Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 4:1 - ಕನ್ನಡ ಸಮಕಾಲಿಕ ಅನುವಾದ

1 ಯೇಸು ಮತ್ತೊಮ್ಮೆ ಗಲಿಲಾಯ ಸರೋವರದ ತೀರದಲ್ಲಿ ಬೋಧಿಸಲಾರಂಭಿಸಿದರು. ಜನರು ಗುಂಪುಗುಂಪಾಗಿ ಯೇಸುವಿನ ಸುತ್ತಲೂ ನೆರೆದು ಬಂದದ್ದರಿಂದ ಯೇಸು ಸರೋವರದಲ್ಲಿದ್ದ ದೋಣಿಯನ್ನು ಹತ್ತಿ ಕುಳಿತುಕೊಂಡರು. ಜನರು ದಡದಲ್ಲಿ ಸುತ್ತಲೂ ನಿಂತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಯೇಸುವು ಪುನಃ ಸಮುದ್ರದ ದಡದಲ್ಲಿ ಉಪದೇಶ ಮಾಡತೊಡಗಿದ್ದನು. ಬಹುಜನರು ಆತನ ಬಳಿಗೆ ಸೇರಿಬಂದಿದ್ದರಿಂದ ಆತನು ಸಮುದ್ರದಲ್ಲಿದ್ದ ದೋಣಿಹತ್ತಿ ಕುಳಿತುಕೊಂಡನು; ಆ ಜನರೆಲ್ಲರು ಸಮುದ್ರದ ದಡದಲ್ಲಿ ಸುತ್ತಲೂ ನೆರೆದುಬಂದಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಯೇಸುಸ್ವಾಮಿ ಗಲಿಲೇಯ ಸರೋವರದ ತೀರದಲ್ಲಿ ಮತ್ತೆ ಬೋಧಿಸಲಾರಂಭಿಸಿದರು. ಜನರು ಕಿಕ್ಕಿರಿದು ಸುತ್ತಲೂ ನೆರೆದುಬಂದಿದ್ದರು. ಆದುದರಿಂದ ಅವರು ಸರೋವರದಲ್ಲಿದ್ದ ದೋಣಿಯೊಂದನ್ನು ಹತ್ತಿ ಕುಳಿತರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಆತನು ತಿರಿಗಿ ಸಮುದ್ರದ ದಡದಲ್ಲಿ ಉಪದೇಶ ಮಾಡುತ್ತಿದ್ದನು. ಬಹುಜನರು ಆತನ ಬಳಿಗೆ ಕೂಡಿ ಬಂದದ್ದರಿಂದ ಆತನು ಸಮುದ್ರದಲ್ಲಿದ್ದ ದೋಣಿಹತ್ತಿ ಕೂತುಕೊಂಡನು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಮತ್ತೊಂದು ಸಮಯದಲ್ಲಿ ಯೇಸು ಸರೋವರದ ತೀರದಲ್ಲಿ ಉಪದೇಶಿಸಲಾರಂಭಿಸಿದನು. ಅನೇಕಾನೇಕ ಜನರು ಆತನ ಸುತ್ತಲೂ ಸೇರಿದರು. ಯೇಸು ಒಂದು ದೋಣಿಯೊಳಕ್ಕೆ ಹೋಗಿ ಕುಳಿತು ಸರೋವರದ ದಡದಿಂದ ಸ್ವಲ್ಪದೂರ ಹೋದನು. ಜನರೆಲ್ಲರೂ ಸರೋವರದ ದಡದ ಮೇಲಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

1 ಅನಿ ಜೆಜು, ಗಾಲಿಲಿಯಾ ಸಮುಂದರಾಚ್ಯಾ ದಂಡೆಕ್ ಜಾವ್ನ್ ಸಿಕ್ವುಕ್ಲಾಗ್ಲೊ. ಥೈ ಲೈ ಲೊಕಾ ತೆಚೆಕ್ಡೆ ಯೆವ್ನ್ ಗೊಳಾ ಹೊಲಿ. ತಸೆ ಮನುನ್ ಜೆಜು ಸಮುಂದರಾತ್ ಇಬೆ ಕರಲ್ಲ್ಯಾ ಢೊನಿತ್ ಚಡುನ್ ಬಸ್ಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 4:1
9 ತಿಳಿವುಗಳ ಹೋಲಿಕೆ  

ಯೇಸು ಪುನಃ ಸರೋವರದ ತೀರಕ್ಕೆ ಹೋದರು. ಜನರೆಲ್ಲರೂ ಯೇಸುವಿನ ಬಳಿಗೆ ಬಂದರು. ಯೇಸು ಅವರಿಗೆ ಉಪದೇಶಿಸಿದರು.


ಯೇಸು ತಮ್ಮ ಶಿಷ್ಯರೊಂದಿಗೆ ಸರೋವರದ ಬಳಿಗೆ ಹೊರಟು ಹೋದರು. ಗಲಿಲಾಯದಿಂದ ಬಂದ ಒಂದು ದೊಡ್ಡ ಜನರ ಗುಂಪು ಯೇಸುವನ್ನು ಹಿಂಬಾಲಿಸಿತು.


ಜನರ ಗುಂಪು ಹೆಚ್ಚಾಗುತ್ತಿದ್ದುದರಿಂದ ಅವರು ತಮ್ಮ ಮೈಮೇಲೆ ಬಿದ್ದಾರೆಂದು ಯೇಸು ತಮಗಾಗಿ ಒಂದು ಚಿಕ್ಕ ದೋಣಿಯನ್ನು ಸಿದ್ಧವಾಗಿಡಲು ತಮ್ಮ ಶಿಷ್ಯರಿಗೆ ಹೇಳಿದರು.


ಅವರು ಜನರ ಗುಂಪನ್ನು ಬಿಟ್ಟು, ಯೇಸುವನ್ನು ಇದ್ದ ಹಾಗೆಯೇ ದೋಣಿಯಲ್ಲಿ ಕರೆದುಕೊಂಡು ಹೋದರು. ಯೇಸುವಿನ ಸಂಗಡ ಬೇರೆ ದೋಣಿಗಳೂ ಇದ್ದವು.


ಯೇಸು ದೋಣಿಯಿಂದ ಇಳಿದುಬರುವಾಗ, ಅಶುದ್ಧಾತ್ಮವುಳ್ಳ ಒಬ್ಬನು ಸಮಾಧಿಯ ಗುಹೆಯೊಳಗಿಂದ ಹೊರಬಂದು ಅವರನ್ನು ಸಂಧಿಸಿದನು.


ಯೇಸು ಪುನಃ ದೋಣಿಯಲ್ಲಿ ಆಚೆಯ ದಡವನ್ನು ಮುಟ್ಟಿದಾಗ, ಜನರು ದೊಡ್ಡ ಗುಂಪಾಗಿ ಅವರ ಸುತ್ತಲೂ ಸೇರಿ ಬಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು