Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 13:27 - ಕನ್ನಡ ಸಮಕಾಲಿಕ ಅನುವಾದ

27 ನಾನು ನನ್ನ ದೂತರನ್ನು ಕಳುಹಿಸಿ ಭೂಮಿಯ ಕಟ್ಟಕಡೆಯಿಂದ ಆಕಾಶದ ಕಟ್ಟಕಡೆಯವರೆಗೆ ನಾನು ಆರಿಸಿಕೊಂಡವರನ್ನು ನಾಲ್ಕು ದಿಕ್ಕುಗಳಿಂದಲೂ ಒಟ್ಟುಗೂಡಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ಮತ್ತು ಆತನು ತನ್ನ ದೂತರನ್ನು ಕಳುಹಿಸಿ ಭೂಮಿಯ ಕಟ್ಟಕಡೆಯಿಂದ ಆಕಾಶದ ಕಟ್ಟಕಡೆಯವರೆಗೆ ತಾನು ಆರಿಸಿಕೊಂಡವರನ್ನು ನಾಲ್ಕುದಿಕ್ಕುಗಳಿಂದ ಒಟ್ಟುಗೂಡಿಸುವನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

27 ಆತನು ದೇವದೂತರನ್ನು ಜಗತ್ತಿನ ನಾಲ್ಕು ದಿಕ್ಕುಗಳಿಗೂ ಕಳುಹಿಸಿ, ತಾನು ಆರಿಸಿಕೊಂಡವರನ್ನು ವಿಶ್ವದ ಅಷ್ಟದಿಕ್ಕುಗಳಿಂದಲೂ ಒಟ್ಟುಗೂಡಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

27 ಮತ್ತು ಆತನು ತನ್ನ ದೂತರನ್ನು ಕಳುಹಿಸಿ ತಾನು ಆದುಕೊಂಡವರನ್ನು ಭೂವಿುಯ ಕಟ್ಟ ಕಡೆಯಿಂದ ಆಕಾಶದ ಕಟ್ಟ ಕಡೆಯವರೆಗೆ ನಾಲ್ಕೂ ದಿಕ್ಕುಗಳಿಂದ ಒಟ್ಟುಗೂಡಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

27 ಮನುಷ್ಯಕುಮಾರನು ತನ್ನ ದೂತರನ್ನು ಭೂಮಿಯ ಎಲ್ಲಾ ಕಡೆಗೆ ಕಳುಹಿಸಿ ತಾನು ಆರಿಸಿಕೊಂಡ ಜನರನ್ನು ಭೂಮಿಯ ಕಟ್ಟಕಡೆಗಳಿಂದ ಒಟ್ಟುಗೂಡಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

27 ಮಾನಾ ಮಾನ್ಸಾಚೊ ಲೆಕ್ ಅಪ್ನಾಚ್ಯಾ ದುತಾಕ್ನಿ ಧಾಡುನ್ ಅಪ್ನಿ ಯೆಚುನ್ ಘೆಟಲ್ಲ್ಯಾ ಲೊಕಾಕ್ನಿ ದುನಿಯಾಚ್ಯಾ ಸಗ್ಳ್ಯಾ ಭಾಗಾನಿತ್ನಾ ಅನಿ ಸರ್‍ಗಾಚ್ಯಾ ಸಗ್ಳ್ಯಾ ಭಾಗಾನಿತ್ನಾ ಗೊಳಾ ಕರುಕ್ ಲಾವ್ತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 13:27
27 ತಿಳಿವುಗಳ ಹೋಲಿಕೆ  

“ಎಲೈ, ನೀವು ಹೊರಗೆ ಬಂದು ಉತ್ತರ ದೇಶದಿಂದ ಓಡಿಹೋಗಿರಿ. ಏಕೆಂದರೆ ಆಕಾಶದ ನಾಲ್ಕು ದಿಕ್ಕುಗಳಿಗೆ ನಿಮ್ಮನ್ನು ಚದರಿಸಿದ್ದೇನೆ,” ಎಂದು ಯೆಹೋವ ದೇವರು ಹೇಳುತ್ತಾರೆ.


ಆತನು ತನ್ನ ದೂತರನ್ನು ತುತೂರಿಯ ಮಹಾಶಬ್ದದೊಂದಿಗೆ ಕಳುಹಿಸುವನು. ಆಗ ಅವರು ಆತನಿಂದ ಆಯ್ಕೆಯಾದವರನ್ನು ನಾಲ್ಕು ದಿಕ್ಕುಗಳಿಂದಲೂ ಆಕಾಶದ ಒಂದು ಕಡೆಯಿಂದ ಮತ್ತೊಂದು ಕಡೆಯವರೆಗೂ ಒಟ್ಟುಗೂಡಿಸುವರು.


ನಿಮ್ಮಲ್ಲಿ ಯಾರಾದರೂ ಭೂಮಿಯ ಕಟ್ಟಕಡೆಯವರೆಗೂ ಚದರಿ ಹೋಗಿದ್ದರೂ, ಅಲ್ಲಿಂದ ನಿಮ್ಮ ದೇವರಾದ ಯೆಹೋವ ದೇವರು ಅವರನ್ನು ಸಹ ಕರೆದುತರುವರು.


ಪ್ರಿಯರೇ, ನಮಗೆ ಕರ್ತ ಆಗಿರುವ ಯೇಸುಕ್ರಿಸ್ತರ ಬರುವಿಕೆಯನ್ನೂ ನಾವು ಅವರ ಸನ್ನಿಧಿಯಲ್ಲಿ ಒಂದಾಗಿ ಸೇರುವ ವಿಷಯವನ್ನೂ ಕುರಿತು ನಾವು ನಿಮ್ಮನ್ನು ಬೇಡಿಕೊಳ್ಳುವುದೇನೆಂದರೆ:


“ಒಂದು ದಿನ ಆ ಭಿಕ್ಷುಕನು ಸತ್ತುಹೋದನು. ದೇವದೂತರು ಅವನನ್ನು ಅಬ್ರಹಾಮನ ಬಳಿಗೆ ತೆಗೆದುಕೊಂಡು ಹೋದರು. ಧನವಂತನು ಸಹ ಸತ್ತುಹೋದನು. ಅವನಿಗೆ ಶವಸಂಸ್ಕಾರವಾಯಿತು.


“ಕರ್ತನು ಆ ದಿನಗಳನ್ನು ಕಡಿಮೆ ಮಾಡದಿದ್ದರೆ ಯಾರೂ ತಪ್ಪಿಹೋಗುವುದಿಲ್ಲ. ಆದರೆ ತಾನು ಆಯ್ಕೆಯಾದವರಿಗಾಗಿ ಆ ದಿನಗಳನ್ನು ಕಡಿಮೆ ಮಾಡಿದ್ದಾರೆ.


ಮನುಷ್ಯಪುತ್ರನು ತನ್ನ ದೂತರನ್ನು ಕಳುಹಿಸುವನು. ಅವರು ಪಾಪಕ್ಕೆ ಆತಂಕವಾದ ಎಲ್ಲವನ್ನೂ, ಕೇಡುಮಾಡುವ ಎಲ್ಲರನ್ನೂ ಆತನ ರಾಜ್ಯದೊಳಗಿಂದ ಕೂಡಿಸಿ,


ಪವಿತ್ರಾತ್ಮ ದೇವರ ಕಾರ್ಯದಿಂದ ಪರಿಶುದ್ಧರಾಗಿ, ಯೇಸುಕ್ರಿಸ್ತರಿಗೆ ವಿಧೇಯರಾಗಲು ಅವರ ರಕ್ತದಿಂದ ಪ್ರೋಕ್ಷಿತರಾಗುವುದಕ್ಕೂ ನಮ್ಮ ತಂದೆ ದೇವರ ಪೂರ್ವಜ್ಞಾನಾನುಸಾರವಾಗಿ ಆಯ್ಕೆಯಾದವರಿಗೆ ಬರೆಯುವುದು: ನಿಮಗೆ ಕೃಪೆಯೂ ಶಾಂತಿಯೂ ಹೆಚ್ಚೆಚ್ಚಾಗಿ ದೊರೆಯಲಿ.


ಆದಕಾರಣ ಆರಿಸಿಕೊಂಡವರು ಸಹ ಕ್ರಿಸ್ತ ಯೇಸುವಿನಲ್ಲಿರುವ ರಕ್ಷಣೆಯನ್ನು ನಿತ್ಯ ಮಹಿಮೆ ಸಹಿತವಾಗಿ ಹೊಂದಬೇಕೆಂದು ನಾನು ಅವರಿಗೋಸ್ಕರ ಎಲ್ಲವನ್ನೂ ಸಹಿಸಿಕೊಳ್ಳುತ್ತೇನೆ.


ಆದಕಾರಣ ದೇವರಿಂದ ಆಯ್ಕೆಯಾದವರೂ ಪರಿಶುದ್ಧರೂ ಪ್ರಿಯರೂ ಆಗಿರುವ ನೀವು ಕನಿಕರ, ದಯೆ, ದೀನತ್ವ, ಸಾತ್ವಿಕತ್ವ, ದೀರ್ಘಶಾಂತಿ ಇವುಗಳನ್ನು ಧರಿಸಿಕೊಳ್ಳಿರಿ.


ದೇವರು ತಾವೇ ಆರಿಸಿಕೊಂಡವರ ಮೇಲೆ ದೋಷಾರೋಪಣೆ ಮಾಡುವವರಾರು? ದೇವರೇ ನೀತಿವಂತರೆಂದು ನಿರ್ಣಯ ಮಾಡುವವರಾಗಿರುತ್ತಾರೆ.


ಚದುರಿರುವ ದೇವರ ಮಕ್ಕಳನ್ನು ಒಂದಾಗಿ ಕೂಡಿಸುವುದಕ್ಕಾಗಿಯೂ ಯೇಸು ಸಾಯಬೇಕಾಗಿದೆ ಎಂದು ಅವನು ಪ್ರವಾದಿಸಿದನು.


ಈ ಹಿಂಡಿಗೆ ಸೇರದ ಬೇರೆ ಕುರಿಗಳು ನನಗಿವೆ. ಅವುಗಳನ್ನೂ ಸಹ ನಾನು ತರಬೇಕಾಗಿದೆ. ಅವು ನನ್ನ ಸ್ವರಕ್ಕೆ ಕಿವಿಗೊಡುತ್ತವೆ. ಆಗ ಒಂದೇ ಹಿಂಡೂ ಒಬ್ಬನೇ ಕುರುಬನೂ ಆಗಿರುವುದು.


ದೇವರಾದುಕೊಂಡವರು ದೇವರಿಗೆ ಹಗಲುರಾತ್ರಿ ಮೊರೆಯಿಡುವಾಗ, ದೇವರು ಅವರ ವಿಷಯದಲ್ಲಿ ಅವರಿಗೆ ನ್ಯಾಯವನ್ನು ಕೊಡದೆ ಇರುವರೋ? ದೇವರು ನ್ಯಾಯ ಕೊಡಲು ತಡಮಾಡುವರೋ?


ಏಕೆಂದರೆ ಸುಳ್ಳು ಕ್ರಿಸ್ತರು ಮತ್ತು ಸುಳ್ಳು ಪ್ರವಾದಿಗಳು ಎದ್ದು, ಸಾಧ್ಯವಾದರೆ ಆಯ್ಕೆಯಾದವರನ್ನು ಸಹ ಮೋಸಗೊಳಿಸುವಂತೆ ಸೂಚಕಕಾರ್ಯಗಳನ್ನೂ ಅದ್ಭುತಕಾರ್ಯಗಳನ್ನೂ ಮಾಡಿ ತೋರಿಸುವರು.


ಏಕೆಂದರೆ ಸುಳ್ಳು ಕ್ರಿಸ್ತರು ಮತ್ತು ಸುಳ್ಳು ಪ್ರವಾದಿಗಳು ಎದ್ದು ಸಾಧ್ಯವಾದರೆ ಆಯ್ಕೆಯಾದವರನ್ನು ಸಹ ಮೋಸಗೊಳಿಸುವಂತೆ ದೊಡ್ಡ ಸೂಚಕಕಾರ್ಯಗಳನ್ನೂ ಅದ್ಭುತಕಾರ್ಯಗಳನ್ನೂ ಮಾಡಿ ತೋರಿಸುವರು.


“ಆ ದಿನಗಳನ್ನು ಕಡಿಮೆ ಮಾಡದಿದ್ದರೆ, ಒಬ್ಬನೂ ಉಳಿಯುವಂತಿಲ್ಲ. ಆದರೆ ಆಯ್ಕೆಯಾದವರಿಗಾಗಿ ಆ ದಿನಗಳನ್ನು ಕಡಿಮೆ ಮಾಡಲಾಗುವುದು.


ಹಾಗೆಯೇ ಲೋಕಾಂತ್ಯದಲ್ಲಿ ಇರುವುದು. ದೇವದೂತರು ಹೊರಟುಬಂದು ನೀತಿವಂತರ ಮಧ್ಯದಿಂದ ಕೆಡುಕರನ್ನು ಪ್ರತ್ಯೇಕಿಸಿ,


ನ್ಯಾಯತೀರ್ಪಿನಲ್ಲಿ ದಕ್ಷಿಣದ ರಾಣಿಯು ಈ ಸಂತತಿಗೆ ಎದುರಾಗಿ ಎದ್ದು ಇವರನ್ನು ಅಪರಾಧಿಗಳೆಂದು ತೀರ್ಪುಮಾಡುವಳು. ಏಕೆಂದರೆ ಆಕೆಯು ಸೊಲೊಮೋನನ ಜ್ಞಾನವನ್ನು ಕೇಳುವುದಕ್ಕಾಗಿ ಭೂಮಿಯ ಕಟ್ಟಕಡೆಯಿಂದ ಬಂದಳು. ಇಗೋ, ಇಲ್ಲಿ ಸೊಲೊಮೋನನಿಗಿಂತಲೂ ತುಂಬಾ ದೊಡ್ಡವನು ಇಲ್ಲಿದ್ದಾನೆ.


ಯಾಕೋಬಿನೊಳಗಿಂದ ಒಂದು ಸಂತಾನವನ್ನೂ, ಯೆಹೂದದೊಳಗಿಂದ ನನ್ನ ಪರ್ವತಗಳಿಗೆ ಬಾಧ್ಯಸ್ಥನಾಗಿರುವವನನ್ನು ಹೊರಗೆ ಬರಮಾಡುವೆನು. ನಾನು ಆಯ್ದುಕೊಂಡವರು ಅದನ್ನು ಸ್ವಾಧೀನಮಾಡಿಕೊಳ್ಳುವರು. ನನ್ನ ಸೇವಕರು ಅದರಲ್ಲಿ ವಾಸವಾಗುವರು.


ರಾಜದಂಡವನ್ನು ಹಿಡಿಯತಕ್ಕವನು ಶೀಲೋವಿನಿಂದ ಬರುವ ತನಕ, ಯೆಹೂದನ ಕೈಯಿಂದ ರಾಜದಂಡವಾಗಲೀ, ಆಡಳಿತಗಾರನ ಅಧಿಕಾರವಾಗಲೀ ಬಿಟ್ಟು ಹೋಗುವುದಿಲ್ಲ. ಎಲ್ಲಾ ಜನಾಂಗಗಳು ಅವನಿಗೆ ವಿಧೇಯವಾಗುವುವು.


“ಅಂಜೂರದ ಮರದ ಸಾಮ್ಯದಿಂದ ಈ ಪಾಠವನ್ನು ಕಲಿತುಕೊಳ್ಳಿರಿ: ಅದರ ರೆಂಬೆ ಇನ್ನೂ ಎಳೆಯದಾಗಿದ್ದು ಎಲೆಗಳನ್ನು ಬಿಡುವಾಗ ಬೇಸಿಗೆಯು ಹತ್ತಿರವಾಯಿತೆಂದು ನೀವು ತಿಳಿದುಕೊಳ್ಳುತ್ತೀರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು