Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 2:21 - ಕನ್ನಡ ಸಮಕಾಲಿಕ ಅನುವಾದ

21 “ಯಾರೂ ಹಳೆಯ ವಸ್ತ್ರಕ್ಕೆ ಹೊಸ ಬಟ್ಟೆಯ ತೇಪೆಯನ್ನು ಹಾಕುವುದಿಲ್ಲ. ಹಚ್ಚಿದರೆ, ಆ ತೇಪೆಯು ಬಟ್ಟೆಯನ್ನು ಹಿಂಜಿ ಹರಕನ್ನು ಇನ್ನೂ ದೊಡ್ಡದು ಮಾಡುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 “ಯಾರೂ ಹೊಸ ಬಟ್ಟೆಯ ತುಂಡನ್ನು ಹಳೆಯ ವಸ್ತ್ರಕ್ಕೆ ತ್ಯಾಪೆ ಹಚ್ಚುವುದಿಲ್ಲ. ಹಚ್ಚಿದರೆ ಆ ಹೊಸ ತ್ಯಾಪೆಯು ಹಳೆಯ ವಸ್ತ್ರವನ್ನು ಹಿಂಜುವುದರಿಂದ ಹರಕು ಹೆಚ್ಚಾಗುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 “ಹಳೆಯ ಅಂಗಿಗೆ ಹೊಸ ಬಟ್ಟೆಯ ತೇಪೆಯನ್ನು ಯಾರೂ ಹಾಕುವುದಿಲ್ಲ. ಹಾಕಿದಲ್ಲಿ, ಹೊಸ ತೇಪೆಯು ಹಳೆಯ ಅಂಗಿಯನ್ನು ಹಿಂಜುವುದರಿಂದ ಹರಕು ಹೆಚ್ಚಾಗುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಯಾರೂ ಹೊಸ ಬಟ್ಟೆಯ ತುಂಡನ್ನು ಹಳೆಯ ವಸ್ತ್ರಕ್ಕೆ ತ್ಯಾಪೆಹಚ್ಚುವದಿಲ್ಲ; ಹಚ್ಚಿದರೆ ಆ ಹೊಸ ತ್ಯಾಪೆಯು ಹಳೆಯ ವಸ್ತ್ರವನ್ನು ಹಿಂಜುವದರಿಂದ ಹರಕು ಹೆಚ್ಚಾಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 “ಒಬ್ಬ ವ್ಯಕ್ತಿಯು ತನ್ನ ಹಳೆಯ ಮೇಲಂಗಿಯ ಹರಕಿಗೆ ಹೊಸ ಬಟ್ಟೆಯನ್ನು ತೇಪೆ ಹಚ್ಚುವುದಿಲ್ಲ. ಒಂದುವೇಳೆ ಹಚ್ಚಿದರೆ, ಆ ತೇಪೆಯು ಹಿಂಜಿಕೊಂಡು ಆ ಹರಕನ್ನು ಮತ್ತಷ್ಟು ದೊಡ್ಡದನ್ನಾಗಿ ಮಾಡುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

21 “ಕೊನ್ಬಿ ಮಾನುಸ್, ಜುನ್ನ್ಯಾ ಅಂಗಿಕ್ ನ್ಹವ್ಯಾ ಫಾಳಿಚೊ ತುಕ್ಡೊ ಲಾವುನ್ ಶಿವಿನಾ, ಕಶ್ಯಾಕ್ ಮಟ್ಲ್ಯಾರ್, ತೊ ನ್ಹವೊ ತುಕ್ಡೊ ಮುದ್ದಾ ಹೊವ್ನ್ ತಿ ಅಂಗಿ ಅನಿ ಉಲ್ಲಿ ಪಿಂಜ್ತಾ. ಅನಿ ಪಿಂಜಲ್ಲೊ ಜಾಗೊ ಅನಿ ಉಲ್ಲೊ ಮೊಟೊ ಹೊತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 2:21
7 ತಿಳಿವುಗಳ ಹೋಲಿಕೆ  

“ಯಾರೂ ಹಳೆಯ ವಸ್ತ್ರಕ್ಕೆ ಹೊಸ ಬಟ್ಟೆಯ ತೇಪೆಯನ್ನು ಹಾಕುವುದಿಲ್ಲ. ಏಕೆಂದರೆ ಅದು ಆ ವಸ್ತ್ರವನ್ನು ಹಿಂಜುವುದರಿಂದ ಹರಕು ಹೆಚ್ಚಾಗುವುದು.


ಮನುಷ್ಯರಿಗಾಗುವ ಶೋಧನೆಯೇ ಹೊರತು, ಬೇರೆ ಯಾವುದೂ ನಿಮಗೆ ಸಂಭವಿಸಲಿಲ್ಲ. ಆದರೆ ದೇವರು ನಂಬಿಗಸ್ತರು. ನಿಮ್ಮ ಶಕ್ತಿಗೆ ಮೀರಿದ ಶೋಧನೆಗಳನ್ನು ಅವರು ನಿಮ್ಮ ಮೇಲೆ ಬರುವಂತೆ ಮಾಡುವುದಿಲ್ಲ. ಆದರೆ ನಿಮಗೆ ಶೋಧನೆಗಳು ಬಂದಾಗ, ಅವುಗಳನ್ನು ಜಯಿಸುವುದಕ್ಕೆ ಶಕ್ತರಾಗುವಂತೆ, ಅವುಗಳಿಂದ ತಪ್ಪಿಸಿಕೊಳ್ಳುವ ಮಾರ್ಗವನ್ನು ಮಾಡುವರು.


ನಾನು ಎಂದೆಂದಿಗೂ ವ್ಯಾಜ್ಯವಾಡುವುದಿಲ್ಲ. ಯಾವಾಗಲೂ ಕೋಪಿಸಿಕೊಳ್ಳೆನು. ಏಕೆಂದರೆ ಆತ್ಮವೂ, ನಾನು ಉಂಟುಮಾಡಿದ ಜೀವವೂ ನನ್ನಿಂದ ಕುಂದಿ ಹೋದಾವು.


ಆದರೆ ಮದುಮಗನು ಅವರಿಂದ ತೆಗೆದುಕೊಂಡು ಹೋಗುವ ಕಾಲ ಬರುತ್ತದೆ. ಆಗ ಅವರು ಉಪವಾಸ ಮಾಡುವರು.


ಯಾರೂ ಹೊಸ ದ್ರಾಕ್ಷಾರಸವನ್ನು ಹಳೆಯ ಚರ್ಮದ ಚೀಲಗಳಲ್ಲಿ ತುಂಬಿಡುವುದಿಲ್ಲ. ತುಂಬಿ ಇಟ್ಟರೆ, ಚರ್ಮದ ಚೀಲಗಳು ಹರಿದು, ದ್ರಾಕ್ಷಾರಸವು ಚೆಲ್ಲಿಹೋಗಿ ಚರ್ಮದ ಚೀಲಗಳು ಹಾಳಾಗುತ್ತವೆ. ಹೊಸ ದ್ರಾಕ್ಷಾರಸವನ್ನು ಹೊಸ ಚರ್ಮದ ಚೀಲಗಳಲ್ಲಿ ತುಂಬಿಡುತ್ತಾರೆ,” ಎಂದು ಹೇಳಿದರು.


ಯೇಸು ಅವರಿಗೆ ಒಂದು ಸಾಮ್ಯವನ್ನು ಹೇಳಿದರು: “ಹಳೆಯ ವಸ್ತ್ರಕ್ಕೆ ಹೊಸ ಬಟ್ಟೆಯ ತುಂಡನ್ನು ಹರಿದು ತೇಪೆ ಹಚ್ಚುವುದಿಲ್ಲ. ಹಚ್ಚಿದರೆ ಆ ಹೊಸದು ಹರಿದು ಹೋಗುವುದು. ಹೊಸದರಿಂದ ಕತ್ತರಿಸಿದ ತುಂಡು ಹಳೆಯದರೊಂದಿಗೆ ಹೊಂದಿಕೆಯಾಗುವುದಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು