Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 13:22 - ಕನ್ನಡ ಸಮಕಾಲಿಕ ಅನುವಾದ

22 ಏಕೆಂದರೆ ಸುಳ್ಳು ಕ್ರಿಸ್ತರು ಮತ್ತು ಸುಳ್ಳು ಪ್ರವಾದಿಗಳು ಎದ್ದು, ಸಾಧ್ಯವಾದರೆ ಆಯ್ಕೆಯಾದವರನ್ನು ಸಹ ಮೋಸಗೊಳಿಸುವಂತೆ ಸೂಚಕಕಾರ್ಯಗಳನ್ನೂ ಅದ್ಭುತಕಾರ್ಯಗಳನ್ನೂ ಮಾಡಿ ತೋರಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಏಕೆಂದರೆ ಸುಳ್ಳು ಕ್ರಿಸ್ತರೂ, ಸುಳ್ಳುಪ್ರವಾದಿಗಳೂ ಎದ್ದು ಸಾಧ್ಯವಾದರೆ ದೇವರು ಆರಿಸಿಕೊಂಡವರನ್ನು ಮೋಸಗೊಳಿಸುವುದಕ್ಕೋಸ್ಕರ ಸೂಚಕಕಾರ್ಯಗಳನ್ನೂ ಅದ್ಭುತಕಾರ್ಯಗಳನ್ನೂ ಮಾಡಿ ತೋರಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ಕಪಟ ಉದ್ಧಾರಕರೂ ವಂಚಕಪ್ರವಾದಿಗಳೂ ತಲೆಯೆತ್ತಿಕೊಳ್ಳುವರು. ಅವರು ಪವಾಡಗಳನ್ನು ಮಾಡಿತೋರಿಸಿ, ದೇವರು ಆರಿಸಿಕೊಂಡವರನ್ನೂ ಮೋಸಗೊಳಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಸುಳ್ಳು ಕ್ರಿಸ್ತರೂ ಸುಳ್ಳುಪ್ರವಾದಿಗಳೂ ಎದ್ದು ಸಾಧ್ಯವಾದರೆ ದೇವರಾದುಕೊಂಡವರನ್ನು ಮೋಸಗೊಳಿಸುವದಕ್ಕೋಸ್ಕರ ಸೂಚಕಕಾರ್ಯಗಳನ್ನೂ ಅದ್ಭುತಕಾರ್ಯಗಳನ್ನೂ ಮಾಡಿ ತೋರಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ದೇವರು ಆರಿಸಿಕೊಂಡ ಜನರನ್ನು ಮೋಸಗೊಳಿಸುವುದಕ್ಕಾಗಿ ಸುಳ್ಳುಕ್ರಿಸ್ತರು ಮತ್ತು ಸುಳ್ಳುಪ್ರವಾದಿಗಳು ಬಂದು ಮಹಾಕಾರ್ಯಗಳನ್ನೂ ಅದ್ಭುತಕಾರ್ಯಗಳನ್ನೂ ಮಾಡುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

22 ತಸೆ ಮನುನ್ ಝುಟೆ ಕ್ರಿಸ್ತ್ ಅನಿ ಝುಟೆ ಪ್ರವಾದಿ ಯೆತ್ಯಾತ್ ಅನಿ ಮೊಟಿ-ಮೊಟಿ ಕಾಮಾ ಅನಿ ಅಜಾಪ್ ಹೊತಲಿ ಕಾಮಾಬಿ ಕರುನ್ ದಾಕ್ವುತ್ಯಾತ್.ಅನಿ ಸಾದ್ಯ್ ಹೊಲ್ಯಾರ್ ದೆವಾನ್ ಎಚುನ್ ಕಾಡಲ್ಲ್ಯಾ ಲೊಕಾಕ್ನಿ ಮೊಸ್ ಕರ್‍ತ್ಯಾತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 13:22
16 ತಿಳಿವುಗಳ ಹೋಲಿಕೆ  

ಏಕೆಂದರೆ ಸುಳ್ಳು ಕ್ರಿಸ್ತರು ಮತ್ತು ಸುಳ್ಳು ಪ್ರವಾದಿಗಳು ಎದ್ದು ಸಾಧ್ಯವಾದರೆ ಆಯ್ಕೆಯಾದವರನ್ನು ಸಹ ಮೋಸಗೊಳಿಸುವಂತೆ ದೊಡ್ಡ ಸೂಚಕಕಾರ್ಯಗಳನ್ನೂ ಅದ್ಭುತಕಾರ್ಯಗಳನ್ನೂ ಮಾಡಿ ತೋರಿಸುವರು.


ಅನೇಕರು ನನ್ನ ಹೆಸರಿನಲ್ಲಿ ಬಂದು, ‘ನಾನೇ ಕ್ರಿಸ್ತನು’ ಎಂದು ಹೇಳಿ ಅನೇಕರನ್ನು ಮೋಸಗೊಳಿಸುವರು.


ನಿಮ್ಮನ್ನು ವಂಚಿಸುವವರ ವಿಷಯವಾಗಿ ಇವುಗಳನ್ನು ನಾನು ನಿಮಗೆ ಬರೆದಿದ್ದೇನೆ.


“ಕುರಿಯ ವೇಷಹಾಕಿಕೊಂಡು ನಿಮ್ಮ ಬಳಿಗೆ ಬರುವ ಸುಳ್ಳು ಪ್ರವಾದಿಗಳ ಬಗ್ಗೆ ಎಚ್ಚರಿಕೆ. ಏಕೆಂದರೆ ಅವರು ಒಳಗೆ ಕ್ರೂರವಾದ ತೋಳಗಳಾಗಿದ್ದಾರೆ.


ನೀನು ಕಂಡ ಮೃಗವು ಒಮ್ಮೆ ಇತ್ತು, ಈಗ ಇಲ್ಲ, ಪಾತಾಳದೊಳಗಿನಿಂದ ಮೇಲೆ ಬಂದು ವಿನಾಶಕ್ಕೆ ಹೊರಡಲಿದೆ. ಲೋಕದ ಸೃಷ್ಟಿಯಾದ ದಿನದಿಂದ ಯಾರ ಯಾರ ಹೆಸರುಗಳು ಜೀವಗ್ರಂಥದಲ್ಲಿ ಬರೆದಿರುವುದಿಲ್ಲವೋ, ಆ ಭೂನಿವಾಸಿಗಳು ಮೃಗವನ್ನು ನೋಡಿ ಆ ಮೃಗವು ಹಿಂದೆ ಇತ್ತು, ಈಗ ಇಲ್ಲ, ಇನ್ನು ಮೇಲೆ ಬರಲಿದೆ ಎಂದು ಆಶ್ಚರ್ಯಗೊಳ್ಳುವರು.


ಅವರು ನಮ್ಮಿಂದ ಹೊರಟು ಹೋದರು. ಆದರೆ ಅವರು ನಮ್ಮವರಾಗಿರಲಿಲ್ಲ. ಏಕೆಂದರೆ ಅವರು ನಮ್ಮವರಾಗಿದ್ದರೆ, ನಮ್ಮ ಜೊತೆಯಲ್ಲೇ ಇರುತ್ತಿದ್ದರು. ಆದರೆ ಅವರು ನಮ್ಮಿಂದ ಹೊರಟು ಹೋದುದರಿಂದ ಅವರೆಲ್ಲರೂ ನಮ್ಮವರಲ್ಲವೆಂಬುದು ತೋರಿಬಂತು.


ಯೇಸು ಅವನಿಗೆ, “ನೀವು ಸೂಚಕಕಾರ್ಯಗಳನ್ನೂ ಅದ್ಭುತಕಾರ್ಯಗಳನ್ನೂ ಕಾಣದ ಹೊರತು ನಂಬುವುದೇ ಇಲ್ಲ,” ಎಂದರು.


ಜಗದುತ್ಪತ್ತಿಗೆ ಮೊದಲೇ ಕೊಯ್ಯಲಾದ ಕುರಿಮರಿಯವರ ಜೀವಗ್ರಂಥದಲ್ಲಿ ಯಾರ‍್ಯಾರ ಹೆಸರುಗಳು ಬರೆದಿರುವುದಿಲ್ಲವೋ, ಆ ಭೂನಿವಾಸಿಗಳೆಲ್ಲರೂ ಆ ಮೃಗವನ್ನು ಆರಾಧಿಸುವರು.


ಆದರೂ ದೇವರ ಸ್ಥಿರವಾದ ಅಸ್ತಿವಾರವು ನಿಲ್ಲುತ್ತದೆ. ಅದರ ಮೇಲೆ, “ತನ್ನವರು ಯಾರಾರೆಂಬುದನ್ನು ಕರ್ತದೇವರು ತಿಳಿದಿದ್ದಾರೆ!” ಎಂತಲೂ, “ಕರ್ತದೇವರ ಹೆಸರನ್ನು ಅರಿಕೆಮಾಡುವವರೆಲ್ಲರೂ ದುಷ್ಟತನವನ್ನು ಬಿಟ್ಟುಬಿಡಬೇಕು!” ಎಂತಲೂ ಮುದ್ರೆ ಉಂಟು.


ನಿಮ್ಮ ಮಧ್ಯೆ ಯಾವ ಪ್ರವಾದಿಯೇ ಆಗಲಿ, ಕನಸುಗಾರನೇ ಆಗಲಿ, ಎದ್ದು ಬಂದು ನಿಮಗೆ ಗೊತ್ತಿಲ್ಲದ ಇತರ ದೇವರುಗಳನ್ನು ಸೂಚನೆ ಮಾಡಿ,


ಆಗ ಯಾರಾದರೂ ನಿಮಗೆ, ‘ಇಗೋ, ಕ್ರಿಸ್ತನು ಇಲ್ಲಿದ್ದಾನೆ, ಅಗೋ, ಆತನು ಅಲ್ಲಿದ್ದಾನೆ,’ ಎಂದು ಹೇಳಿದರೆ ನಂಬಬೇಡಿರಿ.


ಆದರೆ ನೀವು ಜಾಗರೂಕರಾಗಿರಿ, ನಾನು ನಿಮಗೆ ಎಲ್ಲವುಗಳನ್ನು ಮುಂದಾಗಿಯೆ ಹೇಳಿದ್ದೇನೆ.


ಪ್ರಿಯ ಮಕ್ಕಳೇ, ಇದು ಅಂತ್ಯ ಕಾಲವಾಗಿದೆ. ಕ್ರಿಸ್ತವಿರೋಧಿಯು ಬರುತ್ತಾನೆಂದು ನೀವು ಕೇಳಿದ್ದೀರಿ. ಈಗಾಗಲೇ ಅನೇಕ ಕ್ರಿಸ್ತವಿರೋಧಿಗಳಿದ್ದಾರೆ. ಇದರಿಂದ ಇದು ಕಡೇ ಗಳಿಗೆಯಾಗಿದೆ ಎಂದು ನಾವು ತಿಳಿದುಕೊಳ್ಳುತ್ತೇವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು