Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 3:28 - ಕನ್ನಡ ಸಮಕಾಲಿಕ ಅನುವಾದ

28 ನಾನು ನಿಮಗೆ ನಿಜವಾಗಿ ಹೇಳುವುದೇನೆಂದರೆ, ಮನುಷ್ಯರು ಮಾಡುವ ಎಲ್ಲಾ ಪಾಪಗಳಿಗೆ ಮತ್ತು ದೂಷಣೆಗಳಿಗೆ ಕ್ಷಮಾಪಣೆ ದೊರೆಯುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ, ಮನುಷ್ಯರು ಮಾಡುವ ಎಲ್ಲಾ ಪಾಪಗಳಿಗೂ ದೂಷಣೆಗಳಿಗೂ ಕ್ಷಮಾಪಣೆ ಸಿಕ್ಕುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

28 ನಿಶ್ಚಯವಾಗಿ ನಿಮಗೆ ಹೇಳುತ್ತೇನೆ: ಮನುಷ್ಯರು ಮಾಡುವ ಎಲ್ಲಾ ಪಾಪಗಳಿಗೂ ಆಡುವ ಎಲ್ಲಾ ದೇವದೂಷಣೆಗಳಿಗೂ ಕ್ಷಮೆ ದೊರಕಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

28-30 ಇದಲ್ಲದೆ ಅವರು - ಇವನಿಗೆ ದೆವ್ವ ಹಿಡಿದದೆ ಎಂದು ಹೇಳಿದ್ದರಿಂದ ಆತನು ಅವರಿಗೆ - ನಿಮಗೆ ಸತ್ಯವಾಗಿ ಹೇಳುತ್ತೇನೆ, ಮನುಷ್ಯರು ಎಷ್ಟು ದೂಷಿಸಿದಾಗ್ಯೂ ಅವರು ಮಾಡುವ ಎಲ್ಲಾ ಪಾಪಗಳಿಗೂ ದೂಷಣೆಗಳಿಗೂ ಕ್ಷಮಾಪಣೆ ಉಂಟಾಗುವದು, ಆದರೆ ಪವಿತ್ರಾತ್ಮನನ್ನು ದೂಷಿಸಿದವನು ಎಂದಿಗೂ ಕ್ಷಮಾಪಣೆ ಹೊಂದನು; ಅವನು ಶಾಶ್ವತ ಪಾಪದೊಳಗೆ ಸೇರಿದವನಾದನು ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

28 “ನಾನು ನಿಮಗೆ ಸತ್ಯವನ್ನು ಹೇಳುತ್ತಿದ್ದೇನೆ, ಜನರು ಮಾಡುವ ಎಲ್ಲಾ ಪಾಪಗಳಿಗೂ ದೇವದೂಷಣೆಗಳಿಗೂ ಕ್ಷಮೆ ದೊರೆಯಲು ಸಾಧ್ಯ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

28 “ಖರೆಚ್ ಮಿಯಾ ತುಮ್ಕಾ ಸಾಂಗ್ತಾ, ಮಾನ್ಸಾನಿ ಕರಲ್ಲ್ಯಾ ಸಗ್ಳ್ಯಾ ಪಾಪಾಂಚಿ, ಅನಿ ದೆವಾಚ್ಯಾ ವರ್‍ತಿ ಬೊಲಲ್ಲ್ಯಾ ನಿಂದ್ಯಾಂಚಿ, ಮಾಪಿ ಗಾವ್ತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 3:28
8 ತಿಳಿವುಗಳ ಹೋಲಿಕೆ  

ಮರಣಕರವಲ್ಲದ ಪಾಪವನ್ನು ಮಾಡುವ ಸಹೋದರ ಅಥವಾ ಸಹೋದರಿಯನ್ನು ಯಾರಾದರೂ ಕಂಡರೆ, ಆ ಸಹೋದರ ಅಥವಾ ಸಹೋದರಿಯರಿಗಾಗಿ ದೇವರಲ್ಲಿ ಬೇಡಿಕೊಳ್ಳಿರಿ. ದೇವರು ಅವರಿಗೆ ಜೀವವನ್ನು ದಯಪಾಲಿಸುವರು. ಮರಣಕರವಲ್ಲದ ಪಾಪವನ್ನು ಕುರಿತೇ ಈ ಮಾತನ್ನು ಹೇಳುತ್ತಿದ್ದೇನೆ. ಆದರೆ ಮರಣಕರವಾದ ಪಾಪವೂ ಉಂಟು. ಈ ಮರಣಕರವಾದ ಪಾಪದ ವಿಷಯವಾಗಿ ಬೇಡಿಕೊಳ್ಳಬೇಕೆಂದು ನಾನು ಹೇಳುತ್ತಿಲ್ಲ.


ಮನುಷ್ಯಪುತ್ರನಾದ ನನಗೆ ವಿರೋಧವಾಗಿ ಮಾತನಾಡುವ ಪ್ರತಿಯೊಬ್ಬರಿಗೂ ಕ್ಷಮಾಪಣೆಯಾಗುವುದು, ಆದರೆ ಪವಿತ್ರಾತ್ಮರಿಗೆ ವಿರೋಧವಾಗಿ ದೂಷಣೆ ಮಾಡಿದರೆ ಅದಕ್ಕೆ ಕ್ಷಮಾಪಣೆಯಿಲ್ಲ.


ಯೆಹೋವ ದೇವರ ನಾಮವನ್ನು ದೂಷಣೆ ಮಾಡುವವನಿಗೆ ನಿಶ್ಚಯವಾಗಿ ಮರಣವನ್ನು ವಿಧಿಸಬೇಕು. ಸಭೆಯವರೆಲ್ಲರೂ ನಿಶ್ಚಯವಾಗಿ ಅವನಿಗೆ ಕಲ್ಲೆಸೆಯಬೇಕು. ಇದಲ್ಲದೆ ಸ್ವದೇಶೀಯನಾಗಿರಲಿ, ಪರಕೀಯನಾಗಿರಲಿ ಯೆಹೋವ ದೇವರ ಹೆಸರನ್ನು ದೂಷಣೆ ಮಾಡಿದಾಗ, ಅವನನ್ನು ಮರಣ ಶಿಕ್ಷೆಗೆ ಒಳಪಡಿಸಬೇಕು.


ಆಗ ನಿಯಮ ಬೋಧಕರಲ್ಲಿ ಕೆಲವರು, “ಈತನು ದೇವದೂಷಣೆ ಮಾಡುತ್ತಿದ್ದಾನೆ,” ಎಂದು ತಮ್ಮತಮ್ಮೊಳಗೆ ಮಾತನಾಡಿಕೊಂಡರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು