Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 16:1 - ಕನ್ನಡ ಸಮಕಾಲಿಕ ಅನುವಾದ

1 ಸಬ್ಬತ್ ದಿನ ಕಳೆದ ಮೇಲೆ ಮಗ್ದಲದ ಮರಿಯಳೂ ಯಾಕೋಬನ ತಾಯಿ ಮರಿಯಳೂ ಸಲೋಮೆಯೂ ಯೇಸುವಿನ ದೇಹಕ್ಕೆ ಹಚ್ಚುವುದಕ್ಕಾಗಿ ಸುಗಂಧದ್ರವ್ಯಗಳನ್ನು ಕೊಂಡುಕೊಂಡು ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಸಬ್ಬತ್ ದಿನ ಕಳೆದ ಮೇಲೆ ಮಗ್ದಲದ ಮರಿಯಳೂ ಯಾಕೋಬನ ತಾಯಿ ಮರಿಯಳೂ ಮತ್ತು ಸಲೋಮಿಯೂ ಯೇಸುವಿನ ದೇಹಕ್ಕೆ ಹಚ್ಚುವುದಕ್ಕಾಗಿ ಸುಗಂಧ ದ್ರವ್ಯಗಳನ್ನು ಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಸಬ್ಬತ್‍ದಿನ ಕಳೆದದ್ದೇ ಮಗ್ದಲದ ಮರಿಯಳು, ಯಕೋಬನ ತಾಯಿ ಮರಿಯಳು ಮತ್ತು ಸಲೋಮೆ ಯೇಸುವಿನ ಪಾರ್ಥಿವ ಶರೀರಕ್ಕೆ ಲೇಪಿಸಲೆಂದು ಸುಗಂಧದ್ರವ್ಯಗಳನ್ನು ಕೊಂಡುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಸಬ್ಬತ್‍ದಿನ ಕಳೆದ ಮೇಲೆ, ಮಗ್ದಲದ ಮರಿಯಳೂ ಯಾಕೋಬನ ತಾಯಿ ಮರಿಯಳೂ ಸಲೋಮೆಯೂ ಆತನ ದೇಹಕ್ಕೆ ಹಚ್ಚುವದಕ್ಕಾಗಿ ಸುಗಂಧದ್ರವ್ಯಗಳನ್ನು ಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಸಬ್ಬತ್ ದಿನದ ಮರುದಿನ, ಮಗ್ದಲದ ಮರಿಯಳು, ಸಲೋಮೆ ಮತ್ತು ಯಾಕೋಬನ ತಾಯಿಯಾದ ಮರಿಯಳು ಕೆಲವು ಸುಗಂಧದ್ರವ್ಯಗಳನ್ನು ಯೇಸುವಿನ ದೇಹಕ್ಕೆ ಹಚ್ಚಬೇಕೆಂದಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

1 ಸಾಬ್ಬಾತ್ ಸರುನ್ ಗೆಲ್ಲ್ಯಾ ತನ್ನಾ, ಮರಿ ಮಾಗ್ದೆಲಿನ್, ಜಾಕೊಬಾಚಿ ಬಾಯ್ ಮರಿ ಅನಿ ಸಲೊಮಿ ಜೆಜುಚ್ಯಾ ಮಡ್ಯಾಕ್ ಲಾವುಕ್ ಮನುನ್ ಮ್ಹಾಗ್ಲೆ ಸುಗಂದ್ ತೆಲ್ ಇಕಾತ್ ಘೆವ್ನ್ ಯೆಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 16:1
19 ತಿಳಿವುಗಳ ಹೋಲಿಕೆ  

ಅವರು ಮನೆಗೆ ಹಿಂತಿರುಗಿ ಪರಿಮಳ ದ್ರವ್ಯವನ್ನೂ ಸುಗಂಧ ತೈಲವನ್ನೂ ಸಿದ್ಧಪಡಿಸಿಕೊಂಡರು; ಆದರೆ ಮೋಶೆಯ ಆಜ್ಞಾನುಸಾರವಾಗಿ ಸಬ್ಬತ್ ದಿನದಲ್ಲಿ ವಿಶ್ರಮಿಸಿಕೊಂಡರು.


ಅಲ್ಲಿ ಸ್ತ್ರೀಯರು ದೂರದಿಂದ ನೋಡುತ್ತಿದ್ದರು. ಅವರಲ್ಲಿ ಮಗ್ದಲದ ಮರಿಯಳು, ಚಿಕ್ಕ ಯಾಕೋಬನ ಮತ್ತು ಯೋಸೆಯ ತಾಯಿ ಮರಿಯಳು, ಸಲೋಮೆಯು ಇದ್ದರು.


ಅದು ಪಸ್ಕಹಬ್ಬದ ಸಿದ್ಧತೆಯ ದಿನವಾಗಿತ್ತು. ಮರುದಿನ ವಿಶೇಷ ಸಬ್ಬತ್ ದಿನದಲ್ಲಿ ದೇಹಗಳು ಶಿಲುಬೆಯ ಮೇಲೆ ಇರಬಾರದೆಂದು ಅವರ ಕಾಲುಗಳನ್ನು ಮುರಿದು ಅವರನ್ನು ತೆಗೆದುಬಿಡಬೇಕೆಂದು ಯೆಹೂದ್ಯ ನಾಯಕರು ಪಿಲಾತನನ್ನು ಕೇಳಿಕೊಂಡರು.


ಯೇಸುವಿನ ಶಿಲುಬೆಯ ಬಳಿಯಲ್ಲಿ ಅವರ ತಾಯಿಯೂ ಅವರ ತಾಯಿಯ ಸಹೋದರಿಯೂ ಕ್ಲೋಪನ ಹೆಂಡತಿಯಾದ ಮರಿಯಳೂ ಮಗ್ದಲದ ಮರಿಯಳೂ ನಿಂತಿದ್ದರು.


ಅವರು ವಿಸ್ಮಯಗೊಂಡು ಭಯದಿಂದ ನಡುಗುತ್ತಾ ಸಮಾಧಿಯ ಬಳಿಯಿಂದ ಓಡಿಹೋದರು. ಅವರು ಹೆದರಿದ್ದರಿಂದ ಯಾರಿಗೂ ಏನೂ ಹೇಳಲಿಲ್ಲ.


ಮಗ್ದಲದ ಮರಿಯಳು ಮತ್ತು ಯೋಸೆಯ ತಾಯಿಯಾದ ಮರಿಯಳು ಯೇಸುವನ್ನು ಇಟ್ಟಿದ್ದ ಸ್ಥಳವನ್ನು ನೋಡಿದರು.


ಈಕೆಯು ತನ್ನಿಂದಾದಷ್ಟು ಮಾಡಿದ್ದಾಳೆ. ನನ್ನ ಶವಸಂಸ್ಕಾರಕ್ಕಾಗಿ ಮುಂಚಿತವಾಗಿ ನನ್ನ ದೇಹವನ್ನು ಅಭಿಷೇಕಿಸಿದ್ದಾಳೆ.


ಯೇಸು ಬೇಥಾನ್ಯದಲ್ಲಿ ಕುಷ್ಠರೋಗಿಯಾದ ಸೀಮೋನನ ಮನೆಯಲ್ಲಿ ಊಟಕ್ಕೆ ಕುಳಿತಿದ್ದಾಗ, ಒಬ್ಬ ಸ್ತ್ರೀಯು ಬಹು ಬೆಲೆಯುಳ್ಳ ಅಚ್ಚ ಜಟಾಮಾಂಸಿ ಮೂಲಿಕೆಯ ಸುಗಂಧ ತೈಲದ ಭರಣಿಯನ್ನು ತೆಗೆದುಕೊಂಡು ಬಂದು, ಅದನ್ನು ಒಡೆದು, ಯೇಸುವಿನ ತಲೆಯ ಮೇಲೆ ಸುರಿಸಿದಳು.


ಅವನು ತನಗೋಸ್ಕರ ದಾವೀದನ ಪಟ್ಟಣದಲ್ಲಿ ಅಗಿಸಿದ ಅವನ ಸ್ವಂತ ಸಮಾಧಿಯಲ್ಲಿ ಅವನನ್ನು ಹೂಳಿಟ್ಟರು. ಅವರು ತೈಲಗಾರರ ವಿದ್ಯೆಯಿಂದ ಸಿದ್ಧಮಾಡಿದ ಸುಗಂಧಗಳಿಂದಲೂ, ನಾನಾ ವಿಧವಾದ ಪದಾರ್ಥಗಳಿಂದಲೂ ತುಂಬಿದ ಶವ ಪೆಟ್ಟಿಗೆಯಲ್ಲಿ ಅವನನ್ನು ಇಟ್ಟರು. ಅವನ ಗೌರವಕ್ಕಾಗಿ ಮಹಾ ಅಗ್ನಿಕುಂಡವನ್ನೇರ್ಪಡಿಸಿದರು.


ಅಂದು ಸಿದ್ಧತೆಯ ದಿನವಾಗಿತ್ತು. ಸಬ್ಬತ್ ದಿನ ಪ್ರಾರಂಭವಾಗಲಿತ್ತು.


ಸಂಜೆ ಸಮೀಪಿಸುತ್ತಿದ್ದಾಗ, ಅದು ಸಬ್ಬತ್ ದಿನದ ಸಿದ್ಧತೆಯ ಹಿಂದಿನ ದಿವಸವಾಗಿತ್ತು.


ಯೋಸೇಫನು ತನ್ನ ತಂದೆ ಇಸ್ರಾಯೇಲನಿಗೆ ಸುಗಂಧದ್ರವ್ಯವನ್ನು ಹಾಕಬೇಕೆಂದು ತನ್ನ ದಾಸರಾದ ವೈದ್ಯರಿಗೆ ಅಪ್ಪಣೆಕೊಟ್ಟನು.


ವಾರದ ಮೊದಲನೆಯ ದಿನ ಮುಂಜಾನೆ ಸೂರ್ಯೋದಯವಾಗಲು ಅವರು ಸಮಾಧಿಯ ಬಳಿಗೆ ಬರುವಾಗ,


ವಾರದ ಮೊದಲನೆಯ ದಿನದ, ಬೆಳಗಿನ ಜಾವದಲ್ಲಿ, ಆ ಸ್ತ್ರೀಯರು ಸಿದ್ಧಪಡಿಸಿದ್ದ ಪರಿಮಳ ದ್ರವ್ಯಗಳನ್ನು ತೆಗೆದುಕೊಂಡು ಸಮಾಧಿಗೆ ಹೋದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು