ಮಾರ್ಕ 16:9 - ಕನ್ನಡ ಸಮಕಾಲಿಕ ಅನುವಾದ9 ವಾರದ ಮೊದಲನೆಯ ದಿನದ ಬೆಳಿಗ್ಗೆ ಯೇಸು ಎದ್ದ ಮೇಲೆ ತಾವು ಏಳು ದೆವ್ವಗಳನ್ನು ಬಿಡಿಸಿದ್ದ ಮಗ್ದಲದ ಮರಿಯಳಿಗೆ ಅವರು ಮೊದಲು ಕಾಣಿಸಿಕೊಂಡರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ವಾರದ ಮೊದಲನೆಯ ದಿನ ಬೆಳಿಗ್ಗೆ ಯೇಸು ಜೀವಿತನಾಗಿ ಎದ್ದ ಮೇಲೆ ಮಗ್ದಲದ ಮರಿಯಳಿಗೆ ಮೊದಲು ಕಾಣಿಸಿಕೊಂಡನು. ಆತನು ಆಕೆಯನ್ನು ಏಳು ದೆವ್ವಗಳಿಂದ ಬಿಡಿಸಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ಭಾನುವಾರ ಮುಂಜಾನೆ ಪುನರುತ್ಥಾನ ಹೊಂದಿದ ಯೇಸುಸ್ವಾಮಿ, ಮೊತ್ತಮೊದಲು ಮಗ್ದಲದ ಮರಿಯಳಿಗೆ ಕಾಣಿಸಿಕೊಂಡರು. ಅವರು ಏಳು ದೆವ್ವಗಳನ್ನು ಹೊರಗಟ್ಟಿದ್ದು ಈಕೆಯಿಂದಲೇ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 [ವಾರದ ಮೊದಲನೆಯ ದಿನ ಬೆಳಿಗ್ಗೆ ಯೇಸು ಜೀವಿತನಾಗಿ ಎದ್ದ ಮೇಲೆ ಮಗ್ದಲದ ಮರಿಯಳಿಗೆ ಮೊದಲು ಕಾಣಿಸಿಕೊಂಡನು. ಆಕೆಗೆ ಏಳು ದೆವ್ವಗಳನ್ನು ಬಿಡಿಸಿದ್ದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 ವಾರದ ಮೊದಲನೆಯ ದಿನದ ಬೆಳಿಗ್ಗೆ ಯೇಸು ಜೀವಂತನಾಗಿ ಎದ್ದನು. ಯೇಸು ಮೊಟ್ಟಮೊದಲು ಮಗ್ದಲದ ಮರಿಯಳಿಗೆ ಕಾಣಿಸಿಕೊಂಡನು. ಹಿಂದೊಮ್ಮೆ ಯೇಸು ಮರಿಯಳಿಂದ ಏಳು ದೆವ್ವಗಳನ್ನು ಬಿಡಿಸಿದ್ದನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್9 ಜೆಜು ಮರಲ್ಲ್ಯಾನಿತ್ನಾ ಝಿತ್ತೊ ಹೊವ್ನ್ ಉಟುನ್, ಮಟ್ಲ್ಯಾರ್ ಆಯ್ತಾರ್‍ಚೆ ನಸ್ಕಾತ್, ಸಗ್ಳ್ಯಾನಿಕಿ ಅದ್ದಿ ಮರಿ ಮಾಗ್ದೆಲಿನಾಕ್ ದಿಸ್ಲೊ. ಜೆಜುನ್ ತಿಚ್ಯಾ ಆಂಗಾತ್ನಾ ಸಾತ್ ಗಿರೆ ಕಾಡಲ್ಲ್ಯಾನ್. ಅಧ್ಯಾಯವನ್ನು ನೋಡಿ |