Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 15:14 - ಕನ್ನಡ ಸಮಕಾಲಿಕ ಅನುವಾದ

14 ಆಗ ಪಿಲಾತನು ಅವರಿಗೆ, “ಏಕೆ? ಆತನು ಯಾವ ಅಪರಾಧ ಮಾಡಿದ್ದಾನೆ?” ಎಂದು ಕೇಳಲು ಅವರು, “ಆತನನ್ನು ಶಿಲುಬೆಗೆ ಹಾಕಿಸು,” ಎಂದು ಮತ್ತಷ್ಟು ಹೆಚ್ಚಾಗಿ ಕೂಗಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಪಿಲಾತನು, “ಏಕೆ? ಇವನು ಏನು ಅಪರಾಧ ಮಾಡಿದ್ದಾನೆ?” ಅಂದನು. ಆದರೆ ಅವರು, “ಅವನನ್ನು ಶಿಲುಬೆಗೆ ಹಾಕಿಸು” ಎಂದು ಇನ್ನೂ ಹೆಚ್ಚಾಗಿ ಆರ್ಭಟಿಸಿ ಕೂಗಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 “ಏಕೆ ಇವನೇನು ಮಾಡಿದ್ದಾನೆ?” ಎಂದು ಪಿಲಾತನು ಮತ್ತೆ ಅವರನ್ನು ಪ್ರಶ್ನಿಸಲು ಅವರು, “ಅವನನ್ನು ಶಿಲುಬೆಗೇರಿಸಿ, ಶಿಲುಬೆಗೇರಿಸಿ,” ಎಂದು ಇನ್ನೂ ಹೆಚ್ಚಾಗಿ ಆರ್ಭಟಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಪಿಲಾತನು - ಯಾಕೆ? ಕೆಟ್ಟದ್ದೇನು ಮಾಡಿದನು? ಅಂದನು. ಆದರೆ ಅವರು - ಅವನನ್ನು ಶಿಲುಬೆಗೆ ಹಾಕಿಸು ಎಂದು ಬಹಳವಾಗಿ ಆರ್ಭಟಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಪಿಲಾತನು, “ಏಕೆ? ಅವನು ಯಾವ ಅಪರಾಧ ಮಾಡಿದ್ದಾನೆ?” ಎಂದು ಕೇಳಿದನು. ಅದಕ್ಕೆ ಜನರು, “ಅವನನ್ನು ಶಿಲುಬೆಗೇರಿಸು!” ಎಂದು ಜೋರಾಗಿ ಆರ್ಭಟಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

14 ಖರೆ ಪಿಲಾತಾನ್ “ತೆನಿ ಕಾಯ್ ಚುಕ್ ಕರ್‍ಲ್ಯಾನಾಯ್?” ಮನುನ್ ಇಚಾರ್‍ಲ್ಯಾನ್. ಖರೆ ತೆನಿ ಜೊರಾನ್ “ತೆಕಾ ಕುರ್ಸಾ ವರ್ತಿ ಮಾರ್” ಮನುನ್ ಬೊಬ್ ಮಾರ್‍ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 15:14
24 ತಿಳಿವುಗಳ ಹೋಲಿಕೆ  

ನಮಗಾದರೋ ನಮ್ಮ ಕೃತ್ಯಕ್ಕೆ ತಕ್ಕ ಶಿಕ್ಷೆ ನ್ಯಾಯವಾಗಿ ಸಿಕ್ಕಿದೆ. ಈತನಾದರೋ ತಪ್ಪಾದದ್ದೇನೂ ಮಾಡಲಿಲ್ಲ,” ಎಂದನು.


ಅದು ಪೂರ್ಣಾಂಗವಾದ ನಿಷ್ಕಳಂಕ ಕುರಿಮರಿಯಾಗಿರುವ ಕ್ರಿಸ್ತ ಯೇಸುವಿನ ಅಮೂಲ್ಯ ರಕ್ತದಿಂದಲೇ.


ಪರಿಶುದ್ಧರು, ನಿರ್ದೋಷಿ, ನಿಷ್ಕಳಂಕರು, ಪಾಪಿಗಳಿಂದ ಪ್ರತ್ಯೇಕಿಸಲಾದವರೂ ಗಗನ ಮಂಡಲಗಳಿಗಿಂತ ಉನ್ನತಕ್ಕೇರಿದಾತರೂ ಆಗಿರುವ ಇಂಥಾ ಮಹಾಯಾಜಕ ನಮಗಿದ್ದಾರೆ.


ಆದರೆ ಅವನು ಯೆಹೂದ್ಯನೆಂದು ಜನರು ತಿಳಿದಾಗ, “ಎಫೆಸದ ಅರ್ತೆಮೀ ದೇವಿ ಮಹಾದೇವಿ!” ಎಂದು ಒಕ್ಕೊರಲಿನಿಂದ ಎರಡು ತಾಸುಗಳವರೆಗೆ ಆರ್ಭಟಿಸುತ್ತಲೇ ಇದ್ದರು.


ಮುಖ್ಯಯಾಜಕರೂ ಕಾವಲಾಳುಗಳೂ ಯೇಸುವನ್ನು ನೋಡಿದಾಗ, “ಶಿಲುಬೆಗೆ ಹಾಕಿಸು, ಶಿಲುಬೆಗೆ ಹಾಕಿಸು!” ಎಂದು ಕೂಗಿದರು. ಅದಕ್ಕೆ ಪಿಲಾತನು ಅವರಿಗೆ, “ನೀವೇ ಆತನನ್ನು ತೆಗೆದುಕೊಂಡುಹೋಗಿ ಶಿಲುಬೆಗೆ ಹಾಕಿರಿ. ಏಕೆಂದರೆ ನನಗೆ ಆತನಲ್ಲಿ ಯಾವ ಅಪರಾಧವೂ ಕಾಣಲಿಲ್ಲ,” ಎಂದನು.


ಪಿಲಾತನು ಯೇಸುವಿಗೆ, “ಸತ್ಯ ಎಂದರೇನು?” ಎಂದನು. ಅವನು ಇದನ್ನು ಕೇಳಿದ ಮೇಲೆ ತಿರುಗಿ ಯೆಹೂದ್ಯರ ಬಳಿಗೆ ಹೋಗಿ ಅವರಿಗೆ, “ನಾನು ಈತನಲ್ಲಿ ಯಾವ ಅಪರಾಧವನ್ನೂ ಕಾಣಲಿಲ್ಲ.


ಆಗ ಶತಾಧಿಪತಿಯು, ನಡೆದದ್ದನ್ನು ಕಂಡು, “ಈತನು ನೀತಿವಂತನೇ ಸರಿ,” ಎಂದು ಹೇಳಿ ದೇವರನ್ನು ಮಹಿಮೆಪಡಿಸಿದನು.


ಅವರಾದರೋ, “ಈತನನ್ನು ಶಿಲುಬೆಗೆ ಹಾಕಿಸು, ಈತನನ್ನು ಶಿಲುಬೆಗೆ ಹಾಕಿಸು!” ಎಂದು ಆರ್ಭಟಿಸತೊಡಗಿದರು.


ತರುವಾಯ ಪಿಲಾತನು, ಮುಖ್ಯಯಾಜಕರಿಗೂ ಜನರಿಗೂ, “ಈ ಮನುಷ್ಯನಲ್ಲಿ ನಾನು ಯಾವ ತಪ್ಪನ್ನೂ ಕಾಣಲಿಲ್ಲ,” ಎಂದನು.


ಆಗ ಶತಾಧಿಪತಿಯು ಮತ್ತು ಅವನ ಸಂಗಡ ಯೇಸುವನ್ನು ಕಾಯುತ್ತಿದ್ದವರು ಭೂಕಂಪವನ್ನೂ ಸಂಭವಿಸಿದ್ದೆಲ್ಲವನ್ನೂ ಕಂಡು ಬಹಳವಾಗಿ ಭಯಪಟ್ಟು, “ನಿಜವಾಗಿಯೂ ಈತನು ದೇವಪುತ್ರನಾಗಿದ್ದನು,” ಎಂದರು.


ಪಿಲಾತನು ನ್ಯಾಯಾಸನದ ಮೇಲೆ ಕೂತಿದ್ದಾಗ, ಅವನ ಹೆಂಡತಿಯು ಅವನಿಗೆ, “ನೀನು ಆ ನೀತಿವಂತನ ಗೊಡವೆಗೆ ಹೋಗಬೇಡ. ಈ ದಿವಸ ನಾನು ಸ್ವಪ್ನದಲ್ಲಿ ಆತನ ವಿಷಯವಾಗಿ ಬಹಳ ಕಷ್ಟಪಟ್ಟಿದ್ದೇನೆ,” ಎಂದು ಹೇಳಿ ಕಳುಹಿಸಿದಳು.


ಅವನು, “ನಾನು ನಿರಪರಾಧಿಯ ರಕ್ತಕ್ಕೆ ದ್ರೋಹ ಬಗೆದು ಪಾಪಮಾಡಿದ್ದೇನೆ,” ಎಂದನು. ಅದಕ್ಕೆ ಅವರು, “ನಮಗೇನು? ನೀನೇ ಅದನ್ನು ನೋಡಿಕೋ,” ಎಂದರು.


ಅವನು ಯಾವ ಅನ್ಯಾಯವನ್ನು ಮಾಡದಿದ್ದರೂ, ಅವನ ಬಾಯಲ್ಲಿ ಯಾವ ವಂಚನೆಯು ಇಲ್ಲದಿದ್ದರೂ, ಅವನು ಸತ್ತಾಗ ದುಷ್ಟರ ಮಧ್ಯೆ ಪುಷ್ಟರ ನಡುವೆ ಅವನನ್ನು ಹೂಣಿಟ್ಟರು.


ಆತನು ತಿರಸ್ಕೃತನೂ ಮಾನವಕುಲದಿಂದ ನಿರಾಕರಿಸಲಾದವನೂ, ದುಃಖಿತ ಮನುಷ್ಯನೂ, ನೋವನ್ನು ಅನುಭವಿಸಿದವನೂ ಆಗಿದ್ದನು. ನಾವು ನಮ್ಮ ಮುಖಗಳನ್ನು ಆತನಿಂದ ಮರೆಮಾಡಿಕೊಂಡೆವು. ಆತನು ಧಿಕ್ಕಾರಕ್ಕೆ ಒಳಗಾದವನೂ ಆಗಿದ್ದನು. ನಾವು ಆತನನ್ನು ಅತ್ಯಲ್ಪವಾಗಿ ಎಣಿಸಿದೆವು.


ಕಾರಣವಿಲ್ಲದೆ ನನ್ನನ್ನು ದ್ವೇಷಿಸುವವರು ನನ್ನ ತಲೆಗೂದಲುಗಳಿಗಿಂತ ಹೆಚ್ಚಾಗಿದ್ದಾರೆ. ನನ್ನನ್ನು ನಾಶಮಾಡ ಬಯಸುವವರೂ ಕಾರಣವಿಲ್ಲದೆ ನನಗೆ ಶತ್ರುಗಳಾಗಿದ್ದಾರೆ. ನಾನು ಅಪಹರಿಸದಿದ್ದರೂ ದಂಡ ಕೊಡಬೇಕಾಯಿತು.


ಅವರು, “ಆತನನ್ನು ಶಿಲುಬೆಗೆ ಹಾಕಿಸು,” ಎಂದು ಮತ್ತೆ ಕೂಗಿಕೊಂಡರು.


ಪಿಲಾತನು ಜನರನ್ನು ಮೆಚ್ಚಿಸಲು ಮನಸ್ಸುಳ್ಳವನಾಗಿ ಬರಬ್ಬನನ್ನು ಅವರಿಗೆ ಬಿಟ್ಟುಕೊಟ್ಟು ಯೇಸುವನ್ನು ಕೊರಡೆಗಳಿಂದ ಹೊಡೆಸಿ ಶಿಲುಬೆಗೆ ಹಾಕುವುದಕ್ಕೆ ಒಪ್ಪಿಸಿದನು.


ಮರಣದಂಡನೆ ವಿಧಿಸಲು ಯಾವುದೇ ಕಾರಣ ಸಿಗದಿದ್ದರೂ ಯೇಸುವನ್ನು ಕೊಲ್ಲಬೇಕೆಂದು ಪಿಲಾತನನ್ನು ಕೇಳಿಕೊಂಡರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು