ಮಾರ್ಕ 5:13 - ಕನ್ನಡ ಸಮಕಾಲಿಕ ಅನುವಾದ13 ಯೇಸು ಅವುಗಳಿಗೆ ಅಪ್ಪಣೆಕೊಡಲು, ಆ ಅಶುದ್ಧಾತ್ಮಗಳು ಅವನಿಂದ ಹೊರಗೆ ಬಂದು ಹಂದಿಗಳೊಳಗೆ ಸೇರಿದವು. ಸುಮಾರು ಎರಡು ಸಾವಿರ ಹಂದಿಗಳಿದ್ದ ಆ ಹಿಂಡು ಓಡಿ ಕಡಿದಾದ ಬದಿಯಿಂದ ಸರೋವರದೊಳಗೆ ಬಿದ್ದು ಮುಳುಗಿ ಸತ್ತು ಹೋದವು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ಆತನು ಅವುಗಳಿಗೆ ಅನುಮತಿಸಲು ಆ ದೆವ್ವಗಳು ಆ ಮನುಷ್ಯನಿಂದ ಹೊರಗೆ ಬಂದು ಹಂದಿಗಳೊಳಗೆ ಪ್ರವೇಶಿಸಿದವು; ಅಲ್ಲಿ ಹೆಚ್ಚುಕಡಿಮೆ ಎರಡು ಸಾವಿರ ಹಂದಿಗಳಿದ್ದವು. ಆ ಹಂದಿಗಳು ಓಡಿ ಹೋಗಿ ಇಳಿಜಾರು ಸ್ಥಳದಿಂದ ಸಮುದ್ರದೊಳಗೆ ಬಿದ್ದು ನೀರಿನಲ್ಲಿ ಮುಳುಗಿ ಉಸಿರು ಕಟ್ಟಿ ಸತ್ತುಹೋದವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ಅವರು ಹಾಗೆಯೇ ಅಪ್ಪಣೆಮಾಡಿದರು. ಕೂಡಲೇ ದೆವ್ವಗಳು ಆ ವ್ಯಕ್ತಿಯಿಂದ ಹೊರಬಂದು ಹಂದಿಗಳೊಳಗೆ ಹೊಕ್ಕವು. ಇದರ ಪರಿಣಾಮವಾಗಿ ಎರಡು ಸಾವಿರ ಹಂದಿಗಳಿದ್ದ ಆ ಹಿಂಡು, ಬೆಟ್ಟದ ಕಡಿದಾದ ಬದಿಯಿಂದ ಸರೋವರದತ್ತ ಧಾವಿಸಿ, ಅದರಲ್ಲಿ ಬಿದ್ದು ಮುಳುಗಿಹೋಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ಆತನು - ಆಗಲಿ ಎಂದು ಅವುಗಳಿಗೆ ಅಪ್ಪಣೆಕೊಡಲು ಆ ದೆವ್ವಗಳು ಹೊರಗೆ ಬಂದು ಹಂದಿಗಳೊಳಗೆ ಹೊಕ್ಕವು; ಆ ಗುಂಪು ಓಡಿ ಕಡಿದಾದ ಸ್ಥಳದಿಂದ ಸಮುದ್ರದೊಳಗೆ ಬಿದ್ದು ಅಲ್ಲಿ ಉಸುರುಕಟ್ಟಿ ಸತ್ತಿತು. ಹೆಚ್ಚು ಕಡಿಮೆ ಎರಡು ಸಾವಿರ ಹಂದಿಗಳಿದ್ದವು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್13 ಯೇಸು ಅವುಗಳಿಗೆ ಅಪ್ಪಣೆ ಕೊಡಲು ಅವು ಅವನನ್ನು ಬಿಟ್ಟು, ಹಂದಿಗಳೊಳಗೆ ಹೊಕ್ಕವು. ಆಗ ಹಂದಿಗಳೆಲ್ಲಾ ಬೆಟ್ಟದಿಂದ ಇಳಿದು, ಸರೋವರದೊಳಕ್ಕೆ ಬಿದ್ದು ಮುಳುಗಿಹೋದವು. ಆ ಹಿಂಡಿನಲ್ಲಿ ಸುಮಾರು ಎರಡು ಸಾವಿರ ಹಂದಿಗಳಿದ್ದವು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್13 ತೆನಿ ತೆಂಕಾ, ಜಾವ್ಕ್ ಸೊಡ್ಲ್ಯಾನ್, ತಿ ಗಿರೊ, ತ್ಯಾ ಮಾನ್ಸಾಕ್ ಸೊಡುನ್, ಡುಕ್ರಾಂಚ್ಯಾ ಆಂಗಾತ್ನಿ ಜಾವ್ನ್ ಗುಸ್ಲಿ, ಅನಿ ಸುಮಾರ್ ದೊನ್ ಹಜಾರ್ ಡುಕ್ರಾಂಚೊ, ಸಗ್ಳೊ ತಾಂಡೊ ಸಮುಂದರಾತ್ ಹುಡಿ ಮಾರುನ್ ಬುಡುನ್ ಗೆಲೊ. ಅಧ್ಯಾಯವನ್ನು ನೋಡಿ |