Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 15:43 - ಕನ್ನಡ ಸಮಕಾಲಿಕ ಅನುವಾದ

43 ಗೌರವವುಳ್ಳವನೂ ಆಲೋಚನಾಸಭೆಯ ಸದಸ್ಯನೂ ದೇವರ ರಾಜ್ಯಕ್ಕಾಗಿ ಕಾಯುತ್ತಿದ್ದವನೂ ಆದ ಅರಿಮಥಾಯದ ಯೋಸೇಫನು ಧೈರ್ಯದಿಂದ ಪಿಲಾತನ ಬಳಿಗೆ ಹೋಗಿ ಯೇಸುವಿನ ದೇಹಕ್ಕಾಗಿ ಬೇಡಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

43 ಹೀಗಿರಲಾಗಿ ಅರಿಮಥಾಯದ ಯೋಸೇಫನೆಂಬುವನು ಅಲ್ಲಿಗೆ ಬಂದನು. ಅವನು ಯೆಹೂದ್ಯರ ಹಿರೀಸಭೆಯ ಗೌರವಸ್ಥನಾದ ಸದ್ಯಸನೂ, ದೇವರ ರಾಜ್ಯವನ್ನು ಎದುರುನೋಡುತ್ತಿದ್ದವನು ಆಗಿದ್ದನು. ಅವನು ಧೈರ್ಯದಿಂದ ಪಿಲಾತನ ಬಳಿಗೆ ಹೋಗಿ ಯೇಸುವಿನ ದೇಹವನ್ನು ತನಗೆ ಕೊಡಿಸಬೇಕೆಂದು ಬೇಡಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

43 ತನಗೆ ಕೊಡಿಸಬೇಕೆಂದು ಪಿಲಾತನನ್ನು ಕೇಳಿಕೊಂಡನು. ದೇವರ ಸಾಮ್ರಾಜ್ಯದ ಆಗಮನವನ್ನು ನಿರೀಕ್ಷಿಸುತ್ತಿದ್ದ ಈತನು ಯೆಹೂದ್ಯರ ನ್ಯಾಯಸಭೆಯ ಸನ್ಮಾನಿತ ಸದಸ್ಯನಾಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

43 ಹೀಗಿರಲಾಗಿ ಅರಿಮಥಾಯದ ಯೋಸೇಫನೆಂಬವನು ಬಂದು ಧೈರ್ಯದಿಂದ ಪಿಲಾತನ ಬಳಿಗೆ ಹೋಗಿ ಯೇಸುವಿನ ದೇಹವನ್ನು ತನಗೆ ಕೊಡಿಸಬೇಕೆಂದು ಬೇಡಿಕೊಂಡನು. ಇವನು ಹಿರೀಸಭೆಯವರಲ್ಲಿ ಘನವಂತನು, ದೇವರ ರಾಜ್ಯವನ್ನು ಎದುರು ನೋಡುತ್ತಿದ್ದವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

43 ಅರಿಮಥಾಯ ಊರಿನ ಯೋಸೇಫ ಎಂಬವನು ಪಿಲಾತನ ಬಳಿಗೆ ಹೋಗಿ, ಯೇಸುವಿನ ದೇಹವನ್ನು ತನಗೆ ಕೊಡಬೇಕೆಂದು ಧೈರ್ಯದಿಂದ ಕೇಳಿದನು. ಯೋಸೇಫನು ಯೆಹೂದ್ಯರ ಸಮಿತಿಯಲ್ಲಿ ಒಬ್ಬ ಮುಖ್ಯ ಸದಸ್ಯನಾಗಿದ್ದನು. ದೇವರರಾಜ್ಯ ಬರಲೆಂದು ಬಯಸಿದ ಜನರಲ್ಲಿ ಇವನೂ ಒಬ್ಬನಾಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

43 ತಸೆ ಮನುನ್ ಅರೆಮಾಥಿಯಾ ಮನ್ತಲ್ಯಾ ಗಾಂವಾಚೊ ಜುಜೆ ಯೆಲೊ,ತೊ ಜುದೆವಾಂಚ್ಯಾ ಮಂತ್ರಿ ಮಂಡಳಾಚೊ ಮರ್ಯಾದಿಚೊ ಸದಸ್ಯಾ, ತೊ ದೆವಾಚ್ಯಾ ರಾಜ್ ಯೆತಲೆ ವಾಟ್ ಬಗುನ್ಗೆತ್ ಹೊತ್ತೊ, ತೊ ಧಯ್ರೊ ಕರುನ್ ಪಿಲಾತಾಕ್ಡೆ ಗೆಲೊ ಅನಿ ಜೆಜುಚೆ ಮಡೆ ಇಚಾರ್‍ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 15:43
16 ತಿಳಿವುಗಳ ಹೋಲಿಕೆ  

ಆ ಸಂದರ್ಭದಲ್ಲಿ ಅನ್ನಳು ಬಂದು, ದೇವರನ್ನು ಕೊಂಡಾಡಿ ಯೆರೂಸಲೇಮಿನಲ್ಲಿ ವಿಮೋಚನೆಗಾಗಿ ಎದುರು ನೋಡುತ್ತಿದ್ದವರೆಲ್ಲರೊಂದಿಗೆ ಶಿಶುವಿನ ವಿಷಯವಾಗಿ ಮಾತನಾಡಿದಳು.


ಆಗ ಸಿಮೆಯೋನನೆಂಬ ಒಬ್ಬ ಮನುಷ್ಯನು ಯೆರೂಸಲೇಮಿನಲ್ಲಿದ್ದನು. ಅವನು ನೀತಿವಂತನೂ ಭಕ್ತನೂ ಆಗಿದ್ದನು. ಅವನು ಇಸ್ರಾಯೇಲರನ್ನು ಸಂತೈಸುವ ಒಬ್ಬರ ಬರುವಿಕೆಗಾಗಿ ಕಾಯುತ್ತಿದ್ದನು. ಪವಿತ್ರಾತ್ಮ ದೇವರ ಪ್ರಸನ್ನತೆ ಅವನ ಮೇಲಿತ್ತು.


ಇವನು ಅವರ ತೀರ್ಮಾನಕ್ಕೂ ಕೃತ್ಯಕ್ಕೂ ಒಪ್ಪಿಕೊಂಡಿರಲಿಲ್ಲ. ಇವನು ಯೆಹೂದ್ಯರ ಪಟ್ಟಣವಾದ ಅರಿಮಥಾಯದವನೂ ದೇವರ ರಾಜ್ಯಕ್ಕಾಗಿ ಎದುರುನೋಡುವವನೂ ಆಗಿದ್ದನು.


ಆದ್ದರಿಂದ ಅವರಲ್ಲಿ ಅನೇಕರು ವಿಶ್ವಾಸ ಹೊಂದಿದರು. ಅನೇಕ ಗ್ರೀಕ್ ಪುರುಷರೂ ಪ್ರಮುಖ ಸ್ತ್ರೀಯರೂ ವಿಶ್ವಾಸವನ್ನಿಟ್ಟರು.


ತರುವಾಯ ಯೆಹೂದ್ಯರ ಭಯದ ನಿಮಿತ್ತದಿಂದ ಗುಪ್ತವಾಗಿ ಯೇಸುವಿನ ಶಿಷ್ಯನಾಗಿದ್ದ ಅರಿಮಥಾಯದ ಯೋಸೇಫನು ಯೇಸುವಿನ ದೇಹವನ್ನು ತೆಗೆದುಕೊಂಡು ಹೋಗುವುದಕ್ಕೆ ಪಿಲಾತನನ್ನು ಕೇಳಿಕೊಂಡನು. ಆಗ ಪಿಲಾತನು ಅಪ್ಪಣೆಕೊಡಲು ಅವನು ಬಂದು ಯೇಸುವಿನ ದೇಹವನ್ನು ತೆಗೆದುಕೊಂಡು ಹೋದನು.


ಸಂಜೆಯಾದಾಗ, ಅರಿಮಥಾಯ ಊರಿನ ಯೋಸೇಫನೆಂಬ ಹೆಸರುಳ್ಳ ಧನವಂತನಾದ ಒಬ್ಬ ಮನುಷ್ಯನು ಅಲ್ಲಿಗೆ ಬಂದನು. ಅವನು ಸಹ ಯೇಸುವಿನ ಶಿಷ್ಯನಾಗಿದ್ದನು.


ನಾನು ಸೆರೆಯಲ್ಲಿರುವುದರಿಂದಲೇ ಕರ್ತ ದೇವರಲ್ಲಿರುವ ಅನೇಕ ಸಹೋದರರು ಭಯವಿಲ್ಲದೆಯೂ ಭರವಸೆಯಿಂದಲೂ ಸುವಾರ್ತೆಯ ವಾಕ್ಯವನ್ನು ಮಾತನಾಡುವುದಕ್ಕೆ ಪ್ರೋತ್ಸಾಹ ಹೊಂದಿದ್ದಾರೆ.


ಆದರೆ ಯೆಹೂದ್ಯರು, ಆರಾಧಕರಾಗಿದ್ದ ಮಾನ್ಯರಾದ ಸ್ತ್ರೀಯರನ್ನೂ ನಗರದ ಗಣ್ಯ ನಾಯಕರನ್ನೂ ಪ್ರೇರೇಪಿಸಿ, ಪೌಲ, ಬಾರ್ನಬರ ಮೇಲೆ ಹಿಂಸೆಯನ್ನು ಎಬ್ಬಿಸಿ ತಮ್ಮ ಪ್ರದೇಶದಿಂದ ಹೊರಗೋಡಿಸಿದರು.


ಪೇತ್ರನು ಮಹಾಯಾಜಕನ ಅಂಗಳದವರೆಗೂ ದೂರದಿಂದಲೇ ಯೇಸುವನ್ನು ಹಿಂಬಾಲಿಸಿ ಆಳುಗಳ ಸಂಗಡ ಕೂತುಕೊಂಡು ಬೆಂಕಿಯ ಹತ್ತಿರ ಚಳಿ ಕಾಯಿಸಿಕೊಳ್ಳುತ್ತಿದ್ದನು.


“ಹೀಗೆ ಕಡೆಯವರು ಮೊದಲನೆಯವರಾಗುವರು, ಮೊದಲನೆಯವರು ಕಡೆಯವರಾಗುವರು,” ಎಂದು ಹೇಳಿದರು.


ಆದರೆ ಮೊದಲನೆಯವರಾದ ಅನೇಕರು ಕಡೆಯವರಾಗುವರು, ಕಡೆಯವರಾದವರು ಮೊದಲನೆಯವರಾಗುವರು.


ಯೇಸು ಅಷ್ಟು ಬೇಗ ಮರಣಹೊಂದಿದ್ದಾರೆಂದು ತಿಳಿದು ಪಿಲಾತನು ಆಶ್ಚರ್ಯಪಟ್ಟು ಶತಾಧಿಪತಿಯನ್ನು ತನ್ನ ಬಳಿಗೆ ಕರೆದು, “ಯೇಸು ಆಗಲೇ ಮೃತನಾದನೋ?” ಎಂದು ವಿಚಾರಿಸಿ


ಯೋಸೇಫನೆಂಬ ಹೆಸರುಳ್ಳ ಒಬ್ಬ ಮನುಷ್ಯನಿದ್ದನು, ಇವನು ಆಲೋಚನಾ ಸಭೆಯವನೂ ಒಳ್ಳೆಯವನೂ ಮತ್ತು ನೀತಿವಂತನೂ ಆಗಿದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು