ಮಾರ್ಕ 3:22 - ಕನ್ನಡ ಸಮಕಾಲಿಕ ಅನುವಾದ22 ಯೆರೂಸಲೇಮಿನಿಂದ ಬಂದ ನಿಯಮ ಬೋಧಕರು, “ಈತನನ್ನು ಬೆಲ್ಜೆಬೂಲನು ಹಿಡಿದಿದ್ದಾನೆ! ದೆವ್ವಗಳ ಅಧಿಪತಿಯ ಸಹಾಯದಿಂದಲೇ ಈತನು ದೆವ್ವಗಳನ್ನು ಓಡಿಸುತ್ತಾನೆ,” ಎಂದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201922 ಇದಲ್ಲದೆ ಯೆರೂಸಲೇಮಿನಿಂದ ಬಂದಿದ್ದ ಶಾಸ್ತ್ರಿಗಳು, “ಇವನನ್ನು ಬೆಲ್ಜೆಬೂಲನು ಹಿಡಿದಿದ್ದಾನೆಂತಲೂ ಇವನು ದೆವ್ವಗಳ ಒಡೆಯನ ಸಹಾಯದಿಂದ ದೆವ್ವಗಳನ್ನು ಬಿಡಿಸುತ್ತಾನೆಂತಲೂ” ಹೇಳುತ್ತಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)22 ಇದಲ್ಲದೆ, ಜೆರುಸಲೇಮಿನಿಂದ ಬಂದಿದ್ದ ಧರ್ಮಶಾಸ್ತ್ರಿಗಳು, “ಇವನನ್ನು ಬೆಲ್ಜೆಬೂಲನು ಹಿಡಿದಿದ್ದಾನೆ; ದೆವ್ವಗಳ ಒಡೆಯನ ಶಕ್ತಿಯಿಂದಲೇ ಇವನು ದೆವ್ವಬಿಡಿಸುತ್ತಾನೆ,” ಎನ್ನುತ್ತಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)22 ಇದಲ್ಲದೆ ಯೆರೂಸಲೇವಿುನಿಂದ ಬಂದಿದ್ದ ಶಾಸ್ತ್ರಿಗಳು - ಇವನನ್ನು ಬೆಲ್ಜೆಬೂಲನು ಹಿಡಿದಿದ್ದಾನೆಂತಲೂ ಇವನು ದೆವ್ವಗಳ ಒಡೆಯನ ಸಹಾಯದಿಂದ ದೆವ್ವಗಳನ್ನು ಬಿಡಿಸುತ್ತಾನೆಂತಲೂ ಹೇಳುತ್ತಿದ್ದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್22 ಜೆರುಸಲೇಮಿನ ಧರ್ಮೋಪದೇಶಕರು, “ಇವನೊಳಗೆ ದೆವ್ವಗಳ ಒಡೆಯನಾದ ಬೆಲ್ಜೆಬೂಲನು ವಾಸಿಸುತ್ತಿದ್ದಾನೆ. ದೆವ್ವಗಳಿಂದ ಪೀಡಿತರಾಗಿರುವವರನ್ನು ಇವನು ಬಿಡಿಸುವುದು ದೆವ್ವಗಳ ಒಡೆಯನ ಸಹಾಯದಿಂದಲೇ” ಎಂದು ಹೇಳಿದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್22 ಜೆರುಜಲೆಮಾತ್ನಾ ಯೆಲ್ಲೆ, ಖಾಯ್ದೆ ಸಿಕ್ವುತಲೆ, “ತೆಚ್ಯಾ ಆಂಗಾತ್ ಗಿರ್‍ಯಾಂಚೊ ವಡಿಲ್ ಬೆಎಲ್ಜೆಬುಲ್ ಹಾಯ್. ತ್ಯಾ ಗಿರ್‍ಯಾಚ್ಯಾ ಬಳಾನ್ ತೊ ಲೊಕಾಕ್ನಿಲಾಗಲ್ಲಿ ಗಿರೆ ಸೊಡ್ಸುತಾ,” ಮನುಲಾಗಲ್ಲೆ. ಅಧ್ಯಾಯವನ್ನು ನೋಡಿ |