Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 3:8 - ಕನ್ನಡ ಸಮಕಾಲಿಕ ಅನುವಾದ

8 ಯೇಸು ಮಾಡುತ್ತಿದ್ದ ಎಲ್ಲವನ್ನು ಕೇಳಿ, ಬಹುಜನರು ಯೂದಾಯದಿಂದಲೂ ಯೆರೂಸಲೇಮ್ ನಗರದಿಂದಲೂ ಇದುಮಾಯದಿಂದಲೂ ಯೊರ್ದನ್ ನದಿಯ ಆಚೆಕಡೆಯಿಂದಲೂ ಟೈರ್, ಸೀದೋನ್ ಪಟ್ಟಣಗಳ ಸುತ್ತಲಿನಿಂದಲೂ ಯೇಸುವಿನ ಬಳಿಗೆ ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಇದಲ್ಲದೆ ಆತನು ಇಂಥಿಂಥ ಕೆಲಸಗಳನ್ನು ಮಾಡುತ್ತಾನೆಂದು ಕೇಳಿ ಬಹುಜನರು ಯೂದಾಯದಿಂದಲೂ, ಯೆರೂಸಲೇಮಿನಿಂದಲೂ, ಇದೂಮಾಯದಿಂದಲೂ, ಯೊರ್ದನ್ ಹೊಳೆಯ ಆಚೆಯಿಂದಲೂ, ತೂರ್, ಸೀದೋನ್ ಪಟ್ಟಣಗಳ ಸುತ್ತಲಿನಿಂದಲೂ ಆತನ ಬಳಿಗೆ ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಈ ಜನರು ಯೇಸು ಮಾಡುತ್ತಿದ್ದ ಮಹತ್ಕಾರ್ಯಗಳ ಸಮಾಚಾರವನ್ನು ಕೇಳಿ, ಗಲಿಲೇಯ ಪ್ರಾಂತ್ಯದಿಂದ, ಜುದೇಯ ಪ್ರಾಂತ್ಯದಿಂದ, ಜೆರುಸಲೇಮ್ ನಗರದಿಂದ, ಇದು ಮೇಯ ಪ್ರಾಂತ್ಯದಿಂದ ಜೋರ್ಡನ್ ನದಿಯ ಪೂರ್ವಪ್ರದೇಶ ಹಾಗೂ ಟೈರ್-ಸಿದೋನ್ ಪಟ್ಟಣಗಳ ಸುತ್ತಮುತ್ತಲಿಂದ ಬಂದಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಇದಲ್ಲದೆ ಆತನು ಇಂಥಿಂಥ ಕೆಲಸಗಳನ್ನು ಮಾಡುತ್ತಾನೆಂದು ಕೇಳಿ ಬಹುಜನರು ಯೂದಾಯದಿಂದಲೂ ಯೆರೂಸಲೇವಿುನಿಂದಲೂ ಇದೂಮಾಯದಿಂದಲೂ ಯೊರ್ದನ್ ಹೊಳೆಯ ಆಚೆಯಿಂದಲೂ ತೂರ್ ಸೀದೋನ್ ಪಟ್ಟಣಗಳ ಸುತ್ತಲಿನಿಂದಲೂ ಆತನ ಬಳಿಗೆ ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಅನೇಕಾನೇಕ ಜನರು ಜುದೇಯದಿಂದ, ಜೆರುಸಲೇಮಿನಿಂದ, ಇದೂಮಾಯದಿಂದ, ಜೋರ್ಡನ್ ನದಿಯ ಆಚೆಗಿರುವ ಪ್ರದೇಶದಿಂದ ಮತ್ತು ಟೈರ್, ಸೀದೋನ್‌ಗಳ ಸುತ್ತಲಿನ ಪ್ರದೇಶಗಳಿಂದ ಬಂದರು. ಯೇಸುವು ಮಾಡುತ್ತಿದ್ದ ಕಾರ್ಯಗಳ ಬಗ್ಗೆ ಅವರು ಕೇಳಿ ಬಂದಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

8 ಗಾಲಿಲಿಯಾ, ಜುದೆಯಾ, ಅನಿ ಇದುಮೆಯಾ, ಮನ್ತಲ್ಯಾ ಪ್ರಾಂತ್ಯಾನಿತ್ನಾ, ಜೆರುಜಲೆಮ್, ಮನ್ತಲ್ಯಾ ಶಾರಾತ್ನಾ, ಅನಿ ಜೊರ್ದಾನ್ ನ್ಹಯ್ಚ್ಯಾ ತಿಕುಲ್ಲ್ಯಾ ಬಾಜುಕ್ನಾ, ತಿರ್ ಅನಿ ಸಿದೊನ್ ಮನ್ತಲ್ಯಾ ಶಾರಾಂಚ್ಯಾ ಅಜು-ಬಾಜುಚ್ಯಾ ಗಾವಾನಿತ್ನಾ, ಜೆಜುನ್ ಕರಲ್ಲ್ಯಾ ಬರ್‍ಯಾ ಕಾಮಾಂಚಿ ಖಬರ್ ಆಯ್ಕುನ್, ಹಿ ಲೊಕಾ ಥೈ ಯೆವ್ನ್ ಗೊಳಾ ಹೊಲ್ಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 3:8
18 ತಿಳಿವುಗಳ ಹೋಲಿಕೆ  

ಹೇಗೆ ನೀನು ಇಸ್ರಾಯೇಲರ ಸ್ವಾಸ್ತ್ಯದ ನಾಶನಕ್ಕೆ ಹೇಗೆ ಸಂತೋಷಪಟ್ಟೆಯೋ ಹಾಗೆಯೇ ನಿನ್ನ ನಾಶನಕ್ಕೆ ಸಂತೋಷಪಡುವ ಹಾಗೆ ಮಾಡುವೆನು. ಸೇಯೀರ್ ಪರ್ವತವೇ ಮತ್ತು ಸಮಸ್ತ ಎದೋಮೇ ಸಂಪೂರ್ಣವಾಗಿ ಹಾಳಾಗುವೆ. ಆಗ ನಾನೇ ಯೆಹೋವ ದೇವರೆಂದು ನಿಮಗೆ ತಿಳಿಯುವುದು.’ ”


“ಖೊರಾಜಿನೇ, ನಿನಗೆ ಕಷ್ಟ! ಬೇತ್ಸಾಯಿದವೇ, ನಿನಗೆ ಕಷ್ಟ! ಏಕೆಂದರೆ ನಿಮ್ಮಲ್ಲಿ ನಡೆದ ಮಹತ್ಕಾರ್ಯಗಳು ಟೈರ್ ಮತ್ತು ಸೀದೋನ್ ಪಟ್ಟಣಗಳಲ್ಲಿ ನಡೆದಿದ್ದರೆ, ಅಲ್ಲಿಯವರು ಬಹಳ ಕಾಲದ ಹಿಂದೆಯೇ, ಗೋಣಿತಟ್ಟನ್ನು ಸುತ್ತಿಕೊಂಡು ಬೂದಿಯಲ್ಲಿ ಕುಳಿತುಕೊಂಡು ದೇವರ ಕಡೆ ತಿರುಗಿಕೊಳ್ಳುತ್ತಿದ್ದರು.


ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ನಿಶ್ಚಯವಾಗಿ ನನ್ನ ರೋಷದ ಬೆಂಕಿಯಿಂದ ಇತರ ಜನಾಂಗಗಳಲ್ಲಿ ಉಳಿದವರಿಗೂ ಎದೋಮಿನವರೆಲ್ಲರಿಗೂ ವಿರುದ್ಧವಾಗಿ ನಾನು ಮಾತನಾಡಿದ್ದೇನೆ; ಅವರ ಸಂಪೂರ್ಣ ಹೃದಯದ ಸಂತೋಷದಿಂದಲೂ ತಮ್ಮ ಹಗೆಯ ಮನೋಭಾವದಿಂದಲೂ ನನ್ನ ದೇಶವನ್ನು ತಮ್ಮ ಸೊತ್ತಾಗಿ ಮಾಡಿಕೊಂಡಿದ್ದಾರೆ. ಅವರು ಅದರ ಹುಲ್ಲುಗಾವಲನ್ನು ಸಹ ಸೂರೆಮಾಡಬೇಕೆಂದಿದ್ದಾರೆ.’


ನನ್ನ ಖಡ್ಗವು ಪರಲೋಕದಲ್ಲಿ ರೋಷಪಾನ ಮಾಡುವುದು. ಇಗೋ, ಅದು ಎದೋಮಿನ ಮತ್ತು ನಾನು ಶಪಿಸಿದ ಜನರ ಮೇಲೆಯೂ, ನ್ಯಾಯತೀರಿಸುವುದಕ್ಕಾಗಿ ಕೆಳಗೆ ಇಳಿದು ಬರುವುದು.


ಯೇಸು ಆ ಸ್ಥಳವನ್ನು ಬಿಟ್ಟು ಟೈರ್ ಪಟ್ಟಣದ ಸಮೀಪವಿದ್ದ ಪ್ರದೇಶಕ್ಕೆ ಹೋದರು. ಯೇಸು ಒಂದು ಮನೆಯೊಳಗೆ ಹೋದಾಗ, ಅದು ಯಾರಿಗೂ ತಿಳಿಯಬಾರದೆಂದು ಬಯಸಿದರು. ಆದರೂ ಅವರು ಗುಟ್ಟಾಗಿರಲು ಸಾಧ್ಯವಾಗಲಿಲ್ಲ.


“ರಾಹಬ್, ಬಾಬೆಲ್ ದೇಶಗಳವರನ್ನು, ನನ್ನನ್ನು ಬಲ್ಲವರಲ್ಲಿ ಎಣಿಸುವೆನು. ಇಗೋ, ಫಿಲಿಷ್ಟಿಯ, ಟೈರ್, ಕೂಷ್ ಜನಾಂಗಗಳು, ‘ಚೀಯೋನಿನಲ್ಲೇ ಹುಟ್ಟಿದವು.’ ”


ಟೈರಿನ ಮಗಳು ಕಾಣಿಕೆಯೊಂದಿಗೆ ಬರುವಳು; ಐಶ್ವರ್ಯವಂತರು ನಿನ್ನನ್ನು ವರಿಸಲು ಹುಡುಕಿ ಬರುವರು.


ಆಮೇಲೆ ಯೇಸು ಟೈರ್ ಪಟ್ಟಣದ ಸಮೀಪವಿದ್ದ ಪ್ರದೇಶದಿಂದ ಹೊರಟು ಸೀದೋನಿನ ಮಾರ್ಗವಾಗಿ ಗಲಿಲಾಯ ಸರೋವರ ತೀರವನ್ನು ಹಾದು ದೆಕಪೊಲಿ ಪ್ರದೇಶಕ್ಕೆ ಬಂದರು.


ಯೆಹೂದ ಗೋತ್ರಕ್ಕೆ ಅವರ ಕುಟುಂಬಗಳ ಪ್ರಕಾರ ವಿಭಾಗಿಸಿದ ಮೇರೆ ಯಾವುದೆಂದರೆ: ಕಟ್ಟಕಡೆಗಿರುವ ದಕ್ಷಿಣ ಕಡೆಗೆ ಎದೋಮಿನ ಮೇರೆಯಾದ ಚಿನ್ ಮರುಭೂಮಿಯ ದಕ್ಷಿಣ ಭಾಗ.


ದಕ್ಷಿಣದ ಕಟ್ಟಕಡೆಗಿರುವ ಎದೋಮಿನ ಮೇರೆಗೆ ಸರಿಯಾಗಿ ಯೆಹೂದ ಗೋತ್ರಕ್ಕೆ ಇರುವ ಪಟ್ಟಣಗಳು. ಅವು: ಕಬ್ಜಯೇಲ್, ಏದೆರ್, ಯಾಗೂರ್,


ಗಲಿಲಾಯ, ದೆಕಪೊಲಿ, ಯೆರೂಸಲೇಮ್, ಯೂದಾಯ ಹಾಗೂ ಯೊರ್ದನ್ ನದಿಯ ಆಚೆಕಡೆಯಿಂದಲೂ ಜನರು ದೊಡ್ಡ ಗುಂಪಾಗಿ ಯೇಸುವನ್ನು ಹಿಂಬಾಲಿಸಿದರು.


ಯೇಸು ಅವರೊಂದಿಗೆ ಕೆಳಗಿಳಿದು ಸಮತಟ್ಟಾದ ಭೂಮಿಯ ಮೇಲೆ ನಿಂತಿದ್ದಾಗ, ಅವರ ಶಿಷ್ಯರ ಗುಂಪು ಅಲ್ಲದೆ ಯೂದಾಯದಿಂದಲೂ ಯೆರೂಸಲೇಮಿನಿಂದಲೂ ಟೈರ್, ಸೀದೋನ್ ಪಟ್ಟಣಗಳಿರುವ ಸಮುದ್ರ ತೀರದಿಂದಲೂ


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು