Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 14:30 - ಕನ್ನಡ ಸಮಕಾಲಿಕ ಅನುವಾದ

30 ಆದರೆ ಯೇಸು ಅವನಿಗೆ, “ಈ ದಿವಸ, ಈ ರಾತ್ರಿಯೇ ಎರಡು ಸಾರಿ ಹುಂಜ ಕೂಗುವುದಕ್ಕಿಂತ ಮೊದಲು ಮೂರು ಸಾರಿ ನೀನು ನನ್ನನ್ನು ನಿರಾಕರಿಸುವೆ ಎಂದು ನಾನು ನಿನಗೆ ನಿಜವಾಗಿ ಹೇಳುತ್ತೇನೆ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

30 ಯೇಸುವು ಆತನಿಗೆ, “ಸತ್ಯವಾಗಿ ಹೇಳುತ್ತೇನೆ ಇಂದು ಈ ರಾತ್ರಿಯಲ್ಲಿಯೇ ಕೋಳಿ ಎರಡು ಸಾರಿ ಕೂಗುವುದಕ್ಕಿಂತ ಮೊದಲು ಮೂರು ಸಾರಿ ನೀನು ನನ್ನನ್ನು ನಿರಾಕರಿಸುವೆ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

30 ಅದಕ್ಕೆ ಯೇಸು, “ಇದೇ ರಾತ್ರಿ ಕೋಳಿ ಎರಡು ಸಾರಿ ಕೂಗುವ ಮೊದಲೇ, ‘ಆತನನ್ನು ನಾನರಿಯೆ’ ಎಂದು ನೀನು ಮೂರು ಸಾರಿ ನನ್ನನ್ನು ನಿರಾಕರಿಸುವೆ, ಇದು ಖಂಡಿತ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

30 ಯೇಸು - ನಿನಗೆ ಸತ್ಯವಾಗಿ ಹೇಳುತ್ತೇನೆ, ಈ ಹೊತ್ತು ಈ ರಾತ್ರಿಯಲ್ಲಿಯೇ ಕೋಳಿ ಎರಡು ಸಾರಿ ಕೂಗುವದಕ್ಕಿಂತ ಮುಂಚೆ ನೀನು ನನ್ನ ವಿಷಯದಲ್ಲಿ - ಅವನನ್ನು ಅರಿಯೆನೆಂಬದಾಗಿ ಮೂರು ಸಾರಿ ಹೇಳುವಿ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

30 ಯೇಸು, “ನಾನು ಸತ್ಯವನ್ನು ಹೇಳುತ್ತೇನೆ. ಈ ರಾತ್ರಿ ಕೋಳಿ ಎರಡು ಸಾರಿ ಕೂಗುವುದಕ್ಕಿಂತ ಮುಂಚೆ ನೀನು ಮೂರು ಸಾರಿ, ನನ್ನನ್ನು ನೀನು ತಿಳಿದೇ ಇಲ್ಲವೆಂದು ಹೇಳುವೆ” ಎಂದು ಉತ್ತರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

30 ತನ್ನಾ ಜೆಜುನ್ “ಮಿಯಾ ತುಕಾ ಸಾಂಗ್ತಾ, ಆಜ್ ರಾಚ್ಚೆ ದೊನ್ದಾ ಕೊಂಬೊ ಭೊಕುಚ್ಯಾ ಅದ್ದಿ, ತಿಯಾ ತಿನ್ದಾ ಮಾಜಿ ತುಕಾ ಒಳಕುಚ್ ನಾ ಮನುನ್ ಸಾಂಗ್ತೆ”, ಮನುನ್ ಸಾಂಗ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 14:30
17 ತಿಳಿವುಗಳ ಹೋಲಿಕೆ  

ಯೇಸು ಅವನಿಗೆ, “ನೀನು ನನಗಾಗಿ ನಿನ್ನ ಪ್ರಾಣವನ್ನೇ ಕೊಡುವೆಯೋ? ನಾನು ನಿನಗೆ ನಿಜನಿಜವಾಗಿ ಹೇಳುತ್ತೇನೆ, ನೀನು ನನ್ನನ್ನು ಮೂರು ಸಾರಿ ನಿರಾಕರಿಸುವ ತನಕ ಹುಂಜ ಕೂಗುವುದೇ ಇಲ್ಲ,” ಎಂದರು.


ಆದಕಾರಣ ದೃಢವಾಗಿ ನಿಂತಿದ್ದೇವೆಂದು ಭಾವಿಸುವ ನೀವು ಬೀಳದಿರುವಂತೆ ನೋಡಿಕೊಳ್ಳಿರಿ.


ಆಗ ದ್ವಾರಪಾಲಕಿಯು ಪೇತ್ರನಿಗೆ, “ನೀನು ಸಹ ಯೇಸುವಿನ ಶಿಷ್ಯರಲ್ಲಿ ಒಬ್ಬನಲ್ಲವೇ?” ಎಂದು ಕೇಳಲು, ಅದಕ್ಕವನು, “ನಾನಲ್ಲ,” ಎಂದನು.


ಆಗ ಯೇಸು, “ಪೇತ್ರನೇ, ನೀನು ನನ್ನನ್ನು ಅರಿಯೆನೆಂದು ಮೂರು ಸಾರಿ ಅಲ್ಲಗಳೆಯುವುದಕ್ಕಿಂತ ಮುಂಚೆ, ಈ ದಿವಸ ಹುಂಜ ಕೂಗುವುದಿಲ್ಲ ಎಂದು ನಿನಗೆ ಹೇಳುತ್ತೇನೆ,” ಎಂದರು.


ದೇವರು ಆ ಗುಮ್ಮಟಕ್ಕೆ ಆಕಾಶ ಎಂದು ಕರೆದರು. ಹೀಗೆ ಸಾಯಂಕಾಲವೂ ಉದಯಕಾಲವೂ ಆಗಿ ಎರಡನೆಯ ದಿನವಾಯಿತು.


ದೇವರು ಬೆಳಕಿಗೆ ಹಗಲು ಎಂದೂ ಕತ್ತಲೆಗೆ ರಾತ್ರಿ ಎಂದೂ ಕರೆದರು. ಆಗ ಸಾಯಂಕಾಲವೂ ಉದಯಕಾಲವೂ ಆಗಿ ಮೊದಲನೆಯ ದಿನವಾಯಿತು.


ಹೀಗೆ ಸಾಯಂಕಾಲವೂ ಉದಯಕಾಲವೂ ಆಗಿ ಐದನೆಯ ದಿನವಾಯಿತು.


ಹೀಗೆ ಸಾಯಂಕಾಲವೂ ಉದಯಕಾಲವೂ ಆಗಿ ನಾಲ್ಕನೆಯ ದಿನವಾಯಿತು.


ಹೀಗೆ ಸಾಯಂಕಾಲವೂ ಉದಯಕಾಲವೂ ಆಗಿ ಮೂರನೆಯ ದಿನವಾಯಿತು.


ಯೇಸು ಅವನಿಗೆ, “ಈ ರಾತ್ರಿಯಲ್ಲಿ ಹುಂಜ ಕೂಗುವುದಕ್ಕಿಂತ ಮುಂಚೆ, ನೀನು ಮೂರು ಸಾರಿ ನನ್ನನ್ನು ನಿರಾಕರಿಸುವೆ ಎಂದು ನಾನು ನಿನಗೆ ಸತ್ಯವಾಗಿ ಹೇಳುತ್ತೇನೆ,” ಎಂದರು.


“ಆದ್ದರಿಂದ ಜಾಗರೂಕರಾಗಿರಿ. ಮನೆಯಜಮಾನನು ಸಂಜೆಯಲ್ಲಿಯೋ ಮಧ್ಯರಾತ್ರಿಯಲ್ಲಿಯೋ ಹುಂಜ ಕೂಗುವಾಗಲೋ ಬೆಳಕಾಗುವಾಗಲೋ, ಯಾವಾಗ ಬರುತ್ತಾನೋ ನಿಮಗೆ ಗೊತ್ತಿಲ್ಲ.


ಪೇತ್ರನು ಯೇಸುವಿಗೆ, “ಎಲ್ಲರೂ ನಿಮ್ಮನ್ನು ಬಿಟ್ಟು ಹೋದರೂ ನಾನು ನಿಮ್ಮನ್ನು ಬಿಟ್ಟು ಹೋಗುವುದಿಲ್ಲ,” ಎಂದು ಹೇಳಿದನು.


ಅದಕ್ಕೆ ಪೇತ್ರನು, “ನಾನು ನಿಮ್ಮೊಂದಿಗೆ ಸಾಯಬೇಕಾದರೂ ನಿಮ್ಮನ್ನು ನಿರಾಕರಿಸುವುದೇ ಇಲ್ಲ,” ಎಂದು ಬಹು ಆವೇಶದಿಂದ ಹೇಳಿದನು. ಅದರಂತೆಯೇ ಶಿಷ್ಯರೆಲ್ಲರೂ ಹೇಳಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು