Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 16:10 - ಕನ್ನಡ ಸಮಕಾಲಿಕ ಅನುವಾದ

10 ಯೇಸುವಿನ ಸಂಗಡ ಇದ್ದವರು ಶೋಕಿಸಿ ಅಳುತ್ತಿರುವಾಗ ಆಕೆಯು ಹೋಗಿ ಅವರಿಗೆ ಯೇಸುವಿನ ಬಗ್ಗೆ ಹೇಳಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಆಕೆ ಹೋಗಿ ಆತನು ಕಾಣಿಸಿಕೊಂಡದ್ದನ್ನು ಆತನ ಜೊತೆಯಲ್ಲಿದ್ದವರಿಗೆ ತಿಳಿಸಿದಳು; ಅವರು ಶೋಕಿಸುತ್ತಾ ಅಳುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಈಕೆ ಹೋಗಿ ತಾನು ಕಂಡದ್ದನ್ನು ಯೇಸುವಿನ ಸಂಗಡಿಗರಿಗೆ ತಿಳಿಸಿದಳು. ಅವರಾದರೋ ಇನ್ನೂ ಶೋಕಭರಿತರಾಗಿ ಅಳುತ್ತಾ ಕುಳಿತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಆಕೆ ಹೋಗಿ ಆತನು ಕಾಣಿಸಿಕೊಂಡದ್ದನ್ನು ಮುಂಚೆ ಆತನ ಜೊತೆಯಲ್ಲಿದ್ದವರಿಗೆ ತಿಳಿಸಿದಳು; ಇವರು ಹಂಬಲಿಸುತ್ತಾ ಅಳುತ್ತಾ ಕೂತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಮರಿಯಳು ಹೋಗಿ ಆತನ ಶಿಷ್ಯರಿಗೆ ತಿಳಿಸಿದಳು. ಅವರಾದರೋ ಇನ್ನೂ ಶೋಕಭರಿತರಾಗಿ ಅಳುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

10 ತೆನಿ ಜಾವ್ನ್ ತೆಚ್ಯಾ ಶಿಸಾಕ್ನಿ ಸಾಂಗ್ಲಿನ್, ತೆನಿ ಅಜುನ್ ದುಕ್ಕಾತ್ ಹೊತ್ತೆ ರಡುನ್ಗೆತ್ ಹೊತ್ತೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 16:10
8 ತಿಳಿವುಗಳ ಹೋಲಿಕೆ  

ಆಗ ಮಗ್ದಲದ ಮರಿಯಳು ಬಂದು, “ನಾನು ಕರ್ತನನ್ನು ಕಂಡಿದ್ದೇನೆ,” ಎಂದು ಹೇಳಿ, ಅವರು ತನಗೆ ಈ ಸಂಗತಿಗಳನ್ನು ಹೇಳಿದರೆಂದು ಶಿಷ್ಯರಿಗೆ ತಿಳಿಸಿದಳು.


ಆದರೆ ಇವುಗಳನ್ನು ನಾನು ನಿಮಗೆ ಹೇಳಿದ್ದರಿಂದ ನಿಮ್ಮ ಹೃದಯವು ದುಃಖಭರಿತವಾಗಿದೆ.


ಆಗ ಯೇಸು ಅವರಿಗೆ, “ನೀವು ದಾರಿಯಲ್ಲಿ ಒಬ್ಬರಿಗೊಬ್ಬರು ಚರ್ಚೆಮಾಡಿಕೊಂಡು ಹೋಗುತ್ತಿದ್ದೀರಲ್ಲಾ ಏನು ವಿಷಯ?” ಎಂದು ಕೇಳಿದರು. ಅವರು ತಕ್ಷಣವೇ ನಿಂತರು, ಅವರ ಮುಖ ದುಖಃಭರಿತವಾಗಿತ್ತು.


ಕೂಡಲೇ ಎರಡನೆಯ ಸಾರಿ ಹುಂಜ ಕೂಗಿತು. ಹೀಗೆ, “ಎರಡು ಸಾರಿ ಹುಂಜ ಕೂಗುವುದಕ್ಕಿಂತ ಮುಂಚಿತವಾಗಿ ನೀನು ನನ್ನನ್ನು ಮೂರು ಸಾರಿ ನಿರಾಕರಿಸುವೆ,” ಎಂದು ಯೇಸು ತನಗೆ ಹೇಳಿದ ಮಾತನ್ನು ಪೇತ್ರನು ಜ್ಞಾಪಕಮಾಡಿಕೊಂಡು ವ್ಯಥೆಪಟ್ಟು ಅತ್ತನು.


ಅದಕ್ಕೆ ಯೇಸು ಅವರಿಗೆ, “ಮದುಮಗನು ತಮ್ಮ ಜೊತೆಯಲ್ಲಿ ಇರುವ ತನಕ ಮದುಮಗನ ಆಪ್ತರು ದುಃಖಪಡುವುದುಂಟೇ? ಆದರೆ ಮದುಮಗನು ಅಗಲಬೇಕಾಗುವ ದಿವಸಗಳು ಬರುತ್ತವೆ; ಆಗ ಅವರು ಉಪವಾಸ ಮಾಡುವರು.


“ಆಗ ಮನುಷ್ಯಪುತ್ರನಾದ ನನ್ನ ಸೂಚನೆಯು ಆಕಾಶದಲ್ಲಿ ಕಾಣುವುದು. ಭೂಮಿಯ ಎಲ್ಲಾ ಜನಾಂಗದವರು ಗೋಳಾಡುವರು. ಮನುಷ್ಯಪುತ್ರನಾದ ನಾನು ಆಕಾಶದ ಮೇಘಗಳಲ್ಲಿ, ಶಕ್ತಿಯಿಂದಲೂ ಮಹಾಪ್ರಭಾವದಿಂದಲೂ ಬರುವುದನ್ನು ಅವರು ಕಾಣುವರು.


ಆದರೆ ಆ ಯುವಕನು ಯೇಸು ಹೇಳಿದ್ದನ್ನು ಕೇಳಿ, ದುಃಖದಿಂದ ಹೊರಟುಹೋದನು. ಏಕೆಂದರೆ ಅವನಿಗೆ ಬಹಳ ಆಸ್ತಿ ಇತ್ತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು