Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 2:9 - ಕನ್ನಡ ಸಮಕಾಲಿಕ ಅನುವಾದ

9 ಯಾವುದು ಸುಲಭ? ಪಾರ್ಶ್ವವಾಯು ರೋಗಿಗೆ, ‘ನಿನ್ನ ಪಾಪಗಳು ಕ್ಷಮಿಸಲಾಗಿವೆ,’ ಎನ್ನುವುದೋ ಅಥವಾ, ‘ನಿನ್ನ ಹಾಸಿಗೆಯನ್ನು ಎತ್ತಿಕೊಂಡು ನಡೆ,’ ಎಂದು ಹೇಳುವುದೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಯಾವುದು ಸುಲಭ? ಪಾರ್ಶ್ವವಾಯು ರೋಗಿಗೆ ‘ನಿನ್ನ ಪಾಪಗಳು ಕ್ಷಮಿಸಲ್ಪಟ್ಟಿವೆ ಅನ್ನುವುದೋ’ ಅಥವಾ ‘ಎದ್ದು ನಿನ್ನ ಹಾಸಿಗೆಯನ್ನು ತೆಗೆದುಕೊಂಡು ನಡೆ’ ಅನ್ನುವುದೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಈ ಪಾರ್ಶ್ವವಾಯು ರೋಗಿಗೆ, ‘ನಿನ್ನ ಪಾಪಗಳನ್ನು ಕ್ಷಮಿಸಲಾಗಿದೆ,’ ಎಂದು ಹೇಳುವುದು ಸುಲಭವೋ ಅಥವಾ ‘ಎದ್ದು ನಿನ್ನ ಹಾಸಿಗೆಯನ್ನು ಎತ್ತಿಕೊಂಡು ನಡೆ’ ಎನ್ನುವುದು ಸುಲಭವೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ನಿನ್ನ ಪಾಪಗಳು ಕ್ಷವಿುಸಲ್ಪಟ್ಟಿವೆ ಅನ್ನುವದೋ? ಎದ್ದು ನಿನ್ನ ಹಾಸಿಗೆಯನ್ನು ತೆಗೆದುಕೊಂಡು ನಡೆ ಅನ್ನುವದೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಯಾವುದು ಸುಲಭ? ‘ನಿನ್ನ ಪಾಪಗಳು ಕ್ಷಮಿಸಲ್ಪಟ್ಟಿವೆ’ ಎಂದು ಹೇಳುವುದೋ? ಇಲ್ಲವೇ, ‘ಎದ್ದು ನಿನ್ನ ಹಾಸಿಗೆಯನ್ನು ತೆಗೆದುಕೊಂಡು ಹೋಗು’ ಎಂದು ಹೇಳುವುದೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

9 ಖಲೆ ಸಸಾರ್ ತುಜೆ ಪಾಪ್ ಮಾಪ್ ಹೊಲೆ ಮನ್ತಲೆ ಕಾಯ್ ಉಟ್ ಅನಿ ತುಜೆ ಹಾತ್ರಾನ್ ಘೆವ್ನ್ ಚಲ್ ಮನ್ತಲೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 2:9
7 ತಿಳಿವುಗಳ ಹೋಲಿಕೆ  

ಯಾವುದು ಸುಲಭ? ‘ನಿನ್ನ ಪಾಪಗಳು ಕ್ಷಮಿಸಲಾಗಿವೆ,’ ಎನ್ನುವುದೋ ಅಥವಾ ‘ಎದ್ದು ನಡೆ,’ ಎನ್ನುವುದೋ?


ಯೇಸುವಿನ ಸುದ್ದಿ ಸಿರಿಯಾ ದೇಶದಲ್ಲೆಲ್ಲಾ ಹಬ್ಬಿದ್ದರಿಂದ, ಜನರು ವಿವಿಧ ವ್ಯಾಧಿಗಳಿಂದಲೂ ತೀವ್ರ ವೇದನೆಯಿಂದಲೂ ಅಸ್ವಸ್ಥರಾದವರನ್ನೂ ದೆವ್ವ ಹಿಡಿದವರನ್ನೂ ಮೂರ್ಛಾರೋಗಿಗಳನ್ನೂ ಪಾರ್ಶ್ವವಾಯು ಪೀಡಿತರನ್ನೂ ಅವರ ಬಳಿಗೆ ಕರೆದುಕೊಂಡು ಬಂದರು; ಯೇಸು ಅವರನ್ನೆಲ್ಲಾ ಗುಣಪಡಿಸಿದರು.


ಆಗ ಹಾಸಿಗೆಯ ಮೇಲೆ ಮಲಗಿದ್ದ, ಒಬ್ಬ ಪಾರ್ಶ್ವವಾಯು ರೋಗಿಯನ್ನು ಜನರು ಯೇಸುವಿನ ಬಳಿಗೆ ತಂದರು. ಯೇಸು ಅವರ ನಂಬಿಕೆಯನ್ನು ಕಂಡು, ಆ ಪಾರ್ಶ್ವವಾಯು ರೋಗಿಗೆ, “ಮಗನೇ, ಧೈರ್ಯವಾಗಿರು. ನಿನ್ನ ಪಾಪಗಳು ಕ್ಷಮಿಸಲಾಗಿವೆ,” ಎಂದರು.


ಯೇಸು ಅವರು ಯೋಚಿಸುತ್ತಿರುವುದನ್ನು ಕೂಡಲೇ ತಮ್ಮ ಆತ್ಮದಲ್ಲಿ ಗ್ರಹಿಸಿಕೊಂಡು ಅವರಿಗೆ, “ನೀವು ನಿಮ್ಮ ಮನಸ್ಸಿನಲ್ಲಿ ಹೀಗೆ ಆಲೋಚಿಸುವುದೇಕೆ?


ಆದರೆ ಮನುಷ್ಯಪುತ್ರನಾದ ನನಗೆ ಭೂಲೋಕದಲ್ಲಿ ಪಾಪಗಳನ್ನು ಕ್ಷಮಿಸುವುದಕ್ಕೆ ಅಧಿಕಾರವುಂಟೆಂದು ನೀವು ತಿಳಿಯಬೇಕು,” ಎಂದು ಹೇಳಿ ಆ ಪಾರ್ಶ್ವವಾಯು ರೋಗಿಗೆ,


ಯೇಸು ಆಕೆಗೆ, “ನಿನ್ನ ಪಾಪಗಳು ಕ್ಷಮಿಸಲಾಗಿವೆ,” ಎಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು