Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 4:33 - ಕನ್ನಡ ಸಮಕಾಲಿಕ ಅನುವಾದ

33 ಈ ರೀತಿಯ ಅನೇಕ ಸಾಮ್ಯಗಳಿಂದ ಅವರ ಗ್ರಹಿಕೆಗೆ ತಕ್ಕ ಹಾಗೆ ಯೇಸು ಅವರಿಗೆ ವಾಕ್ಯವನ್ನು ಉಪದೇಶಿಸುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

33 ಆತನು ಈ ರೀತಿಯ ಅನೇಕ ಸಾಮ್ಯಗಳಿಂದ ಜನರಿಗೆ ಅರ್ಥವಾಗುವ ಹಾಗೆ ದೇವರ ವಾಕ್ಯವನ್ನು ಹೇಳುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

33 ಯೇಸುಸ್ವಾಮಿ ಈ ಬಗೆಯ ಸಾಮತಿಗಳನ್ನು ಉಪಯೋಗಿಸಿ ಜನರಿಗೆ ದೇವರ ಸಂದೇಶವನ್ನು ಅವರವರ ತಿಳುವಳಿಕೆಗೆ ತಕ್ಕಂತೆ ಉಪದೇಶಿಸುತ್ತಿದ್ದರು. ಸಾಮತಿಗಳನ್ನು ಉಪಯೋಗಿಸದೆ ಅವರು ಬೋಧಿಸುತ್ತಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

33 ಆತನು ಈ ತರದ ಅನೇಕ ಸಾಮ್ಯಗಳಿಂದ ಜನರ ಗ್ರಹಿಕೆಗೆ ತಕ್ಕ ಹಾಗೆ ದೇವರ ವಾಕ್ಯವನ್ನು ಹೇಳುತ್ತಿದ್ದನು. ಸಾಮ್ಯವಿಲ್ಲದೆ ಅವರಿಗೆ ಹೇಳಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

33 ಯೇಸು ಇಂಥ ಅನೇಕ ಸಾಮ್ಯಗಳ ಮೂಲಕ ಜನರಿಗೆ ಅರ್ಥವಾಗುವಂತೆ ಉಪದೇಶಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

33 ಅಸ್ಲ್ಯಾ ಸುಮಾರ್ ಕಾನಿಯಾ ವಾಪ್ರುನ್, ಜೆಜು, ಲೊಕಾಕ್ನಿ, ಕವ್ಡೆ ಹೊತಾ ತವ್ಡೆ ಕಳಿ ಸರ್ಕೆ, ದೆವಾಚ್ಯಾ ವಿಶಯಾತ್ ಸಾಂಗುಕ್ ಲಾಗಲ್ಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 4:33
7 ತಿಳಿವುಗಳ ಹೋಲಿಕೆ  

“ನಾನು ನಿಮಗೆ ಹೇಳಬೇಕಾದ ವಿಷಯಗಳು ಇನ್ನೂ ಬಹಳ ಇವೆ. ಆದರೆ ನೀವು ಈಗ ಅವುಗಳನ್ನು ತಾಳಿಕೊಳ್ಳಲಾರಿರಿ.


ಆಗ ಯೇಸು ಅನೇಕ ವಿಷಯಗಳನ್ನು ಅವರಿಗೆ ಸಾಮ್ಯಗಳಲ್ಲಿ ಹೇಳಿದ್ದು: “ಒಬ್ಬ ರೈತನು ಬಿತ್ತುವುದಕ್ಕೆ ಹೊರಟನು;


ಅದನ್ನು ಬಿತ್ತಿದ ಮೇಲೆ, ಅದು ಬೆಳೆದು ತೋಟದ ಎಲ್ಲಾ ಸಸ್ಯಗಳಿಗಿಂತಲೂ ದೊಡ್ಡ ರೆಂಬೆಗಳುಳ್ಳ ಮರವಾಗಿ ಬೆಳೆಯುತ್ತದೆ. ಆಕಾಶದ ಪಕ್ಷಿಗಳು ಬಂದು ಅದರ ನೆರಳಿನಲ್ಲಿ ಗೂಡು ಕಟ್ಟಿ ವಾಸಿಸುತ್ತವೆ,” ಎಂದು ಹೇಳಿದರು.


ಸಾಮ್ಯವಿಲ್ಲದೆ ಯೇಸು ಅವರಿಗೆ ಏನೂ ಹೇಳುತ್ತಿರಲಿಲ್ಲ. ಆದರೆ ಯೇಸು ತಮ್ಮ ಶಿಷ್ಯರೊಡನೆ ಏಕಾಂತವಾಗಿದ್ದಾಗ ಮಾತ್ರ ಅವರಿಗೆ ಎಲ್ಲವನ್ನು ವಿವರಿಸಿ ಹೇಳುತ್ತಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು