ಮಾರ್ಕ 2:16 - ಕನ್ನಡ ಸಮಕಾಲಿಕ ಅನುವಾದ16 ಫರಿಸಾಯರಾದ ನಿಯಮ ಬೋಧಕರು ಪಾಪಿಗಳ ಮತ್ತು ಸುಂಕದವರ ಸಂಗಡ ಯೇಸು ಊಟಮಾಡುವುದನ್ನು ಕಂಡು, “ಈತನು ಸುಂಕದವರ ಮತ್ತು ಪಾಪಿಗಳ ಸಂಗಡ ಏಕೆ ಊಟಮಾಡುತ್ತಾನೆ?” ಎಂದು ಯೇಸುವಿನ ಶಿಷ್ಯರನ್ನು ಕೇಳಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ಫರಿಸಾಯರಾದ ಶಾಸ್ತ್ರಿಗಳು ಆತನು ಪಾಪಿಗಳ ಮತ್ತು ಸುಂಕದವರ ಸಂಗಡ ಊಟ ಮಾಡುವುದನ್ನು ಕಂಡು ಆತನ ಶಿಷ್ಯರಿಗೆ, “ಈತನು ಸುಂಕದವರ ಮತ್ತು ಪಾಪಿಗಳ ಸಂಗಡ ಏಕೆ ಊಟಮಾಡುತ್ತಾನೆ?” ಎಂದು ಕೇಳಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ಫರಿಸಾಯ ಪಂಥಕ್ಕೆ ಸೇರಿದ್ದ ಧರ್ಮಶಾಸ್ತ್ರಿಗಳಲ್ಲಿ ಕೆಲವರು, ಸುಂಕದವರ ಮತ್ತು ಇತರ ಪಾಪಿಗಳ ಪಂಕ್ತಿಯಲ್ಲಿ ಯೇಸು ಊಟಮಾಡುವುದನ್ನು ಕಂಡು, “ಈತನು ಇಂಥಾ ಬಹಿಷ್ಕೃತ ಜನರ ಜೊತೆಯಲ್ಲಿ ಊಟಮಾಡುವುದೇಕೆ?” ಎಂದು ಯೇಸುವಿನ ಶಿಷ್ಯರೊಡನೆ ಆಕ್ಷೇಪಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ಅಂಥವರು ಬಹು ಮಂದಿ ಇದ್ದರು. ಫರಿಸಾಯರಾದ ಶಾಸ್ತ್ರಿಗಳು ಆತನ ಹಿಂದೆ ಹೋಗಿ ಆತನು ಪಾಪಿಗಳ ಮತ್ತು ಸುಂಕದವರ ಸಂಗಡ ಊಟಮಾಡುವದನ್ನು ಕಂಡು ಆತನ ಶಿಷ್ಯರಿಗೆ - ಈತನು ಸುಂಕದವರ ಮತ್ತು ಪಾಪಿಗಳ ಸಂಗಡ ಊಟಮಾಡುತ್ತಾನೆ ನೋಡಿರಿ ಎಂದು ಹೇಳಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್16 ಈ ಸುಂಕದ ಅಧಿಕಾರಿಗಳೊಂದಿಗೆ ಮತ್ತು ಇತರ ಕೆಟ್ಟ ಜನರೊಂದಿಗೆ ಯೇಸು ಊಟಮಾಡುತ್ತಿರುವುದನ್ನು ಧರ್ಮೋಪದೇಶಕರು ಮತ್ತು ಫರಿಸಾಯರು ನೋಡಿ ಆತನ ಶಿಷ್ಯರಿಗೆ, “ಯೇಸು ಪಾಪಿಗಳೊಂದಿಗೆ ಮತ್ತು ಸುಂಕದ ಅಧಿಕಾರಿಗಳೊಂದಿಗೆ ಏಕೆ ಊಟ ಮಾಡುತ್ತಾನೆ?” ಎಂದು ಕೇಳಿದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್16 ಹ್ಯಾ ತೆರ್‍ಗಿ ವಸುಲ್ ಕರ್‍ತಲ್ಯಾ ಅನಿ ಪಾಪಿ ಲೊಕಾಂಚ್ಯಾ ವಾಂಗ್ಡಾ ಬಸುನ್ ಜೆಜು ಜೆವಾನ್ ಕರ್‍ತಲೆ ಬಗುನ್, ಮೊಯ್ಜೆಚೆ ಖಾಯ್ದೆ ಶಿಕ್ವುತಲ್ಯಾ ಫಾರಿಜೆವಾನಿ “ತೊ ಪಾಪಿ ಲೊಕಾಂಚ್ಯಾ ಅನಿ ತೆರ್‍ಗಿ ವಸುಲ್ ಕರ್‍ತಲ್ಯಾಂಚ್ಯಾ ವಾಂಗ್ಡಾ ಬಸುನ್, ಕಶ್ಯಾಕ್ ಜೆವಾನ್ ಕರ್‍ತಾ?” ಮನುನ್ ತೆಚ್ಯಾ ಶಿಸಾಕ್ನಿ ಇಚಾರ್‍ಲ್ಯಾನಿ. ಅಧ್ಯಾಯವನ್ನು ನೋಡಿ |