Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 14:58 - ಕನ್ನಡ ಸಮಕಾಲಿಕ ಅನುವಾದ

58 “ ‘ಕೈಯಿಂದ ಕಟ್ಟಿರುವ ಈ ದೇವಾಲಯವನ್ನು ನಾನು ಕೆಡವಿಬಿಟ್ಟು ಕೈಯಿಂದ ಕಟ್ಟದಿರುವ ಮತ್ತೊಂದನ್ನು ಮೂರು ದಿನಗಳಲ್ಲಿ ಕಟ್ಟುವೆನು,’ ಎಂದು ಈತನು ಹೇಳಿದ್ದನ್ನು ನಾವು ಕೇಳಿಸಿಕೊಂಡಿದ್ದೇವೆ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

58 “ಈ ಮನುಷ್ಯನು, ‘ಕೈಯಿಂದ ಕಟ್ಟಿದ ಈ ದೇವಾಲಯವನ್ನು ಕೆಡವಿ ಮೂರು ದಿನಗಳಲ್ಲಿ ಕೈಯಿಂದ ಕಟ್ಟಿಲ್ಲದ ಇನ್ನೊಂದು ದೇವಾಲಯವನ್ನು ಕಟ್ಟುತ್ತೇನೆ’ ಎಂದು ಹೇಳಿದ್ದನ್ನು ನಾವು ಕೇಳಿದೆವು” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

58 ಹ್ಯೊ ಮಾನುಸ್, ಮಾನ್ಸಾನಿ ಭಾಂದಲ್ಲಿ ದೆವಾಚಿ ಗುಡಿ ಮೊಡುನ್, ತಿನ್ ದಿಸಾ ಹೊಲ್ಲ್ಯಾ ಮಾನಾ “ಮಿಯಾ ತಿ ಭಾಂದ್ತಾ” ಖರೆ ಮಾನ್ಸಾನ್ ಭಾಂಧಲ್ಲ್ಯಾ ಸರ್ಕೆ ನ್ಹಯ್, ಮನುನ್ ಸಾಂಗ್ತಲೆ ಅಮಿ ಆಯ್ಕ್ಲಾಂವ್,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 14:58
11 ತಿಳಿವುಗಳ ಹೋಲಿಕೆ  

ಆದರೆ ಕ್ರಿಸ್ತ ಯೇಸು ಈಗಾಗಲೇ ಮಹಾಯಾಜಕರಾಗಿ ಬಂದಿದ್ದಾರೆ. ಅವರು ಕೊಡುವ ಒಳ್ಳೆಯವುಗಳು ಈಗಾಗಲೇ ನಮಗೆ ದೊರೆತಿವೆ. ಅವರು ಹಿಂದಿನವುಗಳಿಗಿಂತಲೂ ಶ್ರೇಷ್ಠವಾದದ್ದೂ ಪರಿಪೂರ್ಣವಾದದ್ದೂ ಆಗಿರುವ ಗುಡಾರವನ್ನು ಅಂದರೆ ಕೈಯಿಂದ ಕಟ್ಟಿರದಂತದ್ದೂ ಇಹಲೋಕದ ಸೃಷ್ಟಿಗೆ ಸಂಬಂಧಪಟ್ಟಿರದಂತದ್ದೂ ಆಗಿರುವ ಗುಡಾರವನ್ನು ಪ್ರವೇಶಿಸಿದರು.


ನಾವು ಜೀವಿಸುತ್ತಿರುವ ನಮ್ಮ ದೇಹವೆಂಬ ಗುಡಾರವು ನಾಶವಾಗಿ ಹೋದರೂ, ಪರಲೋಕದಲ್ಲಿ ಶಾಶ್ವತವಾದ ನಿವಾಸವು ನಮಗೆ ಉಂಟೆಂದು ಬಲ್ಲೆವು. ಅದು ಮಾನವರ ಕೈಯಿಂದ ಕಟ್ಟಿದ ನಿವಾಸವಲ್ಲ, ದೇವರಿಂದಲೇ ನಿರ್ಮಿತವಾದದ್ದಾಗಿದೆ.


ಅದಕ್ಕೆ ಯೇಸು ಅವರಿಗೆ, “ಈ ದೇವಾಲಯವನ್ನು ಕೆಡವಿರಿ. ನಾನು ಮೂರು ದಿನಗಳಲ್ಲಿ ಅದನ್ನು ಎಬ್ಬಿಸುವೆನು,” ಎಂದು ಉತ್ತರಕೊಟ್ಟರು.


ಏಕೆಂದರೆ ಕ್ರಿಸ್ತ ಯೇಸು ನಿಜ ದೇವಾಲಯದ ಪ್ರತಿರೂಪದಂತಿರುವ, ಕೈಯಿಂದ ಕಟ್ಟಿದ ಪವಿತ್ರ ಸ್ಥಳವನ್ನು ಪ್ರವೇಶಿಸದೆ, ದೇವರ ಸನ್ನಿಧಿಯಲ್ಲಿ ನಮಗೋಸ್ಕರ ಈಗ ಕಾಣಿಸಿಕೊಳ್ಳುವಂತೆ ಪರಲೋಕದಲ್ಲಿಯೇ ಪ್ರವೇಶಿಸಿದರು.


“ಹೀಗಿದ್ದರೂ ಮಹೋನ್ನತ ದೇವರು ಮಾನವರು ನಿರ್ಮಿಸಿದ ಆಲಯಗಳಲ್ಲಿ ವಾಸಮಾಡುವುದಿಲ್ಲ. ಪ್ರವಾದಿಯು ಹೇಳಿದಂತೆ:


ಅಲ್ಲಿ ಹಾದು ಹೋಗುತ್ತಿದ್ದವರು ಯೇಸುವನ್ನು ದೂಷಿಸಿ, ತಮ್ಮ ತಲೆಗಳನ್ನು ಅಲ್ಲಾಡಿಸುತ್ತಾ, “ದೇವಾಲಯವನ್ನು ಕೆಡವಿ ಮೂರು ದಿನಗಳಲ್ಲಿ ಕಟ್ಟುವವನೇ,


ನೀವು ನೋಡುತ್ತಿರಲಾಗಿ, ಒಂದು ಗುಂಡು ಬಂಡೆಯು ಮಾನವ ಹಸ್ತದ ಸಹಾಯವಿಲ್ಲದೆ ಒಡೆದು, ಅರ್ಧ ಕಬ್ಬಿಣವೂ ಅರ್ಧ ಮಣ್ಣೂ ಆಗಿದ್ದ ಆ ವಿಗ್ರಹದ ಪಾದಗಳಿಗೆ ಬಡಿದು ಚೂರುಚೂರು ಮಾಡಿತು.


ಮಾನವ ಹಸ್ತಗಳಿಲ್ಲದೆ, ಆದರೆ ಬೆಟ್ಟದೊಳಗಿಂದ ಕಡಿದು ತೆಗೆದ ಗುಂಡು ಬಂಡೆಯು ಕಬ್ಬಿಣವನ್ನೂ, ಕಂಚನ್ನೂ, ಮಣ್ಣನ್ನೂ, ಬೆಳ್ಳಿಯನ್ನೂ ಹಾಗೂ ಬಂಗಾರವನ್ನೂ ತುಂಡುತುಂಡಾಗಿ ಮಾಡಿದ ಆ ಗುಂಡು ಕಲ್ಲಿನ ದರ್ಶನವು ಇದೆ. “ಇದರಿಂದ ಭವಿಷ್ಯದಲ್ಲಿ ಏನಾಗುತ್ತದೆ ಎಂಬುದನ್ನು ಮಹಾ ದೇವರು ಅರಸನಿಗೆ ತೋರಿಸಿದ್ದಾರೆ. ಕನಸು ನಿಜವಾದದ್ದು, ಅದರ ಅರ್ಥವು ನಂಬತಕ್ಕದ್ದು,” ಎಂದನು.


“ನಾನು ದೇವಾಲಯವನ್ನು ಕೆಡವಿ ಮೂರು ದಿನಗಳಲ್ಲಿ ಕಟ್ಟಬಲ್ಲೆನೆಂದು ಈತನು ಹೇಳಿದನು,” ಎಂದರು.


ತರುವಾಯ ಕೆಲವರು ಎದ್ದು ಯೇಸುವಿಗೆ ವಿರೋಧವಾಗಿ ಸಾಕ್ಷಿ ಹೇಳುತ್ತಾ,


ಹೀಗಿದ್ದರೂ ಅವರ ಸಾಕ್ಷಿ ಒಂದಕ್ಕೊಂದು ಒಪ್ಪಿಗೆಯಾಗಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು