Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 6:11 - ಕನ್ನಡ ಸಮಕಾಲಿಕ ಅನುವಾದ

11 ಯಾರಾದರೂ ನಿಮ್ಮನ್ನು ಸ್ವಾಗತಿಸದೆ ಹೋದರೆ ಅಥವಾ ನಿಮ್ಮ ಮಾತುಗಳನ್ನು ಕೇಳದಿದ್ದರೆ, ನೀವು ಹೊರಡುತ್ತಿರುವಾಗ ನಿಮ್ಮ ಪಾದಗಳಿಗೆ ಹತ್ತಿದ ಧೂಳನ್ನು ಝಾಡಿಸಿಬಿಡಿರಿ. ಅದು ಅವರ ವಿರುದ್ಧ ಸಾಕ್ಷಿಯಾಗಿರಲಿ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಮತ್ತು ಯಾವ ಸ್ಥಳದವರಾದರೂ ನಿಮ್ಮನ್ನು ಸೇರಿಸಿಕೊಳ್ಳದೆಯೂ ನೀವು ಹೇಳುವುದನ್ನು ಕೇಳದೆಯೂ ಹೋದರೆ ಆ ಸ್ಥಳದಿಂದ ಹೊರಡುವಾಗ ನಿಮ್ಮ ಪಾದಕ್ಕೆ ಹತ್ತಿದ ಧೂಳನ್ನು ಝಾಡಿಸಿಬಿಡಿರಿ; ಅದು ಅವರ ವಿರುದ್ಧ ಸಾಕ್ಷಿಯಾಗಿರಲಿ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಯಾವುದೇ ಊರಿನ ಜನರು ನಿಮ್ಮನ್ನು ಸ್ವಾಗತಿಸದೆಯೂ ನಿಮ್ಮ ಬೋಧನೆಗೆ ಕಿವಿಗೊಡದೆಯೂ ಹೋದರೆ, ಆ ಊರನ್ನು ಬಿಟ್ಟುಹೋಗುವಾಗ ನಿಮ್ಮ ಪಾದಕ್ಕೆ ಹತ್ತಿದ ಧೂಳನ್ನು ಕೂಡ ಝಾಡಿಸಿಬಿಡಿ. ಅವರ ವಿರುದ್ಧ ಅದು ಸಾಕ್ಷಿಯಾಗಿರಲಿ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಮತ್ತು ಯಾವ ಸ್ಥಳದವರಾದರೂ ನಿಮ್ಮನ್ನು ಸೇರಿಸಿಕೊಳ್ಳದೆಯೂ ನೀವು ಹೇಳುವದನ್ನು ಕೇಳದೆಯೂ ಹೋದರೆ ಆ ಸ್ಥಳದಿಂದ ಹೊರಟುಹೋಗುವಾಗ ನಿಮ್ಮ ಕಾಲಿಗೆ ಹತ್ತಿದ ದೂಳನ್ನು ಝಾಡಿಸಿಬಿಡಿರಿ; ಅದು ಅವರಿಗೆ ಸಾಕ್ಷಿಯಾಗಿರಲಿ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಯಾವ ಊರಿನವರಾದರೂ ನಿಮ್ಮನ್ನು ಸ್ವೀಕರಿಸಿಕೊಳ್ಳದಿದ್ದರೆ ಮತ್ತು ನಿಮ್ಮ ಬೋಧನೆಯನ್ನು ಕೇಳದಿದ್ದರೆ ನಿಮ್ಮ ಪಾದಕ್ಕೆ ಹತ್ತಿದ ಧೂಳನ್ನು ಝಾಡಿಸಿ ಆ ಊರನ್ನು ಬಿಟ್ಟುಹೋಗಿರಿ. ಇದು ಅವರಿಗೆ ಎಚ್ಚರಿಕೆಯಾಗಿರುತ್ತದೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

11 ಅನಿ ಖಲ್ಯಾಬಿ ಗಾವಾತ್ಲ್ಯಾ ಲೊಕಾನಿ ತುಮ್ಕಾ ಸ್ವಾಗತ್ ಕರಿನಸ್ತಾನಾ,ತುಮಿ ಸಾಂಗಲ್ಲೆ ಆಯ್ಕುನಸ್ಲ್ಯಾರ್, ತುಮ್ಚ್ಯಾ ತಳ್‍ಪಾಂಯಾಂಚಿ ಧುಳ್ ಫಾಪ್ಡಾ ಅನಿ ತೆ ಗಾಂವ್ ಸೊಡುನ್ ಜಾಂವಾ, ಹೆ ತೆಂಕಾ ಎಕ್ ಉಶಾರ್ಕಿ ಹೊಂವ್ದಿ” ಮನುನ್ ಸಾಂಗ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 6:11
20 ತಿಳಿವುಗಳ ಹೋಲಿಕೆ  

ಆದರೆ ಯೆಹೂದ್ಯರು ಪೌಲನನ್ನು ವಿರೋಧಿಸಿ ದೂಷಿಸಿದಾಗ, ಅವನು ಅವರನ್ನು ಪ್ರತಿಭಟಿಸುವಂತೆ ತನ್ನ ಬಟ್ಟೆಗಳನ್ನು ಝಾಡಿಸಿ, “ನಿಮ್ಮ ರಕ್ತವು ನಿಮ್ಮ ತಲೆಯ ಮೇಲೆ ಇರಲಿ. ನಿಮ್ಮ ವಿನಾಶಕ್ಕೆ ನೀವೇ ಹೊಣೆ. ಅದಕ್ಕೆ ನಾನು ಜವಾಬ್ದಾರನಲ್ಲ, ಇಂದಿನಿಂದ ನಾನು ಶುದ್ಧಮನಸ್ಸುಳ್ಳವನಾಗಿ ಯೆಹೂದ್ಯರಲ್ಲದವರ ಬಳಿಗೆ ಹೋಗುತ್ತೇನೆ,” ಎಂದನು.


ನಾನು ನನ್ನ ಬಟ್ಟೆಯನ್ನು ಝಾಡಿಸಿ, “ಈ ಮಾತಿನ ಪ್ರಕಾರ ಮಾಡದೆ ಇರುವ ಪ್ರತಿಯೊಬ್ಬನನ್ನು ದೇವರು ಅವನ ಮನೆಯಿಂದಲೂ, ಅವನ ಆಸ್ತಿಪಾಸ್ತಿಯಿಂದಲೂ ಝಾಡಿಸಲಿ. ಅವನು ಇದೇ ಪ್ರಕಾರ ಝಾಡಿಸಿ, ಬರಿದಾಗಲಿ,” ಎಂದೆನು. ಅದಕ್ಕೆ ಸಭೆಯವರೆಲ್ಲರೂ, “ಆಮೆನ್” ಎಂದು ಹೇಳಿ ಯೆಹೋವ ದೇವರನ್ನು ಸ್ತುತಿಸಿದರು. ಜನರು ತಾವು ಕೊಟ್ಟ ಮಾತಿನ ಪ್ರಕಾರ ನಡೆದುಕೊಂಡರು.


ಸೊದೋಮ ಗೊಮೋರದವರೂ ಹಾಗೆಯೇ ಅವುಗಳ ಸುತ್ತಮುತ್ತಣ ಪಟ್ಟಣಗಳವರೂ ಅದೇ ರೀತಿಯಲ್ಲಿ ತಮ್ಮನ್ನು ಅನೈತಿಕತೆಗೆ ಒಪ್ಪಿಸಿಕೊಟ್ಟರು. ಅವರು ಸ್ವಭಾವಕ್ಕೆ ವಿರುದ್ಧ ಕಾರ್ಯಗಳನ್ನು ಅನುಸರಿಸಿದ್ದರಿಂದ ಅವರು ನಿತ್ಯವಾದ ಅಗ್ನಿಯಲ್ಲಿ ದಂಡನೆಯನ್ನು ಅನುಭವಿಸುತ್ತಾ ಉದಾಹರಣೆಗಾಗಿ ಇಡಲಾಗಿದ್ದಾರೆ.


ನ್ಯಾಯತೀರ್ಪಿನ ದಿನದಲ್ಲಿ ನಮಗೆ ಧೈರ್ಯವಿರುವಂತೆ ನಮ್ಮ ಪ್ರೀತಿಯು ಸಿದ್ಧಿಗೆ ಬಂತು. ಏಕೆಂದರೆ ಯೇಸು ಎಂಥವರಾಗಿದ್ದಾರೋ ನಾವು ಅಂಥವರಾಗಿಯೇ ಈ ಲೋಕದಲ್ಲಿದ್ದೇವೆ.


ಆದರೆ ಈಗಿನ ಆಕಾಶವೂ ಭೂಮಿಯೂ ಅದೇ ವಾಕ್ಯದಿಂದ ಬೆಂಕಿಗಾಗಿ ಕಾದಿರಿಸಲಾಗಿವೆ. ಅವು ನ್ಯಾಯತೀರ್ಪಿಗಾಗಿ ಮತ್ತು ಭಕ್ತಿಹೀನರ ನಾಶನಕ್ಕಾಗಿ ಇಡಲಾಗಿವೆ.


ಕರ್ತದೇವರು ಭಕ್ತರನ್ನು ಸಂಕಟದೊಳಗಿಂದ ತಪ್ಪಿಸುವುದಕ್ಕೂ ಅನೀತಿವಂತರನ್ನು ಶಿಕ್ಷಿಸುವುದಕ್ಕಾಗಿ ನ್ಯಾಯತೀರ್ಪಿನ ದಿನದ ತನಕ ಇಡುವುದಕ್ಕೂ ಬಲ್ಲವರಾಗಿದ್ದಾರೆ.


ದೇವರು ಸೊದೋಮ ಗೊಮೋರ ಪಟ್ಟಣಗಳನ್ನು ಬೂದಿಮಾಡಿ ಇನ್ನು ಮೇಲೆ ಭಕ್ತಿಹೀನರಾಗಿ ಬದುಕುವವರ ಗತಿಗೆ ದೃಷ್ಟಾಂತವಾಗಿ ಅವುಗಳಿಗೆ ದಂಡನೆಯನ್ನು ವಿಧಿಸಿದರು.


ನಾನು ಸಾರುವ ಸುವಾರ್ತೆಯ ಪ್ರಕಾರ ದೇವರು ಕ್ರಿಸ್ತ ಯೇಸುವಿನ ಮೂಲಕವಾಗಿ ಮನುಷ್ಯರ ಗುಟ್ಟುಗಳನ್ನು ವಿಚಾರಿಸುವ ದಿನದಲ್ಲಿ ಇವೆಲ್ಲಾ ಸಂಭವಿಸುವುದು.


ನೀನು ನಿನ್ನ ಕಠಿಣವಾದ ಮತ್ತು ಪಶ್ಚಾತ್ತಾಪ ಪಡದ ಹೃದಯದಿಂದ, ನಿನಗೋಸ್ಕರ ದೇವರ ನೀತಿಯುಳ್ಳ ತೀರ್ಪು ಪ್ರಕಟವಾಗುವ ಕೋಪದ ದಿನಕ್ಕಾಗಿ ದೇವರ ಕೋಪವನ್ನು ಸಂಗ್ರಹಿಸಿಕೊಳ್ಳುತ್ತಿದ್ದಿ.


ಯಾರಾದರೂ ನಿಮ್ಮನ್ನು ಸ್ವಾಗತಿಸದೆ ಹೋದರೆ, ನೀವು ಆ ಪಟ್ಟಣದ ಹೊರಗೆ ಹೋದಾಗ ಅವರಿಗೆ ವಿರೋಧವಾಗಿ ಸಾಕ್ಷಿಯಾಗಿರುವಂತೆ ನಿಮ್ಮ ಪಾದಗಳಿಗೆ ಹತ್ತಿದ ಧೂಳನ್ನು ಝಾಡಿಸಿಬಿಡಿರಿ,” ಎಂದರು.


ನಾನು ನಿಮಗೆ ಹೇಳುವುದೇನೆಂದರೆ, ಮನುಷ್ಯರು ಆಡುವ ಪ್ರತಿಯೊಂದು ವ್ಯರ್ಥ ಮಾತಿಗಾಗಿ ನ್ಯಾಯವಿಚಾರಣೆಯ ದಿನದಲ್ಲಿ ಅವರು ಲೆಕ್ಕಕೊಡಬೇಕು.


ಇದಲ್ಲದೆ ಯೇಸು ಅವರಿಗೆ, “ನೀವು ಯಾವುದಾದರೊಂದು ಮನೆಗೆ ಹೋದಾಗ, ಅಲ್ಲೇ ಇದ್ದು ಆ ಪಟ್ಟಣದಿಂದ ಹೋಗುವವರೆಗೆ ಆ ಮನೆಯಲ್ಲೇ ವಾಸವಾಗಿದ್ದು, ಅಲ್ಲಿಂದಲೇ ಹೊರಡಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು