Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 4:37 - ಕನ್ನಡ ಸಮಕಾಲಿಕ ಅನುವಾದ

37 ಇದ್ದಕ್ಕಿದ್ದ ಹಾಗೆ ದೊಡ್ಡ ಬಿರುಗಾಳಿಯು ರಭಸವಾಗಿ ಬೀಸಿದ್ದರಿಂದ ಅಲೆಗಳು ದೋಣಿಗೆ ಅಪ್ಪಳಿಸಿದವು. ಆಗ ದೋಣಿಯೊಳಗೆ ನೀರು ನುಗ್ಗಿ ಅದು ಮುಳುಗಿ ಹೋಗುವುದರಲ್ಲಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

37 ತರುವಾಯ ದೊಡ್ಡ ಬಿರುಗಾಳಿ ಎದ್ದು ಅಲೆಗಳು ಆ ದೋಣಿಗೆ ಬಡಿದು ನೀರು ಒಳಗೆ ನುಗ್ಗಿದ್ದರಿಂದ ಆ ದೋಣಿ ಆಗಲೇ ತುಂಬುವುದಕ್ಕೆ ಬಂದಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

37 ಆ ದೋಣಿಯ ಸಂಗಡ ಬೇರೆ ದೋಣಿಗಳು ಇದ್ದವು. ಸ್ವಲ್ಪ ಮುಂದೆ ಹೋಗುವಷ್ಟರಲ್ಲೇ ದೊಡ್ಡ ಬಿರುಗಾಳಿ ಎದ್ದಿತು. ಅಲೆಗಳು ದೋಣಿಗೆ ಅಪ್ಪಳಿಸತೊಡಗಿದವು. ದೋಣಿಯೊಳಗೆ ನೀರು ನುಗ್ಗಿ ಅದು ತುಂಬಿಹೋಗುವುದರಲ್ಲಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

37 ಬೇರೆ ದೋಣಿಗಳೂ ಆತನ ಸಂಗಡ ಇದ್ದವು. ತರುವಾಯ ದೊಡ್ಡ ಬಿರುಗಾಳಿ ಎದ್ದು ತೆರೆಗಳು ಆ ದೋಣಿಗೆ ಬಡಿದು ಒಳಗೆ ನುಗ್ಗಿದ್ದರಿಂದ ಆ ದೋಣಿ ಆಗಲೇ ತುಂಬುವದಕ್ಕೆ ಬಂದಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

37 ಅವರು ಹೋಗುತ್ತಿರಲು ಸರೋವರದ ಮೇಲೆ ಬಿರುಗಾಳಿ ಬೀಸಿತು. ಎತ್ತರವಾದ ಅಲೆಗಳು ದೋಣಿಗೆ ಅಪ್ಪಳಿಸತೊಡಗಿದ್ದರಿಂದ ದೋಣಿಯು ನೀರಿನಿಂದ ತುಂಬಿಹೋಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

37 ತೆನಿ ಜಾತಾನಾ, ಎಕಾಎಕಿಚ್ ಸಮುಂದರಾತ್ ಮೊಟೊ ವಾರೊ ಉಟ್ಲೊ, ಅನಿ ಪಾನಿಯಾಚಿ ಲ್ಹಾಟಾ ಮಾರುನ್, ಢೊನಿತ್ ಪಾನಿ ಭರುನ್,ಢೊನ್ ಬುಡುಕ್‍ಲಾಗಲ್ಲಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 4:37
11 ತಿಳಿವುಗಳ ಹೋಲಿಕೆ  

ಇದ್ದಕ್ಕಿದ್ದಂತೆ ಮರುಭೂಮಿ ಕಡೆಯಿಂದ ದೊಡ್ಡ ಗಾಳಿ ಬೀಸಿ, ಮನೆಯ ನಾಲ್ಕು ಮೂಲೆಗಳಿಗೆ ಬಡಿಯಿತು. ಮನೆಯು ಯೌವನಸ್ಥರ ಮೇಲೆ ಬಿತ್ತು, ಅವರು ಸತ್ತುಹೋದರು. ನಾನೊಬ್ಬನು ಮಾತ್ರ, ನಿನಗೆ ತಿಳಿಸಲು ತಪ್ಪಿಸಿಕೊಂಡು ಬಂದಿದ್ದೇನೆ,” ಎಂದನು.


ಆದರೆ ಯೆಹೋವ ದೇವರು ದೊಡ್ಡ ಗಾಳಿಯನ್ನು ಸಮುದ್ರದ ಮೇಲೆ ಕಳುಹಿಸಿದರು. ಸಮುದ್ರದಲ್ಲಿ ಮಹಾ ಬಿರುಗಾಳಿ ಉಂಟಾಗಿ, ಹಡಗು ಒಡೆಯುವುದರಲ್ಲಿತ್ತು.


ಯೆಹೋವ ದೇವರು ಸೈತಾನನಿಗೆ, “ಅವನಲ್ಲಿರುವ ಎಲ್ಲವೂ ನಿನ್ನ ಅಧಿಕಾರದಲ್ಲಿ ಇವೆ. ಆದರೆ ಅವನ ಮೇಲೆ ಮಾತ್ರ ನಿನ್ನ ಕೈ ಹಾಕಬೇಡ,” ಎಂದರು. ಆಗ ಸೈತಾನನು ಯೆಹೋವ ದೇವರ ಸನ್ನಿಧಾನದಿಂದ ಹೊರಟುಹೋದನು.


ಮೂರು ಸಾರಿ ದೊಣ್ಣೆಯಿಂದ ಬಡಿಸಿಕೊಂಡಿದ್ದೇನೆ. ಒಂದು ಸಾರಿ ಕಲ್ಲೆಸೆದು ನನ್ನನ್ನು ಕೊಲ್ಲಲು ನೋಡಿದರು. ಮೂರು ಬಾರಿ ನಾನು ಪ್ರಯಾಣಿಸುತ್ತಿದ್ದ ಹಡಗು ಒಡೆದು ನೀರು ಪಾಲಾಯಿತು. ಒಂದು ಇಡೀ ಹಗಲುರಾತ್ರಿ ನಾನು ಸಮುದ್ರದ ಮೇಲೆ ತೇಲಿದೆನು.


ಆದರೆ ನೌಕೆ ಮಧ್ಯದಲ್ಲಿ ಮರುಳು ದಿಬ್ಬಕ್ಕೆ ಅಪ್ಪಳಿಸಿ ಮುಳುಗಲಿಕ್ಕೆ ಪ್ರಾರಂಭಿಸಿತು. ನೌಕೆಯ ಮುಂಭಾಗ ಮರಳಲ್ಲಿ ಸಿಕ್ಕಿ ಅಲ್ಲಾಡದೇ ನಿಂತಿತು; ಹಿಂಭಾಗ ಬಿರುಗಾಳಿಯ ಹೊಡೆತಕ್ಕೆ ಸಿಕ್ಕಿ ಮುರಿದುಹೋಯಿತು.


ಅವರು ಜನರ ಗುಂಪನ್ನು ಬಿಟ್ಟು, ಯೇಸುವನ್ನು ಇದ್ದ ಹಾಗೆಯೇ ದೋಣಿಯಲ್ಲಿ ಕರೆದುಕೊಂಡು ಹೋದರು. ಯೇಸುವಿನ ಸಂಗಡ ಬೇರೆ ದೋಣಿಗಳೂ ಇದ್ದವು.


ಯೇಸು ದೋಣಿಯ ಹಿಂಭಾಗದಲ್ಲಿ ದಿಂಬಿನ ಮೇಲೆ ಒರಗಿ ನಿದ್ದೆಮಾಡುತ್ತಿದ್ದರು. ಶಿಷ್ಯರು ಯೇಸುವನ್ನು ಎಬ್ಬಿಸಿ, “ಗುರುವೇ, ನಾವು ಮುಳುಗಿ ಸಾಯುತ್ತಿದ್ದೇವೆ. ನಿಮಗೆ ಚಿಂತೆಯಿಲ್ಲವೇ?” ಎಂದು ಕೇಳಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು