Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 14:24 - ಕನ್ನಡ ಸಮಕಾಲಿಕ ಅನುವಾದ

24 ಯೇಸು ಅವರಿಗೆ, “ಇದು ಬಹುಜನರಿಗೋಸ್ಕರ ಸುರಿಸಲಾಗುವ ಹೊಸ ಒಡಂಬಡಿಕೆಯ ನನ್ನ ರಕ್ತ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ಯೇಸು ಅವರಿಗೆ, “ಇದು ನನ್ನ ರಕ್ತ, ಬಹು ಜನರಿಗಾಗಿ ಸುರಿಸಲ್ಪಡುವ ಒಡಂಬಡಿಕೆಯ ರಕ್ತ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

24 ಯೇಸು ಅವರಿಗೆ, “ಇದು ನನ್ನ ರಕ್ತ, ಸಮಸ್ತ ಜನರಿಗಾಗಿ ಸುರಿಸಲಾಗುವ ಒಡಂಬಡಿಕೆಯ ರಕ್ತ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ಮತ್ತು ಆತನು ಅವರಿಗೆ - ಇದು ನನ್ನ ರಕ್ತ, ಇದು ಒಡಂಬಡಿಕೆಯ ರಕ್ತ; ಇದು ಬಹು ಜನರಿಗೋಸ್ಕರ ಸುರಿಸಲ್ಪಡುವ ರಕ್ತ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 ಯೇಸು, “ಇದು ನನ್ನ ರಕ್ತ. ಒಡಂಬಡಿಕೆಯ ರಕ್ತ. ಇದು ಬಹು ಜನರಿಗೋಸ್ಕರ ಸುರಿಸಲ್ಪಡುವ ರಕ್ತ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

24 ಜೆಜುನ್ ತೆಂಕಾ “ಹೆ ಮಾಜೆ ರಗಾತ್, ದೆವಾನ್ ಅಪ್ನಾಚ್ಯಾ ಲೊಕಾಂಚ್ಯಾ ವಾಂಗ್ಡಾ ಕರಲ್ಲೊ ಎಕ್ ನ್ಹವೊ ಕರಾರ್, ಹೆ ಸುಮಾರ್ ಲೊಕಾಂಚ್ಯಾ ಸಾಟ್ನಿ ವೊತಲ್ಲೆ ರಗಾತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 14:24
14 ತಿಳಿವುಗಳ ಹೋಲಿಕೆ  

ತರುವಾಯ ಮೋಶೆಯು ರಕ್ತವನ್ನು ತೆಗೆದುಕೊಂಡು ಜನರ ಮೇಲೆ ಚಿಮುಕಿಸಿ, “ಈ ಎಲ್ಲಾ ಮಾತುಗಳ ವಿಷಯದಲ್ಲಿ ಯೆಹೋವ ದೇವರು ನಿಮ್ಮೊಂದಿಗೆ ಮಾಡಿದ ಒಡಂಬಡಿಕೆಯ ರಕ್ತ,” ಎಂದನು.


ನೀನು ನನ್ನೊಡನೆ ಒಡಂಬಡಿಕೆಯನ್ನು ಮಾಡಿಕೊಂಡಾಗ ಸುರಿಸಿದ ರಕ್ತವನ್ನು ನಾನು ಸ್ಮರಿಸಿ ನಿನ್ನ ಸೆರೆಯವರನ್ನು ನೀರಿಲ್ಲದ ಬಾವಿಯೊಳಗಿಂದ ಬಿಡುಗಡೆಮಾಡುವೆನು.


ಅದೇ ಪ್ರಕಾರ, ಭೋಜನವಾದ ಮೇಲೆ ಪಾನಪಾತ್ರೆಯನ್ನು ತೆಗೆದುಕೊಂಡು, “ಈ ಪಾತ್ರೆಯು ನಿಮಗೋಸ್ಕರ ಸುರಿಸಲಾಗುವ, ನನ್ನ ರಕ್ತದಿಂದಾದ ಹೊಸ ಒಡಂಬಡಿಕೆಯಾಗಿದೆ. ನೀವು ಇದರಲ್ಲಿ ಪಾನಮಾಡುವಾಗೆಲ್ಲಾ ನನ್ನನ್ನು ಜ್ಞಾಪಿಸಿಕೊಳ್ಳುವದಕ್ಕೋಸ್ಕರ ಪಾನಮಾಡಿರಿ,” ಎಂದರು.


ನಾವು ಸ್ತೋತ್ರಮಾಡಿ ಕುಡಿಯುವ ಸ್ತೋತ್ರದ ಪಾತ್ರೆಯು ಕ್ರಿಸ್ತ ಯೇಸುವಿನ ರಕ್ತದ ಅನ್ಯೋನ್ಯತೆಯಲ್ಲವೇ? ನಾವು ಮುರಿಯುವ ರೊಟ್ಟಿಯು ಕ್ರಿಸ್ತನ ದೇಹದಲ್ಲಿಯ ಅನ್ಯೋನ್ಯತೆಯಲ್ಲವೇ?


ಯೇಸು ಅವರಿಗೆ, “ನಿಮಗೆ ನಿಜನಿಜವಾಗಿ ಹೇಳುತ್ತೇನೆ, ನೀವು ಮನುಷ್ಯಪುತ್ರನಾದ ನನ್ನ ಮಾಂಸವನ್ನು ತಿಂದು ನನ್ನ ರಕ್ತವನ್ನು ಕುಡಿಯದೆ ಹೋದರೆ, ನಿಮ್ಮಲ್ಲಿ ಜೀವವಿರುವುದಿಲ್ಲ.


ಮನುಷ್ಯಪುತ್ರನಾದ ನಾನು ಸಹ ಸೇವೆಮಾಡಿಸಿಕೊಳ್ಳುವುದಕ್ಕಾಗಿ ಅಲ್ಲ, ಸೇವೆಮಾಡುವುದಕ್ಕಾಗಿಯೂ ಅನೇಕರಿಗಾಗಿ ನನ್ನ ಪ್ರಾಣವನ್ನು ಈಡಾಗಿ ಕೊಡುವುದಕ್ಕಾಗಿಯೂ ಬಂದಿದ್ದೇನೆ,” ಎಂದು ಹೇಳಿದರು.


ಯೆಹೋವ ದೇವರು ಹೇಳುವುದನ್ನು ಕೇಳಿ: “ನಾನು ಇಸ್ರಾಯೇಲ್ ವಂಶದವರೊಂದಿಗೂ, ಯೆಹೂದ ವಂಶದವರೊಂದಿಗೂ ಒಂದು ಹೊಸ ಒಡಂಬಡಿಕೆಯನ್ನು ಮಾಡಿಕೊಳ್ಳುವ ದಿನಗಳು ಬರುವವು.


ತರುವಾಯ ಯೇಸು ಪಾತ್ರೆಯನ್ನು ತೆಗೆದುಕೊಂಡು ಕೃತಜ್ಞತಾಸ್ತುತಿ ಮಾಡಿ ಅವರಿಗೆ ಕೊಟ್ಟರು. ಅವರೆಲ್ಲರೂ ಅದರಲ್ಲಿ ಕುಡಿದರು.


ನಾನು ದೇವರ ರಾಜ್ಯದಲ್ಲಿ ಇದನ್ನು ಹೊಸದಾಗಿ ಕುಡಿಯುವ ಆ ದಿನದವರೆಗೆ ಇನ್ನು ಮೇಲೆ ನಾನು ದ್ರಾಕ್ಷಾರಸವನ್ನು ಕುಡಿಯುವುದೇ ಇಲ್ಲವೆಂದು ನಿಮಗೆ ನಿಜವಾಗಿ ಹೇಳುತ್ತೇನೆ,” ಎಂದು ಹೇಳಿದರು.


ಅದೇ ಪ್ರಕಾರ, ಭೋಜನವಾದ ಮೇಲೆ ಪಾನಪಾತ್ರೆಯನ್ನು ತೆಗೆದುಕೊಂಡು, “ಈ ಪಾತ್ರೆಯು ನಿಮಗೋಸ್ಕರ ಸುರಿಸಲಾಗುವ, ನನ್ನ ರಕ್ತದಿಂದಾದ ಹೊಸ ಒಡಂಬಡಿಕೆಯಾಗಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು