Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 16:8 - ಕನ್ನಡ ಸಮಕಾಲಿಕ ಅನುವಾದ

8 ಅವರು ವಿಸ್ಮಯಗೊಂಡು ಭಯದಿಂದ ನಡುಗುತ್ತಾ ಸಮಾಧಿಯ ಬಳಿಯಿಂದ ಓಡಿಹೋದರು. ಅವರು ಹೆದರಿದ್ದರಿಂದ ಯಾರಿಗೂ ಏನೂ ಹೇಳಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಅವರು ವಿಸ್ಮಯಗೊಂಡು ನಡುಗುತ್ತಾ ಹೊರಕ್ಕೆ ಬಂದು ಸಮಾಧಿಯ ಬಳಿಯಿಂದ ಓಡಿಹೋದರು; ಅವರು ಹೆದರಿಕೊಂಡಿದ್ದರಿಂದ ಯಾರಿಗೂ ಏನೂ ಹೇಳಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಅವರು ವಿಸ್ಮಯಗೊಂಡು ಭಯದಿಂದ ನಡುಗುತ್ತಾ, ಸಮಾಧಿಯಿಂದ ಹೊರಕ್ಕೆ ಬಂದು, ಅಲ್ಲಿಂದ ಓಡಿಹೋದರು. ಭಯದ ನಿಮಿತ್ತ ಅವರು ಯಾರಿಗೂ ಏನನ್ನೂ ಹೇಳಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಅವರು ಭ್ರಮೆಹಿಡಿದವರಾಗಿ ನಡುಗುತ್ತಾ ಹೊರಕ್ಕೆ ಬಂದು ಸಮಾಧಿಯ ಬಳಿಯಿಂದ ಓಡಿಹೋದರು; ಅವರು ಹೆದರಿಕೊಂಡದರಿಂದ ಯಾರಿಗೂ ಏನೂ ಹೇಳಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಆ ಸ್ತ್ರೀಯರು ಬಹಳ ಭಯದಿಂದ ಗಲಿಬಿಲಿಗೊಂಡು, ಸಮಾಧಿಯನ್ನು ಬಿಟ್ಟು ಓಡಿಹೋದರು. ಅವರು ಬಹಳ ಭಯಗೊಂಡಿದ್ದರಿಂದ ಈ ವಿಷಯವನ್ನು ಯಾರಿಗೂ ಹೇಳಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

8 ಖರೆ ತೆನಿ ಭಿವ್ನ್ ಥರ್ಥರುನ್ಗೆತ್ ಅನಿ ಅಜಾಪ್ ಹೊವ್ನ್ ಸಮಾದಿತ್ನಾ ಭಾಯ್ರ್ ಪಳುನ್ ಗೆಲ್ಯಾನಿ, ತೆನಿ ಕೊನಾಕ್ಬಿ ಕಾಯ್ಬಿ ಸಾಂಗುಕ್ನ್ಯಾತ್ ಕಶ್ಯಾಕ್ ಮಟ್ಲ್ಯಾರ್ ತೆನಿ ಭಿಂವ್ನ್ ಗೆಲ್ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 16:8
10 ತಿಳಿವುಗಳ ಹೋಲಿಕೆ  

ಅವರು ತಾವು ಕಾಣುತ್ತಿರುವುದು ಭೂತವೆಂದು ಭಾವಿಸಿ, ದಿಗಿಲುಬಿದ್ದು ಭಯಹಿಡಿದವರಾದರು.


ಅವರು ಭಯದಿಂದಲೂ ಮಹಾ ಸಂತೋಷದಿಂದಲೂ ಸಮಾಧಿಯಿಂದ ಬೇಗನೆ ಹೊರಟು, ಶಿಷ್ಯರಿಗೆ ತಿಳಿಸುವುದಕ್ಕಾಗಿ ಓಡಿಹೋದರು.


ಹಣದ ಚೀಲವನ್ನಾಗಲಿ, ಪ್ರಯಾಣದ ಚೀಲವನ್ನಾಗಲಿ, ಪಾದರಕ್ಷೆಗಳನ್ನಾಗಲಿ ತೆಗೆದುಕೊಂಡು ಹೋಗಬೇಡಿರಿ; ದಾರಿಯಲ್ಲಿ ಯಾರನ್ನೂ ಕುಶಲ ವಿಚಾರ ಮಾಡಿಕೊಂಡಿರಬೇಡಿರಿ.


ಎಲೀಷನು ಗೇಹಜಿಗೆ, “ನೀನು ನಿನ್ನ ಸಡಿಲವಾದ ಉಡುಪನ್ನು ನಡುವಿಗೆ ಕಟ್ಟಿಕೊಂಡು, ನನ್ನ ಕೋಲನ್ನು ನಿನ್ನ ಕೈಯಲ್ಲಿ ಹಿಡಿದುಕೊಂಡು ಹೋಗು. ನಿನಗೆ ಯಾವನಾದರೂ ಎದುರುಗೊಂಡರೆ, ಅವನನ್ನು ವಂದಿಸಬೇಡ; ಯಾವನಾದರೂ ನಿನ್ನನ್ನು ವಂದಿಸಿದರೆ, ಅವನಿಗೆ ಉತ್ತರ ಹೇಳಬೇಡ; ನನ್ನ ಕೋಲನ್ನು ಆ ಹುಡುಗನ ಮುಖದ ಮೇಲೆ ಹಾಕು,” ಎಂದನು.


ಯೇಸು ಈ ಮಾತುಗಳನ್ನು ಹೇಳಿ ಮುಗಿಸಿದ ಮೇಲೆ, ಅವರ ಬೋಧನೆಯನ್ನು ಕೇಳಿ ಜನರು ಆಶ್ಚರ್ಯಪಟ್ಟರು.


ಆದರೆ ನೀವು ಹೊರಟುಹೋಗಿ ಯೇಸು ನಿಮಗೆ ಹೇಳಿದಂತೆ, ‘ನಿಮಗಿಂತ ಮುಂಚಿತವಾಗಿ ಗಲಿಲಾಯಕ್ಕೆ ಹೋಗುತ್ತಾರೆ, ಅಲ್ಲಿ ನೀವು ಯೇಸುವನ್ನು ಕಾಣುವಿರಿ’ ಎಂದು ಅವರ ಶಿಷ್ಯರಿಗೆ ಮತ್ತು ಪೇತ್ರನಿಗೆ ಹೇಳಿರಿ,” ಎಂದನು.


ವಾರದ ಮೊದಲನೆಯ ದಿನದ ಬೆಳಿಗ್ಗೆ ಯೇಸು ಎದ್ದ ಮೇಲೆ ತಾವು ಏಳು ದೆವ್ವಗಳನ್ನು ಬಿಡಿಸಿದ್ದ ಮಗ್ದಲದ ಮರಿಯಳಿಗೆ ಅವರು ಮೊದಲು ಕಾಣಿಸಿಕೊಂಡರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು