ಮಾರ್ಕ 15:36 - ಕನ್ನಡ ಸಮಕಾಲಿಕ ಅನುವಾದ36 ಆಗ ಒಬ್ಬನು ಓಡಿಹೋಗಿ ಹೀರುವ ವಸ್ತುವಿನಿಂದ ಹುಳಿರಸದಲ್ಲಿ ಅದ್ದಿ ಒಂದು ಕೋಲಿಗೆ ಸಿಕ್ಕಿಸಿ ಯೇಸುವಿಗೆ ಕುಡಿಯಲು ಕೊಟ್ಟು, “ಬಿಡಿರಿ, ಈತನನ್ನು ಕೆಳಗೆ ಇಳಿಸುವುದಕ್ಕೆ ಎಲೀಯನು ಬರುವನೋ ನೋಡೋಣ,” ಎಂದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201936 ಆಗ ಒಬ್ಬನು ಓಡಿಹೋಗಿ ಸ್ಪಂಜಿನಿಂದ ಹುಳಿ ದ್ರಾಕ್ಷಾರಸವನ್ನು ತುಂಬಿ ಕೋಲಿನ ತುದಿಗೆ ಸಿಕ್ಕಿಸಿ, “ಇವನನ್ನು ಶಿಲುಬೆಯಿಂದ ಬಿಡುಗಡೆ ಮಾಡಿ ಇಳಿಸುವುದಕ್ಕೆ ಎಲೀಯನು ಬರುವನೋ, ಏನೋ ಕಾದು ನೋಡೋಣ” ಎಂದು ಹೇಳಿ ಅದನ್ನು ಕುಡಿಯುವುದಕ್ಕೆ ಆತನಿಗೆ ಕೊಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)36 ಆಗ ಅವರಲ್ಲೊಬ್ಬನು ಓಡಿಹೋಗಿ, ಸ್ಪಂಜನ್ನು ಹುಳಿರಸದಲ್ಲಿ ತೋಯಿಸಿ, ಅದನ್ನು ಒಂದು ಕೋಲಿನ ತುದಿಗೆ ಸಿಕ್ಕಿಸಿ, ಯೇಸುವಿಗೆ ಕುಡಿಯಲು ಕೊಡುತ್ತಾ, “ತಾಳಿ, ಇವನನ್ನು ಶಿಲುಬೆಯಿಂದ ಬಿಡುಗಡೆಮಾಡಿ ಇಳಿಸುವುದಕ್ಕೆ ಎಲೀಯನು ಬರುವನೋ, ನೋಡೋಣ,” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)36 ಆಗ ಒಬ್ಬನು ಓಡಿಹೋಗಿ ಸ್ಪಂಜನ್ನು ಹುಳಿರಸದಿಂದ ತುಂಬಿಸಿ ಕೋಲಿಗೆ ಸಿಕ್ಕಿಸಿ ಆತನಿಗೆ ಕುಡಿಯುವದಕ್ಕೆ ಕೊಟ್ಟು - ಬಿಡಿರಿ, ಎಲೀಯನು ಇವನನ್ನು ಇಳಿಸುವದಕ್ಕೆ ಬರುವನೇನೋ ನೋಡೋಣ ಅಂದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್36 ಅಲ್ಲಿದ್ದ ಒಬ್ಬನು ಓಡಿಹೋಗಿ, ಸ್ಪಂಜನ್ನು ತೆಗೆದುಕೊಂಡು ಅದನ್ನು ಹುಳಿರಸದಿಂದ ತುಂಬಿಸಿ, ಒಂದು ಕೋಲಿಗೆ ಕಟ್ಟಿ ಯೇಸುವಿಗೆ ಕುಡಿಯಲು ಕೊಡುತ್ತಾ, “ಎಲೀಯನು ಇವನನ್ನು ಶಿಲುಬೆಯಿಂದ ಕೆಳಗಿಳಿಸಲು ಬರಬಹುದೇನೋ ನಾವು ಕಾಯ್ದು ನೋಡಬೇಕು” ಎಂದನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್36 ತನ್ನಾ ಥೈ ಹೊತ್ತೊ ಎಕ್ಲೊ ಪಳುನ್ ಗೆಲೊ ಅನಿ ಪಾನಿ ವೊಡುನ್ ಘೆತಲೊ ಕಾಪ್ಸಾ ಸರ್ಕೊ ಕಪ್ಡೊ ಘೆವ್ನ್ ಅಂಬೊಟ್ಲ್ಯಾ ವಾಯ್ನಾತ್ ಬುಡ್ವುನ್ ಎಕ್ ಝಲ್ಲೆಕ್ ಶಿರ್ಕುನ್ ಜೆಜುಚ್ಯಾ ಹೊಟ್ಟಾಕ್ನಿ ಲಾವುನ್ಗೆತ್ “ಎಲಿಯಾ ತೆಕಾ ಕುರ್ಸಾ ವೈನಾ ಖಾಲ್ತಿ ಉತ್ರುಕ್ ಯೆತಾ ಕಾಯ್ ಬಗುವಾ” ಮಟ್ಲ್ಯಾನ್. ಅಧ್ಯಾಯವನ್ನು ನೋಡಿ |