Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 3:21 - ಕನ್ನಡ ಸಮಕಾಲಿಕ ಅನುವಾದ

21 ಯೇಸುವಿನ ಕುಟುಂಬದವರು ಇದನ್ನು ಕೇಳಿದಾಗ, “ಆತನಿಗೆ ಹುಚ್ಚುಹಿಡಿದಿದೆ,” ಎಂದು ಹೇಳಿ, ಯೇಸುವನ್ನು ಹಿಡಿದು ತರಲು ಹೊರಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಇದನ್ನು ಕೇಳಿ ಆತನ ಬಂಧುಗಳು “ಅವನಿಗೆ ಹುಚ್ಚುಹಿಡಿದಿದೆ” ಎಂದು ಹೇಳಿ ಆತನನ್ನು ಹಿಡಿಯುವುದಕ್ಕೆ ಹೊರಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 :ಈತನಿಗೆ ಹುಚ್ಚು ಹಿಡಿದಿದೆ,” ಎಂದು ಜನರು ಮಾತಾಡಿಕೊಳ್ಳುತ್ತಿದ್ದರು. ಆದ್ದರಿಂದ ಯೇಸುವಿನ ಬಂಧುಗಳು ಯೇಸುವನ್ನು ಹಿಡಿದುತರಲು ಹೊರಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಇದನ್ನು ಕೇಳಿ ಆತನ ಬಂಧುಗಳು ಅವನಿಗೆ ಹುಚ್ಚುಹಿಡಿದದೆ ಎಂದು ಹೇಳಿ ಆತನನ್ನು ಹಿಡಿಯುವದಕ್ಕೆ ಹೊರಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ಯೇಸುವಿನ ಕುಟುಂಬದವರಿಗೆ ಈ ವಿಷಯಗಳೆಲ್ಲ ತಿಳಿದವು. ಯೇಸುವಿಗೆ ಹುಚ್ಚು ಹಿಡಿದಿದೆಯೆಂದು ಕೆಲವರು ಹೇಳಿದ್ದರಿಂದ ಆತನ ಕುಟುಂಬದವರು ಆತನನ್ನು ಕರೆದೊಯ್ಯಲು ಅಲ್ಲಿಗೆ ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

21 ಜೆಜುಚ್ಯಾ ಘರಾತ್ಲ್ಯಾ ಲೊಕಾನಿ “ತೆಕಾ ಪಿಶೆ ಲಾಗ್ಲಾ” ಮನುನ್, ಲೊಕಾ ಮನ್ತಲೆ ಆಯಿಕ್ಲ್ಯಾನಿ ಅನಿ ಜೆಜುಕ್, ಘರಾಕ್ ಬಲ್ವುನ್ ಘೆವ್ನ್ ಜಾವ್ಕ್ ಮನುನ್ ಗೆಲ್ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 3:21
8 ತಿಳಿವುಗಳ ಹೋಲಿಕೆ  

ಹೀಗೆ ಪೌಲನು ಪ್ರತಿವಾದ ಮಾಡುತ್ತಿದ್ದಾಗ, ಫೆಸ್ತನು ಮಧ್ಯೆ ಬಾಯಿ ಹಾಕಿ, “ಪೌಲನೇ, ನಿನಗೆ ಹುಚ್ಚುಹಿಡಿದಿದೆ! ನಿನ್ನ ಅಧಿಕಪಾಂಡಿತ್ಯ ನಿನ್ನನ್ನು ಹುಚ್ಚನನ್ನಾಗಿ ಮಾಡಿದೆ,” ಎಂದು ಗಟ್ಟಿಯಾಗಿ ಕೂಗಿದನು.


ಅವರಲ್ಲಿ ಅನೇಕರು, “ಆತನಿಗೆ ದೆವ್ವ ಹಿಡಿದಿದೆ. ಆತನು ಹುಚ್ಚನಾಗಿದ್ದಾನೆ, ನೀವು ಏಕೆ ಆತನಿಗೆ ಕಿವಿಗೊಡುತ್ತೀರಿ?” ಎಂದರು.


ಆಗ ಯೇಸುವಿನ ತಾಯಿ ಮತ್ತು ಸಹೋದರರು ಬಂದು ಹೊರಗೆ ನಿಂತುಕೊಂಡು, ಯೇಸುವನ್ನು ಕರೆಯಲು ಹೇಳಿ ಕಳುಹಿಸಿದರು.


ನಮಗೆ ಬುದ್ಧಿ ಭ್ರಮಣೆಯಾಗಿದ್ದರೆ, ಅದು ದೇವರಿಗಾಗಿಯೇ. ನಾವು ಸ್ವಸ್ಥಬುದ್ಧಿಯುಳ್ಳವರಾಗಿದ್ದರೆ, ಅದು ನಿಮಗಾಗಿಯೇ.


ಆಗ ಯೇಹುವು ತನ್ನ ಯಜಮಾನನ ಸೇವಕರ ಬಳಿಗೆ ಬಂದನು. ಅವರು ಅವನಿಗೆ, “ಶುಭವೋ? ಆ ಹುಚ್ಚನು ನಿನ್ನ ಬಳಿಗೆ ಬಂದದ್ದೇನು?” ಎಂದರು. ಅವನು ಅವರಿಗೆ, “ಆ ಮನುಷ್ಯನನ್ನೂ ಅವನ ಮಾತನ್ನೂ ನೀವು ಬಲ್ಲಿರಿ,” ಎಂದನು.


ದಂಡನೆಯ ದಿವಸಗಳು ಬಂದಿವೆ, ಮುಯ್ಯಿ ತೀರಿಸುವ ದಿವಸಗಳೂ ಸಮೀಪವಾಗಿವೆ. ಇಸ್ರಾಯೇಲು ಅದನ್ನು ತಿಳಿದುಕೊಳ್ಳಲಿ. ಏಕೆಂದರೆ ನಿನ್ನ ಪಾಪಗಳು ಬಹಳವಾಗಿರುವುದರಿಂದಲೂ, ದ್ವೇಷವು ಹೆಚ್ಚಾಗಿರುವುದರಿಂದಲೂ, “ಪ್ರವಾದಿ ಮೂರ್ಖನೂ, ಪ್ರೇರಿತ ಮನುಷ್ಯನು ಹುಚ್ಚನೂ,” ಎಂದು ಇಸ್ರಾಯೇಲು ಹೇಳಿಕೊಳ್ಳುತ್ತದೆ.


‘ಏಕೆಂದರೆ, ಹುಚ್ಚನಾದ ತನ್ನನ್ನು ಪ್ರವಾದಿಯಾಗಿ ಮಾಡಿಕೊಳ್ಳುವಂಥ ಪ್ರತಿ ಮನುಷ್ಯನಿಗೆ ಯೆಹೋವ ದೇವರ ಆಲಯದಲ್ಲಿ ಅಧಿಕಾರಿಗಳು ಇರುವ ಹಾಗೆಯೂ, ನೀನು ಅಂಥವರನ್ನು ಕೋಳದಲ್ಲಿಯೂ, ಸೆರೆಯಲ್ಲಿಯೂ ಇಡುವ ಹಾಗೆಯೂ, ಯೆಹೋವ ದೇವರು ಯಾಜಕನಾದ ಯೆಹೋಯಾದನಿಗೆ ಬದಲಾಗಿ ನಿನ್ನನ್ನು ಯಾಜಕನಾಗಿ ಇಟ್ಟಿದ್ದಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು