Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 4:11 - ಕನ್ನಡ ಸಮಕಾಲಿಕ ಅನುವಾದ

11 ಅದಕ್ಕೆ ಯೇಸು, “ದೇವರ ರಾಜ್ಯದ ರಹಸ್ಯವನ್ನು ತಿಳಿದುಕೊಳ್ಳುವ ಜ್ಞಾನ ನಿಮಗೆ ಕೊಡಲಾಗಿದೆ. ಆದರೆ ಹೊರಗಿನವರಿಗೆ ಎಲ್ಲವೂ ಸಾಮ್ಯದ ರೂಪದಲ್ಲಿ ಹೇಳಲಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಆತನು ಅವರಿಗೆ, “ದೇವರ ರಾಜ್ಯದ ರಹಸ್ಯ ನಿಮಗೆ ದೊರೆತಿದೆ; ಆದರೆ ಹೊರಗಿನವರಿಗೆ ಎಲ್ಲವನ್ನು ಸಾಮ್ಯಗಳ ರೂಪದಲ್ಲಿ ಹೇಳಿದ್ದೇನೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಅದಕ್ಕೆ ಯೇಸು, “ದೇವರ ಸಾಮ್ರಾಜ್ಯದ ರಹಸ್ಯವನ್ನು ನಿಮಗೆ ತಿಳಿಸಲಾಗಿದೆ. ಮಿಕ್ಕವರಿಗಾದರೋ ಅದೆಲ್ಲವೂ ಸಾಮತಿಗಳ ರೂಪದಲ್ಲಿ ಮರೆಯಾಗಿದೆ. ಏಕೆಂದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಆತನು ಅವರಿಗೆ - ದೇವರ ರಾಜ್ಯದ ಗುಟ್ಟು ನಿಮಗೇ ಕೊಟ್ಟಿದೆ; ಹೊರಗಿನವರಿಗೆ ಎಲ್ಲವೂ ಸಾಮ್ಯದ ಮರೆಯಲ್ಲಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಯೇಸು, “ದೇವರ ರಾಜ್ಯದ ಸತ್ಯದ ಗುಟ್ಟನ್ನು ನೀವು ಮಾತ್ರ ತಿಳಿದುಕೊಳ್ಳತಕ್ಕದ್ದು. ಆದರೆ ಇತರ ಎಲ್ಲಾ ಜನರಿಗೆ ನಾನು ಸಾಮ್ಯಗಳ ಮೂಲಕವಾಗಿ ಎಲ್ಲವನ್ನೂ ಹೇಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

11 ತನ್ನಾ ಜೆಜುನ್ “ದೆವಾಚ್ಯಾ ರಾಜಾಚೊ ಖರೊ ಘುಟ್, ತುಮ್ಕಾ ದಿಲ್ಲೊ ಹಾಯ್, ಖರೆ, ದುಸ್ರಿ ಲೊಕಾ ತೆ, ಕಾನಿಚ್ಯಾ ವೈನಾ ಆಯಿಕ್ತ್ಯಾತ್”.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 4:11
20 ತಿಳಿವುಗಳ ಹೋಲಿಕೆ  

ಆ ಸಮಯದಲ್ಲಿ ಯೇಸು, “ತಂದೆಯೇ, ಪರಲೋಕ ಭೂಲೋಕಗಳ ಒಡೆಯನೇ, ನೀವು ಈ ವಿಷಯಗಳನ್ನು ಜ್ಞಾನಿಗಳಿಂದಲೂ ಬುದ್ಧಿವಂತರಿಂದಲೂ ಮರೆಮಾಡಿ, ಶಿಶುಗಳಿಗೆ ಪ್ರಕಟ ಮಾಡಿರುವುದರಿಂದ ನಾನು ನಿಮ್ಮನ್ನು ಕೊಂಡಾಡುತ್ತೇನೆ.


ಅದಕ್ಕೆ ಯೇಸು, “ದೇವರ ರಾಜ್ಯದ ರಹಸ್ಯಗಳನ್ನು ತಿಳಿದುಕೊಳ್ಳುವುದಕ್ಕೆ ನಿಮಗೆ ಅನುಮತಿಸಲಾಗಿದೆ, ಆದರೆ ಉಳಿದವರಿಗೆ, “ ‘ಅವರು ಕಣ್ಣಾರೆ ನೋಡಿದರೂ ಕಾಣದಂತೆಯೂ; ಮತ್ತು ಕೇಳಿದರೂ ಗ್ರಹಿಸದಂತೆ ಸಾಮ್ಯಗಳಲ್ಲಿ ಮರೆಯಾಗಿವೆ.’


ದೇವರ ಪುತ್ರ ಆಗಿರುವ ಕ್ರಿಸ್ತ ಯೇಸುವು ಬಂದು, ಸತ್ಯವಾಗಿರುವ ದೇವರನ್ನು ನಾವು ಅರಿತುಕೊಳ್ಳುವ ಹಾಗೆ ಅವರು ನಮಗೆ ತಿಳುವಳಿಕೆಯನ್ನು ಕೊಟ್ಟಿದ್ದಾರೆಂದೂ ನಾವು ಸತ್ಯವಾಗಿರುವ ದೇವರಲ್ಲಿ ಅವರ ಪುತ್ರ ಆಗಿರುವ ಕ್ರಿಸ್ತ ಯೇಸುವಿನಲ್ಲಿ ಇರುವವರಾಗಿದ್ದೇವೆ ಎಂದೂ ನಮಗೆ ಗೊತ್ತಿದೆ. ಈ ಕ್ರಿಸ್ತ ಯೇಸುವೇ ಸತ್ಯ ದೇವರೂ ನಿತ್ಯಜೀವವೂ ಆಗಿದ್ದಾರೆ.


ಹೀಗೆ ನಿಮ್ಮ ಅನುದಿನದ ಜೀವನವು ಹೊರಗಿನವರ ಮುಂದೆ ಯೋಗ್ಯವಾಗಿರುವುದು ಮತ್ತು ನೀವು ಯಾರ ಮೇಲೆಯೂ ಆತುಕೊಳ್ಳದೆ ಬಾಳುವಿರಿ.


ಪ್ರತಿಯೊಂದು ಅವಕಾಶವನ್ನೂ ಸದುಪಯೋಗ ಮಾಡಿಕೊಂಡು ಹೊರಗಿನವರೊಂದಿಗೆ ಜಾಣತನದಿಂದ ನಡೆದುಕೊಳ್ಳಿರಿ.


ಇದಲ್ಲದೆ ಅವನು ನಿಂದೆಗೆ ಗುರಿಯಾಗದವನೂ ಸೈತಾನನ ಉರುಲಿಗೆ ಸಿಕ್ಕಿ ಬೀಳದವನೂ ಆಗಿದ್ದಾನೆಂಬ ಒಳ್ಳೆಯ ಸಾಕ್ಷಿಯನ್ನು ಹೊಂದಿದವನಾಗಿರಬೇಕು.


ದೇವರು ಕ್ರಿಸ್ತನಲ್ಲಿ ಉದ್ದೇಶಮಾಡಿಕೊಂಡ ತಮ್ಮ ಚಿತ್ತದ ರಹಸ್ಯವನ್ನು ಸಂತೋಷದಿಂದ ನಮಗೆ ಪ್ರಕಟಿಸಿದರು,


“ಕತ್ತಲೆಯಿಂದ ಬೆಳಕು ಹೊಳೆಯಲಿ,” ಎಂದು ಆಜ್ಞಾಪಿಸಿದ ದೇವರು ತಾವೇ, ತಮ್ಮ ಪ್ರಕಾಶವನ್ನು ನಮ್ಮ ಹೃದಯದ ಮೇಲೆ ಬೆಳಗಿಸಿದ್ದಾರೆ. ಹೀಗೆ ಕ್ರಿಸ್ತ ಯೇಸುವಿನ ಮುಖದಲ್ಲಿ ಪ್ರತಿಬಿಂಬಿಸುತ್ತಿರುವ ದೇವರ ಮಹಿಮೆಯ ತಿಳುವಳಿಕೆಯನ್ನು ನಮ್ಮಲ್ಲಿ ಉದಯಿಸುವಂತಾಗಿದೆ.


ಯೇಸು ಅವನಿಗೆ, “ಯೋನನ ಮಗ ಸೀಮೋನನೇ, ನೀನು ಧನ್ಯನು. ಏಕೆಂದರೆ ಇದನ್ನು ಪ್ರಕಟಿಸಿದ್ದು ಮಾನವರಲ್ಲ. ಪರಲೋಕದಲ್ಲಿರುವ ನನ್ನ ತಂದೆಯೇ ಇದನ್ನು ನಿನಗೆ ಪ್ರಕಟಿಸಿದರು.


ಆದರೆ ನಿಮ್ಮ ಕಣ್ಣುಗಳು ಕಾಣುವುದರಿಂದಲೂ ನಿಮ್ಮ ಕಿವಿಗಳು ಕೇಳುವುದರಿಂದಲೂ ನೀವು ಧನ್ಯರು.


ನಿಮ್ಮನ್ನು ಇತರರಿಗಿಂತಲೂ ವ್ಯತ್ಯಾಸವುಳ್ಳವರಾಗಿ ಮಾಡಿದವರು ಯಾರು? ನೀವು ದೇವರಿಂದ ಪಡೆಯದಿರುವಂಥದು ನಿಮ್ಮಲ್ಲಿ ಯಾವುದಾದರೂ ಇದೆಯೇ? ಹೀಗೆ ಎಲ್ಲವನ್ನೂ ಪಡೆದ ಮೇಲೆ, ಪಡೆಯದವರಂತೆ ನೀವು ಹೆಮ್ಮೆ ಪಟ್ಟುಕೊಳ್ಳುವುದೇಕೆ?


ಆಗ ಯೇಸು ಅವರನ್ನು ಹತ್ತಿರಕ್ಕೆ ಕರೆದು ಸಾಮ್ಯರೂಪದಲ್ಲಿ ಹೇಳಿದ್ದೇನೆಂದರೆ: “ಸೈತಾನನು ಸೈತಾನನನ್ನು ಓಡಿಸುವುದು ಹೇಗೆ?


ಯೇಸು ಸಾಮ್ಯಗಳ ಮೂಲಕ ಅನೇಕ ಸಂಗತಿಗಳನ್ನು ಅವರಿಗೆ ಬೋಧಿಸಿ ಹೇಳಿದ್ದೇನೆಂದರೆ:


ಯೇಸು ಒಬ್ಬರೇ ಇದ್ದಾಗ, ಹನ್ನೆರಡು ಮಂದಿ ಶಿಷ್ಯರು ಮತ್ತು ಯೇಸುವಿನ ಸುತ್ತಲಿದ್ದವರು ಬಂದು ಆ ಸಾಮ್ಯಗಳ ವಿಷಯವಾಗಿ ಕೇಳಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು