Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 13:34 - ಕನ್ನಡ ಸಮಕಾಲಿಕ ಅನುವಾದ

34 ಅದು ಒಬ್ಬ ಮನುಷ್ಯನು ದೂರ ಪ್ರಯಾಣಕ್ಕಾಗಿ ತನ್ನ ಮನೆಯನ್ನು ಬಿಟ್ಟು, ತನ್ನ ಸೇವಕರಿಗೆ ಅಧಿಕಾರವನ್ನೂ ಪ್ರತಿಯೊಬ್ಬನಿಗೆ ಅವನವನ ಕೆಲಸವನ್ನು ಕೊಟ್ಟು ಬಾಗಿಲು ಕಾಯುವವನಿಗೆ ಜಾಗರೂಕನಾಗಿರಬೇಕೆಂದು ಆಜ್ಞಾಪಿಸಿದವನ ಹಾಗೆ ಇರುತ್ತದೆ ಎಂದು ನಾನು ನಿಮಗೆ ಹೇಳುತ್ತಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

34 ಅದು ಒಬ್ಬ ಮನುಷ್ಯನು ತನ್ನ ಮನೆಯನ್ನು ಬಿಟ್ಟು ದೂರಪ್ರಯಾಣಕ್ಕೆ ಹೋಗುವಾಗ ತನ್ನ ಸೇವಕರಿಗೆ ಮನೇ ಅಧಿಕಾರವನ್ನು ಒಪ್ಪಿಸಿಕೊಟ್ಟು ಪ್ರತಿಯೊಬ್ಬನಿಗೆ ಅವನವನ ಕೆಲಸಗಳನ್ನು ಕೊಟ್ಟು ಬಾಗಿಲು ಕಾಯುವವನಿಗೆ, ನೀನು ಜಾಗರೂಕನಾಗಿರಬೇಕೆಂದು ಆಜ್ಞಾಪಿಸಿದವನ ಹಾಗೆ ಇರುತ್ತದೆ” ಎಂದು ನಾನು ನಿಮಗೆ ಹೇಳುತ್ತಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

34 ಪ್ರವಾಸಕ್ಕೆಂದು ಯಜಮಾನನೊಬ್ಬನು ಮನೆಬಿಟ್ಟು ಹೋಗುವಾಗ ತನ್ನ ಸೇವಕರಲ್ಲಿ ಪ್ರತಿಯೊಬ್ಬನಿಗೆ ಒಂದೊಂದು ಜವಾಬ್ದಾರಿಕೆಯನ್ನು ವಹಿಸಿ, ದ್ವಾರಪಾಲಕನಿಗೆ ‘ನೀನು ಎಚ್ಚರವಾಗಿರಬೇಕು,’ ಎಂದು ಅಪ್ಪಣೆಕೊಡುವ ರೀತಿಯಲ್ಲಿ ನಾನು ನಿಮಗೆ ಹೇಳುತ್ತಿದ್ದೇನೆ. ಎಚ್ಚರವಾಗಿರಿ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

34 ಒಬ್ಬ ಮನುಷ್ಯಸು ತನ್ನ ಮನೆಯನ್ನು ಬಿಟ್ಟು ಬೇರೊಂದು ದೇಶಕ್ಕೆ ಹೋಗುವಾಗ ತನ್ನ ಆಳುಗಳಿಗೆ ಮನೇ ಆಡಳಿತವನ್ನು ಒಪ್ಪಿಸಿಕೊಟ್ಟು ಒಬ್ಬೊಬ್ಬನಿಗೆ ಅವನವನ ಕೆಲಸವನ್ನು ನೇವಿುಸಿ ಬಾಗಿಲುಕಾಯುವವನನ್ನು ಕರೆದು - ನೀನು ಎಚ್ಚರವಾಗಿರಬೇಕೆಂದು ಅಪ್ಪಣೆ ಕೊಡುವ ಪ್ರಕಾರ [ನಾನು ನಿಮಗೆ ಅಪ್ಪಣೆ ಕೊಡುತ್ತೇನೆ].

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

34 “ತನ್ನ ಮನೆಯನ್ನು ಬಿಟ್ಟು ಪ್ರವಾಸಕ್ಕಾಗಿ ಹೋದ ಮನುಷ್ಯನಿಗೆ ಇದು ಹೋಲಿಕೆಯಾಗಿದೆ. ಅವನು ತನ್ನ ಮನೆಯನ್ನು ನೋಡಿಕೊಳ್ಳುವುದಕ್ಕಾಗಿ ಸೇವಕರಿಗೆ ಒಪ್ಪಿಸಿಕೊಟ್ಟನು. ಅವನು ಪ್ರತಿಯೊಬ್ಬ ಸೇವಕನಿಗೂ ಒಂದೊಂದು ವಿಶೇಷ ಕೆಲಸವನ್ನು ಕೊಟ್ಟು ದ್ವಾರಪಾಲಕನಿಗೆ, ‘ನೀನು ಯಾವಾಗಲೂ ಸಿದ್ಧವಾಗಿರು’ ಎಂದು ಹೇಳಿದನು. ಅಂತೆಯೇ ನಾನೂ ನಿಮಗೆ ಹೇಳುವುದೇನೆಂದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

34 ಹೆ ಕಶೆ ಮಟ್ಲ್ಯಾರ್, “ಹೆ ಅಪ್ನಾಚೆ ಘರ್ ಸೊಡುನ್ ಧುರ್‍ಲ್ಯಾ ದೆಸಾಕ್ ಗೆಲ್ಲ್ಯಾ ಎಕ್ ಮಾನ್ಸಾಕ್ ಸಮಾ ಕರುಕ್ ಹೊತಾ. ಅಪ್ನಾಚೆ ಘರ್ ಬಗುನ್ ಘೆವಾ” ಮನುನ್ ಸೆವಕಾಕ್ನಿ ತೆನಿ ಸಾಂಗ್ಲ್ಯಾನ್. ಅನಿ ಹರ್ ಎಕ್ಲ್ಯಾ ಸೆವಕಾಕ್ನಿ ತೆಂಚೆ-ತೆಂಚೆ ಕಾಮ್ ದಿಲ್ಯಾನ್ ಅನಿ ದಾರ್‍ ರಾಕ್ತಲ್ಯಾಕ್ “ತಿಯಾ ಕನ್ನಾಬಿ ಉಶಾರ್ಕಿನ್ ರ್‍ಹಾ” ಮನುನ್ ಸಾಂಗ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 13:34
17 ತಿಳಿವುಗಳ ಹೋಲಿಕೆ  

ಬಾಗಿಲು ಕಾಯುವವನು ಅವನಿಗೆ ಬಾಗಿಲನ್ನು ತೆರೆಯುತ್ತಾನೆ. ಕುರಿಗಳು ಅವನ ಸ್ವರವನ್ನು ಕೇಳುತ್ತವೆ. ಅವನು ತನ್ನ ಸ್ವಂತ ಕುರಿಗಳನ್ನು ಹೆಸರು ಹೇಳಿ ಕರೆದು ಅವುಗಳನ್ನು ಹೊರಗೆ ಬಿಡುತ್ತಾನೆ.


ಕರ್ತ ಯೇಸುವಿನಿಂದ ಬಾಧ್ಯತೆಯನ್ನು ಬಹುಮಾನವಾಗಿ ಹೊಂದುವಿರೆಂದು ತಿಳಿದಿದ್ದೀರಲ್ಲಾ. ಏಕೆಂದರೆ ನೀವು ಕರ್ತ ಆಗಿರುವ ಕ್ರಿಸ್ತ ಯೇಸುವನ್ನೇ ಸೇವೆಮಾಡುವವರಾಗಿದ್ದೀರಿ.


ಆದ್ದರಿಂದ, ನನ್ನ ಪ್ರಿಯ ಸಹೋದರರೇ, ಸ್ಥಿರವಾಗಿ ನಿಲ್ಲಿರಿ. ಯಾವುದೂ ನಿಮ್ಮನ್ನು ಕದಲಿಸದಿರಲಿ. ಕರ್ತನಲ್ಲಿ ನಿಮ್ಮ ಪ್ರಯಾಸವು ನಿಷ್ಫಲವಾಗುವುದಿಲ್ಲವೆಂದು ತಿಳಿದು, ಕರ್ತನ ಕೆಲಸಕ್ಕೆ ಯಾವಾಗಲೂ ನಿಮ್ಮನ್ನು ಸಂಪೂರ್ಣವಾಗಿ ಒಪ್ಪಿಸಿಕೊಡಿರಿ.


ನಾನು ನಿನಗೆ ಪರಲೋಕ ರಾಜ್ಯದ ಬೀಗದ ಕೈಗಳನ್ನು ಕೊಡುವೆನು; ನೀನು ಭೂಮಿಯಲ್ಲಿ ಯಾವುದನ್ನು ಬಂಧಿಸುತ್ತೀಯೋ ಅದು ಪರಲೋಕದಲ್ಲಿಯೂ ಬಂಧಿತವಾಗುವುದು. ನೀನು ಭೂಮಿಯಲ್ಲಿ ಏನನ್ನು ಬಿಚ್ಚುತ್ತೀಯೋ ಅದು ಪರಲೋಕದಲ್ಲಿಯೂ ಬಿಚ್ಚಲಾಗುವುದು,” ಎಂದರು.


“ಫಿಲದೆಲ್ಫಿಯದಲ್ಲಿರುವ ಸಭೆಯ ಸಂದೇಶಕನಿಗೆ ಬರೆ: ಪರಿಶುದ್ಧರೂ ಸತ್ಯವಂತರೂ ದಾವೀದನ ಬೀಗದ ಕೈಯುಳ್ಳವರೂ ಯಾರೂ ಮುಚ್ಚದಂತೆ ತೆರೆಯುವವರೂ ಯಾರೂ ತೆರೆಯದಂತೆ ಮುಚ್ಚುವವರೂ ಆಗಿರುವವರು ಹೇಳುವುದೇನೆಂದರೆ:


ಯಜಮಾನರೇ, ಪರಲೋಕದಲ್ಲಿ ನಿಮಗೂ ಯಜಮಾನನಿದ್ದಾನೆಂದು ತಿಳಿದು ನಿಮ್ಮ ದಾಸರಿಗೆ ನ್ಯಾಯವಾದದ್ದನ್ನೂ, ಯೋಗ್ಯವಾದದ್ದನ್ನೂ ಕೊಡಿರಿ.


ಇದರ ನಿಮಿತ್ತವಾಗಿಯೇ ನೀವು ತೆರಿಗೆಯನ್ನು ಪಾವತಿ ಮಾಡುತ್ತೀರಿ. ಏಕೆಂದರೆ, ಅಧಿಕಾರಿಗಳು ಇದರಲ್ಲಿಯೇ ನಿರತರಾಗಿರುವ ದೇವರ ಸೇವಕರಾಗಿರುತ್ತಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು