Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 4:7 - ಕನ್ನಡ ಸಮಕಾಲಿಕ ಅನುವಾದ

7 ಮತ್ತೆ ಕೆಲವು ಬೀಜಗಳು ಮುಳ್ಳುಗಿಡಗಳ ಮಧ್ಯದಲ್ಲಿ ಬಿದ್ದವು. ಮುಳ್ಳುಗಿಡಗಳು ಬೆಳೆದು ಆ ಎಳೆಯ ಸಸಿಗಳನ್ನು ಅಡಗಿಸಿಬಿಟ್ಟಿದ್ದರಿಂದ ಅವು ಫಲ ಕೊಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಮತ್ತೆ ಕೆಲವು ಬೀಜಗಳು ಮುಳ್ಳುಗಿಡಗಳಲ್ಲಿ ಬಿದ್ದವು; ಮುಳ್ಳುಗಿಡಗಳು ಬೆಳೆದು ಅವುಗಳನ್ನು ಅಡಗಿಸಿಬಿಟ್ಟದ್ದರಿಂದ ಅವು ಫಲಕೊಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಇನ್ನು ಕೆಲವು ಬೀಜಗಳು ಮುಳ್ಳುಪೊದೆಗಳ ನಡುವೆ ಬಿದ್ದವು. ಮುಳ್ಳುಪೊದೆಗಳು ಸಸ್ಯಗಳ ಸಮೇತ ಅವುಗಳನ್ನು ಅದುಮಿಬಿಟ್ಟವು. ಆದುದರಿಂದ ಅವು ಫಲಕೊಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಮತ್ತೆ ಕೆಲವು ಬೀಜ ಮುಳ್ಳುಗಿಡಗಳಲ್ಲಿ ಬಿದ್ದವು; ಮುಳ್ಳುಗಿಡಗಳು ಬೆಳೆದು ಅವುಗಳನ್ನು ಅಡಗಿಸಿಬಿಟ್ಟದ್ದರಿಂದ ಅವು ಫಲಕೊಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಬೇರೆ ಕೆಲವು ಬೀಜಗಳು ಮುಳ್ಳುಗಿಡಗಳಲ್ಲಿ ಬಿದ್ದವು. ಮುಳ್ಳುಗಿಡಗಳು ಬೆಳೆದು, ಒಳ್ಳೆಯ ಗಿಡಗಳನ್ನು ಬೆಳೆಯದಂತೆ ತಡೆದವು. ಆದ್ದರಿಂದ ಆ ಗಿಡಗಳು ಫಲ ಕೊಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

7 ಅನಿ ಉಲ್ಲೆ ಭ್ಹಿಂಯ್, ಕಾಟ್ಯಾಂಚ್ಯಾ ಝಿಳಿತ್ ಪಡ್ಲೆ, ತೆ ಉಗಾವ್ಲೆ, ಅನಿ ತ್ಯಾ ಕಾಟ್ಯಾಂಚ್ಯಾ ಝಾಡಾಂಚ್ಯಾ ಅಡ್ಚನಿತ್ ಗಾವುನ್, ತೆನಿ ಫಳ್ ದಿವ್ಕ್ ನಾ .

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 4:7
14 ತಿಳಿವುಗಳ ಹೋಲಿಕೆ  

ಏಕೆಂದರೆ ಯೆಹೋವ ದೇವರು ಯೆಹೂದದ ಮತ್ತು ಯೆರೂಸಲೇಮಿನ ಜನರಿಗೆ ಹೀಗೆ ಹೇಳುತ್ತಾರೆ: “ಯೆರೂಸಲೇಮಿನ ನಿವಾಸಿಗಳೇ, ಯೆಹೂದದ ಮನುಷ್ಯರೇ, ನಿಮ್ಮ ಬಂಜರು ಭೂಮಿಯನ್ನು ಗೆಯ್ಯಿರಿ. ಮುಳ್ಳುಗಳಲ್ಲಿ ಬೀಜ ಬಿತ್ತಬೇಡಿರಿ.


ಬೀಜ ಬಿದ್ದ ಮುಳ್ಳುನೆಲವು ಯಾರೆಂದರೆ ವಾಕ್ಯವನ್ನು ಕೇಳಿದ ಮೇಲೆ ಮುಂದುವರಿದು, ಈ ಜೀವನದ ಚಿಂತೆಗಳಿಂದಲೂ ಐಶ್ವರ್ಯಗಳಿಂದಲೂ ಮತ್ತು ಭೋಗಗಳಿಂದಲೂ ಅದುಮಿಬಿಟ್ಟು, ಪರಿಪಕ್ವತೆಗೆ ಫಲಕೊಡದಿದ್ದವರು.


“ನಿಮ್ಮ ಮೇಲೆ ಆ ದಿನವು ಉರುಲಿನಂತೆ ಫಕ್ಕನೆ ಬಾರದಂತೆ ನೀವು ಅತಿಭೋಜನದಿಂದಲೂ ಅಮಲಿನಿಂದಲೂ ಈ ಜೀವನದ ಚಿಂತೆಗಳಿಂದಲೂ ನಿಮ್ಮ ಹೃದಯಗಳು ಭಾರವಾಗದಂತೆ, ನಿಮ್ಮ ವಿಷಯದಲ್ಲಿ ಜಾಗರೂಕರಾಗಿರಿ.


ಅನಂತರ ಯೇಸು ಜನರಿಗೆ, “ಎಚ್ಚರಿಕೆ! ನೀವು ಎಲ್ಲಾ ಲೋಭದಿಂದ ನಿಮ್ಮನ್ನು ಕಾಪಾಡಿಕೊಳ್ಳಿರಿ; ಏಕೆಂದರೆ ಜೀವನವು ಸಮೃದ್ಧಿಯಾದ ಆಸ್ತಿಗೆ ಆಧಾರವಾದದ್ದಲ್ಲ,” ಎಂದರು.


ಇನ್ನು ಕೆಲವು ಮುಳ್ಳುಗಿಡಗಳ ಮಧ್ಯದಲ್ಲಿ ಬಿದ್ದವು, ಆಗ ಮುಳ್ಳುಗಿಡಗಳು ಅವುಗಳೊಂದಿಗೆ ಬೆಳೆದು ಅವುಗಳನ್ನು ಅಡಗಿಸಿಬಿಟ್ಟವು.


ಮುಳ್ಳುಗಿಡಗಳಲ್ಲಿ ಬಿತ್ತಲಾಗಿರುವ ಬೀಜವಾಗಿರುವವರು ವಾಕ್ಯವನ್ನು ಕೇಳುತ್ತಾರೆ, ಆದರೆ ಈ ಜೀವನದ ಚಿಂತೆಗಳೂ ಐಶ್ವರ್ಯದ ವ್ಯಾಮೋಹವೂ ವಾಕ್ಯವನ್ನು ಅಡಗಿಸುವುದರಿಂದ, ವಾಕ್ಯವು ಫಲವನ್ನು ಕೊಡುವುದಿಲ್ಲ.


ಕೆಲವು ಬೀಜಗಳು ಮುಳ್ಳುಗಿಡಗಳ ಮಧ್ಯದಲ್ಲಿ ಬಿದ್ದವು, ಆ ಮುಳ್ಳುಗಿಡಗಳು ಬೆಳೆದು ಅವುಗಳನ್ನು ಅಡಗಿಸಿಬಿಟ್ಟವು.


ಆದರೆ ಕೆಲವು ಬೀಜಗಳು ಒಳ್ಳೆಯ ಭೂಮಿಯಲ್ಲಿ ಬಿದ್ದು, ಒಂದು ನೂರರಷ್ಟು ಮತ್ತೆ ಕೆಲವು ಅರವತ್ತರಷ್ಟು ಇನ್ನು ಕೆಲವು ಮೂವತ್ತರಷ್ಟು ಫಲಕೊಟ್ಟವು.


ಆದರೆ ಬಿಸಿಲೇರಿದಾಗ ಅವು ಬಾಡಿಹೋಗಿ, ಬೇರಿಲ್ಲದ ಕಾರಣ ಒಣಗಿಹೋದವು.


ಇನ್ನು ಕೆಲವು ಬೀಜಗಳು ಒಳ್ಳೆಯ ಭೂಮಿಯಲ್ಲಿ ಬಿದ್ದು ಬೆಳೆದು ಮೂವತ್ತರಷ್ಟು, ಅರವತ್ತರಷ್ಟು, ನೂರರಷ್ಟು ಫಲಕೊಟ್ಟವು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು