Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 13:11 - ಕನ್ನಡ ಸಮಕಾಲಿಕ ಅನುವಾದ

11 ಅವರು ನಿಮ್ಮನ್ನು ಬಂಧಿಸಿ ಒಪ್ಪಿಸುವುದಕ್ಕಾಗಿ ತೆಗೆದುಕೊಂಡು ಹೋಗುವಾಗ ನೀವು ಏನು ಮಾತನಾಡಬೇಕೆಂಬುದನ್ನು ಮುಂಚಿತವಾಗಿಯೇ ಚಿಂತಿಸಬೇಡಿರಿ. ಆ ಗಳಿಗೆಯಲ್ಲಿ ನಿಮ್ಮ ಮನಸ್ಸಿನಲ್ಲಿ ನಿಮಗೆ ಯಾವುದು ಕೊಡಲಾಗುವುದೋ ಅದನ್ನೇ ಮಾತನಾಡಿರಿ. ಏಕೆಂದರೆ ಮಾತನಾಡುವವರು ನೀವಲ್ಲ, ಪವಿತ್ರಾತ್ಮನೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 “ನಿಮ್ಮನ್ನು ಹಿಡಿದುಕೊಂಡು ಹೋಗಿ ಒಪ್ಪಿಸುವಾಗ ಏನು ಹೇಳಬೇಕು ಎಂದು ಮುಂಚಿತವಾಗಿಯೇ ಚಿಂತಿಸಬೇಡಿರಿ, ನೀವು ಏನು ಹೇಳಬೇಕೋ ಅದು ನಿಮಗೆ ಆ ಗಳಿಗೆಯಲ್ಲಿ ಕೊಡಲ್ಪಡುವುದು, ಏಕೆಂದರೆ ಮಾತನಾಡುವವರು ನೀವಲ್ಲ, ಆದರೆ ಪವಿತ್ರಾತ್ಮನೇ ನಿಮ್ಮ ಮೂಲಕವಾಗಿ ಮಾತನಾಡುವನು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ನಿಮ್ಮನ್ನು ಬಂಧಿಸಿ ನ್ಯಾಯವಿಚಾರಣೆಗೆ ಗುರಿಪಡಿಸಿದಾಗ ಏನು ಹೇಳುವುದು ಎಂದು ಮುಂಚಿತವಾಗಿಯೇ ಚಿಂತಾಕ್ರಾಂತರಾಗದಿರಿ. ಆ ಗಳಿಗೆಯಲ್ಲಿ ನಿಮಗೆ ಅನುಗ್ರಹಿಸಲಾಗುವ ಮಾತುಗಳನ್ನೇ ನುಡಿಯಿರಿ. ಏಕೆಂದರೆ, ಮಾತನಾಡುವವರು ನೀವಲ್ಲ, ಪವಿತ್ರಾತ್ಮ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ನಿಮ್ಮನ್ನು ಹಿಡುಕೊಂಡುಹೋಗಿ ಒಪ್ಪಿಸುವಾಗ ಏನು ಹೇಳಬೇಕು ಎಂದು ಮುಂಚಿತವಾಗಿ ಚಿಂತೆಮಾಡಬೇಡಿರಿ; ಆ ಗಳಿಗೆಯಲ್ಲಿ ನಿಮಗೆ ಸೂಚನೆಯಾಗುವಂಥ ಮಾತನ್ನೇ ಆಡಿರಿ; ಮಾತಾಡುವವರು ನೀವಲ್ಲ, ಪವಿತ್ರಾತ್ಮನೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ನೀವು ಬಂಧಿಸಲ್ಪಟ್ಟು ನ್ಯಾಯವಿಚಾರಣೆಗೆ ಒಳಗಾಗುವಿರಿ. ಆದರೆ ನೀವು ಏನು ಹೇಳಬೇಕೆಂಬುದರ ಬಗ್ಗೆ ಯೋಚಿಸಬೇಡಿ, ಆ ಸಮಯದಲ್ಲಿ ದೇವರು ನಿಮಗೆ ತಿಳಿಸಿಕೊಡುವುದನ್ನೇ ಹೇಳಿರಿ. ಆಗ ಮಾತಾಡುವವರು ನೀವಲ್ಲ, ಪವಿತ್ರಾತ್ಮನೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

11 ತುಮ್ಕಾ ಧರುನ್ ನ್ಯಾಯ್ ಕರ್‍ತಲ್ಯಾ ಜಾಗ್ಯಾರ್ ವೊಡುನ್ ಹಾನುನ್ ಇಚಾರ್‍ನಿ ಕರ್‍ತಾನಾ, ತುಮಿ ತೆಂಕಾ ಕಾಯ್ ಸಾಂಗುಚೆ, ಕಾಯ್ ಬೊಲುಚೆ ಮನುನ್ ಚಿಂತಾ ಕರುನಕಾಸಿ, ಕಾಯ್ ಬೊಲುಚೆ ಮನುನ್ ತುಮ್ಕಾ ದಿಸ್ತಾ ತೆ ಬೊಲಾ, ಕಶ್ಯಾಕ್ ಮಟ್ಲ್ಯಾರ್, ತನ್ನಾ ತುಮಿ ಬೊಲಿನ್ಯಾಸಿ ಪವಿತ್ರ್ ಆತ್ಮೊ ಬೊಲ್ತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 13:11
25 ತಿಳಿವುಗಳ ಹೋಲಿಕೆ  

ಆದರೆ ಅವನು ಜ್ಞಾನದಿಂದಲೂ ಪವಿತ್ರಾತ್ಮ ದೇವರಿಂದಲೂ ಮಾತನಾಡಿದ್ದರಿಂದ ಅವರಿಗೆ ಅವನನ್ನು ಎದುರಿಸಲು ಸಾಧ್ಯವಾಗಲಿಲ್ಲ.


ತಮಗೋಸ್ಕರವಲ್ಲ ಆದರೆ ನಿಮಗೋಸ್ಕರ ಸೇವೆಮಾಡಿದರೆಂದು ಅವರಿಗೆ ಪ್ರಕಟವಾಯಿತು. ಅವರು ಮುಂದಾಗಿ ಹೇಳಿದ ಸಂಗತಿಗಳೇ ಈಗ ಸಂಭವಿಸಿದವು ಎಂಬ ವರ್ತಮಾನವು, ಪರಲೋಕದಿಂದ ಕಳುಹಿಸಲಾದ ಪವಿತ್ರಾತ್ಮ ದೇವರಿಂದ ನಿಮಗೆ ಸುವಾರ್ತೆಯನ್ನು ಸಾರಿದವರ ಮೂಲಕ ಪ್ರಸಿದ್ಧಿಮಾಡಲಾಗಿದೆ. ದೇವದೂತರು ಸಹ ಈ ಸಂಗತಿಗಳನ್ನು ಕಣ್ಣಿಟ್ಟು ನೋಡಬೇಕೆಂದು ಅಪೇಕ್ಷಿಸುತ್ತಾರೆ.


ನಾವು ಮನುಷ್ಯ ಜ್ಞಾನವು ಕಲಿಸಿದ ಮಾತುಗಳಿಂದ ಮಾತನಾಡದೆ, ದೇವರ ಆತ್ಮರು ಕಲಿಸಿಕೊಟ್ಟ ಮಾತುಗಳಿಂದ ಇವುಗಳನ್ನು ಮಾತಾಡುತ್ತೇವೆ. ಹೀಗೆ ನಾವು ಆತ್ಮಿಕ ಸತ್ಯಗಳನ್ನು ದೇವರ ಆತ್ಮರ ಮಾತುಗಳಿಂದಲೇ ಸ್ಪಷ್ಟಪಡಿಸುತ್ತೇವೆ.


ನಿಮ್ಮಲ್ಲಿ ಯಾರಿಗಾದರೂ ಜ್ಞಾನ ಕಡಿಮೆಯಾಗಿದ್ದರೆ, ಅವರು ದೇವರನ್ನು ಕೇಳಿಕೊಳ್ಳಲಿ, ಅದು ಅವರಿಗೆ ದೊರಕುವುದು. ದೇವರು ತಪ್ಪು ಕಂಡುಹಿಡಿಯದೆ ಎಲ್ಲರಿಗೂ ಉದಾರಮನಸ್ಸಿನಿಂದ ಕೊಡುವರು.


ಈ ರಹಸ್ಯವು ದೇವರ ಪರಿಶುದ್ಧ ಅಪೊಸ್ತಲರಿಗೂ ಪ್ರವಾದಿಗಳಿಗೂ ದೇವರಾತ್ಮರ ಮೂಲಕ ಈಗ ಪ್ರಕಟಿಸಿದಂತೆ, ಬೇರೆ ತಲೆಮಾರುಗಳಲ್ಲಿದ್ದ ಜನರಿಗೆ ತಿಳಿಸಿರಲಿಲ್ಲ.


ಹೀಗೆ ಪ್ರಾರ್ಥನೆ ಮಾಡಿದ ತರುವಾಯ ಅವರು ನೆರೆದಿದ್ದ ಸ್ಥಳವು ಕಂಪನಗೊಂಡಿತು. ಅವರೆಲ್ಲರೂ ಪವಿತ್ರಾತ್ಮಭರಿತರಾದರು ಮತ್ತು ಧೈರ್ಯದಿಂದ ದೇವರ ವಾಕ್ಯವನ್ನು ಸಾರತೊಡಗಿದರು.


ಅವರೆಲ್ಲರೂ ಪವಿತ್ರಾತ್ಮಭರಿತರಾದರು. ಮಾತ್ರವಲ್ಲದೆ ಪವಿತ್ರಾತ್ಮ ದೇವರು ಕೊಟ್ಟ ಪ್ರೇರಣೆಯ ಪ್ರಕಾರ ಬೇರೆ ಬೇರೆ ಭಾಷೆಗಳಲ್ಲಿ ಮಾತನಾಡಲು ಪ್ರಾರಂಭಿಸಿದರು.


ಬಳಲಿ ಹೋದವನನ್ನು ಹೇಗೆ ಮಾತಿನಿಂದ ಆದರಿಸುವೆ ಎಂಬುದನ್ನು ನಾನು ತಿಳಿಯುವ ಹಾಗೆ ಸಾರ್ವಭೌಮ ಯೆಹೋವ ದೇವರು ಶಿಕ್ಷಿತರ ನಾಲಿಗೆಯನ್ನು ನನಗೆ ಕೊಟ್ಟಿದ್ದಾರೆ. ಆತನು ಮುಂಜಾನೆಯಿಂದ ಮುಂಜಾನೆಗೆ ನನ್ನನ್ನು ಎಚ್ಚರಿಸಿ, ಸುರಕ್ಷಿತರಂತೆ ನಾನು ಕೇಳುವ ಹಾಗೆ ನನ್ನ ಕಿವಿಯನ್ನು ಆತನು ಎಚ್ಚರಗೊಳಿಸುತ್ತಾರೆ.


“ಯೆಹೋವ ದೇವರ ಆತ್ಮರು ನನ್ನ ಮೂಲಕ ಮಾತನಾಡಿದರು; ಅವರ ನುಡಿ ನನ್ನ ಬಾಯಲ್ಲಿ ಇತ್ತು.


ಅಬ್ರಹಾಮನ, ಇಸಾಕನ, ಯಾಕೋಬನ ದೇವರು, ನಮ್ಮ ಪಿತೃಗಳ ದೇವರು, ತಮ್ಮ ಸೇವಕರಾದ ಯೇಸುವನ್ನು ಮಹಿಮೆಪಡಿಸಿದ್ದಾರೆ. ಅವರನ್ನು ಬಿಡಿಸಬೇಕೆಂದು ಪಿಲಾತನು ನಿರ್ಣಯಿಸಿಕೊಂಡಿದ್ದರೂ ನೀವು ಯೇಸುವನ್ನು ಕೊಲ್ಲುವುದಕ್ಕೆ ಒಪ್ಪಿಸಿಕೊಟ್ಟು ಪಿಲಾತನ ಮುಂದೆ ಅವರನ್ನು ನಿರಾಕರಿಸಿದಿರಿ.


ಅದಕ್ಕೆ ಯೋಹಾನನು, “ಪರಲೋಕದಿಂದ ಒಬ್ಬ ಮನುಷ್ಯನಿಗೆ ದಯಪಾಲಿಸದ ಹೊರತು ಅವನು ಯಾವುದನ್ನೂ ಹೊಂದಲಾರನು.


“ನೀವು ನಿಮ್ಮ ವಿಷಯದಲ್ಲಿ ಎಚ್ಚರಿಕೆಯಾಗಿರಿ. ಜನರು ನಿಮ್ಮನ್ನು ನ್ಯಾಯಸ್ಥಾನಗಳಿಗೆ ಒಪ್ಪಿಸುವರು, ಸಭಾಮಂದಿರಗಳಲ್ಲಿ ನಿಮ್ಮನ್ನು ಹೊಡೆಯುವರು. ನನ್ನ ನಿಮಿತ್ತವಾಗಿ ಅಧಿಕಾರಿಗಳ ಮತ್ತು ಅರಸರ ಮುಂದೆ ನಿಲ್ಲಿಸುವರು. ಹೀಗೆ ಇದು ಅವರಿಗೆ ಸಾಕ್ಷಿಯಾಗಿರುವುದು.


ಆದರೆ ಜನರ ವಿಷಯದಲ್ಲಿ ಎಚ್ಚರಿಕೆಯಾಗಿರಿ. ಏಕೆಂದರೆ ಅವರು ನಿಮ್ಮನ್ನು ನ್ಯಾಯಸ್ಥಾನಗಳಿಗೆ ಒಪ್ಪಿಸುವರು. ತಮ್ಮ ಸಭಾಮಂದಿರಗಳಲ್ಲಿ ನಿಮ್ಮನ್ನು ಕೊರಡೆಗಳಿಂದ ಹೊಡೆಯುವರು.


ಆದರೆ ಪವಿತ್ರಾತ್ಮಭರಿತನಾದ ಸ್ತೆಫನನು ಪರಲೋಕದ ಕಡೆಗೆ ನೋಡಿ, ದೇವರ ಮಹಿಮೆಯನ್ನೂ ದೇವರ ಬಲಗಡೆಯಲ್ಲಿ ಯೇಸು ನಿಂತುಕೊಂಡಿರುವುದನ್ನೂ ಕಂಡನು.


ನ್ಯಾಯಸಭೆಯಲ್ಲಿ ಕುಳಿತುಕೊಂಡಿದ್ದವರೆಲ್ಲರೂ ಸ್ತೆಫನನ ಮುಖವನ್ನೇ ದಿಟ್ಟಿಸಿ ನೋಡುತ್ತಿದ್ದರು. ಅವನ ಮುಖವು ದೇವದೂತನ ಮುಖದಂತೆ ಕಾಣಿಸುತ್ತಿತ್ತು.


“ಸಹೋದರನು ತನ್ನ ಸಹೋದರನನ್ನೂ, ತಂದೆಯು ಮಗನನ್ನೂ ಮರಣಕ್ಕೆ ಒಪ್ಪಿಸುವರು. ಮಕ್ಕಳು ತಮ್ಮ ತಂದೆತಾಯಿಗಳಿಗೆ ವಿರೋಧವಾಗಿ ಎದ್ದು ಅವರನ್ನು ಕೊಲ್ಲಿಸುವರು.


“ಆದರೆ ಇವೆಲ್ಲವುಗಳಿಗಿಂತ ಮೊದಲು ಅವರು ನಿಮ್ಮನ್ನು ಹಿಡಿದು, ಹಿಂಸಿಸಿ ಸಭಾಮಂದಿರಗಳಿಗೂ ಸೆರೆಮನೆಗಳಿಗೂ ಒಪ್ಪಿಸಿ, ನನ್ನ ಹೆಸರಿನ ನಿಮಿತ್ತ ಅರಸುಗಳ ಮತ್ತು ಅಧಿಕಾರಿಗಳ ಮುಂದೆ ನಿಮ್ಮನ್ನು ತರುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು