Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 14:13 - ಕನ್ನಡ ಸಮಕಾಲಿಕ ಅನುವಾದ

13 ಆಗ ಯೇಸು ತಮ್ಮ ಶಿಷ್ಯರಲ್ಲಿ ಇಬ್ಬರನ್ನು ಕಳುಹಿಸಿ ಅವರಿಗೆ, “ನೀವು ಪಟ್ಟಣದೊಳಕ್ಕೆ ಹೋಗಿರಿ. ಅಲ್ಲಿ ನೀರಿನ ಕೊಡವನ್ನು ಹೊತ್ತುಕೊಂಡು ಹೋಗುವ ಒಬ್ಬ ಮನುಷ್ಯನು ನಿಮ್ಮನ್ನು ಸಂಧಿಸುವನು. ಅವನನ್ನು ಹಿಂಬಾಲಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಆತನು ತನ್ನ ಶಿಷ್ಯರಲ್ಲಿ ಇಬ್ಬರನ್ನು ಕರೆದು ಅವರಿಗೆ, “ನೀವು ಪಟ್ಟಣದೊಳಗೆ ಹೋಗಿರಿ. ಅಲ್ಲಿ ತುಂಬಿದ ನೀರಿನ ಕೊಡವನ್ನು ಹೊತ್ತುಕೊಂಡು ಹೋಗುವ ಒಬ್ಬ ಮನುಷ್ಯನು ನಿಮ್ಮನ್ನು ಸಂಧಿಸುವನು. ಅವನನ್ನು ಹಿಂಬಾಲಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಯೇಸು ಅವರಲ್ಲಿ ಇಬ್ಬರಿಗೆ, “ನೀವು ಪಟ್ಟಣಕ್ಕೆ ಹೋಗಿರಿ. ಅಲ್ಲಿ ನೀರಿನ ಕೊಡವನ್ನು ಹೊತ್ತವನೊಬ್ಬನು ನಿಮ್ಮನ್ನು ಎದುರುಗೊಳ್ಳುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಆತನು ತನ್ನ ಶಿಷ್ಯರಲ್ಲಿ ಇಬ್ಬರನ್ನು ಕರೆದು - ನೀವು ಪಟ್ಟಣದೊಳಕ್ಕೆ ಹೋಗಿರಿ; ಅಲ್ಲಿ ಒಬ್ಬ ಮನುಷ್ಯನು ತುಂಬಿದ ಕೊಡವನ್ನು ಹೊತ್ತುಕೊಂಡು ನಿಮ್ಮೆದುರಿಗೆ ಬರುವನು; ನೀವು ಅವನ ಹಿಂದೆ ಹೋಗಿರಿ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಯೇಸು ತನ್ನ ಶಿಷ್ಯರಲ್ಲಿ ಇಬ್ಬರನ್ನು ಕರೆದು, “ನೀವು ಪಟ್ಟಣದೊಳಕ್ಕೆ ಹೋದಾಗ, ಒಬ್ಬ ಮನುಷ್ಯನು ನೀರಿನ ಕೊಡವನ್ನು ಹೊತ್ತುಕೊಂಡು ನಿಮ್ಮ ಎದುರಿಗೆ ಬರುವನು. ಅವನನ್ನೇ ಹಿಂಬಾಲಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

13 ತನ್ನಾ ಜೆಜುನ್ ಅಪ್ನಾಚ್ಯಾ ದೊಗ್ಯಾ ಜಾನಾ ಶಿಸಾಕ್ನಿ ಬಲ್ವುನ್ “ತುಮಿ ಗಾಂವಾತ್ ಜಾಂವಾ, ಥೈ ಎಕ್ ಪಾನಿಯಾಚೊ ಬಿಂದ್ಗೊ ಖಾಂಜಾರ್ ಘೆವ್ನ್ ಯೆತಲೊ ಎಕ್ ಮಾನುಸ್ ಗಾವ್ತಾ, ತೆಚ್ಯಾ ಫಾಟ್ನಾಚ್ ಜಾಂವಾ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 14:13
11 ತಿಳಿವುಗಳ ಹೋಲಿಕೆ  

ಹೀಗೆ ಯೇಸು ಪರಿಪೂರ್ಣರಾಗಿ ತಮಗೆ ವಿಧೇಯರಾಗುವ ಎಲ್ಲರಿಗೂ ನಿರಂತರವಾಗಿ ರಕ್ಷಣೆಗೆ ಕಾರಣರಾದರು.


ನಾವು ಲೆಕ್ಕ ಒಪ್ಪಿಸಬೇಕಾಗಿರುವ ದೇವರ ದೃಷ್ಟಿಗೆ ಸಮಸ್ತವೂ ಬಹಿರಂಗವಾದದ್ದಾಗಿಯೂ ಬಯಲಾದದ್ದಾಗಿಯೂ ಆಗಿದೆ. ಎಲ್ಲಾ ಸೃಷ್ಟಿಯಲ್ಲಿ ದೇವರ ದೃಷ್ಟಿಗೆ ಮರೆಯಾದದ್ದು ಯಾವುದೂ ಇಲ್ಲ.


ನಾನು ನಿಮಗೆ ಆಜ್ಞಾಪಿಸಿದ್ದನ್ನು ಪಾಲಿಸಿದರೆ ನೀವು ನನ್ನ ಸ್ನೇಹಿತರು.


ಏಕೆಂದರೆ ನಾನು ಸಹ ಮತ್ತೊಬ್ಬ ಅಧಿಕಾರಿಯ ಕೈಕೆಳಗಿರುವವನು, ನನ್ನ ಅಧೀನದಲ್ಲಿಯೂ ಸೈನಿಕರಿದ್ದಾರೆ ಮತ್ತು ನಾನು ಒಬ್ಬನಿಗೆ, ‘ಹೋಗು’ ಎಂದರೆ ಅವನು ಹೋಗುತ್ತಾನೆ. ಮತ್ತೊಬ್ಬನಿಗೆ, ‘ಬಾ’ ಎಂದರೆ ಅವನು ಬರುತ್ತಾನೆ. ನನ್ನ ಸೇವಕನಿಗೆ, ‘ಇದನ್ನು ಮಾಡು,’ ಎಂದರೆ ಅವನು ಮಾಡುತ್ತಾನೆ,” ಎಂದು ಹೇಳಿದನು.


ಯೇಸುವಿನ ತಾಯಿಯು ಸೇವಕರಿಗೆ, “ಆತನು ನಿಮಗೆ ಹೇಳಿದಂತೆ ಮಾಡಿರಿ,” ಎಂದು ಹೇಳಿದಳು.


ಅಂದು ಹುಳಿಯಿಲ್ಲದ ರೊಟ್ಟಿಯ ಹಬ್ಬದ ಮೊದಲನೆಯ ದಿನ ಅಂದರೆ ಪಸ್ಕದ ಕುರಿಯನ್ನು ವಧಿಸುವ ದಿನವಾಗಿತ್ತು. ಶಿಷ್ಯರು ಯೇಸುವಿಗೆ, “ನೀವು ಪಸ್ಕದ ಊಟ ಮಾಡಲು ನಾವು ಎಲ್ಲಿಗೆ ಹೋಗಿ ಅದನ್ನು ಸಿದ್ಧಪಡಿಸೋಣ?” ಎಂದು ಕೇಳಿದರು.


ಅವನು ಯಾವ ಮನೆಯೊಳಗೆ ಹೋಗುತ್ತಾನೋ ಆ ಮನೆಯ ಯಜಮಾನನಿಗೆ, ‘ನಾನು ನನ್ನ ಶಿಷ್ಯರೊಂದಿಗೆ ಪಸ್ಕಭೋಜನ ಮಾಡಲು ಅತಿಥಿಯ ಕೊಠಡಿ ಎಲ್ಲಿದೆ? ಎಂದು ಬೋಧಕರು ನಿನ್ನನ್ನು ಕೇಳುತ್ತಾರೆ,’ ಎಂದು ಹೇಳಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು