Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 13:32 - ಕನ್ನಡ ಸಮಕಾಲಿಕ ಅನುವಾದ

32 “ಆ ದಿನದ ಮತ್ತು ಆ ಗಳಿಗೆಯ ವಿಷಯವಾಗಿ ತಂದೆಗೆ ಹೊರತು ಯಾವ ಮನುಷ್ಯನಿಗಾಗಲಿ, ಪರಲೋಕದಲ್ಲಿರುವ ದೂತರಿಗಾಗಲಿ, ಪುತ್ರನಿಗಾಗಲಿ ತಿಳಿಯದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

32 “ಇದಲ್ಲದೆ ಆ ದಿನದ ಮತ್ತು ಆ ಗಳಿಗೆಯ ವಿಷಯವಾಗಿ ನನ್ನ ತಂದೆಗೆ ಹೊರತು ಮತ್ತಾರಿಗೂ ತಿಳಿಯದು, ಪರಲೋಕದಲ್ಲಿರುವ ದೂತರಿಗಾಗಲಿ, ಮಗನಿಗಾಗಲಿ ತಿಳಿಯದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

32 “ಆ ದಿನವಾಗಲಿ, ಆ ಗಳಿಗೆಯಾಗಲಿ, ಯಾವಾಗ ಬರುವುದೆಂದು ಪಿತನ ಹೊರತು ಮತ್ತಾರೂ ಅರಿಯರು. ಸ್ವರ್ಗದಲ್ಲಿರುವ ದೂತರೇ ಆಗಲಿ, ಪುತ್ರನೇ ಆಗಲಿ, ಅದನ್ನು ಅರಿಯರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

32 ಇದಲ್ಲದೆ ಆ ದಿನದ ವಿಷಯವಾಗಲಿ ಆ ಗಳಿಗೆಯ ವಿಷಯವಾಗಲಿ ನನ್ನ ತಂದೆಗೆ ತಿಳಿಯುವದೇ ಹೊರತು ಮತ್ತಾರಿಗೂ ತಿಳಿಯದು; ಪರಲೋಕದಲ್ಲಿರುವ ದೂತರಿಗೂ ತಿಳಿಯದು; ಮಗನಿಗೂ ತಿಳಿಯದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

32 “ಆ ದಿನವಾಗಲಿ ಸಮಯವಾಗಲಿ ಯಾವಾಗ ಬರುತ್ತದೆಂಬುದು ಪರಲೋಕದಲ್ಲಿರುವ ಮಗನಿಗಾಗಲಿ ದೇವದೂತರಿಗಾಗಲಿ ತಿಳಿದಿಲ್ಲ. ತಂದೆಗೆ ಮಾತ್ರ ತಿಳಿದಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

32 ತೊ ದಿಸ್ ಹೊಂವ್ದಿ, ಎಳ್ ಹೊಂವ್ದಿ, ಕನ್ನಾ ಯೆತಾ ಮನುನ್ ಸರ್ಗಾತ್ಲ್ಯಾ ದೆವಾಚ್ಯಾ ದುತಾಕ್ನಿ ಹೊಂವ್ದಿ, ಲೆಕಾಕ್ ಹೊಂವ್ದಿ ಗೊತ್ತ್ ನಾ. ಬಾಬಾಕ್ ಎಕ್ಲ್ಯಾಕುಚ್ ಗೊತ್ತ್ ಹಾಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 13:32
11 ತಿಳಿವುಗಳ ಹೋಲಿಕೆ  

ಅದಕ್ಕೆ ಯೇಸು: “ತಂದೆ ತಮ್ಮ ಸ್ವಂತ ಅಧಿಕಾರದಿಂದ ನೇಮಿಸಿದ ಸಮಯವನ್ನಾಗಲಿ, ಕಾಲವನ್ನಾಗಲಿ, ತಿಳಿಯುವುದು ನಿಮ್ಮ ಕೆಲಸವಲ್ಲ.


“ಆದ್ದರಿಂದ ಎಚ್ಚರವಾಗಿರಿ, ಏಕೆಂದರೆ ಮನುಷ್ಯಪುತ್ರನಾದ ನನ್ನ ಬರುವ ದಿನವನ್ನಾಗಲಿ ಗಳಿಗೆಯನ್ನಾಗಲಿ ನೀವು ಅರಿಯದವರಾಗಿದ್ದೀರಿ, ಎಂದರು.


ಆದ್ದರಿಂದ ನೀನು ಹೊಂದಿದ ಉಪದೇಶವನ್ನೂ ಕೇಳಿದ ರೀತಿಯನ್ನೂ ಜ್ಞಾಪಿಸಿಕೊಂಡು, ಅದನ್ನು ಕೈಕೊಳ್ಳುವವನಾಗಿ ಪಶ್ಚಾತ್ತಾಪಪಡು, ನೀನು ಎಚ್ಚರವಾಗಿರದಿದ್ದರೆ, ಕಳ್ಳನು ಬರುವಂತೆ ಬರುವೆನು. ನಾನು ಯಾವ ಗಳಿಗೆಯಲ್ಲಿ ನಿನ್ನ ಮೇಲೆ ಬರುವೆನೋ ಎಂದು ನಿನಗೆ ಯಾವ ರೀತಿಯಲ್ಲಿಯೂ ತಿಳಿಯದು.


“ಮಧ್ಯರಾತ್ರಿಯಲ್ಲಿ, ‘ನೋಡಿರಿ, ಮದುಮಗನು ಬರುತ್ತಿದ್ದಾನೆ, ಅವನನ್ನು ಎದುರುಗೊಳ್ಳುವುದಕ್ಕಾಗಿ ಹೊರಡಿರಿ,’ ಎಂಬ ಕೂಗಾಯಿತು.


ಆದರೂ ಕರ್ತ ಯೇಸುವಿನ ದಿನವು ರಾತ್ರಿಯಲ್ಲಿ ಕಳ್ಳನು ಬರುವಂತೆ ಬರುತ್ತದೆ. ಆ ದಿನದಲ್ಲಿ ಆಕಾಶಗಳು ಮಹಾಘೋಷದಿಂದ ಇಲ್ಲದೆ ಹೋಗುವವು. ಅತಿ ಉಷ್ಣದಿಂದ ಪಂಚಭೂತಗಳು ಉರಿದು ಲಯವಾಗಿ ಹೋಗುವವು. ಭೂಮಿಯೂ ಅದರಲ್ಲಿರುವ ಕೆಲಸಗಳೂ ಸುಟ್ಟು ಹೋಗುವವು.


“ಬಹುಕಾಲವಾದ ಮೇಲೆ ಆ ಸೇವಕರ ಯಜಮಾನನು ಬಂದು ಅವರಿಂದ ಲೆಕ್ಕ ಕೇಳಿದನು.


ಇದು ಕ್ರಿಸ್ತ ಯೇಸುವಿನ ಪ್ರಕಟನೆ. ಶೀಘ್ರವೇ ಸಂಭವಿಸಲಿಕ್ಕಿರುವ ಸಂಗತಿಗಳನ್ನು ತಮ್ಮ ದಾಸರಿಗೆ ತೋರಿಸುವುದಕ್ಕಾಗಿ ದೇವರಿಂದ ಈ ಪ್ರಕಟನೆಯನ್ನು ಹೊಂದಿದರು. ಇದಲ್ಲದೆ ದೇವರು ತಮ್ಮ ದೇವದೂತನನ್ನು ಕಳುಹಿಸಿ, ಅವನ ಮುಖಾಂತರ ಆ ಸಂಗತಿಗಳನ್ನು ತಮ್ಮ ದಾಸನಾದ ಯೋಹಾನನಿಗೆ ತಿಳಿಸಿದರು.


ಭೂಮ್ಯಾಕಾಶಗಳು ಅಳಿದುಹೋಗುವುವು, ಆದರೆ ನನ್ನ ಮಾತುಗಳು ಅಳಿದುಹೋಗುವುದೇ ಇಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು