Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 3:17 - ಕನ್ನಡ ಸಮಕಾಲಿಕ ಅನುವಾದ

17 ಜೆಬೆದಾಯನ ಮಗ ಯಾಕೋಬ ಮತ್ತು ಅವನ ತಮ್ಮ ಯೋಹಾನ ಇವರಿಗೆ ಯೇಸು “ಬೊವನೆರ್ಗೆಸ್” ಎಂದರೆ ಗುಡುಗಿನ ಪುತ್ರರು ಎಂಬ ಹೆಸರಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಜೆಬೆದಾಯನ ಮಗನಾದ ಯಾಕೋಬನಿಗೂ ಯಾಕೋಬನ ತಮ್ಮನಾದ ಯೋಹಾನನಿಗೂ ಬೊವನೆರ್ಗೆಸ್ ಅಂದರೆ ಸಿಡಿಲ ಮರಿಗಳು ಎಂದು ಹೆಸರಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಜೆಬೆದಾಯನ ಮಗ ಯಕೋಬ ಮತ್ತು ಅವನ ಸಹೋದರ ಯೊವಾನ್ನ (ಯೇಸು ಇವರಿಬ್ಬರಿಗೆ ‘ಬೊವನೆರ್ಗೆಸ್’ ಎಂದರೆ ‘ಸಿಡಿಲಮರಿಗಳು’ ಎಂಬ ಹೆಸರನ್ನಿಟ್ಟರು).

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಜೆಬೆದಾಯನ ಮಗನಾದ ಯಾಕೋಬನಿಗೂ ಯಾಕೋಬನ ತಮ್ಮನಾದ ಯೋಹಾನನಿಗೂ ಬೊವನೆರ್ಗೆಸ್ ಅಂದರೆ ಗುಡುಗಿನ ಮರಿಗಳು ಎಂದು ಹೆಸರಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಜಿಬೆದಾಯನ ಮಕ್ಕಳಾದ ಯಾಕೋಬ ಮತ್ತು ಯೋಹಾನ (ಯೇಸು ಅವರಿಗೆ ಬೊವನೆರ್ಗೆಸ್ ಎಂಬ ಹೆಸರನ್ನಿತ್ತನು. ಈ ಹೆಸರಿಗೆ “ಸಿಡಿಲಿನ ಜನರು” ಎಂದರ್ಥ.)

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

17 ಜೆಬೆದೆವಾಚಿ ಪೊರಾ, ಜಾಕೊಬ್ ಅನಿ ತೆಚೊ ಭಾವ್ ಜುವಾಂವ್ ಹೆಂಕಾ ಜೆಜುನ್ “ಬೊವನೆರ್ಗೆಸ್” ತಸೆ ಮಟ್ಲ್ಯಾರ್, ಗುಡ್ಗುಡ್ಯಾಚಿ ಮಾನ್ಸಾ, ಮನುನ್ ನಾವ್ ಥವ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 3:17
16 ತಿಳಿವುಗಳ ಹೋಲಿಕೆ  

ಯಾಕೆಂದರೆ ದೇವರ ವಾಕ್ಯವು ಸಜೀವವಾದದ್ದು, ಕ್ರಿಯಾತ್ಮಕವಾದದ್ದು, ಇಬ್ಬಾಯಿ ಕತ್ತಿಗಿಂತಲೂ ಹರಿತವಾದದ್ದು, ಪ್ರಾಣ ಮತ್ತು ಆತ್ಮಗಳ ಕೀಲು ಮಜ್ಜೆಗಳನ್ನು ವಿಭಾಗಿಸುವಷ್ಟರ ಮಟ್ಟಿಗೆ ಛೇದಿಸುವಂಥದ್ದು, ಹೃದಯದ ಆಲೋಚನೆಗಳನ್ನೂ ಉದ್ದೇಶಗಳನ್ನೂ ವಿವೇಚಿಸಿ ತೀರ್ಪು ನೀಡುವಂಥದ್ದು ಆಗಿದೆ.


ಯೇಸು ಪೇತ್ರ, ಯಾಕೋಬ, ಯೋಹಾನರನ್ನು ತಮ್ಮೊಂದಿಗೆ ಕರೆದುಕೊಂಡು ಹೋಗಿ, ಬಹು ಬೆರಗಾಗಿ ವ್ಯಥೆಗೊಳ್ಳಲಾರಂಭಿಸಿ,


ಯೇಸು ತಮ್ಮ ಸಂಗಡ ಪೇತ್ರ, ಯಾಕೋಬ ಮತ್ತು ಅವನ ತಮ್ಮ ಯೋಹಾನನನ್ನು ಹೊರತು ಬೇರೆ ಯಾರನ್ನೂ ಬರುವುದಕ್ಕೆ ಅನುಮತಿಸಲಿಲ್ಲ.


“ನನ್ನ ವಾಕ್ಯ ಬೆಂಕಿಗೆ ಸಮಾನ, ಬಂಡೆಯನ್ನು ಪುಡಿಪುಡಿ ಮಾಡುವ ಸುತ್ತಿಗೆಗೆ ಸಮಾನ.” ಇದು ಯೆಹೋವ ದೇವರಾದ ನನ್ನ ನುಡಿ.


ಆ ದಿನಗಳಲ್ಲಿ ಅರಸನಾದ ಹೆರೋದನು ದೇವರ ಸಭೆಯ ಸದಸ್ಯರನ್ನು ಹಿಂಸಿಸುವ ಉದ್ದೇಶದಿಂದ ಕೆಲವರನ್ನು ಬಂಧಿಸಿದನು.


ಸೀಮೋನ ಪೇತ್ರನೂ ದಿದುಮನೆಂಬ ತೋಮನೂ ಗಲಿಲಾಯದ ಕಾನಾ ಊರಿನ ನತಾನಯೇಲನೂ ಜೆಬೆದಾಯನ ಮಕ್ಕಳೂ ಅವರ ಶಿಷ್ಯರಲ್ಲಿ ಇನ್ನಿಬ್ಬರೂ ಒಟ್ಟಾಗಿ ಕೂಡಿದ್ದರು.


ಆಗ ಜೆಬೆದಾಯನ ಮಕ್ಕಳಾದ ಯಾಕೋಬ ಮತ್ತು ಯೋಹಾನರು ಯೇಸುವಿನ ಬಳಿಗೆ ಬಂದು, “ಬೋಧಕರೇ, ನಾವು ಕೇಳುವುದನ್ನು ನೀವು ನಮಗೋಸ್ಕರ ಮಾಡಬೇಕು,” ಎಂದರು.


ಯೇಸು ಆರು ದಿನಗಳಾದ ಮೇಲೆ ಪೇತ್ರ, ಯಾಕೋಬ, ಯೋಹಾನನನ್ನೂ ತಮ್ಮೊಂದಿಗೆ ಕರೆದುಕೊಂಡು ಏಕಾಂತವಾಗಿ ಒಂದು ಎತ್ತರವಾದ ಬೆಟ್ಟಕ್ಕೆ ಹೋದರು. ಅಲ್ಲಿ ಯೇಸು ಅವರ ಮುಂದೆ ರೂಪಾಂತರಗೊಂಡರು.


“ಗಟ್ಟಿಯಾಗಿ ಕೂಗು, ಹಿಂತೆಗೆಯಬೇಡ. ತುತೂರಿಯಂತೆ ನಿನ್ನ ಸ್ವರವನ್ನೆತ್ತು. ನನ್ನ ಜನರಿಗೆ ಅವರ ದ್ರೋಹವನ್ನೂ ಯಾಕೋಬನ ಮನೆಯವರಿಗೆ ಅವರ ಪಾಪವನ್ನು ಘೋಷಿಸು.


ಆಗ ನನಗೆ, “ನೀನು ಅನೇಕ ಪ್ರಜೆ, ರಾಷ್ಟ್ರ, ಜನಾಂಗ, ಭಾಷೆ ಮತ್ತು ಅರಸರ ಮುಂದೆ ಪುನಃ ಪ್ರವಾದಿಸಬೇಕು,” ಎಂದು ಹೇಳಲಾಯಿತು.


ಯೇಸು ಅಲ್ಲಿಂದ ಮುಂದೆ ಹೋಗುತ್ತಿದ್ದಾಗ ಇನ್ನಿಬ್ಬರು ಅಣ್ಣತಮ್ಮಂದಿರನ್ನು ಅಂದರೆ, ಜೆಬೆದಾಯನ ಮಗ ಯಾಕೋಬ ಮತ್ತು ಅವನ ಸಹೋದರ ಯೋಹಾನನನ್ನು ಕಂಡರು. ಅವರು ತಮ್ಮ ತಂದೆ ಜೆಬೆದಾಯನೊಡನೆ ದೋಣಿಯೊಳಗೆ ತಮ್ಮ ಬಲೆಗಳನ್ನು ಸರಿಪಡಿಸುತ್ತಿದ್ದರು. ಯೇಸು ಅವರನ್ನೂ ಕರೆದರು.


ಯೇಸು ನೇಮಿಸಿದ ಹನ್ನೆರಡು ಮಂದಿ ಅಪೊಸ್ತಲರ ಹೆಸರುಗಳು ಇಂತಿವೆ: ಸೀಮೋನನಿಗೆ ಯೇಸು “ಪೇತ್ರ” ಎಂಬ ಹೆಸರನ್ನು ಕೊಟ್ಟರು.


ಅಂದ್ರೆಯ, ಫಿಲಿಪ್ಪ, ಬಾರ್ತೊಲೊಮಾಯ, ಮತ್ತಾಯ, ತೋಮ, ಅಲ್ಫಾಯನ ಮಗ ಯಾಕೋಬ, ತದ್ದಾಯ, ಕಾನಾನ್ಯನಾದ ಸೀಮೋನನು.


ಯೇಸುವಿನ ಶಿಷ್ಯರಾದ ಯಾಕೋಬ ಮತ್ತು ಯೋಹಾನರು ಇದನ್ನು ಕಂಡು, “ಕರ್ತದೇವರೇ, ಎಲೀಯನು ಮಾಡಿದ ಪ್ರಕಾರ ಇವರನ್ನು ದಹಿಸಿಬಿಡುವಂತೆ ಆಕಾಶದಿಂದ ಬೆಂಕಿ ಬೀಳುವ ಹಾಗೆ ನಾವು ಅಪ್ಪಣೆಕೊಡಲು ನಿಮಗೆ ಒಪ್ಪಿಗೆ ಇದೆಯೋ?” ಎಂದು ಕೇಳಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು