏಕೈಕ ಪುತ್ರ ಆಗಿರುವ ಕ್ರಿಸ್ತ ಯೇಸುವಿನ ಮೂಲಕ ನಾವು ಜೀವಿಸುವುದಕ್ಕಾಗಿ ದೇವರು ಅವರನ್ನು ಲೋಕಕ್ಕೆ ಕಳುಹಿಸಿದರು. ಇದರಿಂದಲೇ ದೇವರು ತಮ್ಮ ಪ್ರೀತಿಯನ್ನು ನಮ್ಮ ನಡುವೆ ತೋರಿಸಿದರು.


ಇದಲ್ಲದೆ ಮೊದಲು ಹುಟ್ಟಿದವರನ್ನು ದೇವರು ಲೋಕದೊಳಗೆ ಬರಮಾಡುವಾಗ, “ದೇವದೂತರೆಲ್ಲರೂ ಆತನನ್ನು ಆರಾಧಿಸಲಿ!” ಎಂದು ಹೇಳಿದ್ದಾರೆ.


ಎಲ್ಲರೂ ತಂದೆಯನ್ನು ಸನ್ಮಾನಿಸುವಂತೆಯೇ ಪುತ್ರನನ್ನೂ ಸನ್ಮಾನಿಸಬೇಕು. ಪುತ್ರನನ್ನು ಸನ್ಮಾನಿಸದವನು ಆತನನ್ನು ಕಳುಹಿಸಿದ ತಂದೆಯನ್ನೂ ಸನ್ಮಾನಿಸುವುದಿಲ್ಲ.


ತಂದೆಯು ಪುತ್ರನನ್ನು ಪ್ರೀತಿಸಿ ಎಲ್ಲವನ್ನೂ ಅವರ ಕೈಯಲ್ಲಿ ಕೊಟ್ಟಿದ್ದಾರೆ.


ಅದಕ್ಕೆ ನತಾನಯೇಲನು, “ಗುರುವೇ, ನೀವು ದೇವಪುತ್ರ; ಇಸ್ರಾಯೇಲಿನ ಅರಸ ನೀವೇ,” ಎಂದನು.


ದೇವರನ್ನು ಯಾರೂ ಎಂದೂ ಕಂಡಿಲ್ಲ; ತಂದೆ ದೇವರ ಹೃದಯಕ್ಕೆ ಹತ್ತಿರವಾಗಿರುವ ಏಕೈಕ ಪುತ್ರ ಆಗಿರುವವರೂ ಸ್ವತಃ ದೇವರೂ ಆಗಿರುವವರೂ ತಂದೆಯನ್ನು ಪ್ರಕಟಪಡಿಸಿದ್ದಾರೆ.


ವಾಕ್ಯವೆಂಬುವವರು ದೇಹಧಾರಿಯಾಗಿ ನಮ್ಮ ಮಧ್ಯದಲ್ಲಿ ವಾಸಿಸಿದರು. ನಾವು ಅವರ ಮಹಿಮೆಯನ್ನು ಕಂಡೆವು. ಆ ಮಹಿಮೆಯು ತಂದೆಯಿಂದ ಬಂದ ಏಕೈಕ ಪುತ್ರ ಆಗಿರುವವರಿಗೆ ಇರತಕ್ಕ ಮಹಿಮೆ. ಆ ವಾಕ್ಯವೆಂಬುವವರು ಕೃಪೆಯಿಂದಲೂ ಸತ್ಯದಿಂದಲೂ ತುಂಬಿದವರಾಗಿದ್ದರು.


ಆಗ ಮೇಘದೊಳಗಿಂದ, “ಈತನು, ನಾನು ಆರಿಸಿಕೊಂಡ ನನ್ನ ಮಗನು, ಈತನ ಮಾತನ್ನು ಕೇಳಿರಿ,” ಎಂದು ಹೇಳುವ ಧ್ವನಿಯಾಯಿತು.


ಆಗ ಪವಿತ್ರಾತ್ಮರು ದೇಹಾಕಾರವಾಗಿ ಪಾರಿವಾಳದಂತೆ ಯೇಸುವಿನ ಮೇಲೆ ಇಳಿದರು. ಆಗ, “ನೀನು ನನ್ನ ಪ್ರಿಯ ಪುತ್ರನು, ನಿನ್ನನ್ನು ಅಪಾರವಾಗಿ ಮೆಚ್ಚಿದ್ದೇನೆ,” ಎಂಬ ಧ್ವನಿಯು ಪರಲೋಕದಿಂದ ಕೇಳಿಬಂತು.


ಆಗ ಅಲ್ಲಿ ಮೋಡವು ಅವರ ಮೇಲೆ ಕವಿದುಕೊಂಡಿತು. ಮೋಡದೊಳಗಿಂದ, “ಈತನು ಪ್ರಿಯನಾಗಿರುವ ನನ್ನ ಮಗನು, ಈತನ ಮಾತನ್ನು ಕೇಳಿರಿ,” ಎಂಬ ಧ್ವನಿಯು ಬಂದಿತು.


ಆಗ, “ನೀನು ನನ್ನ ಪ್ರಿಯ ಪುತ್ರನು, ನಿನ್ನನ್ನು ಅಪಾರವಾಗಿ ಮೆಚ್ಚಿದ್ದೇನೆ,” ಎಂಬ ಧ್ವನಿಯು ಪರಲೋಕದಿಂದ ಕೇಳಿಬಂತು.


ಆದರೆ ಯೇಸು ಸುಮ್ಮನಿದ್ದರು. ಆಗ ಮಹಾಯಾಜಕನು ಉತ್ತರವಾಗಿ ಯೇಸುವಿಗೆ, “ಜೀವಸ್ವರೂಪನಾದ ದೇವರ ಮೇಲೆ ಆಣೆಯಿಟ್ಟು ನಮಗೆ ಇದನ್ನು ಹೇಳು: ನೀನು ದೇವಪುತ್ರನಾದ ಕ್ರಿಸ್ತನೋ?” ಎಂದನು.


ಪೇತ್ರನು ಇನ್ನೂ ಮಾತನಾಡುತ್ತಿರುವಾಗಲೇ, ಪ್ರಕಾಶಮಾನವಾದ ಮೇಘವು ಅವರ ಮೇಲೆ ಕವಿಯಿತು. ಆಗ, “ಈತನು ಪ್ರಿಯನಾಗಿರುವ ನನ್ನ ಮಗನು. ಈತನನ್ನು ನಾನು ಸಂಪೂರ್ಣವಾಗಿ ಮೆಚ್ಚಿದ್ದೇನೆ. ಈತನ ಮಾತನ್ನು ನೀವು ಕೇಳಿರಿ,” ಎಂದು ಮೇಘದೊಳಗಿಂದ ಒಂದು ಧ್ವನಿ ಕೇಳಿತು.


“ನನ್ನ ತಂದೆ ಎಲ್ಲವನ್ನೂ ನನಗೆ ಒಪ್ಪಿಸಿದ್ದಾರೆ. ತಂದೆಯ ಹೊರತು ಬೇರೆ ಯಾರೂ ಪುತ್ರನನ್ನು ಅರಿಯರು ಮತ್ತು ಪುತ್ರನು ಯಾರಿಗೆ ತಂದೆಯನ್ನು ಪ್ರಕಟಪಡಿಸಲು ಇಷ್ಟಪಡುತ್ತಾನೋ ಅವರೇ ಹೊರತು ಯಾರೂ ತಂದೆಯನ್ನು ಅರಿಯರು.


“ಇಗೋ ಒಬ್ಬ ಕನ್ನಿಕೆಯು ಗರ್ಭಿಣಿಯಾಗಿ ಮಗನನ್ನು ಹೆರುವಳು, ಆ ಮಗುವಿಗೆ, ‘ಇಮ್ಮಾನುಯೇಲ್’ ಎಂದು ಹೆಸರಿಡುವರು.” ಈ ಹೆಸರಿನ ಅರ್ಥ, “ದೇವರು ನಮ್ಮ ಸಂಗಡ ಇದ್ದಾರೆ,” ಎಂಬುದು.


“ಇಗೋ, ನನ್ನ ಸೇವಕನು. ಇವನಿಗೆ ನಾನೇ ಆಧಾರ, ನಾನು ಆಯ್ದುಕೊಂಡವನಲ್ಲಿ ನನ್ನ ಆತ್ಮವು ಆನಂದಿಸುವುದು; ನನ್ನ ಆತ್ಮವನ್ನು ಅವನ ಮೇಲೆ ಇರಿಸಿದ್ದೇನೆ, ಅವನು ಇತರ ಜನಾಂಗಗಳಿಗೆ ನ್ಯಾಯತೀರ್ಪನ್ನು ತರುವನು.


ಯೆಹೋವ ದೇವರು ಬೇಸರಗೊಂಡು, ನೀವು ನಿಮ್ಮ ಮಾರ್ಗದಲ್ಲಿ ನಾಶವಾಗದಂತೆ ಅವರ ಮಗನನ್ನು ಮುದ್ದಿಸಿರಿ. ಏಕೆಂದರೆ ದೇವರ ರೋಷವು ಕ್ಷಣಮಾತ್ರದಲ್ಲಿ ಜ್ವಾಲಿಸುವುದು. ದೇವರ ಆಶ್ರಯ ಪಡೆಯುವವರೆಲ್ಲಾ ಧನ್ಯರು.


ಯೋಸೇಫನು ಇಸ್ರಾಯೇಲನಿಗೆ ಮುಪ್ಪಿನ ವಯಸ್ಸಿನಲ್ಲಿ ಹುಟ್ಟಿದ ಮಗನಾಗಿದ್ದುದರಿಂದ ಅವನು ತನ್ನ ಎಲ್ಲಾ ಮಕ್ಕಳಿಗಿಂತ ಅವನನ್ನು ಹೆಚ್ಚು ಪ್ರೀತಿಮಾಡಿ, ಅವನಿಗೆ ಅನೇಕ ಬಣ್ಣಗಳ ಅಂಗಿಯನ್ನು ಹೊಲಿಸಿಕೊಟ್ಟನು.


ಯೆಹೋವ ದೇವರ ದೂತನು ಅಬ್ರಹಾಮನಿಗೆ, “ಹುಡುಗನ ಮೇಲೆ ಕೈ ಹಾಕಬೇಡ; ಅವನಿಗೆ ಏನೂ ಮಾಡಬೇಡ; ಏಕೆಂದರೆ ನೀನು ದೇವರಿಗೆ ಭಯಪಡುತ್ತೀ ಎಂದು ಈಗ ನಾನು ತಿಳಿದಿದ್ದೇನೆ. ನೀನು ನಿನ್ನ ಒಬ್ಬನೇ ಮಗನನ್ನು ನನಗೆ ಅರ್ಪಿಸುವುದಕ್ಕೆ ಹಿಂಜರಿಯಲಿಲ್ಲ,” ಎಂದು ಹೇಳಿದನು.


ಆಗ ದೇವರು, “ನೀನು ಪ್ರೀತಿ ಮಾಡುವ ನಿನ್ನ ಒಬ್ಬನೇ ಮಗ ಇಸಾಕನನ್ನು ಈಗ ತೆಗೆದುಕೊಂಡು, ಮೊರೀಯಾ ದೇಶಕ್ಕೆ ಹೋಗಿ, ಅಲ್ಲಿ ನಾನು ನಿನಗೆ ಹೇಳುವ ಒಂದು ಬೆಟ್ಟದ ಮೇಲೆ ಅವನನ್ನು ದಹನಬಲಿಯಾಗಿ ಅರ್ಪಿಸು,” ಎಂದರು.


ನಾನು ಯೆಹೋವ ದೇವರ ತೀರ್ಪನ್ನು ಹೀಗೆ ಪ್ರಕಟಿಸುವೆನು: ಅವರು ನನಗೆ ಹೇಳಿದ್ದು, “ನೀನು ನನ್ನ ಪುತ್ರನು; ಇಂದು ನಾನು ನಿನ್ನ ತಂದೆಯಾಗಿದ್ದೇನೆ.


ನಾವು ನಮ್ಮ ಒಡೆಯನಿಗೆ, ‘ನಮಗೆ ಮುದುಕನಾದ ತಂದೆಯೂ ಅವನಿಗೆ ಮುಪ್ಪಿನಲ್ಲಿ ಹುಟ್ಟಿದ ಚಿಕ್ಕ ಮಗನೂ ಇದ್ದಾನೆ, ಅವನ ಸಹೋದರನು ಸತ್ತುಹೋಗಿದ್ದಾನೆ. ಅವನ ತಂದೆಯು ಅವನನ್ನು ಪ್ರೀತಿಸುತ್ತಾನೆ,’ ಎಂದು ಹೇಳಿದೆವು.


ಯಜಮಾನನು ಮತ್ತೊಬ್ಬ ಸೇವಕನನ್ನು ಕಳುಹಿಸಿದಾಗ ಅವರು ಅವನನ್ನು ಕೊಂದುಹಾಕಿದರು. ಯಜಮಾನನು ಬೇರೆ ಕೆಲವರನ್ನು ಕಳುಹಿಸಿದಾಗ ಅವರಲ್ಲಿ ಕೆಲವರನ್ನು ಹೊಡೆದರು, ಕೆಲವರನ್ನು ಕೊಂದುಹಾಕಿದರು.


“ಆದರೆ ಆ ರೈತರು, ‘ಇವನೇ ಬಾಧ್ಯಸ್ಥನು, ಬನ್ನಿರಿ, ಇವನನ್ನು ನಾವು ಕೊಂದು ಹಾಕೋಣ. ಆಗ ಆಸ್ತಿ ನಮ್ಮದಾಗುವುದು,’ ಎಂದು ತಮ್ಮ ತಮ್ಮಲ್ಲಿ ಮಾತನಾಡಿಕೊಂಡರು.


ಹಿರಿಯನು, ಸತ್ಯದಲ್ಲಿ ಬಹಳವಾಗಿ ಪ್ರೀತಿಸುವ ಗಾಯನಿಗೆ ಬರೆಯುವುದು:


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು