Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 5:31 - ಕನ್ನಡ ಸಮಕಾಲಿಕ ಅನುವಾದ

31 ಯೇಸುವಿನ ಶಿಷ್ಯರು ಅವರಿಗೆ, “ಇಷ್ಟು ದೊಡ್ಡ ಗುಂಪು ನಿಮ್ಮ ಸುತ್ತಲೂ ನೂಕುತ್ತಿರುವುದನ್ನು ನೀವೇ ಕಾಣುತ್ತಿರುವಲ್ಲಿ, ‘ನನ್ನನ್ನು ಮುಟ್ಟಿದವರು ಯಾರು,’ ಎಂದು ಕೇಳುತ್ತೀರಲ್ಲಾ?” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

31 ಆತನ ಶಿಷ್ಯರು ಆತನಿಗೆ, “ನಿನ್ನ ಸುತ್ತಲೂ ಜನರು ಮುತ್ತಿಕೊಂಡು ನೂಕುವುದು ನಿನಗೆ ತಿಳಿದೇ ಇದೆ. ಆದರೂ ‘ನನ್ನನ್ನು ಮುಟ್ಟಿದವರು ಯಾರು’ ಎಂದು ಕೇಳುತ್ತೀಯಲ್ಲಾ?” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

31 ಅದಕ್ಕೆ ಶಿಷ್ಯರು, “ತಮ್ಮ ಸುತ್ತಲೂ ಜನರು ಮುತ್ತಿಕೊಂಡಿರುವುದು ತಮಗೆ ತಿಳಿದೇ ಇದೆ. ಆದರೂ ‘ನನ್ನನ್ನು ಮುಟ್ಟಿದವರು ಯಾರು’ ಎಂದು ಕೇಳುತ್ತೀರಲ್ಲಾ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

31 ಆತನ ಶಿಷ್ಯರು ಆತನಿಗೆ - ಜನರು ನಿನ್ನನ್ನು ನೂಕುವದನ್ನು ಕಂಡೂ ಕಂಡು ನನ್ನನ್ನು ಯಾರು ಮುಟ್ಟಿದರೆಂದು ಕೇಳುತ್ತೀಯಲ್ಲಾ ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

31 ಶಿಷ್ಯರು ಯೇಸುವಿಗೆ, “ಅನೇಕ ಜನರು ನಿನ್ನ ಮೇಲೆ ಬೀಳುತ್ತಿದ್ದಾರೆ. ಹೀಗಿರಲು ‘ನನ್ನನ್ನು ಸ್ಪರ್ಶಿಸಿದವರು ಯಾರು?’ ಎಂದು ಕೇಳುತ್ತಿರುವೆಯಲ್ಲಾ” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

31 ತನ್ನಾ ಶಿಸಾನಿ, “ಸಗ್ಳಿ ಲೊಕಾ ತುಜ್ಯಾ ಆಂಗಾರ್ ಯೆವ್ನ್ ಪಡುಲ್ಯಾತ್, ಅನಿ ತುಕಾ ಕೊನ್ ಹಾತ್‍ಲಾವ್ಲ್ಯಾನಿ ಮನುನ್, ಇಚಾರುಲೆ ಅನಿ?” ಮನುನ್ ಸಾಂಗಟ್ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 5:31
5 ತಿಳಿವುಗಳ ಹೋಲಿಕೆ  

ಯೇಸು, “ನನ್ನನ್ನು ಮುಟ್ಟಿದವರು ಯಾರು?” ಎಂದರು. ಎಲ್ಲರೂ ನಿರಾಕರಿಸಿದರು, ಪೇತ್ರನು ಯೇಸುವಿಗೆ, “ಬೋಧಕರೇ, ಇಷ್ಟೊಂದು ಜನರು ನಿಮ್ಮನ್ನು ನೂಕುತ್ತಾ ನಿಮ್ಮನ್ನು ಒತ್ತುತ್ತಿದ್ದಾರಲ್ಲಾ” ಎಂದನು.


ಸಂಜೆಯಾಗುತ್ತಿದ್ದಾಗ ಹನ್ನೆರಡು ಮಂದಿ ಶಿಷ್ಯರು ಯೇಸುವಿನ ಬಳಿಗೆ ಬಂದು, “ಈ ಜನಸಮೂಹವು ಸುತ್ತಲಿರುವ ಊರುಗಳಿಗೂ ಸೀಮೆಗಳಿಗೂ ಹೋಗಿ ಊಟವಸತಿಯನ್ನು ದೊರಕಿಸಿಕೊಳ್ಳುವಂತೆ ಅವರನ್ನು ಕಳುಹಿಸಿಬಿಡಿ. ನಾವು ಇಲ್ಲಿ ನಿರ್ಜನ ಪ್ರದೇಶದಲ್ಲಿ ಇದ್ದೇವಲ್ಲ,” ಎಂದರು.


ಆಗ ಯೇಸು ಅವನೊಂದಿಗೆ ಹೋದರು. ಜನರು ದೊಡ್ಡ ಗುಂಪಾಗಿ ಯೇಸುವನ್ನು ನೂಕುತ್ತಾ ಹಿಂಬಾಲಿಸಿದರು.


ಕೂಡಲೇ ಗುಣಪಡಿಸುವ ಶಕ್ತಿಯು ತನ್ನಿಂದ ಹೊರಟಿತೆಂದು ಯೇಸು ತಿಳಿದು, ಜನರ ನಡುವೆ ಸುತ್ತಲೂ ನೋಡಿ, “ನನ್ನ ಉಡುಪನ್ನು ಮುಟ್ಟಿದವರು ಯಾರು?” ಎಂದು ಕೇಳಿದರು.


ಆದರೆ ಯೇಸು ತಮ್ಮನ್ನು ಮುಟ್ಟಿದವರು ಯಾರು ಎಂದು ಕಾಣಲು ಸುತ್ತಲೂ ನೋಡಲಾರಂಭಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು