Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 14:49 - ಕನ್ನಡ ಸಮಕಾಲಿಕ ಅನುವಾದ

49 ನಾನು ಪ್ರತಿದಿನವೂ ದೇವಾಲಯದಲ್ಲಿ ಬೋಧಿಸುತ್ತಾ ನಿಮ್ಮ ಸಂಗಡ ಇದ್ದೆನು. ಆಗ ನೀವು ನನ್ನನ್ನು ಬಂಧಿಸಲಿಲ್ಲ. ಆದರೆ ಪವಿತ್ರ ವೇದಗಳಲ್ಲಿ ಬರೆದಿದ್ದು ನೆರವೇರಲೇಬೇಕು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

49 ನಾನು ಪ್ರತಿದಿನವು ನಿಮ್ಮ ಸಂಗಡ ಇದ್ದು ದೇವಾಲಯದಲ್ಲಿ ಬೋಧಿಸುತ್ತಿದ್ದಾಗ ನೀವು ನನ್ನನ್ನು ಬಂಧಿಸಲಿಲ್ಲ. ಆದರೆ ಶಾಸ್ತ್ರದಲ್ಲಿ ಬರೆದದ್ದು ನೆರವೇರುವಂತೆ ಹೀಗೆಲ್ಲಾ ಆಯಿತು” ಎಂದು ಉತ್ತರ ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

49 ಆದರೆ ಪವಿತ್ರಗ್ರಂಥದಲ್ಲಿ ಬರೆದಿರುವುದು ನೆರವೇರುವಂತೆ ಇದೆಲ್ಲಾ ಸಂಭವಿಸಿದೆ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

49 ನಾನು ದಿನಾಲು ನಿಮ್ಮ ಸಂಗಡ ಇದ್ದು ದೇವಾಲಯದಲ್ಲಿ ಬೋಧಿಸುತ್ತಿದ್ದಾಗ ನೀವು ನನ್ನನ್ನು ಹಿಡಿಯಲಿಲ್ಲ. ಆದರೆ ಶಾಸ್ತ್ರ ವಚನಗಳು ನೆರವೇರುವಂತೆ ಇದೆಲ್ಲಾ ಆಯಿತು ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

49 ಪ್ರತಿದಿನ ದೇವಾಲಯದಲ್ಲಿ ನಾನು ಉಪದೇಶಿಸುತ್ತಾ ನಿಮ್ಮೊಡನೆ ಇದ್ದೆನು. ಅಲ್ಲಿ ನೀವು ನನ್ನನ್ನು ಬಂಧಿಸಲಿಲ್ಲ. ಆದರೆ ಈ ಎಲ್ಲಾ ಸಂಗತಿಗಳು ಪವಿತ್ರಗ್ರಂಥದಲ್ಲಿ ಬರೆದಿರುವಂತೆ ನಡೆದಿವೆ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

49 ಮಿಯಾ ಸದ್ದಿಚ್ ದೆವಾಚ್ಯಾ ಗುಡಿತ್ ಸಿಕ್ವುನ್ಗೆತ್ ಹೊತ್ತೊ, ಥೈ ತುಮಿ ಮಾಕಾ ಧರುಕ್ನ್ಯಾಸಿ,ಖರೆ ಹೆ ಸಗ್ಳೆ ಪವಿತ್ರ್ ಪುಸ್ತಕಾತ್ ಸಾಂಗಲ್ಲ್ಯಾ ಬಾಸೆನ್ ಹೊಲೆ ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 14:49
27 ತಿಳಿವುಗಳ ಹೋಲಿಕೆ  

ಯೇಸು ಅವನಿಗೆ, “ನಾನು ಬಹಿರಂಗವಾಗಿ ಲೋಕದ ಮುಂದೆ ಮಾತನಾಡಿದ್ದೇನೆ. ಯೆಹೂದ್ಯರೆಲ್ಲರು ಕೂಡಿಬರುವ ಸಭಾಮಂದಿರದಲ್ಲಿಯೂ ದೇವಾಲಯದಲ್ಲಿಯೂ ನಾನು ಯಾವಾಗಲೂ ಉಪದೇಶಿಸುತ್ತಿದ್ದೆನು. ನಾನು ಮುಚ್ಚುಮರೆಯಾಗಿ ಏನೂ ಮಾತನಾಡಲಿಲ್ಲ.


ಬೆಳಿಗ್ಗೆ ಯೇಸು ತಿರುಗಿ ದೇವಾಲಯಕ್ಕೆ ಬಂದಾಗ ಎಲ್ಲಾ ಜನರು ಅವರ ಬಳಿಗೆ ಬಂದರು. ಯೇಸು ಕುಳಿತುಕೊಂಡು ಅವರಿಗೆ ಬೋಧಿಸಿದರು.


ಏಕೆಂದರೆ, ‘ಆತನು ಪಾತಕರಲ್ಲಿ ಒಬ್ಬನಂತೆ ಎಣಿಸಿಕೊಂಡನು,’ ಎಂಬುದಾಗಿ ಪವಿತ್ರ ವೇದದಲ್ಲಿ ಬರೆದಿರುವುದೆಲ್ಲವೂ ನೆರವೇರಬೇಕು ಎಂದು ನಾನು ನಿಮಗೆ ಹೇಳುತ್ತೇನೆ. ಹೌದು, ನನ್ನ ವಿಷಯವಾಗಿ ಬರೆದದ್ದು ನೆರವೇರಲಿದೆ,” ಎಂದರು.


ಯೇಸು ದೇವಾಲಯದಲ್ಲಿ ಬೋಧಿಸುತ್ತಿದ್ದಾಗ, “ಕ್ರಿಸ್ತನು ದಾವೀದನ ಪುತ್ರನು ಎಂದು ನಿಯಮ ಬೋಧಕರು ಹೇಳುತ್ತಿರುವುದು ಹೇಗೆ?


ಆದರೆ ಪವಿತ್ರ ವೇದದ ಪ್ರವಾದನೆಗಳು ನೆರವೇರುವಂತೆ ಇದೆಲ್ಲಾ ಆಯಿತು,” ಎಂದು ಹೇಳಿದರು. ಆಗ ಶಿಷ್ಯರೆಲ್ಲರೂ ಯೇಸುವನ್ನು ಬಿಟ್ಟು ಓಡಿಹೋದರು.


ಹಾಗಾದರೆ ಇವುಗಳು ಹೀಗೆಯೇ ಆಗಬೇಕೆಂಬ ಪವಿತ್ರ ವೇದದ ವಾಕ್ಯಗಳು ನೆರವೇರುವುದು ಹೇಗೆ?” ಎಂದರು.


ದೇವರು ತಮ್ಮ ಪ್ರವಾದಿಯ ಮುಖಾಂತರ ಹೇಳಿದ ಈ ಮಾತು ನೆರವೇರುವಂತೆ ಇದೆಲ್ಲಾ ನಡೆಯಿತು:


ಯೇಸು ದೇವಾಲಯದೊಳಗೆ ಸೊಲೊಮೋನನ ಮಂಟಪದಲ್ಲಿ ತಿರುಗಾಡುತ್ತಿದ್ದರು.


ಯೇಸು ಪುನಃ ಜನರೊಂದಿಗೆ ಮಾತನಾಡುತ್ತಾ, “ನಾನೇ ಲೋಕದ ಬೆಳಕಾಗಿದ್ದೇನೆ. ನನ್ನನ್ನು ಹಿಂಬಾಲಿಸುವವರು ಎಂದಿಗೂ ಕತ್ತಲೆಯಲ್ಲಿ ನಡೆಯುವುದಿಲ್ಲ. ಅವರು ಜೀವದ ಬೆಳಕನ್ನು ಹೊಂದಿರುವರು,” ಎಂದು ಹೇಳಿದರು.


ಹಬ್ಬದ ಆ ಮಹಾದಿವಸವಾದ ಕಡೆಯ ದಿನದಲ್ಲಿ ಯೇಸು ನಿಂತುಕೊಂಡು, “ಯಾರಿಗಾದರೂ ಬಾಯಾರಿಕೆಯಾಗಿದ್ದರೆ ಅವರು ನನ್ನ ಬಳಿಗೆ ಬಂದು ಕುಡಿಯಲಿ.


ಯೇಸು ಪ್ರತಿದಿನವೂ ದೇವಾಲಯದಲ್ಲಿ ಬೋಧಿಸುತ್ತಿದ್ದರು. ಆದರೆ ಮುಖ್ಯಯಾಜಕರೂ ನಿಯಮ ಬೋಧಕರೂ ಜನರ ಪ್ರಮುಖರೂ ಯೇಸುವನ್ನು ಕೊಲ್ಲುವುದಕ್ಕೆ ಹವಣಿಸುತ್ತಿದ್ದರು.


ಯೇಸು ಮತ್ತು ಶಿಷ್ಯರು ಪುನಃ ಯೆರೂಸಲೇಮಿಗೆ ಬಂದರು. ಯೇಸು ದೇವಾಲಯದಲ್ಲಿ ತಿರುಗಾಡುತ್ತಿರುವಾಗ, ಮುಖ್ಯಯಾಜಕರೂ ನಿಯಮ ಬೋಧಕರೂ ಹಿರಿಯರೂ ಯೇಸುವಿನ ಬಳಿಗೆ ಬಂದು


ಅದೇ ಗಳಿಗೆಯಲ್ಲಿ ಯೇಸು ಜನಸಮೂಹಕ್ಕೆ, “ಒಬ್ಬ ಕಳ್ಳನನ್ನು ಹಿಡಿಯುವುದಕ್ಕೆ ಬರುವಂತೆ ಖಡ್ಗಗಳೊಂದಿಗೆ ದೊಣ್ಣೆಗಳೊಂದಿಗೆ ನನ್ನನ್ನು ಹಿಡಿಯುವುದಕ್ಕಾಗಿ ಬಂದಿರಾ? ನಾನು ದಿನಾಲು ನಿಮ್ಮ ಸಂಗಡ ದೇವಾಲಯದಲ್ಲಿ ಕುಳಿತುಕೊಂಡು ಬೋಧಿಸುತ್ತಿದ್ದಾಗ, ನೀವು ನನ್ನನ್ನು ಹಿಡಿಯಲಿಲ್ಲ.


ಯೇಸು ಅಲ್ಲಿಂದ ಹೊರಟು ಯೊರ್ದನ್ ನದಿಯ ಆಚೆಯ ಯೂದಾಯ ಪ್ರಾಂತಕ್ಕೆ ಬಂದರು. ಅಲ್ಲಿ ಜನರು ತಿರುಗಿ ಅವರ ಬಳಿಗೆ ಬರಲು, ಯೇಸು ತಮ್ಮ ವಾಡಿಕೆಯಂತೆ ಅವರಿಗೆ ಮತ್ತೆ ಬೋಧಿಸಿದರು.


ಯೇಸು ಅವರಿಗೆ, “ಖಡ್ಗಗಳನ್ನು ಮತ್ತು ದೊಣ್ಣೆಗಳನ್ನು ತೆಗೆದುಕೊಂಡು ದಂಗೆಗಾರನನ್ನು ಹಿಡಿಯುವುದಕ್ಕಾಗಿ ಬರುವಂತೆ ನನ್ನನ್ನು ಹಿಡಿಯುವುದಕ್ಕಾಗಿ ಬಂದಿರಾ?


ಆಗ ಶಿಷ್ಯರೆಲ್ಲರೂ ಯೇಸುವನ್ನು ಬಿಟ್ಟು ಓಡಿಹೋದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು