Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 14:18 - ಕನ್ನಡ ಸಮಕಾಲಿಕ ಅನುವಾದ

18 ಅವರು ಕುಳಿತುಕೊಂಡು ಊಟಮಾಡುತ್ತಿದ್ದಾಗ ಯೇಸು, “ನನ್ನೊಂದಿಗೆ ಊಟಮಾಡುತ್ತಿರುವ ನಿಮ್ಮಲ್ಲಿ ಒಬ್ಬನು ನನಗೆ ದ್ರೋಹ ಬಗೆಯುವನು ಎಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಅವರು ಕುಳಿತುಕೊಂಡು ಊಟಮಾಡುತ್ತಿದ್ದಾಗ ಯೇಸು, “ನನ್ನೊಂದಿಗೆ ಊಟಮಾಡುತ್ತಿರುವ ನಿಮ್ಮಲ್ಲಿ ಒಬ್ಬನು ನನ್ನನ್ನು ಹಿಡಿದುಕೊಡುವನು ಎಂದು ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಅವರೆಲ್ಲರೂ ಊಟಮಾಡುತ್ತಿದ್ದಾಗ ಯೇಸುಸ್ವಾಮಿ, “ನನ್ನ ಸಂಗಡ ಊಟಮಾಡುವ ನಿಮ್ಮಲ್ಲೇ ಒಬ್ಬನು ನನಗೆ ದ್ರೋಹ ಬಗೆಯುವನು, ಎಂದು ನಿಮಗೆ ಖಂಡಿತವಾಗಿ ಹೇಳುತ್ತೇನೆ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಅವರು ಕೂತುಕೊಂಡು ಊಟಮಾಡುತ್ತಿರುವಾಗ ಯೇಸು - ನಿಮ್ಮಲ್ಲಿ ಒಬ್ಬನು ನನ್ನನ್ನು ಹಿಡುಕೊಡುವನು, ಅವನು ನನ್ನ ಸಂಗಡ ಊಟಮಾಡುವವನೇ ಎಂದು ನಿಮಗೆ ಸತ್ಯವಾಗಿ ಹೇಳುತ್ತೇನೆ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಅವರೆಲ್ಲರೂ ಊಟ ಮಾಡುತ್ತಿರುವಾಗ, ಯೇಸು, “ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ. ನಿಮ್ಮಲ್ಲಿ ಒಬ್ಬನು ನನಗೆ ದ್ರೋಹ ಬಗೆಯುತ್ತಾನೆ. ಈಗ ಅವನು ನನ್ನೊಂದಿಗೆ ಊಟಮಾಡುತ್ತಿದ್ದಾನೆ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

18 ತೆನಿ ಜೆವಾನ್ ಕರ್‍ತಾನಾ ಜೆಜುನ್ “ಮಿಯಾ ತುಮ್ಕಾ ಸಾಂಗ್ತಾ ತುಮ್ಚ್ಯಾತ್ಲೊ ಎಕ್ಲೊ ಮಾಕಾ ಘಾತ್ ಕರ್‍ನಾರ್ ಹಾಯ್.ತೊ ಮಾನುಸ್ ಹಿತ್ತೆ ಅತ್ತಾ ಮಾಜ್ಯಾ ವಾಂಗ್ಡಾಚ್ ಜೆವಾನ್ ಕರುಕ್ ಲಾಗ್ಲಾ”. ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 14:18
36 ತಿಳಿವುಗಳ ಹೋಲಿಕೆ  

ನನ್ನ ರೊಟ್ಟಿಯನ್ನು ತಿಂದವನೂ ನಾನು ನಂಬಿದ್ದವನೂ ಆಗಿರುವ ನನ್ನ ಆಪ್ತ ಸ್ನೇಹಿತನು ಸಹ ನನಗೆ ವಿರೋಧವಾಗಿ ತನ್ನ ಕಾಲನ್ನು ಎತ್ತಿದ್ದಾನೆ.


ಅದಕ್ಕೆ ಯೇಸು ಅವರಿಗೆ, “ಹನ್ನೆರಡು ಮಂದಿಯಾದ ನಿಮ್ಮನ್ನು ನಾನು ಆರಿಸಿಕೊಂಡೆನಲ್ಲವೇ? ಆದರೆ ನಿಮ್ಮಲ್ಲಿಯೂ ಒಬ್ಬನು ಪಿಶಾಚನಾಗಿದ್ದಾನೆ,” ಎಂದರು.


ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ, ನನ್ನನ್ನು ನಂಬುವವರು ನಿತ್ಯಜೀವವನ್ನು ಹೊಂದಿದ್ದಾರೆ.


ಯೇಸು ಅವನಿಗೆ, “ನೀನು ನನಗಾಗಿ ನಿನ್ನ ಪ್ರಾಣವನ್ನೇ ಕೊಡುವೆಯೋ? ನಾನು ನಿನಗೆ ನಿಜನಿಜವಾಗಿ ಹೇಳುತ್ತೇನೆ, ನೀನು ನನ್ನನ್ನು ಮೂರು ಸಾರಿ ನಿರಾಕರಿಸುವ ತನಕ ಹುಂಜ ಕೂಗುವುದೇ ಇಲ್ಲ,” ಎಂದರು.


ಯೇಸು ಇವುಗಳನ್ನು ಹೇಳುತ್ತಾ ಆತ್ಮದಲ್ಲಿ ನೊಂದುಕೊಂಡವರಾಗಿ, “ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ, ನಿಮ್ಮಲ್ಲಿ ಒಬ್ಬನು ನನಗೆ ದ್ರೋಹ ಬಗೆಯುವನು,” ಎಂದು ಸ್ವಷ್ಟವಾಗಿ ಹೇಳಿದರು.


ಯೇಸು ಅವರಿಗೆ, “ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ, ನಿಮಗೆ ಪರಲೋಕದಿಂದ ರೊಟ್ಟಿಯನ್ನು ಮೋಶೆ ಕೊಡಲಿಲ್ಲ. ನನ್ನ ತಂದೆಯೇ ನಿಮಗೆ ನಿಜವಾದ ರೊಟ್ಟಿಯನ್ನು ಪರಲೋಕದಿಂದಲೇ ಕೊಡುತ್ತಾರೆ.


ಯೇಸು ಅವರಿಗೆ, “ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ, ನೀವು ನನ್ನನ್ನು ಹುಡುಕುವುದು ಸೂಚಕಕಾರ್ಯಗಳನ್ನು ನೋಡಿದ್ದರಿಂದಲ್ಲ, ರೊಟ್ಟಿಗಳನ್ನು ತಿಂದು ತೃಪ್ತಿ ಹೊಂದಿದ್ದರಿಂದಲೇ.


ಯೇಸು ಅವರಿಗೆ, “ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ, ತಂದೆಯು ಮಾಡುವುದನ್ನು ಕಂಡು ಪುತ್ರನು ಮಾಡುತ್ತಾನೆ ಹೊರತು ಪುತ್ರನು ತನ್ನಷ್ಟಕ್ಕೆ ತಾನೇ ಏನೂ ಮಾಡಲಾರನು. ಏಕೆಂದರೆ ತಂದೆ ಯಾವುದನ್ನೆಲ್ಲಾ ಮಾಡುವರೋ ಹಾಗೆಯೇ ಪುತ್ರನೂ ಮಾಡುವನು.


ನಾನು ನಿನಗೆ ನಿಜನಿಜವಾಗಿ ಹೇಳುತ್ತೇನೆ, ನಾವು ತಿಳಿದಿರುವುದನ್ನು ಮಾತನಾಡುತ್ತೇವೆ ಮತ್ತು ಕಂಡಿದ್ದಕ್ಕೆ ಸಾಕ್ಷಿ ನೀಡುತ್ತೇವೆ. ನೀವಾದರೋ ನಮ್ಮ ಸಾಕ್ಷಿಯನ್ನು ಸ್ವೀಕರಿಸುವುದಿಲ್ಲ.


ಯೇಸು ಅವನಿಗೆ, “ಯಾರು ನೀರಿನಿಂದಲೂ ಆತ್ಮದಿಂದಲೂ ಹುಟ್ಟುವದಿಲ್ಲವೋ ಅವನು ದೇವರ ರಾಜ್ಯದೊಳಗೆ ಪ್ರವೇಶಿಸಲಾರನು, ಎಂದು ನಾನು ನಿನಗೆ ನಿಜನಿಜವಾಗಿ ಹೇಳುತ್ತೇನೆ.


ಯೇಸು ಅವನಿಗೆ, “ಒಬ್ಬನು ಮತ್ತೊಮ್ಮೆ ಹುಟ್ಟದಿದ್ದರೆ ಅವನು ದೇವರ ರಾಜ್ಯವನ್ನು ಕಾಣಲಾರನು, ಎಂದು ನಾನು ನಿನಗೆ ನಿಜನಿಜವಾಗಿ ಹೇಳುತ್ತೇನೆ.”


ಯೇಸು ಅವನಿಗೆ, “ನಾನು ನಿಮಗೆ ನಿಜವಾಗಿ ಹೇಳುವುದೇನೆಂದರೆ, ನೀವು ಪರಲೋಕವು ತೆರೆದಿರುವುದನ್ನೂ ದೇವದೂತರು ಮನುಷ್ಯಪುತ್ರನಾದ ನನ್ನ ಮುಖಾಂತರ ಇಳಿಯುತ್ತಾ ಏರುತ್ತಾ ಇರುವುದನ್ನೂ ಕಾಣುವಿರಿ,” ಎಂದು ಹೇಳಿದರು.


ಹೇಬೆಲನ ರಕ್ತ ಮೊದಲುಗೊಂಡು ಬಲಿಪೀಠಕ್ಕೂ ದೇವಾಲಯಕ್ಕೂ ಮಧ್ಯದಲ್ಲಿ ಹತವಾದ ಜಕರೀಯನ ರಕ್ತದವರೆಗೂ ಈ ಸಂತತಿಯು ಉತ್ತರಕೊಡಬೇಕು. ಹೌದು, ಈ ಸಂತತಿಯವರೇ ಇದಕ್ಕೆಲ್ಲಾ ಉತ್ತರಕೊಡಬೇಕೆಂದು, ನಾನು ನಿಮಗೆ ನಿಜವಾಗಿ ಹೇಳುತ್ತೇನೆ.


ಯೇಸು ಮುಂದುವರಿಸಿ, “ನಾನು ನಿಮಗೆ ನಿಜವಾಗಿ ಹೇಳುವುದೇನೆಂದರೆ, ಯಾವ ಪ್ರವಾದಿಯೂ ಸ್ವಂತ ಊರಿನಲ್ಲಿ ಸ್ವೀಕಾರವಾಗುವುದಿಲ್ಲ.


ನಾನು ದೇವರ ರಾಜ್ಯದಲ್ಲಿ ಇದನ್ನು ಹೊಸದಾಗಿ ಕುಡಿಯುವ ಆ ದಿನದವರೆಗೆ ಇನ್ನು ಮೇಲೆ ನಾನು ದ್ರಾಕ್ಷಾರಸವನ್ನು ಕುಡಿಯುವುದೇ ಇಲ್ಲವೆಂದು ನಿಮಗೆ ನಿಜವಾಗಿ ಹೇಳುತ್ತೇನೆ,” ಎಂದು ಹೇಳಿದರು.


ನಾನು ನಿಮಗೆ ನಿಜವಾಗಿ ಹೇಳುತ್ತೇನೆ, ಲೋಕದಾದ್ಯಂತ ಎಲ್ಲೆಲ್ಲಿ ಸುವಾರ್ತೆಯು ಸಾರಲಾಗುವದೋ, ಅಲ್ಲೆಲ್ಲಾ ಈ ಸ್ತ್ರೀಯು ಮಾಡಿದ್ದನ್ನು ಸಹ ಈಕೆಯ ಜ್ಞಾಪಕಾರ್ಥವಾಗಿ ಹೇಳಲಾಗುವುದು,” ಎಂದರು.


ಅದಕ್ಕೆ ಯೇಸು, “ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ; ಯಾರಾದರೂ ನನ್ನ ನಿಮಿತ್ತವಾಗಿಯೂ ಸುವಾರ್ತೆಯ ನಿಮಿತ್ತವಾಗಿಯೂ ಮನೆಯನ್ನಾಗಲಿ, ಸಹೋದರರನ್ನಾಗಲಿ, ಸಹೋದರಿಯರನ್ನಾಗಲಿ, ತಂದೆಯನ್ನಾಗಲಿ, ತಾಯಿಯನ್ನಾಗಲಿ, ಮಕ್ಕಳನ್ನಾಗಲಿ, ಹೊಲವನ್ನಾಗಲಿ ಬಿಟ್ಟುಬಿಟ್ಟರೆ,


ನಾನು ನಿಮಗೆ ನಿಜವಾಗಿ ಹೇಳುತ್ತೇನೆ, ಯಾರಾದರೂ ಚಿಕ್ಕಮಗುವಿನಂತೆ ದೇವರ ರಾಜ್ಯವನ್ನು ಸ್ವೀಕರಿಸದಿದ್ದರೆ, ಅವರು ಅದರೊಳಗೆ ಸೇರುವುದೇ ಇಲ್ಲ,” ಎಂದರು.


ಇದಲ್ಲದೆ ನೀವು ಕ್ರಿಸ್ತನಲ್ಲಿ ಸೇರಿದವರಾದ್ದರಿಂದ ಯಾರಾದರೂ ನನ್ನ ಹೆಸರಿನಲ್ಲೆ ನಿಮಗೆ ಒಂದು ಲೋಟ ನೀರನ್ನು ಕೊಟ್ಟರೂ ಅವರು ತಮ್ಮ ಪ್ರತಿಫಲವನ್ನು ಕಳೆದುಕೊಳ್ಳುವುದೇ ಇಲ್ಲವೆಂದು ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ,” ಎಂದರು.


ಅನಂತರ ಯೇಸು ಅವರಿಗೆ, “ಇಲ್ಲಿ ನಿಂತವರಲ್ಲಿ ಕೆಲವರು ದೇವರ ರಾಜ್ಯವು ಶಕ್ತಿಯೊಂದಿಗೆ ಬರುವುದನ್ನು ಕಾಣುವವರೆಗೆ ಮರಣದ ಅನುಭವ ಹೊಂದುವುದೇ ಇಲ್ಲ ಎಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ,” ಎಂದರು.


ಯೇಸು ತಮ್ಮ ಆತ್ಮದಲ್ಲಿ ನೊಂದುಕೊಂಡು, “ಈ ಸಂತತಿಯು ಸೂಚಕಕಾರ್ಯವನ್ನು ಹುಡುಕುವುದು ಏಕೆ? ಈ ಸಂತತಿಗೆ ಯಾವ ಸೂಚಕಕಾರ್ಯವೂ ಕೊಡಲಾಗುವುದಿಲ್ಲವೆಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ,” ಎಂದರು.


ಯಾರಾದರೂ ನಿಮ್ಮನ್ನು ಸ್ವಾಗತಿಸದೆ ಹೋದರೆ ಅಥವಾ ನಿಮ್ಮ ಮಾತುಗಳನ್ನು ಕೇಳದಿದ್ದರೆ, ನೀವು ಹೊರಡುತ್ತಿರುವಾಗ ನಿಮ್ಮ ಪಾದಗಳಿಗೆ ಹತ್ತಿದ ಧೂಳನ್ನು ಝಾಡಿಸಿಬಿಡಿರಿ. ಅದು ಅವರ ವಿರುದ್ಧ ಸಾಕ್ಷಿಯಾಗಿರಲಿ,” ಎಂದರು.


ನಾನು ನಿಮಗೆ ನಿಜವಾಗಿ ಹೇಳುವುದೇನೆಂದರೆ, ಮನುಷ್ಯರು ಮಾಡುವ ಎಲ್ಲಾ ಪಾಪಗಳಿಗೆ ಮತ್ತು ದೂಷಣೆಗಳಿಗೆ ಕ್ಷಮಾಪಣೆ ದೊರೆಯುವುದು.


ಅವರು ಊಟಮಾಡುತ್ತಿದ್ದಾಗ ಯೇಸು, “ನಾನು ನಿಮಗೆ ನಿಜವಾಗಿ ಹೇಳುತ್ತೇನೆ, ನಿಮ್ಮಲ್ಲಿ ಒಬ್ಬನು ನನಗೆ ದ್ರೋಹ ಮಾಡುವನು,” ಎಂದರು.


“ನೀವು ಪ್ರಾರ್ಥನೆ ಮಾಡುವಾಗ, ಕಪಟಿಗಳಂತೆ ಮಾಡಬೇಡಿರಿ. ಅವರು ಜನರಿಗೆ ಕಾಣುವಂತೆ ಸಭಾಮಂದಿರಗಳಲ್ಲಿಯೂ ಬೀದಿಚೌಕಗಳಲ್ಲಿಯೂ ನಿಂತುಕೊಂಡು ಪ್ರಾರ್ಥನೆಮಾಡುವುದಕ್ಕೆ ಇಷ್ಟಪಡುತ್ತಾರೆ. ಅವರು ತಮ್ಮ ಪ್ರತಿಫಲವನ್ನು ಪೂರ್ತಿಯಾಗಿ ಹೊಂದಿದ್ದಾಯಿತೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ.


“ಆದ್ದರಿಂದ ನೀನು ದಾನಧರ್ಮ ಮಾಡುವಾಗ, ಜನರಿಂದ ಹೊಗಳಿಸಿಕೊಳ್ಳಬೇಕೆಂದು ಕಪಟಿಗಳ ಹಾಗೆ ಸಭಾಮಂದಿರಗಳಲ್ಲಿಯೂ ಬೀದಿಗಳಲ್ಲಿಯೂ ತುತೂರಿಯನ್ನು ಊದಿಸಬೇಡ. ಅವರು ತಮ್ಮ ಪ್ರತಿಫಲವನ್ನು ಪೂರ್ತಿಯಾಗಿ ಹೊಂದಿದ್ದಾಯಿತೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ.


ಭೂಮಿ ಆಕಾಶಗಳು ಗತಿಸಿಹೋಗುವವು, ಆದರೆ ನಿಯಮವೆಲ್ಲಾ ನೆರವೇರುವ ತನಕ ಅದರಲ್ಲಿ ಒಂದು ಚಿಕ್ಕ ಅಕ್ಷರವಾದರೂ ಚಿಕ್ಕ ಚುಕ್ಕೆಯಾದರೂ ಅಳಿದುಹೋಗುವುದಿಲ್ಲ ಎಂದು ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ.


ನಾನು ನಿನಗೆ ನಿಜನಿಜವಾಗಿ ಹೇಳುತ್ತೇನೆ, “ನೀನು ಯುವಕನಾಗಿದ್ದಾಗ ನೀನೇ ನಿನ್ನ ಉಡುಪನ್ನು ಧರಿಸಿಕೊಂಡು ಇಷ್ಟ ಬಂದ ಕಡೆಗೆ ತಿರುಗಾಡುತ್ತಿದ್ದೆ. ಆದರೆ ನೀನು ವೃದ್ಧನಾದಾಗ ನಿನ್ನ ಕೈಗಳನ್ನು ಚಾಚುವೆ, ಆಗ ಮತ್ತೊಬ್ಬನು ನಿನ್ನ ನಡುವನ್ನು ಕಟ್ಟಿ ನಿನಗೆ ಇಷ್ಟವಿಲ್ಲದ ಕಡೆಗೆ ನಿನ್ನನ್ನು ಹೊತ್ತುಕೊಂಡು ಹೋಗುವನು,” ಎಂದರು.


“ನೀವು ಉಪವಾಸ ಮಾಡುವಾಗ ಕಪಟಿಗಳಂತೆ ಮುಖ ಸಪ್ಪಗೆ ಮಾಡಿಕೊಳ್ಳಬೇಡಿರಿ, ತಾವು ಉಪವಾಸ ಮಾಡುತ್ತಿದ್ದೇವೆಂದು ಜನರಿಗೆ ತೋರ್ಪಡಿಸಿಕೊಳ್ಳುವುದಕ್ಕಾಗಿ ಅವರು ತಮ್ಮ ಮುಖವನ್ನು ಬಾಡಿಸಿಕೊಂಡಿರುತ್ತಾರೆ. ಅವರು ತಮಗೆ ಬರತಕ್ಕ ಪ್ರತಿಫಲವನ್ನು ಪೂರ್ತಿಯಾಗಿ ಹೊಂದಿದ್ದಾಯಿತೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ.


ಸಂಜೆಯಾದಾಗ, ಯೇಸು ಹನ್ನೆರಡು ಮಂದಿ ಶಿಷ್ಯರ ಸಂಗಡ ಬಂದರು.


ಆಗ ಅವರು ದುಃಖಿಸಲಾರಂಭಿಸಿ ಒಬ್ಬೊಬ್ಬರಾಗಿ ಯೇಸುವಿಗೆ, “ಅವನು ನಾನಲ್ಲವಲ್ಲಾ?” ಎಂದು ಕೇಳಿದರು.


ಆದರೂ ಇಗೋ, ನನಗೆ ದ್ರೋಹಬಗೆಯುವವನ ಕೈ ನನ್ನ ಕೈಯೊಂದಿಗೆ ಮೇಜಿನ ಮೇಲೆ ಇದೆ.


“ನಾನು ನಿಮ್ಮೆಲ್ಲರನ್ನು ಕುರಿತು ಮಾತನಾಡುತ್ತಿಲ್ಲ. ನಾನು ಆರಿಸಿಕೊಂಡವರನ್ನು ನಾನು ಬಲ್ಲೆನು. ಆದರೆ ‘ನನ್ನ ಸಂಗಡ ರೊಟ್ಟಿಯನ್ನು ತಿಂದವನೇ, ನನಗೆ ದ್ರೋಹ ಬಗೆದನು,’ ಎಂಬ ಪವಿತ್ರ ವಾಕ್ಯವು ನೆರವೇರಬೇಕಾಗಿದೆ.


ಆಗ ಶಿಷ್ಯರು ಗಲಿಬಿಲಿಗೊಂಡು, “ಯೇಸು ಯಾರನ್ನು ಕುರಿತು ಹೇಳಿದರು?” ಎಂದು ಒಬ್ಬರನ್ನೊಬ್ಬರು ನೋಡುವವರಾದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು