Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 5:27 - ಕನ್ನಡ ಸಮಕಾಲಿಕ ಅನುವಾದ

27 ಆಕೆ ಯೇಸುವಿನ ವಿಷಯವಾಗಿ ಕೇಳಿ, ಜನರ ಗುಂಪಿನಲ್ಲಿ ಅವರ ಹಿಂದೆ ಬಂದು ಯೇಸುವಿನ ಉಡುಪಿನ ಅಂಚನ್ನು ಮುಟ್ಟಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27-28 ಆ ಹೆಂಗಸು ಯೇಸುವಿನ ಸಮಾಚಾರವನ್ನು ಕೇಳಿದ್ದರಿಂದ, “ನಾನು ಆತನ ಉಡುಪನ್ನು ಮುಟ್ಟಿದರೆ ಸಾಕು, ಸ್ವಸ್ಥಳಾಗುವೆನು” ಎಂದು ಆಲೋಚಿಸಿ ಗುಂಪಿನಲ್ಲಿ ಹಿಂದಿನಿಂದ ಬಂದು ಆತನ ಉಡುಪನ್ನು ಮುಟ್ಟಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

27 ಯೇಸುವಿನ ವಿಷಯವಾಗಿ ಜನರು ಹೇಳುತ್ತಿದ್ದುದನ್ನು ಆಕೆ ಕೇಳಿ, ಜನರ ಗುಂಪಿನಲ್ಲಿ ಸೇರಿ, ಯೇಸುವನ್ನು ಹಿಂಬಾಲಿಸಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

27-28 ಆ ಹೆಂಗಸು ಯೇಸುವಿನ ಸಮಾಚಾರವನ್ನು ಕೇಳಿ - ನಾನು ಆತನ ಉಡುಪನ್ನು ಮುಟ್ಟಿದರೆ ಸಾಕು, ನೆಟ್ಟಗಾಗುವೆನು ಎಂದು ಆಲೋಚಿಸಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

27 ಆಕೆಗೆ ಯೇಸುವನ್ನು ಕುರಿತು ತಿಳಿದುಬಂತು. ಆದ್ದರಿಂದ ಆಕೆಯು ಜನರ ಗುಂಪಿನಲ್ಲಿ ಹಿಂದಿನಿಂದ ಬಂದು ಆತನ ಮೇಲಂಗಿಯನ್ನು ಮುಟ್ಟಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

27 ತಿಕಾ ಜೆಜುಚ್ಯಾ ವಿಶಯಾತ್ ಖಬರ್ ಗಾವ್ಲಿ, ಅನಿ ತಿ ಮಿಯಾ ತೆಜೆ ಕಪ್ಡೆ ಅಪಡ್ಲ್ಯಾರ್ ಫಿರೆ ಆರಾಮ್ ಹೊತಾ ಮನುನ್ ಚಿಂತುನ್ , ತೆಚ್ಯಾ ಫಾಟ್ನಾ ಹೊತ್ತ್ಯಾ ತಾಂಡ್ಯಾತ್ ಯೆವ್ನ್ ಗುಸ್ಲಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 5:27
7 ತಿಳಿವುಗಳ ಹೋಲಿಕೆ  

ಹೀಗೆ ಪೌಲನನ್ನು ಮುಟ್ಟಿದ ಕೈವಸ್ತ್ರಗಳನ್ನೂ ಉಡುಪುಗಳನ್ನೂ ತೆಗೆದುಕೊಂಡುಹೋಗಿ ರೋಗಿಗಳಿಗೆ ಮುಟ್ಟಿಸಿದಾಗ ಅವರು ರೋಗಗಳಿಂದ ವಾಸಿಯಾಗುತ್ತಿದ್ದರು ಹಾಗೂ ಅವರಲ್ಲಿಯ ದುರಾತ್ಮಗಳು ಬಿಟ್ಟು ಹೋಗುತ್ತಿದ್ದವು.


ಅವರು ಯೇಸುವಿನ ಉಡುಪಿನ ಅಂಚನ್ನಾದರೂ ಸ್ಪರ್ಶಿಸಬೇಕೆಂದು ಅವರನ್ನು ಬೇಡಿಕೊಂಡರು. ಯೇಸುವನ್ನು ಮುಟ್ಟಿದವರೆಲ್ಲರೂ ಸ್ವಸ್ಥರಾದರು.


ಇದರ ಪರಿಣಾಮವಾಗಿ, ಪೇತ್ರನು ಬೀದಿಗಳಲ್ಲಿ ಹಾದುಹೋಗುತ್ತಿದ್ದಾಗ ಅವನ ನೆರಳು ಕೆಲವರ ಮೇಲಾದರೂ ಬೀಳಲೆಂದು ಜನರು ತಮ್ಮಲ್ಲಿ ಅಸ್ವಸ್ಥತೆಯಿದ್ದವರನ್ನು ಹಾಸಿಗೆ ಮತ್ತು ಡೋಲಿಗಳ ಸಮೇತ ತಂದು ಬೀದಿಗಳಲ್ಲಿ ಮಲಗಿಸುತ್ತಿದ್ದರು.


ಯೇಸು ಹಳ್ಳಿ, ಪಟ್ಟಣ ಊರುಗಳಲ್ಲಿ ಎಲ್ಲೆಲ್ಲಿ ಹೋದರೋ ಅಲ್ಲಿ ಜನರು ರೋಗಿಗಳನ್ನು ತಂದು ಪೇಟೆಗಳಲ್ಲಿ ಇಟ್ಟು, ಯೇಸುವಿನ ಉಡುಪಿನ ಅಂಚನ್ನಾದರೂ ಮುಟ್ಟಗೊಡಿಸಬೇಕೆಂದು ಅವರನ್ನು ಬೇಡಿಕೊಂಡರು. ಯೇಸುವನ್ನು ಮುಟ್ಟಿದವರೆಲ್ಲರೂ ಗುಣಹೊಂದಿದರು.


ಒಂದು ದಿನ ಕೆಲವು ಇಸ್ರಾಯೇಲರು ಒಬ್ಬ ಮನುಷ್ಯನನ್ನು ಸಮಾಧಿಮಾಡಲು ಹೋಗುತ್ತಿದ್ದರು. ಆಗ, ಮೋವಾಬ್ಯರ ದಂಡು ಬರುತ್ತಿರುವುದನ್ನು ಕಂಡು, ಆ ಶವವನ್ನು ಎಲೀಷನ ಸಮಾಧಿಯಲ್ಲಿ ಬಿಸಾಡಿ ಓಡಿಹೋದರು. ಆ ಶವ ಸಮಾಧಿಯ ಮೇಲೆಬಿದ್ದಾಗ, ಅದು ಎಲೀಷನ ಎಲುಬುಗಳಿಗೆ ತಗಲಿ ಜೀವ ಬಂದು ಎದ್ದು ನಿಂತನು.


ಆಕೆ ಅನೇಕ ವೈದ್ಯರ ಚಿಕಿತ್ಸೆಯಿಂದ ಬಹು ಶ್ರಮಪಟ್ಟು, ತನಗಿದ್ದದ್ದೆಲ್ಲವನ್ನು ಖರ್ಚು ಮಾಡಿದ್ದರೂ ಸ್ವಲ್ಪವೂ ಪ್ರಯೋಜನವಾಗದೆ ಆ ರೋಗವು ಇನ್ನೂ ಹೆಚ್ಚಾಗುತ್ತಾ ಬಂತು.


ಏಕೆಂದರೆ, “ನಾನು ಯೇಸುವಿನ ಉಡುಪನ್ನು ಮುಟ್ಟಿದರೆ ಸಾಕು, ನನಗೆ ಗುಣವಾಗುವುದು,” ಎಂದುಕೊಂಡಿದ್ದಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು